ಅಳಿವಿನಂಚಿನ ವನ್ಯಜೀವಿಗಳ ಉಳಿಸುವ ಕಾರ್ಯವಾಗಲಿ

ಕಲಬುರಗಿ: ಮಾನವ ತನ್ನ ಸ್ವಾರ್ಥಕ್ಕಾಗಿ ಅರಣ್ಯವನ್ನು ನಾಶಮಾಡಿ ಅಲ್ಲಿನ ಅನೇಕ ವನ್ಯಜೀವಿಗಳನ್ನು ಬೇಟೆಯಾಡಿ ನಾಶಮಾಡುತ್ತಿದ್ದಾನೆ. ಇದರಿಂದ ಕೆಲವು ಸಂತತಿ ನಾಶಹೊಂದಿದ್ದು, ಮತ್ತೆ ಕೆಲವು ಅಳಿವಿನಂಚಿನಲ್ಲಿವೆ. ಅರಣ್ಯ ಸಂಪತ್ತು, ಪ್ರಾಣಿ ಸಂಕುಲದ ರಕ್ಷಣೆ ಅಗತ್ಯವಾಗಿದೆ ಎಂದು ವಲಯ ಅರಣ್ಯ ಅಧಿಕಾರಿ ನಾಗೇಶ್ ಹೇಳಿದರು. ನಗರದ ಪಬ್ಲಿಕ್ ಸಾರ್ವಜನಿಕ ಉದ್ಯಾನವನದಲ್ಲಿರುವ ಕಿರು ಮೃಗಾಲಯದಲ್ಲಿ ಅರಣ್ಯ ಇಲಾಖೆ, ಕಿರು ಮೃಗಾಲಯ ಮತ್ತು ಮಕ್ಕಳ ಉದ್ಯಾನವನ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘71ನೇ ವಿಶ್ವ ವನ್ಯಜೀವಿ ಸಪ್ತಾಹ’ […]

Continue Reading

ನಾಡಿನ ಕಲೆ, ಪರಂಪರೆಗೆ ಶರಣಸಿರಸಗಿ ಕೊಡುಗೆ ಅಪಾರ

ಕಲಬುರಗಿ: ಶರಣಸಿರಸಗಿ ಗ್ರಾಮವು ಪುರಾತನ ನಂದಿ ಬಸವಣ್ಣ, ಮಲ್ಲಿಕಾರ್ಜುನ, ಗಣೇಶ, ಹನುಮಾನ ದೇವಸ್ಥಾನ, ವೀರಗಲ್ಲುಗಳು ಹೊಂದಿವೆ, ಇಲ್ಲಿನ ಕಲೆ, ಪರಂಪರೆ ಪ್ರಮುಖವಾಗಿದೆ. ಮಹಾದಾಸೋಹಿ ಶ್ರೀ ಶರಣಬಸವೇಶ್ವರರು ಮೆಟ್ಟಿದ ಪವಿತ್ರ ಭೂಮಿ ಇದಾಗಿದೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಶರಣಸಿರಸಗಿ ಗ್ರಾಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ-40ರ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಪ್ರಾಚೀನ ಕಾಲದಲ್ಲಿ ಈ ಗ್ರಾಮವು ಕಲೆ, ಸಾಹಿತ್ಯ, ಸಂಗೀತ, […]

Continue Reading

ನ.15 ರಿಂದ ಹೊಸ ಟೋಲ್ ನಿಯಮ: ಫಾಸ್ಟ್‌ಟ್ಯಾಗ್ ಇಲ್ಲದವರಿಗೆ‌ ಗುಡ್‌ನ್ಯೂಸ್‌, UPI ಪಾವತಿದಾರರಿಗೆ ಭಾರಿ ರಿಯಾಯಿತಿ

ನವದೆಹಲಿ: ಟೋಲ್ ಪಾವತಿಗಳಿಗೆ ಸಂಬಂಧಿಸಿದಂತೆ ಡಿಜಿಟಲ್‌ ಪಾವತಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಮತ್ತೊಂದು ಹೊಸ ನಿಯಮ ಪರಿಚಯಿಸಿದೆ. ಇದರಿಂದ ಫಾಸ್ಟ್‌ಟ್ಯಾಗ್‌ ಹೊಂದಿಲ್ಲದವರು ಯುಪಿಐ ಪಾವತಿ ಮೂಲಕವೂ ರಿಯಾಯಿತಿ ಗಳಿಸಬಹುದಾಗಿದೆ. ನವೆಂಬರ್‌ 15ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ ಹೊಂದದಿರುವ ವಾಹನಗಳು ನವೆಂಬರ್ 15ರಿಂದ ನಗದು ರೂಪದಲ್ಲಿ ಟೋಲ್ ಶುಲ್ಕ ಪಾವತಿಸಲು ಬಯಸಿದರೆ ಅವು ಎರಡುಪಟ್ಟು ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಆದರೆ ಯುಪಿಐ ರೂಪದಲ್ಲಿ ಶುಲ್ಕ ಪಾವತಿಸುವವರಿಗೆ ನಿಗದಿಗಿಂತ 1.25 ಪಟ್ಟು ಅಧಿಕ […]

Continue Reading

ಆರೋಗ್ಯ ಸಂಜೀವಿನಿ ಯೋಜನೆಯ ಸದ್ಬಳಕೆ ಮಾಡಿಕೊಳ್ಳಿ: ಬಸವರಾಜ ಬಳೊಂಡಗಿ

ಕಲಬುರಗಿ: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರು ಹಾಗೂ ಅವರಕುಟುಂಬದವರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ತಿಳಿಸಿದ್ದಾರೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ.1 ರಿಂದ ಜಾರಿಗೊಳಿಸಲಾಗಿದೆ. ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆ ನೀಡಬೇಕು. ರಾಜ್ಯ ಸರ್ಕಾರದ ಅಧಿಕಾರಿ […]

Continue Reading

ನೀರು ಮಾರಾಟಕ್ಕೂ ಇಳಿದ ಅಂಬಾನಿ, 30 ಸಾವಿರ ಕೋಟಿ ಉದ್ಯಮದಲ್ಲಿ ಭಾರಿ ಸಂಚಲನ: ದರ ಎಷ್ಟು ? ಹೊಸದಿಲ್ಲಿ: ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ಈ ವಲಯಕ್ಕೆ ಕಾಲಿಡಲು ಸಜ್ಜಾಗಿರುವ ರಿಲಯನ್ಸ್ ಇಂಡಸ್ಟ್ರೀಸ್. ಇದರ ಮಾಲೀಕ ಮುಕೇಶ್‌ ಅಂಬಾನಿ ‘ಕ್ಯಾಂಪಾ ಶ್ಯೂರ್’ ಎಂಬ ಹೊಸ ಬ್ರಾಂಡ್ ಅನ್ನು ಬಿಡುಗಡೆ ಮಾಡಿದ್ದಾರೆ. ಎಂದಿನಂತೆ ಆಕ್ರಮಣಕಾರಿ ಬೆಲೆ ನೀತಿ ಮತ್ತು ವಿಶಿಷ್ಟ ವ್ಯಾಪಾರ ತಂತ್ರದ ಮೂಲಕ, ದೇಶದ ಸುಮಾರು 30,000 ಕೋಟಿ ಮೌಲ್ಯದ […]

Continue Reading

‘ಅಮ್ಮ ಪ್ರಶಸ್ತಿ’ಗೆ ಬೆಳ್ಳಿ ಹಬ್ಬ, 25ನೇ ವರ್ಷದ ಅಮ್ಮ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಕಲಬುರಗಿ: ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ‘ಅಮ್ಮ ಪ್ರಶಸ್ತಿ’ ಪ್ರಖ್ಯಾತಿ ಪಡೆದಿದ್ದು, ಇದೀಗ 25ನೇ ವರ್ಷದ ಸಂಭ್ರಮದಲ್ಲಿದೆ. ಪತ್ರಕರ್ತ ಹಾಗೂ ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ತಾಯಿಯ ಸ್ಮರಣಾರ್ಥವಾಗಿ ಜಿಲ್ಲೆಯ ಸೇಡಂ ಪಟ್ಟಣದ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 25ನೇ ವರ್ಷದ ‘ಅಮ್ಮ ಪ್ರಶಸ್ತಿ’ಗಾಗಿ 2024 ಮತ್ತು 2025 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ. ಕಳೆದ 24 ವರ್ಷಗಳಿಂದ ನಿರಂತರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಅಮ್ಮ ಪ್ರಶಸ್ತಿಗೆ 25ರ […]

Continue Reading

ಜಾತಿಗಣತಿ ಹೆಸರಿನಲ್ಲಿ ಬಂದು ಮಹಿಳೆ ಮೇಲೆ ಹಲ್ಲೆ: ದರೋಡೆಗೆ ಯತ್ನ ?

ಶಿವಮೊಗ್ಗ: ಜಾತಿಗಣತಿ ಹೆಸರಿನಲ್ಲಿ ಬಂದ ದುಷ್ಕರ್ಮಿಗಳು ದರೋಡೆಗೆ ಯತ್ನಿಸಿರುವ ಆರೋಪ ಶಿವಮೊಗ್ಗದಲ್ಲಿ ಕೇಳಿಬಂದಿದೆ. ಮನೆಯಲ್ಲಿ ಪುರುಷರಿಲ್ಲದ ವೇಳೆ ಗಣತಿ ಹೆಸರಿನಲ್ಲಿ ಬಂದವರು, ಆಧಾರ್ ಕಾರ್ಡ್ ತೋರಿಸುವಂತೆ ಹೇಳಿದ್ದಾರೆ. ಈ ವೇಳೆ ಆಧಾರ್​ ಕಾರ್ಡ್​ ತರಲು ಮನೆಯೊಳಗೆ ಹೋಗಿದ್ದ ಮಹಿಳೆ ಮೇಲೆ ರಾಡ್‌ನಿಂದ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಹಲ್ಲೆಗೆ ಒಳಗಾದ ಮಹಿಳೆಯನ್ನು ದಿಲ್‌ಶಾದ್‌ ಎಂದು ಗುರುತಿಸಲಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದ ಕ್ಲಾಕ್‌ಪೇಟೆಯ ಆಜಾದ್ ನಗರದ 2ನೇ ತಿರುವಿನಲ್ಲಿನ ಮನೆಗೆ ಗಣತಿ ಹೆಸರಿನಲ್ಲಿ ತಸ್ಲಿಮಾ ಹಾಗೂ ಅಸ್ಲಾಂ […]

Continue Reading

ಕಲಬುರಗಿಗೂ ಕಾಲಿಟ್ಟ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದ: ಹಿಂದೂ ಸಂಘಟನೆಗಳಿಂದ ಆಕ್ರೋಶ

ಕಲಬುರಗಿ: ಉತ್ತರ ಪ್ರದೇಶದ ಕಾನಪುರನಲ್ಲಿ ಆರಂಭವಾದ ಐ ಲವ್ ಮೊಹಮ್ಮದ್ ಬ್ಯಾನರ್ ಸಾಕಷ್ಟು ವಿವಾದ ಸೃಷ್ಟಿಸಿದ್ದು, ಇದೀಗ ಈ ಐ ಲವ್ ಮೊಹಮದ್ ಎಂಬ ಬ್ಯಾನರ್ ಕಲಬುರಗಿಗೂ ಕಾಲಿಟ್ಟಿದೆ. ವೈದ್ಯಕೀಯ ಶಿಕ್ಷಣ ಸಚಿವರ ತವರು ಕ್ಷೇತ್ರವಾದ ಜಿಲ್ಲೆಯ ಸೇಡಂ ತಾಲೂಕಿನ ಊಡಗಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಐ ಲವ್ ಬ್ಯಾನರ್ ಕಂಡು ಬಂದಿದ್ದು, ವಿವಿಧ ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯ ಸೇಡಂ ತಾಲೂಕಿನ ಊಡಗಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಐ ಲವ್ ಮೊಹಮದ್ ಬ್ಯಾನರ್ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಗಾಂಧಿಜಿ ಮತ್ತು ಶಾಸ್ತ್ರಿಜಿ ಜಯಂತಿ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಿಸಲಾಯಿತು. ಈ ವೇಳೆ ಪುರಸಭೆ ಮಾಜಿ ವಿರೋಧ ಪಕ್ಷದ ನಾಯಕ ಭೀಮಶಾ ಜಿರೋಳ್ಳಿ ಮಾತನಾಡಿ, ನನ್ನ ಜೀವನವೇ ನನ್ನ ಸಂದೇಶ ಎಂದು ಜಗತ್ತಿಗೆ ಸಾರಿದ ಗಾಂಧೀಜಿಯವರು ತಮ್ಮ ಸರಳ‌ ಜೀವನ ಹಾಗೂ ಆದರ್ಶಗಳ ಮೂಲಕ ಗುರುತಿಸಲ್ಪಡುತ್ತಾರೆ. ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಅವರು ಇತರ ದೇಶಗಳ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿಯಾಗಿದ್ದರು ಸರಳ ಮತ್ತು ಸೌಜನ್ಯಯುತ ನಡವಳಿಕೆಯನ್ನು […]

Continue Reading

ತಮಿಳುನಾಡಿನಲ್ಲಿ ರಾವಣನ ಬದಲು ರಾಮನ ಪ್ರತಿಕೃತಿ ದಹಿಸಿದ ಗುಂಪು, ಒರ್ವನ ಬಂಧನ

ತಿರುಚ್ಚಿ: ತಮಿಳುನಾಡಿನ ತಿರುಚ್ಚಿಯಲ್ಲಿ ಪುರುಷರ ಗುಂಪೊಂದು ರಾವಣನ ಬದಲು ಶ್ರೀರಾಮನ ಪ್ರತಿಕೃತಿ ದಹಿಸಿ ಜನರ ಕೆಂಗಣ್ಣಿಗೆ ಗುರಿಯಾಗಿದೆ. ರಾಮನ ಪ್ರತಿಕೃತಿ ದಹಿಸಿದ್ದಷ್ಟೇ ಅಲ್ಲದೆ ರಾವಣನ ಸ್ತುತಿಯನ್ನು ಪಠಿಸಿದ್ದಾರೆ. ‘ಫಿಫ್ತ್​ ತಮಿಳು ಸಂಗಮ್’ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾದ ಈ ದೃಶ್ಯಗಳು ತ್ವರಿತವಾಗಿ ವೈರಲ್ ಆಗಿದ್ದು, ಪೊಲೀಸ್ ಕ್ರಮಕ್ಕೆ ಕಾರಣವಾಯಿತು. ವೀಡಿಯೊದಲ್ಲಿ, ಪುರುಷರು ರಾಮನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಾ ರಾವಣನನ್ನು ಸ್ತುತಿಸಿ ಎಂದು ಘೋಷಣೆ ಕೂಗುತ್ತಿರುವುದನ್ನು ಕಾಣಬಹುದು. ಸೈಬರ್ ಕ್ರೈಂ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ […]

Continue Reading