ಸುನಿ-ಶಿವಣ್ಣ ಕಾಂಬಿನೇಷನ್ನ `ಮನಮೋಹಕ’ ಸಿನಿಮಾ ನಿಲ್ಲೋಕೆ ಕಾರಣವೇನು? ನಟ ಶಿವರಾಜ್ಕುಮಾರ್ ಹಾಗೂ ಸಿಂಪಲ್ ಸುನಿ ನಿರ್ದೇಶನದ `ಮನಮೋಹಕ’ ಸಿನಿಮಾ ಸುಮಾರು 10 ವರ್ಷಗಳ ಹಿಂದೆ ಸೆಟ್ಟೇರಬೇಕಿತ್ತು. ಆ ಸಿನಿಮಾಗಾಗಿ ಫೋಟೋ ಶೂಟ್ ಕೂಡಾ ಮಾಡಲಾಗಿತ್ತು. ನವಿರಾದ ಪ್ರೇಮಕಥೆಯುಳ್ಳ ಮನಮೋಹಕ ಸಿನಿಮಾದ ಕಥೆ ಕೇಳಿ ಶಿವಣ್ಣ ತುಂಬಾನೇ ಖುಷಿಯಿಂದ ಒಪ್ಪಿಕೊಂಡಿದ್ದರು. ಆದ್ರೆ ಆ ಸಿನಿಮಾ ಕಾರಣಾಂತರಗಳಿಂದ ನಿಂತು ಹೋಯ್ತು. ಮನಮೋಹಕ ಸಿನಿಮಾದ ವಿಶೇಷ ಪಾತ್ರದಲ್ಲಿ ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯ ರೈ ಅವರನ್ನ ಕರೆತರಲು ಕೂಡಾ ಪ್ಲ್ಯಾನ್ […]
Continue ReadingAuthor: admin
ಮೊಂಥಾ ಎಫೆಕ್ಟ್: 100ಕ್ಕೂ ಹೆಚ್ಚು ರೈಲುಗಳು, 35 ವಿಮಾನಗಳ ಹಾರಾಟ ರದ್ದು
ನವದೆಹಲಿ: ಮೊಂಥಾ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆ ಭಾರತೀಯ ರೈಲ್ವೆ 100ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಿದೆ. ಜೊತೆಗೆ 30ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿವೆ. ಚಂಡಮಾರುತದ ಮುನ್ನೆಚ್ಚರಿಕೆ ಕ್ರಮವಾಗಿ, ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಭಾರತೀಯ ರೈಲ್ವೆ 100ಕ್ಕೂ ಹೆಚ್ಚು ರೈಲು ಸೇವೆಗಳನ್ನು ರದ್ದುಗೊಳಿಸಿದೆ. ಜೊತೆಗೆ ಹಲವಾರು ರೈಲುಗಳ ಮಾರ್ಗದಲ್ಲಿಯೂ ಬದಲಾವಣೆ ಮಾಡಿದ್ದು, ಕೆಲವು ರೈಲುಗಳ ಸಮಯವನ್ನು ಮರುನಿಗದಿಪಡಿಸಿದೆ. ಆಂಧ್ರಪ್ರದೇಶ ಕರಾವಳಿ ಪ್ರದೇಶಗಳಾದ ಕಾಕಿನಾಡ, ಭೀಮಾವರಂ, ವಿಜಯವಾಡ, ರಾಜಮಂಡ್ರಿ ಮತ್ತು ವಿಶಾಖಪಟ್ಟಣಂ ಕಡೆ ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆ […]
Continue Readingಚಿತ್ತಾಪುರ ಶಾಂತಿ ಸಭೆಯಲ್ಲಿ ಅಶಾಂತಿ, ಸಂಘಟನೆಗಳ ಮಧ್ಯೆ ಮೂಡದ ಒಮ್ಮತ
ಕಲಬುರಗಿ: ಚಿತ್ತಾಪುರ ಆರ್ಎಸ್ಎಸ್ ಪಥಸಂಚಲನ ಪ್ರಕರಣ ಸಂಬಂಧ ಕಲಬುರಗಿ ಜಿಲ್ಲಾಡಳಿತ ನಡೆಸಿದ ಶಾಂತಿ ಸಭೆಯಲ್ಲಿ ಅಶಾಂತಿ ಮೂಡಿದೆ. ಬೆಳಗ್ಗೆ 11:30ಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ನೇತೃತ್ವದಲ್ಲಿ ಆರ್ಎಸ್ಎಸ್, ಭೀಮ್ ಆರ್ಮಿ ಸೇರಿದಂತೆ 10 ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಮೊದಲಿಗೆ ಡಿಸಿಗೆ ಲಿಖಿತ ಹೇಳಿಕೆ ಸಲ್ಲಿಸಿದ ಸಂಘಟನೆಗಳಿಗೆ ಸಭೆಯಲ್ಲಿ ಅನಿಸಿಕೆ ಹೇಳಲು ಸೂಚಿಸಲಾಯಿತು. ಈ ವೇಳೆ ಆರ್ಎಸ್ಎಸ್ ಲಾಠಿ ಬಿಟ್ಟು ರಾಷ್ಟ್ರಧ್ವಜ ಹಿಡಿದು ಪಥಸಂಚಲನ ಮಾಡುವಂತೆ ದಲಿತ ಸಂಘಟನೆಗಳು ಪಟ್ಟು ಹಿಡಿದವು. ಇದಕ್ಕೆ ಲಾಠಿ ಹಿಡಿದು ಪಥಸಂಚಲನ […]
Continue Readingಪೂರ್ಣ ಕುಂಭ ಕಲಾ ತಂಡಗಳಿಂದ ಭವ್ಯ ಮೆರವಣಿಗೆ ಶಹಾಬಾದ: ಹೂ ನಗರದ ಇಂಜನ್ ಫೈಲ್ ಬಡಾವಣೆಯಲ್ಲಿ ಜೀರ್ಣೋದ್ದಾರಗೊಂಡಿರುವ ರೇಣುಕಾ ಎಲ್ಲಮ್ಮಾ ದೇವಿಯ ಮೂರ್ತಿ ಪ್ರತಿಷ್ಠಾಪನೆಗೆ ಪ್ರಾರಂಭವಾಗಿದ್ದು, ಮಹಿಳೆಯರ ಪೂರ್ಣ ಕುಂಭ ಸ್ವಾಗತ, ಕಲಾ ತಂಡಗಳೊಂದಿಗೆ ಸೋಮವಾರ ನಗರದ ಪ್ರಮುಖ ಬೀದಿಯಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಗೂ ನಿಂಬಾಳ್ಕರ ಕುಟುಂಬದ ಕುಲದೇವತೆಯಾಗಿರುವ ಕೊತ್ಲಾಪುರ ರೇಣುಕಾ ಎಲ್ಲಮ್ಮಾ ದೇವಿಯ ಜೀರ್ಣಾವಸ್ಥೆಯ ದೇವಸ್ಥಾನ ಸಂಪೂರ್ಣ ಶಿಲಾ ದೇಗುಲ ನಿರ್ಮಿಸಲಾಗಿದೆ. ಅ.27 ರಿಂದ 29 ವರೆಗೆ ಕೇರಳದ […]
Continue Readingಕಲಬುರಗಿ: ಸರಕಾರಿ ನೌಕರರಿಗೆ ಗೀತ ಗಾಯನ ಸ್ಪರ್ಧೆ
ಕಲಬುರಗಿ: ಸರಕಾರಿ ನೌಕರರ ಸಂಘದಿಂದ ಕರ್ನಾಟಕರಾಜ್ಯೋತ್ಸವ ಅಂಗವಾಗಿ ಸರಕಾರಿ ನೌಕರರಿಗೆ ಬೆಂಗಳೂರಿನ ಸಂಘದ ಆವರಣದಲ್ಲಿ ನ.8 ರಂದು ರಾಜ್ಯಮಟ್ಟದ ಜನಪದ, ಕನ್ನಡ ಗೀತೆಗಳ ಗುಂಪು ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ನೌಕರರ ಸಂಘವು ನೀಡಿರುವ ಆನ್ಲೈನ್ ಲಿಂಕ್ https://forms.gle/8pR3m5nXowwQzccs9 ಮೂಲಕ ನ.2ರ ಸಂಜೆ 5 ಗಂಟೆಯೊಳಗೆ ನೋಂದಾಯಿಸಿಕೊಳ್ಳಬೇಕು. ವಿಜೇತ ತಂಡಗಳಿಗೆ ಪ್ರಥಮ 1,00,000 ರೂ., ದ್ವಿತೀಯ 75,000 ರೂ. ಹಾಗೂ ತೃತೀಯ ಬಹುಮಾನ 50,000 […]
Continue Readingರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ: ಹಳೆಯ ಸ್ಲೋಚ್ ಹ್ಯಾಟ್ಗಳಿಗೆ ಗುಡ್ ಬೈ
ಬೆಂಗಳೂರು: ರಾಜ್ಯದ ಪೊಲೀಸ್ ಕಾನ್ಸ್ಟೆಬಲ್ ಹಾಗೂ ಹೆಡ್ ಕಾನ್ಸ್ಟೆಬಲ್ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್’ಗಳನ್ನು ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರು ಹೊಸ ಕ್ಯಾಪ್ಗಳನ್ನು ವಿತರಣೆ ಮಾಡಲಿದ್ದಾರೆ. ನಂತರ ಹಂತಹಂತವಾಗಿ ವಿವಿಧ ಜಿಲ್ಲೆಗಳ ಕಾನ್ಸ್ಟೆಬಲ್ ಹಾಗೂ ಹೆಡ್ಕಾನ್ಸ್ಟೆಬಲ್ಗಳಿಗ ಹೊಸ ಕ್ಯಾಪ್ ವಿತರಣೆ ನಡೆಯಲಿದೆ. ಜೂನ್ನಲ್ಲಿ ನಡೆದಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಹೊಸ […]
Continue Readingಜೇವರ್ಗಿ: ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮ
ಕಲಬುರಗಿ: ಉದ್ಯೋಗ ಮತ್ತು ತರಬೇತಿ ಇಲಾಖೆಯ ವತಿಯಿಂದ ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮ ಜೇವರ್ಗಿ ಪಟ್ಟಣದಲ್ಲಿ ಜರುಗಿತು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ಸಹಯೋಗದಲ್ಲಿ ಉದ್ಯೋಗ ಮತ್ತು ತರಬೇತಿ ಇಲಾಖೆಯ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಸರ್ಕಾರಿ ಐಟಿಐ ಕಾಲೇಜಿನ ಜೆಟಿಓ ಶಿವಶರಣಪ್ಪ ಹಳಿಮನಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜೆಟಿಓ ಸೈಯದ್ ಅಯಾಜ್, ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ […]
Continue Readingಬಣ್ಣಬಣ್ಣದ ಮಾತನಾಡಿ 3 ಕೋಟಿ ವಂಚನೆ: ಮಹಿಳೆಯನ್ನು ಅಟ್ಟಾಡಿಸಿ ಹೊಡೆದ ಜನ
ಹಾಸನ: ಬಣ್ಣಬಣ್ಣದ ಮಾತನಾಡಿ ಹಲವಾರು ಜನರಿಂದ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದ ಘಟನೆ ಹಾಸನದ ಅರಳೆಪೇಟೆಯಲ್ಲಿ ನಡೆದಿದೆ. ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ ಹೇಮಾವತಿ ಎಂಬಾಕೆ, ಹಲವರ ಬಳಿ ಚಿಟ್ಸ್ನಲ್ಲಿ 1 ಕೋಟಿ ರೂ. ಚೀಟಿ ಹಾಕಿದ್ದೆನೆ ಎಂದು ಸ್ಲಿಪ್ ತೋರಿಸಿ ಹಣ ಪಡೆದಿದ್ದಳು. ಅಲ್ಲದೆ ಮಗಳನ್ನು ವಿದೇಶದಲ್ಲಿ ಇಂಜಿನಿಯರಿಂಗ್ ಓದಿಸುವುದಕ್ಕೆ, ಒಂದು ಕೋಟಿ ರೂ. ಮನೆ ಖರೀದಿಸಿದ್ದೆನೆಂದು ಹೇಳಿ ಹಲವರಿಂದ ಸಾಲ ಪಡೆದಿದ್ದಳು. ಚಿನ್ನಾಭರಣ ಅಡವಿಟ್ಟು ಜನ ಲಕ್ಷ […]
Continue Readingನಕಲಿ ಲೋಕಾಯುಕ್ತ ಜಸ್ಟೀಸ್ ಹಾವಳಿಗೆ ಬೆಚ್ಚಿಬಿದ್ದ ಅಧಿಕಾರಿಗಳು
ಬೆಂಗಳೂರು: ಹಣ ಮಾಡೋದಕ್ಕೆ ಅಡ್ಡದಾರಿ ಹಿಡಿಯೋ ಸೈಬರ್ ವಂಚಕರು ಈ ಬಾರಿ ಬಳಸಿದ್ದು ನ್ಯಾಯಾಧೀಶರ ಹೆಸರನ್ನು. ಅಚ್ಚರಿ ಅನಿಸಿದ್ದರು ಇದು ನಿಜ. ಲೋಕಾಯುಕ್ತ ಜಸ್ಟೀಸ್ ಹೆಸರಲ್ಲಿ ಅಧಿಕಾರಿಗಳಿಗೆ ಫೋನ್ ಮಾಡಿ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫೋನ್ ಮಾಡಿ ನಿಮ್ಮ ಇಲಾಖೆಯಲ್ಲಿ ಭ್ರಷ್ಟಚಾರ ನಡೆಯುತ್ತಿದೆ. ನಿಮ್ಮ ಮೇಲಿನ ಆರೋಪಿಗಳಿಂದ ರೇಡ್ ಮಾಡ್ತಿವಿ ಅಂತ ಬೆದರಿಸೋಕೆ ಶುರು ಮಾಡಿದ್ದಾರೆ. ಟ್ರೂ ಕಾಲರ್ನಲ್ಲಿ ಲೋಕಾಯುಕ್ತ ಜಸ್ಟೀಸ್ ಹೆಸರು ಬಳಸಿ ಕರೆ ಮಾಡಿದ್ದಾರೆ. ಇದರಿಂದ ಕರೆ ಸ್ವೀಕರಿಸಿದ ಸರ್ಕಾರಿ ಅಧಿಕಾರಿಗಳು […]
Continue Readingಮಾರ್ಚ್ ವೇಳೆಗೆ 3,500 ಹುದ್ದೆ ಭರ್ತಿ: ಎಸ್ಬಿಐ
ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಮುಂದಿನ ಐದು ತಿಂಗಳೊಳಗೆ ಸುಮಾರು 3,500 ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಯೋಜಿಸಿದೆ. ಜೂನ್ ತಿಂಗಳಿನಲ್ಲಿ 505 ಪ್ರೊಬೇಷನರಿ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿತ್ತು. ಈಗ ಇಷ್ಟೇ ಸಂಖ್ಯೆಯ ಹುದ್ದೆಗಳಿಗೆ ಮತ್ತೆ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಜಿ ಸ್ವೀಕರಿಸಲಾಗಿದೆ. ದೇಶದಾದ್ಯಂತ ಬ್ಯಾಂಕ್ನ ಕಾರ್ಯಾಚರಣೆ ಹೆಚ್ಚಿಸಲು ಮತ್ತು ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಈ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಬ್ಯಾಂಕ್ನ ಉಪ ವ್ಯವಸ್ಥಾಪಕ ನಿರ್ದೇಶಕ (ಮಾನವ ಸಂಪನ್ಮೂಲ ವಿಭಾಗ) ಮತ್ತು ಮುಖ್ಯ ಅಭಿವೃದ್ಧಿ ಅಧಿಕಾರಿ […]
Continue Reading