ಗ್ರಂಥಾಲಯಗಳು ಜೀವಂತ ದೇವಾಲಯಗಳು

ಕಲಬುರಗಿ: ಜ್ಞಾನಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ. ಇದು ಯಾರಿಂದಲೂ ಕಳ್ಳತನ ಮಾಡಲಾಗದ ಸಂಪತ್ತಾಗಿದೆ. ಇಂತಹ ಅಮೂಲ್ಯವಾದ ಸಂಪತ್ತನ್ನು ನೀಡುವ ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಜೀವಂತ ದೇವಾಲಯ ಮತ್ತು ಬದುಕನ್ನು ಸುಂದರಗೊಳಿಸುವ ಸಾಧನಗಳಾಗಿ ಕಾರ್ಯನಿರ್ವಹಿಸುತ್ತವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಮತಪಟ್ಟರು. ಸುಂಟನೂರ ಗ್ರಾಮದ ಅರಿವು ಕೇಂದ್ರವಾದ ಸಾರ್ವಜನಿಕ ಗ್ರಂಥಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಷ್ಟ ಗ್ರಂಥಾಲಯ ಸಪ್ತಾಹ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಿಂದಲೇ ಪುಸ್ತಕಗಳು, ದಿನ ಪತ್ರಿಕೆಗಳು ಓದುವ […]

Continue Reading

ವೃಕ್ಷಮಾತೆ, ಸಾಲುಮರದ ತಿಮ್ಮಕ್ಕನವರಿಗೆ ಗೌರವಪೂರ್ವಕ ಶೃದ್ಧಾಂಜಲಿ

ಕಲಬುರಗಿ: ಶುಕ್ರವಾರ ನಿಧನರಾದ ವೃಕ್ಷಮಾತೆ, ಸಾಲುಮರದ ತಿಮ್ಮಕ್ಕನವರಿಗೆ ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗೌರವಪೂರ್ವಕವಾಗಿ ಮಾತೆಯವರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ನುಡಿನಮನ ಸಲ್ಲಿಸಿದ ಉಪನ್ಯಾಸಕ ಎಚ್.ಬಿ ಪಾಟೀಲ್, ಸಾಲುಮರದ ತಿಮ್ಮಕ್ಕನವರು ಕನ್ನಡ ನೆಲದ ಅಪರೂಪದ, ಮಾದರಿಯ ಸಾಧಕಿಯಾಗಿದ್ದಾರೆ. ಅವರೊಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೆ ತಮ್ಮ ಮಕ್ಕಳಂತೆ ಭಾವಿಸಿ ಬೆಳೆಸಿದವರು. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ […]

Continue Reading

ಸೈಡ್‌ ಬಿಡದಿದ್ದಕ್ಕೆ ಕಿರಿಕ್: ಕಾರಿನಿಂದ ಗುದ್ದಿಸಿ ಬೈಕ್‌ನಲ್ಲಿದ್ದ ಮೂವರ ಕೊಲೆಗೆ ಯತ್ನಿಸಿದ ಟೆಕ್ಕಿ

ಬೆಂಗಳೂರು: ರಸ್ತೆಯಲ್ಲಿ ಸೈಡ್‌ ಬಿಡದಿದ್ದಕ್ಕೆ ಕಾರು ಗುದ್ದಿಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆಗೆ ಯತ್ನಿಸಿದ ಸಾಫ್ಟ್‌ವೇರ್ ಇಂಜಿನಿಯರ್ ಸುಕೃತ್ ಕೇಶವ್‌ನನ್ನು ಸದಾಶಿವ ನಗರ ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 26 ರಂದು ಅಪಘಾತವೆಂದು ಕೇಸ್ ದಾಖಲಾಗಿತ್ತು. ತನಿಖೆ ನಂತರ ಉದ್ದೇಶಪೂರ್ವಕ ಕೊಲೆಯತ್ನ ಎಂದು ಗೊತ್ತಾಗಿದೆ. ರಾಮಯ್ಯ ಸಿಗ್ನಲ್‌ನಲ್ಲಿ ಫ್ರೀ ಲೆಫ್ಟ್ ಬ್ಲಾಕ್ ಮಾಡಲಾಗಿತ್ತು. ಈ ವೇಳೆ ಹಿಂದಿನಿಂದ ಬಂದ ಕಾರಿನ ಚಾಲಕ ಹಾರ್ನ್ ಮಾಡಿದಾಗ ಬೈಕ್ ಸವಾರ ಸಿಗ್ನಲ್ ಲೆಫ್ಟ್ ಫ್ರೀ ಟರ್ನ್ ಇಲ್ಲ ಎಂದಿದ್ದಾನೆ. […]

Continue Reading

ಚಿತ್ತಾಪುರ ಬಸ್ ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆ

ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಅಪರಿಚಿತ ಶವ ಪತ್ತೆಯಾಗಿದೆ. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ವ್ಯಕ್ತಿಗೆ ಅಂದಾಜು 35-40 ವಯಸ್ಸಾಗಿದೆ, ಗುರುತು ಪತ್ತೆಯಾಗಿಲ್ಲ, ಶವವನ್ನು ಸ್ಥಳೀಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಪಿಎಸ್‌ಐ ತಿಳಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಚಿತ್ತಾಪುರ ಪೊಲೀಸ್ ಠಾಣೆಗೆ ಅಥವಾ ಪಿಎಸ್‌ಐ ಅವರ ದೂರವಾಣಿ ಸಂಖ್ಯೆ 9480803573 ಕರೆ ಮಾಡಿ ಮಾಹಿತಿ […]

Continue Reading

ಶಹಾಬಾದ: ನ.15 ರಂದು ಉಚಿತ ನೇತ್ರ ತಪಾಸಣೆ ಮತ್ತು ಔಷಧ ವಿತರಣಾ ಶಿಬಿರ

ಸುದ್ದಿ ಸಂಗ್ರಹ ಶಹಬಾದನಗರದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ನವೆಂಬರ್ 15 ರಂದು ಶನಿವಾರ ಉಚಿತ ನೇತ್ರ ತಪಾಸಣೆ ಮತ್ತು ಔಷಧಿ ವಿತರಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಐಕ್ಯೂಎಸ್‌ಸಿ, ಎನ್.ಎಸ್.ಎಸ್ ಘಟಕ ಮತ್ತು ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆ ಕಲಬುರ್ಗಿ ಇವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಔಷಧಿ ವಿತರಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಬಸವರಾಜ್ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಮದುವೆ ಮಂಟಪದಲ್ಲಿ ವರನಿಗೆ ಚಾಕು ಇರಿತ: ಆರೋಪಿಯನ್ನು 2 ಕಿ.ಮೀ ವರೆಗೆ ಬೆನ್ನಟ್ಟಿದ ವೆಡ್ಡಿಂಗ್‌ ಡ್ರೋನ್‌

ಮುಂಬೈ: ಮದುವೆ ಮಂಟಪದಲ್ಲಿ ವರನಿಗೆ ಚಾಕುವಿನಿಂದ ಇರಿದು ಎಸ್ಕೇಪ್‌ ಆಗುತ್ತಿದ್ದ ವ್ಯಕ್ತಿಯನ್ನು ವೆಡ್ಡಿಂಗ್‌ ಡ್ರೋನ್‌ 2 ಕಿ.ಮೀ ವರೆಗೆ ಬೆನ್ನಟ್ಟಿದ ಪ್ರಸಂಗ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಅಮರಾವತಿಯಲ್ಲಿ ಮದುವೆ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಾಘೋ ಜಿತೇಂದ್ರ ಬಕ್ಷಿ ಎಂಬಾತ ವೇದಿಕೆಯ ಮೇಲೆ ವರನಿಗೆ ಮೂರು ಬಾರಿ ಇರಿದು ಪರಾರಿಯಾಗಿದ್ದಾನೆ. ವೆಡ್ಡಿಂಗ್‌ ಚಿತ್ರೀಕರಿಸುತ್ತಿದ್ದ ವಿಡಿಯೋಗ್ರಾಫರ್ ತಕ್ಷಣವೇ ಕಾರ್ಯಪ್ರವೃತ್ತನಾಗಿ ತನ್ನ ಡ್ರೋನ್ ಮೂಲಕ ದಾಳಿಕೋರನನ್ನು ಬೆನ್ನಟ್ಟಿ, ದಾಳಿಕೋರ ಮತ್ತು ಇನ್ನೊಬ್ಬ ವ್ಯಕ್ತಿ ಬೈಕ್‌ನಲ್ಲಿ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದಾಗ ಸುಮಾರು […]

Continue Reading

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ತಿಂಗಳಲ್ಲಿ ಒಂದು ದಿನ ಋತುಚಕ್ರ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವರ್ಷಕ್ಕೆ 12 ದಿನ ವೇತನ ಸಹಿತ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ. ಇತ್ತೀಚೆಗಷ್ಟೆ ಋತುಚಕ್ರ ರಜೆ ನೀಡಲು ಕ್ಯಾಬಿನೆಟ್ ನಿರ್ಣಯಿಸಿತ್ತು. ಕ್ಯಾಬಿನೆಟ್ ನಿರ್ಣಯದಂತೆ ಕಾರ್ಮಿಕ ಇಲಾಖೆ ಅಧಿಕೃತ ಅದೇಶ ಹೊರಡಿಸಿದೆ. 2 ಷರತ್ತುಗಳನ್ನು ವಿಧಿಸಿ ರಜೆ ನೀಡಲು ಸಂಸ್ಥೆಗಳಿಗೆ ಸೂಚಿಸಿದೆ. ಷರತ್ತುಗಳೆನು […]

Continue Reading

ಬಹುಮುಖ ವ್ಯಕ್ತಿತ್ವದ ಮೇರು ಸಾಹಿತಿ ಡಾ.ಗಿರೀಶ್ ಕಾರ್ನಾಡ: ಎಚ್.ಬಿ ಪಾಟೀಲ

ಕಲಬುರಗಿ: ಗಿರೀಶ್ ಕಾರ್ನಾಡ ನಾಟಕಕಾರ, ರಂಗಕರ್ಮಿ, ಲೇಖಕ, ಸಿನಿಮಾ ನಟ, ನಿರ್ದೇಶಕ, ಚಿಂತಕ, ಹೋರಾಟಗಾರ, ವಿಮರ್ಶಕರಾಗಿ ಬಹುಮುಖ ವ್ಯಕ್ತಿತ್ವದ ಮಹಾನ ಸಾಧಕ. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಅವರ ಕೊಡುಗೆ ಅನನ್ಯ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಮತ್ತು ಶಿವಾ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರಾಜ್ಯೋತ್ಸವ ಮಾಸಾಚರಣೆ ಪ್ರಯುಕ್ತ ಸರಣಿ ಉಪನ್ಯಾಸ ಕಾರ್ಯಕ್ರಮ-12 ಮತ್ತು ಬಳಗದ 5999ನೇ ಕಾರ್ಯಕ್ರಮ ‘ಕನ್ನಡಕ್ಕೆ ಡಾ.ಗಿರೀಶ್ ಕಾರ್ನಾಡ್‌ರ […]

Continue Reading

ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ನಟಿ ಪ್ರಿಯಾಂಕಾ ಉಪೇಂದ್ರ ಪೋನ್ ಹ್ಯಾಕ್ ಮಾಡಿದ್ದ ವಂಚಕನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಮಾಡಿ, ಅದರಲ್ಲಿದ್ದ ನಂಬರ್‌ಗಳಿಗೆ ಮೆಸೇಜ್ ಮಾಡಿ ದುಡ್ಡು ಕೇಳಿದ್ದ. ನಟಿ ದೂರಿನ ಬಳಿಕ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನು ಬಿಹಾರದಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆತಂದಿದ್ದಾರೆ. ಬಳಿಕ ಪೊಲೀಸರು ವಿಚಾರಣೆ ನಡೆಸಿದ್ದು, ಈ ವೇಳೆ ಪ್ರಿಯಾಂಕಾ ಅವರ ಮಗನಿಂದ ಹಾಕಿಸಿಕೊಂಡಿದ್ದ 50 ಸಾವಿರ ರೂ. […]

Continue Reading

ಬಂಧಿತ ಉಗ್ರ, ವೈದ್ಯ ಆದಿಲ್‌ಗೆ ಸಿಗುತ್ತಿತ್ತು ತಿಂಗಳಿಗೆ 5 ಲಕ್ಷ ರೂ. ಸಂಬಳ

ನವದೆಹಲಿ: ಶ್ರೀನಗರದಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುವ ಪೋಸ್ಟರ್‌ಗಳನ್ನು ಹಾಕಿ ಬಂಧನಕ್ಕೆ ಒಳಗಾಗಿ ಫರಿದಾಬಾದ್‌ ಟೆರರ್‌ ಗ್ಯಾಂಗ್‌ ಬಗ್ಗೆ ಬಾಯ್ಬಿಟ್ಟ ಕಾಶ್ಮೀರಿ ವೈದ್ಯ ಆದಿಲ್ ಅಹ್ಮದ್ ರಾಥರ್‌ಗೆ ತಿಂಗಳಿಗೆ 5 ಲಕ್ಷ ರೂ. ಸಂಬಳ ಸಿಗುತ್ತಿತ್ತು. ದಕ್ಷಿಣ ಕಾಶ್ಮೀರದ ಖಾಜಿಗುಂಡ್ ನಿವಾಸಿಯಾಗಿರುವ ಆದಿಲ್ ಅಹ್ಮದ್ ರಾಥರ್ ಅಕ್ಟೋಬರ್ 2024 ರವರೆಗೆ ಅನಂತನಾಗ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿ) ಹಿರಿಯ ರೆಸಿಡೆಂಟ್‌ ಆಗಿ ಕೆಲಸ ಮಾಡಿದ್ದ. ಬಳಿಕ ಈ ವರ್ಷದ ಮಾರ್ಚ್‌ನಲ್ಲಿ ಉತ್ತರ ಪ್ರದೇಶದ ಸಹರಾನ್‌ಪುರಕ್ಕೆ ತೆರಳಿದ್ದನು. ಮೊದಲು […]

Continue Reading