ಡಿಕೆಶಿ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಗ್‌ ಬಾಸ್‌ ಮನೆ ರೀ ಓಪನ್‌

ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡದಿ ಬಳಿ ಇರುವ ಬಿಗ್‌ಬಾಸ್‌ ಮನೆಯನ್ನು ತೆರೆಯಲಾಗಿದ್ದು ಸ್ಪರ್ಧಿಗಳನ್ನು ಶಿಫ್ಟ್‌ ಮಾಡಲಾಗಿದೆ. ನಸುಕಿನ ಜಾವ 2:45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್‌ಪಿ ಶ್ರೀನಿವಾಸ್ ಗೌಡ, ತಹಸಿಲ್ದಾರ್ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್‌ ಸ್ಟುಡಿಯೋದ ಗೇಟ್‌ ಸೀಲ್‌ ಓಪನ್‌ ಮಾಡಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಡಿಸಿಎಂ ಡಿ.ಕೆ ಶಿವಕುಮಾರ ಅವರ ನಿರ್ದೇಶನದಂತೆ ತೆರೆದಿದ್ದೆವೆ. […]

Continue Reading

ಭಜನೆಯಿಂದ ಸಾಮಾಜಿಕ ಸಾಮರಸ್ಯ: ತೆಂಗಳಿ ಶ್ರೀ

ಚಿತ್ತಾಪುರ: ಭಜನೆಯಿಂದ ಸಮಾಜದ ಸಂಘಟನೆಯೊಂದಿಗೆ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ತೆಂಗಳಿ- ಮುಂಗಲಗಿಯ ಶಾಂತೇಶ್ವರ ಹಿರೇಮಠದ ಪೀಠಾಧಿಪತಿ ಡಾ.ಶಾಂತಸೋಮನಾಥ ಶಿವಾಚಾರ್ಯರು ಹೇಳಿದರು. ಸಮೀಪದ ತೆಂಗಳಿ ಗ್ರಾಮದಲ್ಲಿ ಸೀಗಿ ಹುಣ್ಣಿಮೆ ಪ್ರಯುಕ್ತ ಗ್ರಾಮದ ಅಂಬಾಭವಾನಿ ದೇವಸ್ಥಾನದಲ್ಲಿ ಅಂಡಗಿ ಮನೆತನದ ವತಿಯಿಂದ ಅಂಬಾ ಭವಾನಿಗೆ ಉಡಿ ತುಂಬುವ ಕಾರ್ಯಕ್ರಮದ 48ನೇ ವಾರ್ಷಿಕೋತ್ಸವ ಮತ್ತು ನವರಾತ್ರಿಯಲ್ಲಿ 9 ದಿನಗಳ ಪರ್ಯಂತ ಭಜನೆ ಮಾಡಿ ಧಾರ್ಮಿಕ ಸೇವೆ ಸಲ್ಲಿಸಿದ ವಿವಿಧ ಭಜನಾ ಮಂಡಳಿ ಅಧ್ಯಕ್ಷರಿಗೆ ‘ಸೇವಾಶ್ರೀ ಪ್ರಶಸ್ತಿ’ ವಿತರಿಸಿ ಮಾತನಾಡಿದ ಅವರು, […]

Continue Reading

ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

ನವದೆಹಲಿ: ರೈಲು ಪ್ರಯಾಣ ಪ್ರಿಯರಿಗೆ ರೈಲ್ವೆ ಇಲಾಖೆ ಗುಡ್‌ನ್ಯೂಸ್ ನೀಡಿದೆ. ಇದೀಗ ಬುಕ್ ಆದ ಟಿಕೆಟ್‌ನ ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಇಲ್ಲಿಯವರೆಗೆ ಒಮ್ಮೆ ರೈಲ್ವೆ ಟಿಕೆಟ್ ಬುಕ್ ಮಾಡಿದರೆ ಪ್ರಯಾಣದ ದಿನಾಂಕ ಬದಲಾವಣೆಗೆ ಅವಕಾಶ ಇರಲಿಲ್ಲ. ಆದರೆ ಇದೀಗ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ ಇರಲಿದೆ. ಮೊದಲೆಲ್ಲ ಟಿಕೆಟ್ ಬುಕಿಂಗ್ ಆದರೆ ದಿನಾಂಕ ಬದಲಾವಣೆಗೆ ಮೊದಲಿನ ಬುಕಿಂಗ್ ರದ್ದು ಮಾಡಿ, […]

Continue Reading

ಹೆಣ್ಣು ಮಗುವಿಗೆ ಜನ್ಮ ನೀಡಿದ 15ರ ಬಾಲಕಿ: ರೇಪ್‌ ಆರೋಪಿ ಅರೆಸ್ಟ್‌

ತುಮಕೂರು: 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ವಿನಯ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಮತ್ತು ಯುವಕ ಅಕ್ಕಪಕ್ಕದ ಮನೆಯ ನಿವಾಸಿಗಳು. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ವಿನಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಕುಣಿಗಲ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಗಳ ಆರೋಗ್ಯ ಸರಿ ಇಲ್ಲದಿದ್ದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಆಗ 8 […]

Continue Reading

ವನ್ಯಜೀವಿಗಳಿಂದ ಮಾತ್ರ ಜಗದ ಉಳಿವು: ವಿಜಯಕುಮಾರ ಬಡಿಗೇರ್

ಚಿತ್ತಾಪುರ: ಜಗದ ಉಳಿವು ವನ್ಯಜೀವಿಗಳನ್ನು ಅವಲಂಬಿಸಿವೆ. ಅವುಗಳ ನಾಶವಾದರೆ ನಮಗೆ ಉಳಿಗಾಲವಿಲ್ಲ ಎಂದು ಅರಣ್ಯಾಧಿಕಾರಿ ವಿಜಯಕುಮಾರ್ ಬಡಿಗೇರ್ ಹೇಳಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗ ಕಲಬುರಗಿ, ಚಿತ್ತಾಪುರ ವಲಯ ಅರಣ್ಯ ವಿಭಾಗ ಮತ್ತು ರಾವೂರ ಸಚ್ಚಿದಾನಂದ ಪ್ರೌಢ ಶಾಲೆಯ ವತಿಯಿಂದ ಲುoಬಿನಿ ಟ್ರಿ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿ ಒಂದು ಅದ್ಭುತ ಸೃಷ್ಟಿ, ಅದರಲ್ಲಿ ಅರಣ್ಯಗಳು ಹಾಗೂ ವನ್ಯಜೀವಿಗಳ […]

Continue Reading

ಸಿಜೆಐ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕಠಿಣ ಕ್ರಮಕ್ಕೆ ಸಂಜಯ ಬುಳಕರ್ ಆಗ್ರಹ

ಚಿತ್ತಾಪುರ: ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿಯವರ ಮೇಲೆ ವಕೀಲನೊಬ್ಬ ಶೂ ಎಸೆಯುವ ಪ್ರಯತ್ನ ಮಾಡಿರುವ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂವಿಧಾನ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಸಂಜಯ ಬುಳಕರ ನೇತೃತ್ವದಲ್ಲಿ ಬುಧವಾರ ಪ್ರತಿಭಟಸಿದ ಮುಖಂಡರು ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಸೀಲ್ದಾರ್ ರಾಜಕುಮಾರ ಮರತೂರ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸಂಜಯ ಬುಳಕರ ಮಾತನಾಡಿ, ದೇಶದ ಸರ್ವೋಚ್ಚ ನ್ಯಾಯಮೂರ್ತಿಗಳ ಮೇಲೆ ಕೋರ್ಟ್ […]

Continue Reading

ಯುವಕರು ಸೃಜನಶೀಲತೆ, ಕ್ರೀಯಾಶೀಲತೆ, ಪ್ರಬಲ ಇಚ್ಛಾಶಕ್ತಿ ಬೆಳೆಸಿಕೊಳ್ಳಿ

ಕಲಬುರಗಿ: ಪ್ರಸ್ತುತ ದಿನಗಳಲ್ಲಿ ತೀರ್ವ ಸ್ಪರ್ಧೆ ಎದುರಿಸ ಬೇಕಾಗಿರುವುದರಿಂದ ಯುವಕರು ಪದವಿ ಜೊತೆಗೆ ಸೃಜನಶೀಲ ಗುಣ, ಕ್ರೀಯಾಶೀಲತೆ, ಸಾಧಿಸುವ ಪ್ರಭಲ ಇಚ್ಛಾಶಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರ್ಮೆ ಹೇಳಿದರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯ ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್’ನಲ್ಲಿ ಕಲಬುರಗಿಯ ಮೇರಾ ಯುವ ಭಾರತ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಕೇಂದ್ರ ಸಂವಹನ ಇಲಾಖೆ, ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್, ಸ್ವಾಮಿ […]

Continue Reading

ಭೂತಾಯಿಯ ಸೀಮಂತದ ಪ್ರತೀಕ ಸೀಗೆ ಹುಣ್ಣಿಮೆ

ಕಲಬುರಗಿ: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಕೃಷಿ ಹಾಗೂ ರೈತರೇ ದೇಶದ ಬೆನ್ನೆಲುಬು. ನಮ್ಮ ದೇಶ ತಾಯಿಯ ಸ್ವರೂಪದಲ್ಲಿ ಕಾಣಲಾಗುತ್ತದೆ. ಮಹಿಳೆ ಗರ್ಭವತಿಯಾದಾಗ ಸೀಮಂತ ಮಾಡುವಂತೆ, ಭೂಮಿಯನ್ನು ತಾಯಿ, ದೇವರೆಂದು ನಂಬಿ ಕಾಯಕ ಮಾಡುವ ಶ್ರಮಜೀವಿಯಾದ ರೈತ, ತಾನು ಬೆಳೆದ ಫಸಲಿಗೆ ಪೂಜೆ, ಗೌರವ ಸಲ್ಲಿಸಿ ಸೀಮಂತದ ಕಾರ್ಯಕ್ರಮದಂತೆ ಪೂಜಿಸಿ, ಆರಾಧಿಸುವ ಪ್ರತೀಕ ಸೀಗೆ ಹುಣ್ಣಿಮೆಯಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ಸುಂಟನೂರ ಗ್ರಾಮದ ರಾಮಚಂದ್ರ ಬಬಲಾದಿಯವರ ತೊಗರಿ ಹೊಲದಲ್ಲಿ ಬಸವೇಶ್ವರ ಸಮಾಜ ಸೇವಾ […]

Continue Reading

ಯಲ್ಲಮ್ಮ ದೇವಿ ಜಾತ್ರೆ, ಪಲ್ಲಕ್ಕಿ ಉತ್ಸವ

ಚಿತ್ತಾಪುರ: ಸೀಗಿ ಹುಣ್ಣಿಮೆಯಂದು ಪಟ್ಟಣದ ಐತಿಹಾಸಿಕ ಕ್ಷೇತ್ರ ನಾಗಾವಿಯಲ್ಲಿರುವ ಯಲ್ಲಮ್ಮ ದೇವಿಯ ಜಾತ್ರೆ ನಿಮಿತ್ತ ಪಲ್ಲಕ್ಕಿ ಉತ್ಸವವು ಶ್ರದ್ಧಾಭಕ್ತಿ, ಸಂಭ್ರಮ, ಸಡಗರ, ಹರ್ಷೋದ್ಘಾರದೊಂದಿಗೆ ಅದ್ದೂರಿಯಾಗಿ ಜರುಗಿತು. ಪಟ್ಟಣದ ಸರಾಫ್ ಲಚ್ಚಪ್ಪ ನಾಯಕ ಅವರ ಮನೆಯಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರ ಉಪಸ್ಥಿತಿಯಲ್ಲಿ ಮಂಗಳವಾರ ಮಧ್ಯಾಹ್ನ ವಿಶ್ವೇಶ್ವರ ಪೂಜೆ, ಗುರುಪೂಜೆ, ದೇವಿಯ ಪಲ್ಲಕ್ಕಿ ಪೂಜೆ ಜರುಗಿತು, ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ತಹಸೀಲ್ದಾರ್ ಅವರು ಮಂಗಳಾರತಿ ಮಾಡಿ ಪಲ್ಲಕ್ಕಿ ಹೊತ್ತುಕೊಂಡು ಉತ್ಸವದ […]

Continue Reading

ಶಾಲೆಗಳ ದಸರಾ ರಜೆ ವಿಸ್ತರಣೆಗೆ ಸರಕಾರಿ ನೌಕರರ ಸಂಘ ಸ್ವಾಗತ

ಕಲಬುರಗಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿ ಅ.18ರ ವರೆಗೆ ವಿಸ್ತರಿಸಿದ ಸರಕಾರದ ಆದೇಶಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಸ್ವಾಗತಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕಾ ನೀಡಿರುವ ಅವರು, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025ರ ಗಣತಿ ಕಾರ್ಯದಲ್ಲಿ ರಾಜ್ಯಾದಾದ್ಯಂತ ಸರ್ಕಾರಿ ಶಾಲೆಗಳ ಶಿಕ್ಷಕರುಗಳಿಗೆ ಸೆ.22 […]

Continue Reading