ಚಿತ್ತಾಪುರ: ಅಥ್ಲೆಟಿಕ್ಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ಜಿಲ್ಲಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಚಿತ್ತಾಪುರ ಪಟ್ಟಣದ ಆದರ್ಶ ವಿದ್ಯಾಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಪಟುಗಳು ಅಥ್ಲೆಟಿಕ್ಸ್‌ನ ವಿವಿಧ ಕ್ರೀಡೆಗಳಲ್ಲಿ ವಿಜಯಶಾಲಿಗಳಾಗುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 10ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀಶೈಲ ಸರಪಳಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ ಮತ್ತು 10ನೇ ತರಗತಿಯ ಪ್ರಕೃತಿ ಜಿಲ್ಲಾ ಮಟ್ಟದ 3 ಕಿಲೋ ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟ ಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಮೇಲುಸ್ತುವಾರಿ ಸಮಿತಿಯ ಚಂದರ ಚವ್ಹಾಣ, […]

Continue Reading

ನಾಳೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

ಸುದ್ದಿ ಸಂಗ್ರಹ ಕಲಬುರಗಿ ಜಿಲ್ಲಾಡಳಿತ, ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆಯಿಂದ ಅ.31ರಂದು ಬೆಳಗ್ಗೆ 10.30ಕ್ಕೆ ನಗರದ ಡಾ.ಎಸ್.ಎಂ ಪಂಡಿತ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಸರಕಾರಿ ನೌಕರರ ದಿನಾಚರಣೆ ನಿಮಿತ್ತ ‘ಸರ್ವೋತ್ತಮ ಸೇವಾ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023, 2024, 2025ನೇ ಸಾಲಿನ ಒಟ್ಟು 30 ಜನರ ‘ಸರ್ವೋತ್ತಮ ಸೇವಾ’ ಪ್ರಶಸ್ತಿಗೆ ಆಯ್ಕೆ […]

Continue Reading

ಹೆಬ್ಬಾಳ: ಅಥ್ಲೆಟಿಕ್ಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ಜಿಲ್ಲಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಕಾಳಗಿ ತಾಲೂಕಿನ ಹೆಬ್ಬಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಕ್ರೀಡಾಪಟುಗಳು ಅಥ್ಲೆಟಿಕ್ಸ್‌ನ ವಿವಿಧ ಕ್ರೀಡೆಗಳಲ್ಲಿ ವಿಜಯಶಾಲಿಗಳಾಗುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 10ನೇ ತರಗತಿಯ ವಿದ್ಯಾರ್ಥಿಗಳಾದ ಸಮೀರ್ ಎಂ ಪಟೇಲ್ ಟ್ರಿಪಲ್ ಜಂಪ್’ನಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ ಮತ್ತು ಅಭಿಷೇಕ್ ಶಿವಾನಂದ 400 ಮೀಟರ್ ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನಗಳಿಸುವ ಮೂಲಕ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಕ್ರೀಡಾಪಟುಗಳ ಸಾಧನೆಯನ್ನು ತರಬೇತುದಾರ, ದೈ.ಶಿ ಶಿಕ್ಷಕ ನಾಗರಾಜ […]

Continue Reading

ಸದೃಢ ಮಾನವ ಸಂಪನ್ಮೂಲ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಅನನ್ಯ

ಕಲಬುರಗಿ: ವಿದ್ಯಾರ್ಥಿಗಳಿಗೆ ಜ್ಞಾನ, ಕೌಶಲ್ಯ, ಬುದ್ಧಿ, ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ನೀಡಿ, ಅವರನ್ನು ದೇಶದ ಅಮೂಲ್ಯ ಮಾನವ ಸಂಪನ್ಮೂಲವನ್ನಾಗಿಸಲು ಶಿಕ್ಷಣ ಹಾಗೂ ಶಿಕ್ಷಣ ಸಂಸ್ಥೆಗಳು ಅನನ್ಯವಾದ ಪಾತ್ರ ನಿರ್ವಹಿಸುತ್ತವೆ ಎಂದು ಜೇವರ್ಗಿಯ ಬಸವೇಶ್ವರ ಬಿ.ಎಡ್ ಕಾಲೇಜಿನ ಪ್ರಾಧ್ಯಾಪಕ, ಚಿಂತಕ ಪ್ರೊ.ಎಸ್.ಬಿ ಮಮದಾಪುರ ಅಭಿಮತಪಟ್ಟರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಲಾಗಿದ್ದ ‘ಕಾಲೇಜಿನ 67ನೇ ಸಂಸ್ಥಾಪನಾ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣ ಪರಿಹಾರವಾಗಬಲ್ಲದು ಎಂದರು. […]

Continue Reading

ಅಯೋಧ್ಯೆ ರಾಮಮಂದಿರಕ್ಕೆ 3 ಸಾವಿರ ಕೋಟಿ ದೇಣಿಗೆ: 1500 ಕೋಟಿ ರೂ. ಖರ್ಚು

ಅಯೋಧ್ಯೆ: ರಾಮಮಂದಿರಕ್ಕೆ 3,000 ಕೋಟಿ ರೂ. ಹರಿದುಬಂದಿದ್ದು, ಅದರಲ್ಲಿ ದೇಗುಲ ಸಂಪೂರ್ಣ ನಿರ್ಮಾಣಕ್ಕೆ 1,500 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ತಿಳಿಸಿದೆ. ಅಯೋಧ್ಯೆ ರಾಮಮಂದಿರವನ್ನು ಈಗ ಸಂಪೂರ್ಣವಾಗಿ ನಿರ್ಮಿಸಲಾಗಿದೆ. ಭಗವಾನ್ ರಾಮನಿಗೆ ಸಮರ್ಪಿತವಾದ ಭವ್ಯ ದೇವಾಲಯವು ಪವಿತ್ರ ಸಂಕೀರ್ಣದ ಒಳಗೆ ಆರು ಸಹಾಯಕ ದೇವಾಲಯಗಳೊಂದಿಗೆ ಪೂರ್ಣಗೊಂಡಿದೆ. ಶಿವ, ಗಣೇಶ, ಹನುಮಾನ್, ಸೂರ್ಯ, ಭಗವತಿ ಮತ್ತು ಅನ್ನಪೂರ್ಣ ದೇವಿಗೆ ಮೀಸಲಾಗಿರುವ ದೇವಾಲಯಗಳ ನಿರ್ಮಾಣ ಪೂರ್ಣಗೊಂಡಿದೆ ಎಂದು ಟ್ರಸ್ಟ್‌ನ ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯ […]

Continue Reading

ಮಗನಿಗೆ ಅದೃಷ್ಟ ತಂದ ತಾಯಿಯ ಜನ್ಮ ದಿನಾಂಕ: UAE ಲಾಟರಿಯಲ್ಲಿ 240 ಕೋಟಿ ರೂ ಗೆದ್ದ ಭಾರತೀಯ

ದುಬೈ: 29 ವರ್ಷದ ಭಾರತೀಯ ಪ್ರಜೆ ದೀರ್ಘಕಾಲದಿಂದ ಅಬುಧಾಬಿಯಲ್ಲಿ ನೆಲೆಸಿರುವ ಆಂಧ್ರ ಮೂಲದ ಅನಿಲ್‌ಕುಮಾರ್ ಬೊಲ್ಲಾ ಎಂಬಾತನ ಭವಿಷ್ಯವೇ ಬದಲಾಗಿದೆ. ಅದಕ್ಕೆ ಕಾರಣವಾಗಿದ್ದು ಆತನ ತಾಯಿಯ ಹುಟ್ಟುಹಬ್ಬದ ದಿನ. ಅಕ್ಟೋಬರ್ 18ರ ಶನಿವಾರ ನಡೆದ ಯುಎಇ ಲಾಟರಿಯ 23ನೇ ಲಕ್ಕಿ ಡೇ ಡ್ರಾ #251018 ರಲ್ಲಿ ಚಿನ್ನ ಗೆದ್ದು, ಕ್ಷಣಾರ್ಧದಲ್ಲಿ ಕೋಟ್ಯಾಧಿಪತಿಯಾಗಿದ್ದಾನೆ. ಯುಎಇ ಲಾಟರಿ ಅಧಿಕಾರಿಗಳು ಅದೃಷ್ಟಶಾಲಿ ಭಾರತೀಯನ ಚಿತ್ರವನ್ನು ಬಿಡುಗಡೆ ಮಾಡಿರುವುದರಿಂದ ಸಸ್ಪೆನ್ಸ್ ಕೊನೆಗೂ ಕೊನೆಗೊಂಡಿದೆ. ಇತಿಹಾಸದಲ್ಲಿಯೇ ಅತಿ ದೊಡ್ಡ ಬಹುಮಾನ (ಸುಮಾರು 240 ಕೋಟಿ […]

Continue Reading

ವಿಜಯಪುರದಲ್ಲಿ ಸರಣಿ ಭೂಕಂಪನ: 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ

ವಿಜಯಪುರ: ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಮಂಗಳವಾರ (ಅ.28) ರಾತ್ರಿ 11:41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ ಬಳಿಕ ಬುಧವಾರ (ಅ.29) ಬೆಳಿಗ್ಗೆ 5:30ರ ಸುಮಾರಿಗೆ ಭೂಮಿ ಕಂಪಿಸಿದೆ. ಸಿಸಿಟಿವಿ ದೃಶ್ಯದಲ್ಲಿಯೂ ಭೂಕಂಪನದ ತೀವ್ರತೆ ದಾಖಲಾಗಿದೆ. 3.0 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸರಣಿ ಭೂಕಂಪನದಿಂದ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

Continue Reading

ಸುನಿ-ಶಿವಣ್ಣ ಕಾಂಬಿನೇಷನ್‌ನ `ಮನಮೋಹಕ’ ಸಿನಿಮಾ ನಿಲ್ಲೋಕೆ ಕಾರಣವೇನು ?

ನಟ ಶಿವರಾಜ್‌ಕುಮಾರ್ ಹಾಗೂ ಸಿಂಪಲ್ ಸುನಿ ನಿರ್ದೇಶನದ `ಮನಮೋಹಕ’ ಸಿನಿಮಾ ಸುಮಾರು 10 ವರ್ಷಗಳ ಹಿಂದೆ ಸೆಟ್ಟೇರಬೇಕಿತ್ತು. ಆ ಸಿನಿಮಾಗಾಗಿ ಫೋಟೋ ಶೂಟ್ ಕೂಡಾ ಮಾಡಲಾಗಿತ್ತು. ನವಿರಾದ ಪ್ರೇಮಕಥೆಯುಳ್ಳ ಮನಮೋಹಕ ಸಿನಿಮಾದ ಕಥೆ ಕೇಳಿ ಶಿವಣ್ಣ ತುಂಬಾನೇ ಖುಷಿಯಿಂದ ಒಪ್ಪಿಕೊಂಡಿದ್ದರು. ಆದರೆ ಆ ಸಿನಿಮಾ ಕಾರಣಾಂತರಗಳಿಂದ ನಿಂತು ಹೋಯಿತು. ಮನಮೋಹಕ ಸಿನಿಮಾದ ವಿಶೇಷ ಪಾತ್ರದಲ್ಲಿ ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯ ರೈ ಅವರನ್ನು ಕರೆತರಲು ಕೂಡಾ ಪ್ಲ್ಯಾನ್ ಮಾಡಲಾಗಿತ್ತಂತೆ. ಸುಮಾರು 10 ವರ್ಷಗಳಾದರೂ ಆ ಸಿನಿಮಾದ […]

Continue Reading

ಮೊಂಥಾ ಎಫೆಕ್ಟ್: 100ಕ್ಕೂ ಹೆಚ್ಚು ರೈಲುಗಳು, 35 ವಿಮಾನಗಳ ಹಾರಾಟ ರದ್ದು

ನವದೆಹಲಿ: ಮೊಂಥಾ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆ ಭಾರತೀಯ ರೈಲ್ವೆ 100ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಿದೆ. ಜೊತೆಗೆ 30ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿವೆ. ಚಂಡಮಾರುತದ ಮುನ್ನೆಚ್ಚರಿಕೆ ಕ್ರಮವಾಗಿ, ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಭಾರತೀಯ ರೈಲ್ವೆ 100ಕ್ಕೂ ಹೆಚ್ಚು ರೈಲು ಸೇವೆಗಳನ್ನು ರದ್ದುಗೊಳಿಸಿದೆ. ಜೊತೆಗೆ ಹಲವಾರು ರೈಲುಗಳ ಮಾರ್ಗದಲ್ಲಿಯೂ ಬದಲಾವಣೆ ಮಾಡಿದ್ದು, ಕೆಲವು ರೈಲುಗಳ ಸಮಯವನ್ನು ಮರುನಿಗದಿಪಡಿಸಿದೆ. ಆಂಧ್ರಪ್ರದೇಶ ಕರಾವಳಿ ಪ್ರದೇಶಗಳಾದ ಕಾಕಿನಾಡ, ಭೀಮಾವರಂ, ವಿಜಯವಾಡ, ರಾಜಮಂಡ್ರಿ ಮತ್ತು ವಿಶಾಖಪಟ್ಟಣಂ ಕಡೆ ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆ […]

Continue Reading

ಚಿತ್ತಾಪುರ ಶಾಂತಿ ಸಭೆಯಲ್ಲಿ ಅಶಾಂತಿ, ಸಂಘಟನೆಗಳ ಮಧ್ಯೆ ಮೂಡದ ಒಮ್ಮತ

ಕಲಬುರಗಿ: ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ಪ್ರಕರಣ ಸಂಬಂಧ ಕಲಬುರಗಿ ಜಿಲ್ಲಾಡಳಿತ ನಡೆಸಿದ ಶಾಂತಿ ಸಭೆಯಲ್ಲಿ ಅಶಾಂತಿ ಮೂಡಿದೆ. ಬೆಳಗ್ಗೆ 11:30ಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ನೇತೃತ್ವದಲ್ಲಿ ಆರ್‌ಎಸ್‌ಎಸ್, ಭೀಮ್ ಆರ್ಮಿ ಸೇರಿದಂತೆ 10 ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಮೊದಲಿಗೆ ಡಿಸಿಗೆ ಲಿಖಿತ ಹೇಳಿಕೆ ಸಲ್ಲಿಸಿದ ಸಂಘಟನೆಗಳಿಗೆ ಸಭೆಯಲ್ಲಿ ಅನಿಸಿಕೆ ಹೇಳಲು ಸೂಚಿಸಲಾಯಿತು. ಈ ವೇಳೆ ಆರ್‌ಎಸ್‌ಎಸ್ ಲಾಠಿ ಬಿಟ್ಟು ರಾಷ್ಟ್ರಧ್ವಜ ಹಿಡಿದು ಪಥಸಂಚಲನ ಮಾಡುವಂತೆ ದಲಿತ ಸಂಘಟನೆಗಳು ಪಟ್ಟು ಹಿಡಿದವು. ಇದಕ್ಕೆ ಲಾಠಿ ಹಿಡಿದು ಪಥಸಂಚಲನ […]

Continue Reading