ಗುಂಡಗುರ್ತಿ ಬಳಿ ಜನಾಕರ್ಷಕ ಲುಂಬಿನಿ ಗಾರ್ಡನ್ ಲೋಕಾರ್ಪಣೆಗೊಳಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ತಾಲೂಕಿನ ಗುಂಡಗುರ್ತಿ ಗ್ರಾಮದ ಬಳಿ ಜನಾಕರ್ಷಕ ಲುಂಬಿನಿ ಉದ್ಯಾನವನವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, 10 ಎಕರೆ ವಿಸ್ತಾರದ ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಗೂ ಡಿಎಂಎಫ್ ಅನುದಾನ ಅಂದಾಜು1.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಉದ್ಯಾನವನ ವಿವಿಧ ಬಗೆಯ ಸೌಲಭ್ಯಗಳಿಂದ ಜನರನ್ನು ಆಕರ್ಷಿಸುತ್ತದೆ ಎಂದರು. ಮಿಯಾವಾಕಿ ಅರಣ್ಯ, ಚಿಟ್ಟೆ ಪಾರ್ಕ್, ಮರದ ಸೇತುವೆ, ಕಾರಂಜಿ, ವಿವಿಧ ಬಗೆಯ ಗಿಡಗಳು, ಹಸಿರು ಹುಲ್ಲಿನ ಹೊದಿಕೆ, ಮಕ್ಕಳ ಆಟದ […]

Continue Reading

ಕನ್ನಡ ಸಾಹಿತ್ಯಕ್ಕೆ ಜನಪದ ಕೊಡುಗೆ ಅಪಾರ

ಸುದ್ದಿ ಸಂಗ್ರಹ ಶಹಾಬಾದಕನ್ನಡ ನಾಡು, ನುಡಿ, ಸುಗ್ಗಿಯ ಸಂಭ್ರಮ, ಪರಂಪರೆ ಬಗ್ಗೆ ಇಂದಿನ ಪಿಳಿಗೆಗೆ ಜೋಗುಳ ಪದ, ಹಂತಿಯ ಹಾಡು ಕನ್ನಡ ಸಾಹಿತ್ಯಕ್ಕೆ ಜನಪದ ಕೊಡುಗೆ ಅಪಾರ ಅದನ್ನು ಉಳಿಸಿ ಮುಂದಿನ ಪಿಳಿಗೆಗ ಕೊಂಡೊಯ್ಯುವದು ಯುವ ಜನರ ಕರ್ತವ್ಯವಾಗಿದೆ ಎಂದು ಕನ್ನಡ ಜಾನಪದ ಅಧ್ಯಕ್ಷ ರಾಜಶೇಖರ ದೇವರಮನಿ  ಹೇಳಿದರು.‌ ನಗರದ ಕೂಡಲ ಸಂಗಮ ಶಿಕ್ಷಣ ಸಂಸ್ಥೆ ಶಾಲೆ ಹಳೆ ಶಹಾಬಾದ ಆವರಣಲ್ಲಿ ಕನ್ನಡ ಜಾನಪದ ಪರಿಷತ್ತು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಸುಗ್ಗಿಯ ಸಂಭ್ರಮ’ ಹಾಗೂ ‘ಮಕ್ಕಳ ವೇಷಭೂಷಣ ಸ್ಪರ್ಧೆ’ಯಲ್ಲಿ 5 […]

Continue Reading

ಏತ ನೀರಾವರಿ ಯೋಜನೆ ಮೂಲಕ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು ಸಚಿವರಿಗೆ ದೇವಿಂದ್ರ ಅರಣಕಲ್ ಮನವಿ

ಚಿತ್ತಾಪುರ: ಭಾಗೋಡಿ ಗ್ರಾಮದ ಹತ್ತಿರಹರಿಯುವ ಕಾಗಿಣಾ ನದಿಗೆ ಏತ ನೀರಾವರಿಯೋಜನೆ ಮೂಲಕ ರೈತರಿಗೆ ನೀರಾವರಿ ಸೌಲಭ್ಯಒದಗಿಸಬೇಕು ಎಂದು ಗ್ರಾಮದ ಮುಖಂಡ ದೇವಿಂದ್ರಎಂ. ಅರಣಕಲ್ ಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆಮನವಿ ಪತ್ರ ಸಲ್ಲಿಸಿದರು. ತಾಲೂಕಿನ ಭಾಗೋಡಿ ಗ್ರಾಮಕ್ಕೆ ಹೊಂದಿಕೊಂಡಿರುವ ಕಾಗಿಣಾ ನದಿಗೆ ದೂರದೃಷ್ಟಿಯ ಫಲವಾಗಿ ನದಿಗೆಅಡ್ಡಲಾಗಿ ಬಾಂದಾರ ಸೇತುವೆ ನಿರ್ಮಿಸಲಾಗಿದೆ.ಸದಾ ನದಿಯಲ್ಲಿ ನೀರು ಸಂಗ್ರಹವಿರುತ್ತದೆ. ಕಾಗಿಣಾನದಿಯ ಉತ್ತರ ಭಾಗದ ಭೂ ಪ್ರದೇಶದಲ್ಲಿನ ರೈತರಿಗೆಬೆಣ್ಣೆತೊರಾ ಯೋಜನೆಯ ಸೌಲಭ್ಯದೊರಕಿಸಿಕೊಡಲು ಕಾಲುವೆಗಳ ನಿರ್ಮಾಣಮಾಡಲಾಗಿದೆ. ಆದರೆ […]

Continue Reading

ಕ್ರೀಡೆಗಳ ಮೂಲಕ ಬೌದ್ಧಿಕ ಮಟ್ಟ ಹೆಚ್ಚಿಸಲು ಸಹಕಾರಿ: ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಕ್ರೀಡೆಗಳ ಮೂಲಕ ಕೇವಲ ದೈಹಿಕ ಸಮರ್ಥತೆ ರೂಪುಗೊಳ್ಳದೇ ಬೌದ್ದಿಕ ಮಟ್ಟ ಹೆಚ್ಚಿಸಲು ಸಹಕಾರಿಯಾಗುತ್ತದೆ. ಕ್ರೀಡೆಯ ಜೊತೆಗೆ ವೈಜ್ಞಾನಿಕ ಮನೋಭಾವನೆ ಬೆಳೆಸಲು ಎಲ್ಲರೂ ಶ್ರಮಪಡಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಅಶೋಕ ಲೈಲ್ಯಾಂಡ್ ಹಾಗೂ ಲರ್ನಿಂಗ್ ಲಿಂಕ್ ಫೌಂಡೇಶನ್ ಸಹಯೋಗದೊಂದಿಗೆ ಪಟ್ಟಣದ ಬಾಪುರಾವ್ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ “ಆಟ ನನ್ನ ಹಕ್ಕು” ಕಾರ್ಯಕ್ರಮದಲ್ಲಿ ಕ್ರೀಡಾ ಸಾಮಗ್ರಿಗಳ ವಿತರಣಾ ಹಾಗೂ ಉದ್ಘಾಟನೆ […]

Continue Reading

ಅಂಗನವಾಡಿಗಳಲ್ಲಿ‌ ಶುಚಿತ್ವ ಕಾಪಾಡಿ: ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಅಂಗನವಾಡಿ ಕೇಂದ್ರಗಳಲ್ಲಿ ತಯಾರಿಸುವ ಅಡುಗೆಯಲ್ಲಿ ಶುಚಿತ್ವ ಹಾಗೂ ಸ್ವಚ್ಛತೆ ಕಾಪಾಡಿಕೊಂಡು ಮಕ್ಕಳಿಗೆ ವಿದ್ಯೆ ಕಲಿಸುವುದರ ಜೊತೆಗೆ ಆರೋಗ್ಯದ ಕಡೆಗೆ ವಿಶೇಷ ಗಮನಹರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವಪ್ರಿಯಾಂಕ್ ಖರ್ಗೆ ಸೂಚಿಸಿದರು. 2022-23ನೇ ಸಾಲಿನ ಕೆಕೆಆರ್ ಡಿಬಿ ಮೆಗಾ ಮ್ಯಾಕ್ರೋ ಯೋಜನೆಯಡಿಯಲ್ಲಿ ತಲಾ 20 ಲಕ್ಷ ರೂ ವೆಚ್ಚದಲ್ಲಿ ದಂಡೋತಿ ಗ್ರಾಮದಲ್ಲಿ ಮೂರು ಹಾಗೂ ಚಿತ್ತಾಪುರ ಪಟ್ಟಣದಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ […]

Continue Reading

ಕ್ರೀಡೆಗಳಿಂದ ಮಾತ್ರ ಮಕ್ಕಳ ಸಾರ್ವಾoಗೀಣ ವಿಕಾಸ ಸಾಧ್ಯ: ಬಸವರಾಜ ಬಳೂoಡಗಿ

ಚಿತ್ತಾಪುರ: ಶಿಕ್ಷಣ ವ್ಯವಸ್ಥೆಯಲ್ಲಿ ಬಹುತೇಕ ಶಿಕ್ಷಣ ಸಂಸ್ಥೆಗಳು ಕೇವಲ ಓದು, ಬರಹಕ್ಕೆ ಮಾತ್ರ ಪ್ರಾಮುಖ್ಯತೆ ನೀಡಿ ಮಕ್ಕಳನ್ನು ಏಕಮುಖದ ಬೆಳವಣಿಗೆಗೆ ಕಾರಣವಾಗುತ್ತಿವೆ. ಆದರೆ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾ ಸಂಸ್ಥೆಯ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ ವಿಕಾಸ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂoಡಗಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ನೇತಾಜಿ ಸುಭಾಷ್ ಚಂದ್ರಬೋಸರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಕ್ರೀಡಾಕೂಟ […]

Continue Reading

ರಾಜ್ಯ ಚಲನಚಿತ್ರ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊಡಲಾಗುವ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯಲ್ಲಿ ಕಿಚ್ಚ ಸುದೀಪ ಅವರನ್ನು 2019ನೇ ಸಾಲಿನ ‘ಅತ್ಯುತ್ತಮ ನಟ ಪ್ರಶಸ್ತಿ’ಗೆ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು. ಆದರೆ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸುವುದಿಲ್ಲ ಎಂದು ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ ತಿಳಿಸಿದ್ದಾರೆ. ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಪಡೆದಿರುವುದು ನಿಜಕ್ಕೂ ಒಂದು ಗೌರವದ ವಿಷಯ. ಈ ಗೌರವಕ್ಕೆ ಆಯ್ಕೆಮಾಡಿದ ತೀರ್ಪುಗಾರರಿಗೆ ಹೃತ್ಪೂರ್ವಕ ಧನ್ಯವಾದಗಳು ಅರ್ಪಿಸುತ್ತೆನೆ. […]

Continue Reading

ಕೋಲಿ ಸಮಾಜ ಒಡೆಯುವುದೆ ಕಮಕನೂರು ಪ್ರವೃತ್ತಿ: ಮುನಿಯಪ್ಪ ಕೊಳ್ಳಿ

ಚಿತ್ತಾಪುರ: ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರು‌ ಅವರು ದಿ.ವಿಠಲ್ ಹೇರೂರ ಅವರ ಹೋರಾಟದ ಸಮಯದಿಂದ ಇಂದಿನವರೆಗೂ ಕೋಲಿ ಸಮಾಜದಲ್ಲಿ ಒಡಕುಂಟು ಮಾಡುವದು ಮುಂದುವರೆಸಿದ್ದಾರೆ‌. ಅದು ಅವರ ಪ್ರವೃತ್ತಿಯಾಗಿದೆ ಎಂದು ಕೋಲಿ ಸಮಾಜದ ಮುಖಂಡ ಮುನಿಯಪ್ಪ ಎಸ್ ಕೊಳ್ಳಿ ದಂಡೋತಿ ಹೇಳಿದ್ದಾರೆ. ಹೇರೂರ ಅವರು ಬದುಕಿರುವವರೆಗೂ ಅವರನ್ನು ವಿರೋಧ ಮಾಡುತ್ತಲೇ ಬಂದಿದ್ದಾರೆ. ಹೇರೂರ ಅವರು ಸಮಾಜದ ಒಳಿತಿಗಾಗಿ ಯಾವುದೆ ಸಭೆ, ಸಮಾರಂಭ, ಕಾರ್ಯಕ್ರಮ, ಪ್ರತಿಭಟನೆ, ಹೋರಾಟ ಹಮ್ಮಿಕೊಂಡರೆ ಆಗ ಕಮಕನೂರು ಅವರು ಪರ್ಯಾಯವಾಗಿ ಕಾರ್ಯಕ್ರಮ ಮಾಡುವ ಮೂಲಕ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಶೌರ್ಯ ದಿನ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ಆಚರಿಸಲಾಯಿತು….ಈ ವೇಳೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ನೀಡುತ್ತೆನೆ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಈ ಅಪ್ರತಿಮ ಘೋಷ ವಾಕ್ಯ ಭಾರತ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಲಕ್ಷಾಂತರ ಜನರ ಹೃದಯದಲ್ಲಿ ದೇಶಭಕ್ತಿಯ ಜ್ವಾಲೆಯನ್ನು ಪ್ರಜ್ವಲಿಸುವಂತೆ ಮಾಡಿತು ಎಂದರು. ಇಂದು ಈ ಮಹಾನ್ ನಾಯಕನ 128ನೇ ಜನ್ಮ ವಾರ್ಷಿಕೋತ್ಸವವನ್ನು ನಾವು […]

Continue Reading

ಕುರಿ ವ್ಯಾಪಾರಿಗಳಿಂದ 4 ಲಕ್ಷ ಕುಸಿದುಕೊಂಡು ಪರಾರಿ: 21 ಪ್ರಕರಣದಲ್ಲಿದ್ದ 3 ಆರೋಪಿಗಳು ಅರೆಸ್ಟ್

ಯಾದಗಿರಿ: ಕುರಿ ವ್ಯಾಪಾರಿಗಳನ್ನು ಅಡ್ಡಗಟ್ಟಿ 4 ಲಕ್ಷ ರೂ ಕುಸಿದುಕೊಂಡು ಪರಾರಿಯಾಗಿದ್ದ ಡಕಾಯಿತರ ಗುಂಪಿನ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಯಲ್ಲಪ್ಪ ಕುಂಚಿಕೊರವರ್, ಕೃಷ್ಣ ಕುಂಚಿಕೊರವರ್, ಸಿದ್ದರಾಮಪ್ಪ ಕುಂಚಿಕೊರವರ್ ಎಂದು ಗುರುತಿಸಲಾಗಿದೆ, ಇನ್ನುಳಿದ 7 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.3 ರಂದು ಚಟ್ನಳ್ಳಿ ಕ್ರಾಸ್ ಬಳಿ ತೆಲಂಗಾಣದ ಸೂರ್ಯಪೇಟದಲ್ಲಿ ಕುರಿ ವ್ಯಾಪಾರಿಗಳನ್ನು ಅಡ್ಡಗಟ್ಟಿ ಹಲ್ಲೆ ಮಾಡಿ 4 ಲಕ್ಷ ಕುಸಿದುಕೊಂಡು […]

Continue Reading