ಜಾಲಿವುಡ್‌ ಸ್ಟುಡಿಯೋಸ್‌ಗೆ ಬಿತ್ತು ಬೀಗ: ಬಿಗ್‌ ಬಾಸ್‌ ಸ್ಥಗಿತಕ್ಕೆ ಸೂಚನೆ

ರಾಮನಗರ: ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ ಬಿದ್ದಿದೆ. ಬಿಗ್‌ ಬಾಸ್‌ ನಡೆಯುತ್ತಿರುವ ಜಾಗಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ನಿಯಮ ಮೀರಿ ಜಾಲಿವುಡ್‌ ಸ್ಟುಡಿಯೋಸ್‌ ನಡೆಸುತ್ತಿರುವ ಬಗ್ಗೆ ನೋಟಿಸ್‌ ನೀಡಲಾಗಿತ್ತು. ಆದರೆ ಯಾವುದೆ ಪಾಲನೆಯಾಗದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಇಂದು ಸಂಜೆ ಸ್ಟುಡಿಯೋಸ್‌ಗೆ ಭೇಟಿ ನೀಡಿದರು. ರಾಮನಗರ ತಹಸೀಲ್ದಾರ್‌ ತೇಜಸ್ವಿನಿ, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಜಾಲಿವುಡ್‌ ಒಳಗೆ ಪರಿಶೀಲನೆ ನಡೆಸಿದರು. ನೋಟಿಸ್ ತೆಗೆದುಕೊಳ್ಳಲು […]

Continue Reading

ವಾಟ್ಸಾಪ್​​ನಲ್ಲಿ ಮದುವೆ ಇನ್ವಿಟೇಶನ್ ಬಂದರೆ ಓಪನ್ ಮಾಡಬೇಡಿ, ಖಾತೆಯಲ್ಲಿರುವ ಅಷ್ಟೂ ಹಣ ಹೋಗಬಹುದು ಎಚ್ಚರ

ಗುರುಗ್ರಾಮ: ತಂತ್ರಜ್ಞಾನ ಬದಲಾದಂತೆ ಸೈಬರ್ ಅಪರಾಧಿಗಳು ಕೂಡ ಹಣ ವಸೂಲಿಗೆ ಹಲವು ಹೊಸ ಟ್ರಿಕ್​ ಅಳವಡಿಸಿಕೊಳ್ಳುತ್ತಿದ್ದಾರೆ. ಜನರಿಗೆ ಅನುಮಾನ ಬರದಂತೆ ಹಣವನ್ನು ಲೂಟಿ ಮಾಡುತ್ತಿದ್ದಾರೆ. ವಾಟ್ಸಾಪ್​ನಲ್ಲಿ ಬಂದ ಮದುವೆ ಇನ್ವಿಟೇಷನ್ ಓಪನ್ ಮಾಡಿ ವ್ಯಕ್ತಿಯೊಬ್ಬ 97 ಸಾವಿರ ರೂ. ಕಳೆದುಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಪರಿಚಯ ಇರುವವರಿಂದ ಅಲ್ಲ, ಅಪರಿಚಿತ ದೂರವಾಣಿ ಸಂಖ್ಯೆಯಿಂದ ಮದುವೆ ಆಮಂತ್ರಣ ಬಂದರೆ ಅದನ್ನು ಓಪನ್ ಮಾಡಲೇಬೇಡಿ. ಅಂತಹ ಲಿಂಕ್​ಗಳನ್ನು ಓಪನ್ ಮಾಡಿದರೆ ನಿಮಗೆ ಅರಿವಿಲ್ಲದೆ ಸೈಬರ್ ವಂಚಕರು ನಿಮ್ಮ ಖಾತೆಯಿಂದ ಹಣ […]

Continue Reading

ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ: ಪರೀಕ್ಷಾ ಶುಲ್ಕ 710 ರೂ.ವರೆಗೆ ಹೆಚ್ಚಳ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶಾಕ್‌ ಕೊಟ್ಟಿದೆ. 2025-26ನೇ ಸಾಲಿನ ಪರೀಕ್ಷಾ ಶುಲ್ಕ 5% ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಿದೆ. ಅದರನ್ವಯ 2025-26ನೇ ಸಾಲಿನಲ್ಲಿ ನಡೆಯಲಿರುವ ಎಲ್ಲಾ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇ.5 ರಷ್ಟು ಸೇರಿಸಿ ಶುಲ್ಕ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 2025-26ನೇ ಸಾಲಿನ SSLC ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಪರಿಷ್ಕೃತ ಪರೀಕ್ಷಾ ಶುಲ್ಕ * ಪ್ರಥಮ ಬಾರಿ […]

Continue Reading

2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ: ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಸಾವನ್ನಪ್ಪಿದ ಬಳಿಕ ಅಲರ್ಟ್‌ ಆದ ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಸಭೆ ನಡೆಸಿ ಕೆಮ್ಮಿನ ಸಿರಪ್ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿಯ ಪ್ರಕಾರ, 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ. 2-5 ವರ್ಷದ ಮಕ್ಕಳಿಗೆ ತಜ್ಞರ ಸಲಹೆ ಮೇರೆಗೆ ಔಷಧಿ ನೀಡಬೇಕು. ಅಲ್ಲದೆ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ವೈದ್ಯರ ಸಲಹೆ ಮೇರೆಗೆ ಔಷಧಿ ನೀಡಬೇಕು. ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಬಳಸಬೇಕು. […]

Continue Reading

ಅಭಿವೃದ್ಧಿ, ನಿರ್ಮಾಣ ಕ್ಷೇತ್ರಕ್ಕೆ ವಾಸ್ತುಶಿಲ್ಪಿಗಳ ಕೊಡುಗೆ ಅಪಾರ

ಕಲಬುರಗಿ: ಯೋಜನೆಯುತ ಕಾರ್ಯದಿಂದ ಯಶಸ್ಸು ಸಾಧ್ಯವಿದೆ. ಸೂಕ್ತ ವಿನ್ಯಾಸ, ಯೋಜನೆ ಮತ್ತು ಮೇಲ್ವಿಚಾರಣೆಯ ಕಾರ್ಯ ಮಾಡುವ ಮೂಲಕ ಯಾವುದೆ ರೀತಿಯ ಕಟ್ಟಡ, ನಿರ್ಮಾಣ ಕಾರ್ಯಗಳನ್ನು ಮಾಡುವ ವಾಸ್ತುಶಿಲ್ಪಿಗಳ ಕಾರ್ಯ ಪ್ರಮುಖವಾಗಿದೆ. ಇಂದು ನಾವು ಕಾಣುವ ಅದ್ಭುತವಾದ ಕಟ್ಟಡಗಳ ಹಿಂದೆ ಅವರ ಶ್ರಮ ಮರೆಯುವಂತಿಲ್ಲ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಬೆಳಿಗ್ಗೆ ಜರುಗಿದ ‘ವಿಶ್ವ ಆರ್ಕಿಟೆಕ್ಟ್ ದಿನಾಚರಣೆ’ […]

Continue Reading

ಜೋಡೆತ್ತು ಮಾಡ್ತಾ ನಮಗೂ ಜೋಡೆತ್ತು ಸಿಕ್ತು: ಮದ್ವೆ ಬಗ್ಗೆ ಚಿಕ್ಕಣ್ಣ ಫಸ್ಟ್ ರಿಯಾಕ್ಷನ್

ಹಾಸ್ಯ ನಟ ಚಿಕ್ಕಣ್ಣ ಸೀಕ್ರೆಟಾಗಿ ಮದ್ವೆ ನಿಶ್ಚಯ ಮಾಡಿಕೊಂಡು ಸುದ್ದಿಯಾಗಿದ್ದಾರೆ. ಇತ್ತೀಚೆಗಷ್ಟೇ ಹೂ ಮುಡಿಸುವ ಶಾಸ್ತ್ರ ನಡೆದು ಫೋಟೋಗಳು ವೈರಲ್ ಆಗಿದ್ದವು. ʻಜೋಡೆತ್ತುʼ ಸಿನಿಮಾ ಚಿತ್ರಕ್ಕೆ ಸಿದ್ಧತೆ ಮಾಡಿಕೊಂಡಿರುವ ಚಿಕ್ಕಣ್ಣ, ಮತ್ತೊಂದು ಕಡೆ ಮದ್ವೆ ತಯಾರಿ ನಡೆಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಿನಿಮಾ ಚಿತ್ರೀಕರಣ ಮುಗಿಯುವ ಹೊತ್ತಿಗೆ ನನ್ನ ಮದ್ವೆ ಕೂಡ ಆಗಿರುತ್ತೆ ಎಂದು ಚಿಕ್ಕಣ್ಣ ಹೇಳಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಮದ ಹುಡುಗಿ ಪಾವನಾ ಅವರನ್ನು ಚಿಕ್ಕಣ್ಣ ವರಿಸಲಿದ್ದು, ಇದು ಅರೇಂಜ್‌ ಮ್ಯಾರೇಜ್ […]

Continue Reading

ಮುಳ್ಳು ಮುಳ್ಳಾಗಿರುವ ಈ ಒಂದು ಹಣ್ಣಿಗೆ ಕ್ಯಾನ್ಸರ್, ಹೃದಯಾಘಾತ ಬರದಂತೆ ತಡೆಯುವ ಶಕ್ತಿಯಿದೆ

ಪ್ರಕೃತಿಯು ನಮಗೆ ಹಲವು ರೀತಿಯ ರುಚಿಕರವಾದ ಆಹಾರಗಳನ್ನು ನೀಡುತ್ತದೆ. ಅದರಲ್ಲಿಯೂ ತರಕಾರಿ ಮತ್ತು ಹಣ್ಣುಗಳು ಯಥೇಚ್ಛವಾಗಿ ಲಭ್ಯವಿರುತ್ತದೆ. ಇವೆಲ್ಲವೂ ರುಚಿಯಲ್ಲಿ ಮಾತ್ರವಲ್ಲ ಆರೋಗ್ಯ ಪ್ರಯೋಜನಗಳು ಕೂಡ ನೀಡುತ್ತದೆ ಎಂಬುದು ತಿಳಿದ ವಿಚಾರ. ಇಂತಹ ಒಂದು ಹಣ್ಣುಗಳಲ್ಲಿ ರಂಬುಟಾನ್ ಕೂಡ ಒಂದು. ಇದು ಲಿಚಿಯನ್ನು ಹೋಲುವ ಹಣ್ಣಾಗಿದ್ದು ಹೆಚ್ಚಾಗಿ ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಂತಹ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಂಡುಬರುತ್ತದೆ. ಲಿಚಿಯನ್ನು ಹೋಲುವ ಈ ಕೆಂಪು ಬಣ್ಣದ ಹಣ್ಣು ನೀವು ನಂಬಲು ಸಾಧ್ಯವಾಗದಷ್ಟು ಆರೋಗ್ಯ ಪ್ರಯೋಜನಗಳಿಂದ ಸಮೃದ್ಧವಾಗಿದೆ. ಈ […]

Continue Reading

ನಿರಂತರ ಅಧ್ಯಯನ, ಕಠಿಣ ಪರಿಶ್ರಮದಿಂದ ಸಾಧಕರಾಗಲು ಸಾಧ್ಯ

ಕಲಬುರಗಿ: ಸಾಧನೆಗೆ ಬಡತನ, ಸಿರಿತನ ಅಡ್ಡಿಯಾಗದು. ನಿರಂತರ ಅಧ್ಯಯನ, ಕಠಿಣ ಪರಿಶ್ರಮದಿಂದ ಪ್ರತಿಯೊಬ್ಬರು ಸಾಧಕರಾಗಬಹುದು ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ ವಿಜ್ಞಾನ ಮತ್ತು ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಬಸವೇಶ್ವರ ಸೇವಾ ಬಳಗ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು, ಸಕರಾತ್ಮಕ ಗುಣಗಳಿಂದ ಆದರ್ಶ ವ್ಯಕ್ತಿಯಾಗಲು ಸಾಧ್ಯ, ಸೋಮಾರಿತನ, ಆಲಸ್ಯ, ದುರವ್ಯಸನಗಳೇ ನಮ್ಮ ವೈರಿಗಳಾಗಿವೆ, ಜಗತ್ತಿನ ಸಾಧಕರ ಜೀವನ ಚರಿತ್ರೆ […]

Continue Reading

ಎಲ್‌ಪಿಜಿ ಸಿಲಿಂಡರ್ ಡೆಲಿವರಿಗಾಗಿ ಬರಲಿದೆ ಹೊಸ ವ್ಯವಸ್ಥೆ: ಇದು ಗ್ರಾಹಕರಿಗೆ ಖುಷಿ ಕೊಡುವ ವಿಚಾರ

ನವದೆಹಲಿ: ಎಲ್‌ಪಿಜಿ ಸಿಲಿಂಡರ್‌ ವಿತರಣೆಯಲ್ಲಿ ವಿಳಂಬವನ್ನು ತಪ್ಪಿಸಲು ಕೇಂದ್ರ ಸರಕಾರ ಮುಂದಾಗಿದ್ದು, ಇದಕ್ಕಾಗಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳ ನಡುವೆ ಏಕೀಕೃತ ವಿತರಣಾ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿಯು ಹೊಸ ‘ಎಲ್‌ಪಿಜಿ ಇಂಟರ್‌- ಆಪರೆಬಲ್‌ ಸರ್ವೀಸ್ ಡೆಲಿವರಿ ಫ್ರೇಮ್‌ವರ್ಕ್’ ಪರಿಕಲ್ಪನೆಯಡಿ ಈ ಉಪಕ್ರಮ ಜಾರಿಗೊಳಿಸಲು ಮುಂದಾಗಿದ್ದು, ಇದರ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ಪ್ರಸ್ತಾವಿತ ನೀತಿಯ ಅಡಿಯಲ್ಲಿ, ಮೂರು ಸರಕಾರಿ ಸ್ವಾಮ್ಯದ ಕಂಪನಿಗಳಾದ ಇಂಡೇನ್‌, ಭಾರತ್‌ ಗ್ಯಾಸ್‌ […]

Continue Reading

ನಾಡಿಗೆ ಹುಯಿಲಗೋಳ್ ನಾರಾಯಣರಾಯರ ಕೊಡುಗೆ ಅಪಾರ

ಕಲಬುರಗಿ: ಹುಯಿಲಗೋಳ್ ನಾರಾಯಣರಾಯರು ಆಧುನಿಕ ಕನ್ನಡ ಸಾಹಿತ್ಯದ ನಾಟಕಕಾರ ಮತ್ತು ಸ್ವಾತಂತ್ರ್ಯ ಹೋರಾಟಗಾರ. ರಾಜ್ಯದ ಉದಯಕ್ಕೆ ಸ್ಪೂರ್ತಿ ನೀಡಿದ  “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡ” ಅಂದಿನ ರಾಜ್ಯ ಗೀತೆಯನ್ನು ರಚಿಸಿದ ಪ್ರಸಿದ್ಧ ಕವಿಯಾಗಿದ್ದಾರೆ. ನಾಡಿಗೆ ಅವರು ನೀಡಿದ ಕೊಡುಗೆ ಅಪಾರ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಜೆ‌.ಆರ್ ನಗರದ ಖಾದ್ರಿ ಚೌಕ್ ನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸ‌ಮಾಜ ಸೇವಾ ಬಳಗದ ವತಿಯಿಂದ ಜರುಗಿದ ಹುಯಿಲಗೋಳ ನಾರಾಯಣರಾಯರ್ 140ನೇ […]

Continue Reading