ಕಲಬುರಗಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮೇಘಣ್ಣನವರ್ ಅಧಿಕಾರ ಸ್ವೀಕಾರ
ಕಲಬುರಗಿ: ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮಹೇಶ್ ಮೇಘಣ್ಣನವರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಶ್ರೀನಿಧಿ ಅವರು ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೇಘಣ್ಣನವರ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಮಹೇಶ್ ಮೇಘಣ್ಣನವರ್ ಅವರು ಈ ಹಿಂದೆ ಬೀದರ್ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
Continue Reading