ಚಿತ್ತಾಪುರ: 49,044 ಮತದಾರರು ಕರಡು ಮತದಾರರ ಪಟ್ಟಿಯಿಂದ ಹೊರಕ್ಕೆ

ಸುದ್ದಿ ಸಂಗ್ರಹ ಚಿತ್ತಾಪುರಕಳೆದ ಒಂದು ತಿಂಗಳಿಂದ ಮತಕ್ಷೇತ್ರ ವ್ಯಾಪ್ತಿಯ 257 ಮತಗಟ್ಟೆಗಳ ವ್ಯಾಪ್ತಿಯಲ್ಲಿ ನಡೆದಿರುವ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಜು.31ರ ವರೆಗೆ 2,51,226 ಮತದಾರರ ಪೈಕಿ 1,93,767 ಮತದಾರರ ಮಾಹಿತಿ ಡಿಜಿಟಲೈಸ್ ಮಾಡಿದ್ದು ಒಟ್ಟು 49,044 ಮತದಾರರ ಹೆಸರು ಕರಡು ಮತದಾರ ಪಟ್ಟಿಯಿಂದ ಹೊರಗುಳಿಯಲಿವೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 95 ಮತಗಟ್ಟೆಗಳಲ್ಲಿ ಶೇ. 100ರಷ್ಟು ಸಾಧನೆಯಾಗಿದೆ. ಆ.1ರಿಂದ 5ರವರೆಗೆ ವಾರ್ಡ್‌ವಾರು ಗ್ರಾಮ ಸಭೆ ನಡೆಸಲು ವೇಳಾಪಟ್ಟಿ […]

Continue Reading

ಕೊಲೆ ಪ್ರಕರಣ: ಕಲಬುರಗಿ ಜಿಲ್ಲಾ ಕೋರ್ಟ್‌ನಿಂದ ಜೀವಾವಧಿ ಶಿಕ್ಷೆ

ಸುದ್ದಿ ಸಂಗ್ರಹ ಕಲಬುರಗಿಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಕಿರಣಗಿಯ ವ್ಯಕ್ತಿಗೆ ಇಲ್ಲಿನ ಜಿಲ್ಲಾ ಕೋರ್ಟ್‌ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿದೆ. ತಾಲೂಕಿನ ಹೊನ್ನಕಿರಣಗಿಯ ನಿವಾಸಿ ನಾಗಯ್ಯ ಸ್ವಾಮಿ (40) ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿ. 2024ರ ಏಪ್ರಿಲ್‌ 17ರಂದು ಈರಣ್ಣ ನೀರು ತರಲು ಹೋದಾಗ ನಾಗಯ್ಯ ಆತನ ತಲೆ ಮೇಲೆ ಪರ್ಸಿ ಕಲ್ಲು ಎತ್ತಿಹಾಕಿ ಕೊಂದಿದ್ದ. ಈ ಕುರಿತು ಫರಹತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ಗಳಾದ ಬಾಲಚಂದ್ರ ಹಾಗೂ ಮಲ್ಲಿಕಾರ್ಜುನ ಇಕ್ಕಳಕಿ ಅವರು ನ್ಯಾಯಾಲಯಕ್ಕೆ […]

Continue Reading

ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ……ಸುದ್ದಿ ಸಂಗ್ರಹ ಶಹಾಬಾದ್ ನಗರದ ಮೌಂಟ್ ಕಾರ್ಮೆಲ್ ಕಾನ್ವೆಂಟ್ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಪರಿಸರ ಸಂರಕ್ಷಣಾ ಸಪ್ತಾಹ ಕಾರ್ಯಕ್ರಮ ಜರುಗಿತು…..ಶಾಲೆಯ ಮುಖ್ಯಗುರು ಸಿಸ್ಟರ್ ಲೋವಿಟಾ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ನಾಶ ಮಾಡಿದರೆ ಮುಂದಿನ ದಿನಗಳಲ್ಲಿ ಭೂಮಿಗೆ ಬಹಳಷ್ಟು ಹಾನಿಯಾಗಲಿದೆ. ಪರಿಸರವನ್ನು ರಕ್ಷಿಸುವದು ಕೇವಲ ಒಂದು ದಿನದಆಚರಣೆಗೆ ಅಥವಾ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು, ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ ಎಂದರು.‌……ಪತ್ರಕರ್ತರ ಸಂಘದ ಜಿಲ್ಲಾ […]

Continue Reading

ಗಾಂಜಾ ಹಾಗೂ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟ ತಡೆಗೆ ಪೊಲೀಸ್ ಇಲಾಖೆಯಿಂದ ದಿಟ್ಟ ಕ್ರಮ‌

ಸುದ್ದಿ ಸಂಗ್ರಹ ಕಾಳಗಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರ ನೇತೃತ್ವದಲ್ಲಿ ಗಾಂಜಾ ಹಾಗೂ ಇತರೆ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ದೇಶದಿಂದ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಯಿತು. ಕಾರ್ಯಾಚರಣೆಯಲ್ಲಿ ಗಾಂಜಾ/ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದಲ್ಲಿ ಈ ಹಿಂದೆ ಭಾಗಿಯಾಗಿದ್ದ ಆರೋಪಿತರ ಚಲನ-ವಲನಗಳ ಮೇಲೆ ನಿಗಾ ವಹಿಸುವ ದೃಷ್ಟಿಯಿಂದ, ತೆಲಂಗಾಣ ರಾಜ್ಯದಲ್ಲಿ ದಾಖಲಾಗಿರುವ ಗಾಂಜಾ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಾಡಬೂಳ ಠಾಣಾ ವ್ಯಾಪ್ತಿಯ ಆರೋಪಿತರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪಿಎಸ್ಐಗಳಾದ […]

Continue Reading

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ: ಡಿವೈಎಸ್ಪಿ ಶಂಕರಗೌಡ ಪಾಟೀಲ

ಸುದ್ದಿ ಸಂಗ್ರಹ ಕಾಳಗಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ವಾಹನ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ಸೂಚಿಸಿದರು. ತಾಲೂಕಿನ ಮಾಡಬೂಳ ಪೊಲೀಸ್ ಠಾಣೆಯ ಆವರಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಕುರಿತು ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಜನದಟ್ಟಣೆ ಇರುವ ಪ್ರದೇಶಗಳಲ್ಲಿ, ಶಾಲಾ- ಕಾಲೇಜುಗಳು ಮತ್ತು ಗ್ರಾಮಗಳ ವ್ಯಾಪ್ತಿಯಲ್ಲಿ ವಾಹನಗಳು ನಿಧಾನಗತಿಯಲ್ಲಿ ಚಲಾಯಿಸುವಂತೆ ತಿಳಿಸಿದರು. ಪ್ರತಿಯೊಬ್ಬ ವಾಹನ ಚಾಲಕರು ಕಡ್ಡಾಯವಾಗಿ […]

Continue Reading

ಕಲಬುರಗಿ: ಜು.29 ರಂದು ನಾಲವಾರ ಶ್ರೀಗಳ ಗುರುವಂದನಾ ಕಾರ್ಯಕ್ರಮ

ಸುದ್ದಿ ಸಂಗ್ರಹ ನಾಲವಾರ ಗುರುಪೂರ್ಣಿಮೆ ನಿಮಿತ್ತ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಗುರುವಂದನಾ ಕಾರ್ಯಕ್ರಮ ಜುಲೈ 29ರಂದು ಬುಧವಾರ ಕಲಬುರಗಿ ನಗರದಲ್ಲಿ ಆಯೋಜಿಸಲಾಗಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ಕಲಬುರಗಿಯ ಕರುಣೇಶ್ವರ ನಗರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನದ ಶಾಖಾಮಠದಲ್ಲಿ ಬುಧವಾರ ಸಂಜೆ 5 ಗಂಟೆಗೆ ಗುರುಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ ಎಂದರು. ಗುರುವಂದನೆ ನಿಮಿತ್ತ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ನಂತರ ಪರಮಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ […]

Continue Reading

ಉದಯವಾಣಿ ವರದಿಗಾರ ಎಂ.ಡಿ ಮಶಾಕ್ ಅವರಿಗೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ

ಸುದ್ದಿ ಸಂಗ್ರಹ ಚಿತ್ತಾಪುರಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ತಾಲೂಕಿನ ಉದಯವಾಣಿ ದಿನಪತ್ರಿಕೆಯ ಹಿರಿಯ ವರದಿಗಾರ ಎಂ.ಡಿ ಮಶಾಕ್ ಅವರು ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನಿಖರ ವರದಿಗಾರಿಕೆ, ಸಾಮಾಜಿಕ ಸಮಸ್ಯೆಗಳನ್ನು ಬೆಳಕಿಗೆ ತರುವ ನಿಷ್ಠೆ ಮತ್ತು ಜನಪರ ಕಾಳಜಿ ಮೂಲಕ ಎಂ.ಡಿ ಮಶಾಕ್ ಅವರು ಹಲವು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಭಾಗದ ಸಮಸ್ಯೆಗಳು, ಸಾರ್ವಜನಿಕ ಹಿತಾಸಕ್ತಿಯ ವಿಷಯಗಳು, ಆಡಳಿತಾತ್ಮಕ ಲೋಪಗಳು ಮತ್ತು […]

Continue Reading

ದೇಹದ ಸದೃಢತೆಗೆ ಮಾನಸಿಕ ಆರೋಗ್ಯ ಮುಖ್ಯ: ಶಾಂತಾ ಜಕಾತಿ

ಸುದ್ದಿ ಸಂಗ್ರಹ ಶಹಾಬಾದ್ ಅನವಶ್ಯ ವಿಚಾರಗಳು ಮನುಷ್ಯನ ಮಾನಸಿಕ ಅಸ್ವಸ್ಥತೆಗೆ ಕಾರಣವಾಗುತ್ತವೆ. ದೇಹದ ಸದೃಢತೆಗೆ ಮಾನಸಿಕ ಆರೋಗ್ಯ ತುಂಬಾ ಮುಖ್ಯ ಎಂದು ಜೀಮ್ಸ್ ಆಸ್ಪತ್ರೆಯ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಜಿಲ್ಲಾ ಸಂಯೋಜಕಿ ಶಾಂತಾ ಜಕಾತಿ ಹೇಳಿದರು. ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಜೀಮ್ಸ್ ಆಸ್ಪತ್ರೆ ವತಿಯಿಂದ ನಡೆದ ‘ವಿಶ್ವ ಮೆದುಳು ದಿನ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, […]

Continue Reading

ರಸ್ತೆಯಲ್ಲಿ ಸಿಕ್ಕ 11,500 ರೂ. ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿ

ಸುದ್ದಿ ಸಂಗ್ರಹ ಕಾಳಗಿ ರಸ್ತೆಯಲ್ಲಿ ಸಿಕ್ಕ 11,500 ರೂ ಹೊಸ ಹೆಬ್ಬಾಳದ ಮೆಕಾನಿಕ್ ರವರ ನೆರವಿನೊಂದಿಗೆ ಹಣ ಕಳೆದುಕೊಂಡವರಿಗೆ ಹಿಂದಿರುಗಿಸುವ ಮೂಲಕ ವಿದ್ಯಾರ್ಥಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ತಾಲೂಕಿನ ಹೊಸ ಹೆಬ್ಬಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿಯ ನಬಿಸಾಬ್ ತಂದೆ ಗೈಬನ್ ಸಾಬ್ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿಯಾಗಿದ್ದಾನೆ.  ಗ್ರಾಮದ ಮಾಜಿ ಅಧ್ಯಕ್ಷ ನಾಗರಾಜ್ ದಿವಟಗಿ ನೇತೃತ್ವದಲ್ಲಿ ಹಣ ಕಳೆದುಕೊಂಡವರನ್ನು ಪತ್ತೆ ಹಚ್ಚಿ ಅವರ ಹಣ ಅವರಿಗೆ ಮರಳಿಸಲಾಯಾತು.  ವಿದ್ಯಾರ್ಥಿಯ ಸಾಮಾಜಿಕ ಜವಾಬ್ದಾರಿಯನ್ನು ಮೆಚ್ಚಿದ ಹಣ ಪಡೆದ ಮಹಿಳೆ, […]

Continue Reading

ವೈಫಲ್ಯ ಸರಿ, ಆದರೆ ವಂಚನೆ ಸರಿಯಲ್ಲ: ಸಚಿನ್‌ ತೆಂಡೂಲ್ಕರ್‌ ಪೋಸ್ಟ್‌

ಸುದ್ದಿ ಸಂಗ್ರಹ ಮುಂಬೈವೈಫಲ್ಯ ಸರಿ ಆದರೆ ವಂಚನೆ ಸರಿಯಲ್ಲ. ಪ್ರಯತ್ನಕ್ಕಿಂತ ರಿಸಲ್ಟ್‌ಗಳಿಗೆ ಆದ್ಯತೆ ನೀಡುವ ಸಮಾಜವು ಅರ್ಹತೆಗಿಂತ ಶಾರ್ಟ್‌ಕಟ್‌ಗಳನ್ನು ಹುಡುಕುತ್ತದೆ ಎಂದು ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ಅಭಿಪ್ರಾಯಪಟ್ಟಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಚಿನ್‌, ನನ್ನ ತಂದೆ ಪ್ರಾಧ್ಯಾಪಕರಾಗಿದ್ದರು. ಅವರು ಅನೇಕ ಯುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು. ಅವರು ಆರಂಭದಲ್ಲಿಯೆ ಕಲಿಸಿದ ಒಂದು ಪಾಠವೆಂದರೆ, ವೈಫಲ್ಯ ಸರಿ, ಮೋಸ ಸರಿಯಲ್ಲ. ಎಂದಿಗೂ ಶಾರ್ಟ್‌ಕಟ್‌ಗಳನ್ನು ತೆಗೆದುಕೊಳ್ಳಬೇಡಿ ಎಂದು ಹೇಳಿದ್ದಾರೆ. ಸಮಾಜದಲ್ಲಿ ವಯಸ್ಕರಾದ ನಾವು ಸಂಸ್ಕೃತಿಯನ್ನು ರೂಪಿಸುವ ಜವಾಬ್ದಾರಿ ಹೊಂದಿದ್ದೆವೆ. ಪ್ರಯತ್ನಕ್ಕಿಂತ […]

Continue Reading