ದಂಡೋತಿ: ಮಂಗಗಳ ಹಾವಳಿ ತಡೆಯಲು ಗ್ರಾ.ಪಂ ಪಿಡಿಒಗೆ ಮನವಿ

ಚಿತ್ತಾಪುರ: ದಂಡೋತಿ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದೆ, ಮಂಗಗಳನ್ನು ಸೆರೆ ಹಿಡುಯವಂತೆ ಒತ್ತಾಯಿಸಿ ಕರವೇ ಗ್ರಾಮ ಘಟಕದ ಅಧ್ಯಕ್ಷ ಮೈನೋದ್ದೀನ್ ತೊನಸನಳ್ಳಿ ಮತ್ತು ಪದಾಧಿಕಾರಿಗಳು ಗ್ರಾ.ಪಂ ಪಿಡಿಒ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕರವೇ ಗ್ರಾಮ ಘಟಕದ ಅಧ್ಯಕ್ಷ ಮೈನೊದ್ದಿನ್ ತೊನಸನಳ್ಳಿ ಮಾತನಾಡಿ, ದಂಡೋತಿ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದೆ, ಇಲ್ಲಿಯವರೆಗೆ 4-5 ಜನರಿಗೆ ಕಚ್ಚಿ ಗಾಯಗೊಳಿಸಿವೆ. ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಮನೆಯಿಂದ ಹೊರಗಡೆ ಬರಲು ಹೆದರುತ್ತಿದ್ದಾರೆ, ಗ್ರಾಮದ ಜನರು ಹೊಲಗಳಿಗೆ ತೆರಳಲು ಭಯಭೀತರಾಗಿದ್ದಾರೆ. ಹೀಗಾಗಿ […]

Continue Reading

ಶಿಕ್ಷಕಿ ಮೇಲೆ ಲವ್, ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ

ಭೊಪಾಲ್: ಶಿಕ್ಷಕಿ ಪ್ರೀತಿ ಒಪ್ಪಿಕೊಳ್ಳದಿದ್ದಕ್ಕೆ, ವಿದ್ಯಾರ್ಥಿಯೊಬ್ಬ ಟೀಚರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ, ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಹೆಸರು ಸೂರ್ಯಾಂಶ್ ಕೊಚಾರ್, ಆತ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು. ಆ.15 ರಂದು ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಪೆಟ್ರೋಲ್ ಬಾಟಲಿಯೊಂದಿಗೆ ಶಿಕ್ಷಕಿಯ ಮನೆಗೆ ತೆರಳಿ, 26 ವರ್ಷದ ಶಿಕ್ಷಕಿಯ ಮೇಲೆ ಪೆಟ್ರೋಲ್ ಸುರಿದು […]

Continue Reading

ರಾಷ್ಟ್ರದ ಅಭಿವೃದ್ಧಿಯಲ್ಲಿ ಛಾಯಾಗ್ರಾಹಕರ ಕೊಡುಗೆ ಅನನ್ಯ

ಕಲಬುರಗಿ: ಛಾಯಾಗ್ರಾಹಕರು ಅಲ್ಲಿನ ಸ್ಥಿತಿ-ಗತಿಯ ನೈಜ ಚಿತ್ರಣ ನೀಡುವ ಕಾರ್ಯ ನಿರ್ವಹಿಸುವ ಕೊಡುಗೆ ರಾಷ್ಟ್ರದ ಅಭಿವೃದ್ಧಿಗೆ ಅನನ್ಯವಾಗಿದೆ ಎಂದು ಹಿರಿಯ ಛಾಯಾಗ್ರಾಹಕ ಬಸವರಾಜ ವೈ ತೊನಸಳ್ಳಿ ಹೇಳಿದರು. ನಗರದ ನೆಹರು ಗಂಜ್‌ನ ಬಸ್ ನಿಲ್ದಾಣ ಸಮೀಪದ ನ್ಯೂ ದೇವಿ ಫೋಟೋ ಸ್ಟುಡಿಯೋದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಐತಿಹಾಸಿಕ 5,500ನೇ ಕಾರ್ಯಕ್ರಮ ಜರುಗಿದ ‘188ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ’ಯಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಒಂದು ಚಿತ್ರ ಸಾವಿರ ಶಬ್ದಗಳಿಗೆ ಸಮಾನ. ವ್ಯಕ್ತಿ ಹಾಗೂ ವರ್ಣಿಸಲಾಗದ ದೃಶ್ಯವನ್ನು […]

Continue Reading

ಗುಜರಾತ್‌ ಎಮ್ಮೆಯ ಹಿಂದೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡ ನಿರ್ದೇಶಕ ಜೋಗಿ ಪ್ರೇಮ್‌

ಸುದ್ದಿ ಸಂಗ್ರಹ ಬೆಂಗಳೂರು ಖ್ಯಾತ ಚಿತ್ರ ನಿರ್ದೇಶಕ ಪ್ರೇಮ್ ಅವರಿಗೆ ಹೈನುಗಾರಿಕೆಗಾಗಿ ಎಮ್ಮೆ ಕೊಡಿಸುವುದಾಗಿ 4.5 ಲಕ್ಷ ರೂ ಪಡೆದು ವಂಚಿಸಿರುವ ಆರೋಪದ ಮೇಲೆ ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತನ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ್ ಅವರ ಮ್ಯಾನೇಜರ್ ಕಂ ನಟ ದಶಾವರ ಚಂದ್ರು ಅವರು ದೂರು ನೀಡಿದ್ದಾರೆ. ಪ್ರಕರಣದ ಹಿನ್ನೆಲೆ: ಪ್ರೇಮ್ ಅವರು ಹೈನುಗಾರಿಕೆಗಾಗಿ ಎರಡು ಎಮ್ಮೆ ಖರೀದಿಸಲು ಮುಂದಾಗಿದ್ದರು. ಈ ವೇಳೆ ವನರಾಜ್ ಭಾಯ್ ಎಂಬ ವ್ಯಕ್ತಿಯು […]

Continue Reading

ಯೋಧನಿಗೆ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ: 20 ಲಕ್ಷ ದಂಡ ವಿಧಿಸಿದ NHAI

ಲಕ್ನೋ: ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನು ಟೋಲ್ ಪ್ಲಾಜಾ ಸಿಬ್ಬಂದಿ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿದ್ದ ಘಟನೆಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ (NHAI) ಮೀರತ್‌ನ ಟೋಲ್ ಸಂಸ್ಥೆಗೆ 20 ಲಕ್ಷ ರೂ. ದಂಡ ವಿಧಿಸಿದೆ. ಉತ್ತರ ಪ್ರದೇಶದ ಮೀರತ್‌ನಲ್ಲಿ ಯೋಧ ಕಪಿಲ್ ಕವಾಡ್ ಎನ್ನುವವರ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಅಮಾನವೀಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಈಗಾಗಲೇ 6 ಜನರನ್ನು […]

Continue Reading

ಕಾರು, ಮೊಬೈಲ್, ಕಂಪ್ಯೂಟರ್ ಹೊಸ ಜಿಎಸ್‌ಟಿ ಅಡಿ ಯಾವೆಲ್ಲಾ ವಸ್ತುಗಳ ಬೆಲೆ ಕಡಿಮೆ ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆಗೆ ಗುಡ್ ನ್ಯೂಸ್ ನೀಡಿದ್ದರು. ಪ್ರಮುಖವಾಗಿ ಜಿಎಸ್‌ಟಿ ಕಡಿತದ ಕುರಿತು ಮಹತ್ವದ ಘೋಷಣೆ ಮಾಡಿದ್ದರು. ದೇಶದಲ್ಲಿ ಹೊಸ ಜಿಎಸ್‌ಟಿ ಸಿಸ್ಟಮ್ ಜಾರಿಗೆ ತರಲಾಗುತ್ತಿದೆ ಎಂದಿದ್ದರು. ಇಷ್ಟೇ ಅಲ್ಲ ಹಲವು ವಸ್ತುಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ವಿಶೇಷ ಅಂದರೆ ಈ ಬದಲಾವಣೆಯಿಂದ ದೇಶದಲ್ಲಿ ಹಲವು ವಸ್ತುಗಳ ಮೇಲಿನ ಬೆಲೆ ಕಡಿತಗೊಳ್ಳಲಿದೆ. ಈ ಪೈಕಿ ದಿನಬಳಕೆ ವಸ್ತುಗಳ ಮೇಲಿನ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ. ಜಿಎಸ್‌ಟಿ ಎಷ್ಟು ಇಳಿಕೆಯಾಗಲಿದೆ ? ಸರಕು, ಅಗತ್ಯ […]

Continue Reading

ರುದ್ರಾಕ್ಷಿ ಧಾರಣೆಯಿಂದ ಆಧ್ಯಾತ್ಮಿಕ, ಭೌತಿಕ ಲಾಭ: ಚರಲಿಂಗ ಶ್ರೀ

ಕಲಬುರಗಿ: ರುದ್ರಾಕ್ಷಿ ಪವಿತ್ರ ವಸ್ತುವಾಗಿದ್ದು, ಇದನ್ನು ಧರಿಸುವುದರಿಂದ ಆಧ್ಯಾತ್ಮಿಕ ಮತ್ತು ಭೌತಿಕ ಪ್ರಯೋಜನ ಪಡೆಯಬಹುದು, ರಕ್ತದೊತ್ತಡ ಮತ್ತು ಚರ್ಮದ ಸಮಸ್ಯೆಗಳಿಗೆ ಪರಿಹಾರ ಇದರಲ್ಲಿದೆ. ಇದು ಆಧ್ಯಾತ್ಮಿಕ ಪ್ರಗತಿಗೆ ಸಹಾಯ ಮಾಡುತ್ತದೆ‌ ಎಂದು ಗದ್ದುಗೆ ಮಠದ ಪೂಜ್ಯ ಚರಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಬಿಲಗುಂದಿ ಪೆಟ್ರೋಲ್ ಪಂಪ್ ಎದುರುಗಡೆಯ ಬಡೆಪೂರ ಕಾಲೋನಿಯ ಭಕ್ತರ ಮನೆಗಳಿಗೆ ಹೋಗಿ ರುದ್ರಾಕ್ಷಿ ಧಾರಣೆ ಕಾರ್ಯಕ್ರಮ ಮತ್ತು ಸದ್ಭಾವನ ಪಾದಯಾತ್ರೆ ಪ್ರಾರಂಭಿಸಿ ಮಾತನಾಡಿದ ಅವರು, ಧ್ಯಾನ ಮತ್ತು ಪ್ರಾರ್ಥನೆಗಳಿಗೆ ರುದ್ರಾಕ್ಷಿ ಬಳಸಲಾಗುತ್ತದೆ. ನಕರಾತ್ಮಕ ಶಕ್ತಿಗಳಿಂದ […]

Continue Reading

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ 2 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. […]

Continue Reading

ಧರ್ಮ ಆಧ್ಯಾತ್ಮದ ತವರೂರು, ಶಿಕ್ಷಣದ ಕಾಶಿ ಹರಸೂರು: ಮುಡುಬಿ

ಕಾಳಗಿ: ಕಲ್ಯಾಣ ಚಾಲುಕ್ಯರ ಮತ್ತು ರಾಷ್ಟ್ರಕೂಟರ ಕಾಲದಲ್ಲಿ ನಾಡಿಗೆ ವಿದ್ಯಾದಾನಗೈದ ಕೀರ್ತಿ ಹರಸೂರು ಗ್ರಾಮಕ್ಕೆ ಸಲ್ಲುತ್ತದೆ ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಹರಸೂರ ಗ್ರಾಮದಲ್ಲಿ ಬಸವೇಶ್ವರ ಸೇವಾ ಬಳಗ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ- 28ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಹರಸೂರ ಗ್ರಾಮವು ಪ್ರಾಚೀನ ಕಾಲದಲ್ಲಿ ಆಧ್ಯಾತ್ಮದ ತವರೂರಾಗಿತ್ತು. ಗ್ರಾಮದ ಹೆಸರೇ ಸೂಚಿಸುವಂತೆ ಸಾಕ್ಷಾತ ಹರ(ಶಿವ)ನೇ ನೆಲೆ ನಿಂತ ಗ್ರಾಮವು ಹರಸೂರಾಗಿದೆ. ಗ್ರಾಮದಲ್ಲಿ ಶಿವನಿಗೆ ಸೇರಿದಂತೆ ಅವತಾರಗಳು, […]

Continue Reading

ಮಲೆನಾಡು, ಕಲ್ಯಾಣ ಕರ್ನಾಟಕದಲ್ಲಿ ಭಾರಿ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಚಿಕ್ಕಮಗಳೂರು, ಕೊಡಗು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರವಿವಾರ ಧಾರಾಕಾರ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ಮಲೆನಾಡಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕುದುರೆ ಮುಖ ಭಾಗದಲ್ಲಿ ಭಾರಿ ಮಳೆ ಇದ್ದು, ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶೃಂಗೇರಿ ಪಟ್ಟಣದ ಗಾಂಧಿ ಮೈದಾನ, ದೇಗುಲದ ವಾಹನ ನಿಲುಗಡೆ ತಾಣದಲ್ಲಿದ್ದ ವಾಹನಗಳು ನೀರಿನಲ್ಲಿ ಮುಳುಗಿವೆ. ಆಸುಪಾಸಿನ ಜಮೀನು, ತೋಟಗಳಿಗೆ ನೀರು ನುಗ್ಗಿದೆ. ಕೊಪ್ಪ, ಕಳಸ, ಎನ್.ಆರ್ ಪುರ, ಮೂಡಿಗೆರೆ ವ್ಯಾಪ್ತಿಯಲ್ಲಿ ಜೋರು ಮಳೆ ಇದೆ. ಚಾರ್ಮಾಡಿ ಘಾಟಿಯಲ್ಲಿ ಜೋರು […]

Continue Reading