ಹಡಪದ ಅಪ್ಪಣ್ಣ ಸಮಾಜಕ್ಕೆ ನ್ಯಾಯ ಸಿಗಲಿ: ಡಾ. ಎಂ.ಬಿ ಹಡಪದ ‌ ‌

ಕಲಬುರಗಿ: ಈ ವರ್ಷದ ಬಜೆಟ್’ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಿ 100 ಕೋಟಿ ರೂ ಮೀಸಲಿಡುವಂತೆ ಹಡಪದ ಅಪ್ಪಣ್ಣ ಸಮಾಜದ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿ‌ ಹಡಪದ ಸುಗೂರ ಎನ್ ಒತ್ತಾಯಿಸಿದರು. ಒತ್ತಾಯ. ಬಸವರಾಜ ಭೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ಘೋಷಣೆ ಮಾಡಿ‌ ಆದೇಶ ಹೊರಡಿಸಿದ್ದರು. ಆದರೆ ಆ ನಿಗಮ ಪೂರ್ಣ ಪ್ರಮಾಣದಲ್ಲಿ ಇದುವರೆಗೆ ಜಾರಿಗೆ […]

Continue Reading

ಹರ್ಡೇಕರ ಮಂಜಪ್ಪನವರ ಸಾಮಾಜಿಕ ಕೊಡುಗೆ ಅನನ್ಯ

ಕಲಬುರಗಿ: ಮಹಾತ್ಮ ಗಾಂಧಿಜಿಯವರ ಸತ್ಯ, ಶಾಂತಿ, ಅಹಿಂಸೆ, ನ್ಯಾಯ, ಸಮಾನತೆ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಅವುಗಳನ್ನು ಪಸರಿಸುವ ಕಾರ್ಯ ಮಾಡಿರುವ ಹರ್ಡೇಕರ ಮಂಜಪ್ಪನವರು ಕರ್ನಾಟಕದ ಗಾಂಧಿಜಿಯಾಗಿದ್ದಾರೆ. ಅವರ ಸಾಮಾಜಿಕ ಕೊಡುಗೆ ಅನನ್ಯವಾಗಿದೆ ಎಂದು ಪೂಜ್ಯ ಶಿವಾನಂದ ಶ್ರೀಗಳು ಅಭಿಮತಪಟ್ಟರು. ನಗರದ ಮಕ್ತಂಪುರ ಗುರುಬಸವ ಮಠದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಸಂಜೆ ಏರ್ಪಡಿಸಲಾಗಿದ್ದ ‘ಶರಣ ಹರ್ಡೇಕರ ಮಂಜಪ್ಪನವರ 139ನೇ ಜನ್ಮದಿನೋತ್ಸವ’ ನಿಮಿತ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆಶೀರ್ವಚನ ನೀಡಿದ ಅವರು, ಮಂಜಪ್ಪನವರು ಗಾಂಧಿಯವರ ಅನುಯಾಯಿಯಾಗಿ […]

Continue Reading

ಸಮನ್ವಯ ತತ್ವದ ಮೇರು ಸಾಧಕ ರಾಮಕೃಷ್ಣ ಪರಮಹಂಸ

ಕಲಬುರಗಿ: ಧರ್ಮಗಳು ಬೇರೆ-ಬೇರೆಯಾದರು ಕೂಡಾ, ಎಲ್ಲಾ ಧರ್ಮಗಳ ಮೂಲತತ್ವ ಒಂದೆಯಾಗಿದೆ. ‘ದೇವನೊಬ್ಬ, ನಾಮ ಹಲವು’ ಆಗಿದ್ದು, ಎಲ್ಲಾ ಧರ್ಮಗಳ ತಿರುಳು ಒಂದೆಯಾಗಿದೆ. ಪ್ರತಿಯೊಬ್ಬರು ಪರಸ್ಪರ ಪ್ರೀತಿ, ಸೌಹಾರ್ದವಾಗಿ ಬದುಕಬೇಕೆಂಬ ಸಮನ್ವಯ ತತ್ವ ಪ್ರತಿಪಾದಿಸಿದ ರಾಮಕೃಷ್ಣ ಪರಮಹಂಸ್‌ರ ಸಂದೇಶ ಪಾಲನೆ ಅಗತ್ಯವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಜರುಗಿದ ‘ರಾಮಕೃಷ್ಣ ಪರಮಹಂಸ್‌ರ 189ನೇ ಜನ್ಮದಿನೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ […]

Continue Reading

ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಬಂದ್: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿತರಣೆ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 1 ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರದ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶ (ಅನ್‌ಸ್ಯಾಚುರೇಟೆಡ್ ಫ್ಯಾಟ್) ಹೆಚ್ಚಾಗಿದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದಿದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿತರಣೆ […]

Continue Reading

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳುವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

ಶಿವಮೊಗ್ಗ: ಕನ್ನಡದ ಬಗ್ಗೆ ನನಗೆ ಅಷ್ಟು ತಿಳುವಳಿಕೆ ಇಲ್ಲ. ಆದರೆ ಕನ್ನಡದ ಉಳಿಯುವಿಕೆಗೆ ನನ್ನ ಜವಾಬ್ದಾರಿ ಇದೆ. ಕನ್ನಡದ ಬಗ್ಗೆ ತಿಳಿದುಕೊಳ್ಳದೆ ಇದ್ದರೂ ಅದಕ್ಕಿಂತ ಮಿಗಿಲಾಗಿ ನನಗೆ ಕನ್ನಡದ ಬಗ್ಗೆ ಅಭಿಮಾನ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್‌ನ ಗ್ರಂಥಾಲಯಕ್ಕೆ ನನ್ನ ತಂದೆ ಎಸ್‌ ಬಂಗಾರಪ್ಪ ಅವರ ಹೆಸರಿನಲ್ಲಿ 5 ಲಕ್ಷ ರೂ. ಅನುದಾನ ನೀಡಿದ್ದೆನೆ. ನಮ್ಮ ತಂದೆ ಬಂಗಾರಪ್ಪ ಅವರು ಕಷ್ಟಪಟ್ಟು […]

Continue Reading

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಆರ್ ಪಾಟೀಲ ಅವರಿಗೆ ಈಗ ಹೊಸ ಹುದ್ದೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಅಳಂದ ಕಾಂಗ್ರೆಸ್​ ಶಾಸಕ ಬಿಆರ್ ಪಾಟೀಲ್​ ಅವರಿಗೆ ಈಗ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಂಪುಟ ದರ್ಜೆ ಸ್ಥಾನಮಾನ ಮತ್ತು ಎಲ್ಲಾ ಸೌಲಭ್ಯ ನೀಡವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಿಎಂ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಬಿ.ಆರ್ ಪಾಟೀಲ್​ ಅವರಿಗೆ […]

Continue Reading

ವಾಡಿ ಜನತೆಯ ಸಂಕಷ್ಟಕ್ಕೆ ಸ್ಪಂದಿಸಲು ಜಿಲ್ಲಾಧಿಕಾರಿಗಳಿಗೆ ಬಿಜೆಪಿಯಿಂದ ಮನವಿ

ವಾಡಿ: ಪಟ್ಟಣವು ಸುಮಾರು ಐವತ್ತು ಸಾವಿರ ಜನಸಂಖ್ಯೆ ಹೊಂದಿರುವ ಪಟ್ಟಣವಾಗಿದೆ. ಪ್ರಖ್ಯಾತ ಎಸಿಸಿ (ಆದಾನಿ) ಸಿಮೆಂಟ್ ಹಾಗೂ ಬೃಹತ್ ರೈಲ್ವೆ ನಿಲ್ದಾಣ‌ ಕೂಡಾ ಇದ್ದರು ಜನರು ಜೀವನ ಸಾಗಿಸಲು ಹರಸಾಹಸ ಸುಮಾರು ವರ್ಷಗಳಿಂದ ತಪ್ಪಿಲ್ಲ, ಪಟ್ಟಣದ ಜನತೆಯ ತೊಂದರೆಗೆ ಸ್ಪಂದಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪತ್ರ ಬರೆದಿದ್ದಾರೆ. ಪಟ್ಟಣಕ್ಕೆ ಮೂರು ನಾಲ್ಕು ದಿನಗಳಿಗೊಮ್ಮೆ ನೀರು ಸರಬರಾಜು ಆಗುತ್ತಿದೆ, ಪಕ್ಕದಲ್ಲೇ ಎರಡೂ ನದಿಗಳಿದ್ದರೂ ಅದು ರಾಡಿ ನೀರು, ಚರಂಡಿ ನೀರು ರಸ್ತೆ, ಮನೆಯೊಳಗೆ ಬರುತ್ತವೆ. […]

Continue Reading

ಆಟಗಳು ಮಕ್ಕಳ ಕ್ರಿಯಾಶೀಲತೆ ಹೆಚ್ಚಿಸುತ್ತವೆ: ಸಿದ್ದಲಿಂಗ ಬಾಳಿ

ಚಿತ್ತಾಪುರ: ಆಟಗಳು ಎಂದರೆ ಉತ್ಸಾಹದಿಂದ ಕುಣಿಯುವ ಮಕ್ಕಳು ಇಂದು ಆರೋಗ್ಯ ಹಾಗೂ ಅಪೌಷ್ಟಿಕತೆಯ ಕಾರಣದಿಂದ ಮತ್ತು ಮೊಬೈಲ್’ಗಳಿಂದ ಆಟವಾಡುವ ಆಸಕ್ತಿ ಮಕ್ಕಳಲ್ಲಿ ಕಡಿಮೆಯಾಗುತ್ತಿರುವುದು ಖೇದದ ಸಂಗತಿ. ಆಟಗಳು ಮಕ್ಕಳನ್ನು ಕ್ರಿಯಾಶಿಲಗೊಳಿಸುತ್ತವೆ ಎಂದು ಶಿಕ್ಷಕ ಸಿದ್ದಲಿಂಗ ಬಾಳಿ ಅಭಿಪ್ರಾಯಪಟ್ಟರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ನೆಹರು ಯುವ ಕೇಂದ್ರ, ಶ್ಯಾಮಸುಂದರ್ ಶಿಕ್ಷಣ ಮಹಾವಿದ್ಯಾಲಯ ಹಾಗೂ ಸಮೃದ್ಧಿ ಯುವತಿಯರ ಸ್ವಸಹಾಯ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕ ಮಟ್ಟದ ಕ್ರೀಡಾಕೂಟದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಠಗಳ […]

Continue Reading

ಜಾತ್ರೆಗೆ ಒಂದು ದಿನ ಇರುವಾಗ ದೇವಾಲಯದ ಹುಂಡಿ ಕಳವು

ದಾವಣಗೆರೆ: ಜಾತ್ರಾ ಮಹೋತ್ಸವಕ್ಕೆ ಒಂದು ದಿನ ಇರುವಾಗಲೇ ಕಳ್ಳರು ಹುಂಡಿ ಕಳವು ಮಾಡಿದ ಘಟನೆ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಹೊರವಲಯದಲ್ಲಿರುವ ಮಾದಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ. ದೇವಸ್ಥಾನದಲ್ಲಿ ಸುಮಾರು 1 ಲಕ್ಷ ರೂ.ಗೂ ಹೆಚ್ಚು ನಗದು ಕಳವು ಮಾಡಲಾಗಿದೆ. ಪ್ರತಿ ವರ್ಷ ಜಾತ್ರೆಗೂ ಮುನ್ನ ಫೆಬ್ರುವರಿ ತಿಂಗಳಿನಲ್ಲಿ ಹುಂಡಿ ತೆರೆದು ಹಣ ಎಣಿಕೆ ಮಾಡಲಾಗುತ್ತಿತ್ತು. ಅದೆ ರೀತಿ ಈ ವರ್ಷವು ಹುಂಡಿ ತೆರೆದು ಹಣ ಎಣಿಸಲು ತೀರ್ಮಾನಿಸಲಾಗಿತ್ತು. ಆದರೆ ರವಿವಾರ ರಾತ್ರಿ ಕಳ್ಳರು ದೇವಸ್ಥಾನದ ಮುಂಭಾಗದಲ್ಲಿದ್ದ […]

Continue Reading

ಜಿ.ಪಂ, ತಾ.ಪಂ ಚುನಾವಣೆ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

ಬೆಂಗಳೂರು: ರಾಜ್ಯದಲ್ಲಿ ಮೂರುವರೆ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿ.ಪಂ, ತಾ.ಪಂ ಚುನಾವಣೆ ನಡೆಸುವ ಸಂಬಂಧ ಸೋಮವಾರ ಹೈಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಹೀಗಾಗಿ ರಾಜ್ಯ ಸರಕಾರವು ಸದ್ಯದಲ್ಲೇ ಚುನಾವಣ ಆಯೋಗಕ್ಕೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಸಲ್ಲಿಕೆ ಮಾಡಬಹುದೇ ಎಂಬ ಕುತೂಹಲ ಮೂಡಿದೆ. ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಸರಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ಸರಕಾರ ವಿಫ‌ಲವಾಗಿದೆ, ಆದಷ್ಟು […]

Continue Reading