ಕರವೇ ತಾಲೂಕು ಗೌರವ ಅಧ್ಯಕ್ಷರಾಗಿ ಮಸ್ತಾನ್ ಸಾಬ್ ಕೊರವಿ ಆಯ್ಕೆ

ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾಳಗಿ ತಾಲೂಕು ಘಟಕದ ಗೌರವ ಅಧ್ಯಕ್ಷರಾಗಿ ಮಸ್ತಾನ್ ಸಾಬ್ ತಂದೆ ಇಬ್ರಾಹಿಂ ಸಾಬ್ ಕೊರವಿ ಅವರನ್ನು ನೇಮಕ ಮಾಡಲಾಯಿತು. ನಗರದ ಒಕ್ಸ್ ಎಲೈಟ್ ಹೋಟೆಲ್’ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಾಸಿಕ ಸಭೆಯಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಕಾಶಿ ಮತ್ತು ಕರವೇ ಜಿಲ್ಲಾಧ್ಯಕ್ಷ ಆನಂದ ದೊಡ್ಡಮನಿ ಅವರು ಕಾಳಗಿ ತಾಲೂಕು ಘಟಕದ ಗೌರವ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸರ್ವ ತಾಲೂಕು […]

Continue Reading

ದೇಶದ ಸ್ವಾತಂತ್ರ್ಯಕ್ಕಾಗಿ ಅಸಂಖ್ಯಾತ ಜನರು ಹುತಾತ್ಮರಾದರು

ಕಲಬುರಗಿ: ಎರಡು ಶತಮಾನಕ್ಕಿಂತ ಹೆಚ್ಚಿನ ಕಾಲ ಆಡಳಿತ ನಡೆಸಿದ ಬ್ರಿಟಿಷರ ಆಡಳಿತ ಕೊನೆಗಾಣಿಸಿ, ನಮ್ಮ ದೇಶದ ಸ್ವಾತಂತ್ರ್ಯ ಪಡೆಯಲು ಅಸಂಖ್ಯಾತ ಮಹನೀಯರು ಪ್ರಾಣ ನೀಡಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗುರುವಾರ ಏರ್ಪಡಿಸಿದ್ದ ‘ಭಾರತ ಸ್ವಾತಂತ್ರ್ಯದ ಯಶೋಗಾಥೆ’ ಎಂಬ ವಿಶೇಷ ಉಪನ್ಯಾಸ ನೀಡಿದ ಅವರು, ಹೋರಾಟದ ಪ್ರತಿಫಲವಾಗಿ ನಾವಿಂದು ಸ್ವಾತಂತ್ರ್ಯಯುತ ಜೀವನ ಸಾಗಿಸುತ್ತಿದ್ದು, […]

Continue Reading

ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

ಕಲಬುರಗಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ (92) ಅವರಿಂದು ಲಿಂಗೈಕ್ಯರಾಗಿದ್ದಾರೆ. ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿಯಾಗಿರುವ ಶರಣಬಸಪ್ಪ ಅಪ್ಪ ಅವರು ದಾಸೋಹ ಮಹಾ ಮನೆಯಲ್ಲಿ ಲಿಂಗೈಕ್ಯರಾಗಿದ್ದು, ಕುಟುಂಬಸ್ಥರು, ಅಪಾರ ಬಂಧು ಬಳಗ ಹಾಗೂ ಅನುಯಾಯಿಗಳನ್ನು ಅಗಲಿದ್ದಾರೆ. ಅನಾರೋಗ್ಯದಿಂದ ಅಸ್ವಸ್ಥರಾಗಿದ್ದ ಶರಣಬಸಪ್ಪ ಅಪ್ಪ ಅವರನ್ನು ಖಾಸಗಿ ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್‌ ಮಾಡಲಾಗಿತ್ತು. ಮಠದಲ್ಲೇ ಆರೈಕೆಗೆ ಕುಟುಂಬಸ್ಥರು ನಿರ್ಧರಿಸಿದ್ದರು. ಕೆಲ ದಿನಗಳಿಂದೀಚೆಗೆ ಮಠದಲ್ಲೇ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು […]

Continue Reading

ದಂಡೋತಿ ಸೇತುವೆ ಮುಳುಗಡೆ: ಸಂಚಾರ ಸ್ತಬ್ಧ

ಚಿತ್ತಾಪುರ: ಬುಧವಾರ ರಾತ್ರಿ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗಿದೆ. ಗುರುವಾರ ಬೆಳಿಗ್ಗೆ ಕಾಗಿಣಾ ನದಿಯಲ್ಲಿ ಭಾರಿ ಪ್ರವಾಹ ಬಂದು ತಾಲೂಕಿನ ದಂಡೋತಿ ಸಮೀಪದ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮಾರ್ಗದ ಸಾರಿಗೆ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದೆ. ಕಾಗಿಣಾ ನದಿಯ ಮೇಲ್ಭಾಗದ ಸೇಡಂ, ಕಾಳಗಿ, ಚಿಂಚೋಳಿ ತಾಲೂಕುಗಳಲ್ಲಿ ಮಳೆಯಾಗಿದ್ದರಿಂದ ಕಾಗಿಣಾ ನದಿ ತುಂಬಿ ಹರಿಯುತ್ತಿದೆ. ಬೆಣ್ಣೆತೊರಾ ಜಲಾಶಯದಿಂದ ನೀರು ಹೊರಗೆ ಬಿಟ್ಟಿದ್ದರಿಂದ ನದಿಯಲ್ಲಿ ಪ್ರವಾಹ ಏರುಗತಿಯಲ್ಲಿದ್ದು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ಆಚೆಗಿರುವ ಗ್ರಾಮಗಳ ವಿದ್ಯಾರ್ಥಿಗಳು ಬೆಳಿಗ್ಗೆ ಪಟ್ಟಣದ ವಿವಿಧ […]

Continue Reading

ಕಾರಲ್ಲಿ ಇಬ್ಬರು ಬಾಲಕಿಯರಿದ್ದರು, ಕಣ್ಣೀರಿಡುತ್ತಾ ಓಡಿ ಬಂದ ವಿದ್ಯಾರ್ಥಿನಿ: ಕಿಡ್ನ್ಯಾಪ್‌ಗೆ ನಡೆಯಿತಾ ಯತ್ನ ?

ಹಾಸನ: ಕಾರಲ್ಲಿ ಇಬ್ಬರು ಬಾಲಕಿಯರಿದ್ದರು, ಕಾರಲ್ಲಿದ್ದವರು ನನ್ನನ್ನೂ ಕಿಡ್ನ್ಯಾಪ್‌ ಮಾಡಲು ಯತ್ನಿಸಿದ್ದರು ಎಂದು ಶಾಲಾ ವಿದ್ಯಾರ್ಥಿನಿಯೊಬ್ಬಳು ಅಳುತ್ತ ಓಡಿ ಶಾಲೆಗೆ ಬಂದ ಪ್ರಸಂಗ ಆಲೂರು ತಾಲೂಕಿನ ಹಂಚೂರು ಗ್ರಾಮದಲ್ಲಿ ನಡೆದಿದೆ. ಶಾಲೆಗೆ ಓಡಿ ಬಂದ ವಿದ್ಯಾರ್ಥಿನಿ, ಬಿಳಿ ಬಣ್ಣದ ಮಾರುತಿ ಓಮ್ನಿಯಲ್ಲಿ ಬಂದವರು ಅಪಹರಣಕ್ಕೆ ಯತ್ನಿಸಿದ್ದರು, ಕಾರಿನಲ್ಲಿ ಮತ್ತಿಬ್ಬರು ವಿದ್ಯಾರ್ಥಿನಿಯರು ಇದ್ದರು ಎಂದು ಹೇಳಿಕೊಂಡಿದ್ದಾಳೆ. ಈ ವೇಳೆ ಗಾಬರಿಯಿಂದ ಬಾಲಕಿ ಬ್ಯಾಗ್‌ ಸಹ ಎಸೆದು ಬಂದಿದ್ದಾಳೆ. ಈ ಮಾಹಿತಿಯನ್ನು ಶಾಲಾ ಮುಖ್ಯ ಶಿಕ್ಷಕರು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ […]

Continue Reading

ಅರಜಂಬಗಾ: ಕರವೇ ಗ್ರಾಮ ಘಟಕದ ಅಧ್ಯಕ್ಷರಾಗಿ ಲಾಲ್ ಪಟೇಲ್ ಆಯ್ಕೆ

ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಅರಜಂಬಗಾ ಗ್ರಾಮ ಘಟಕದ ಅಧ್ಯಕ್ಷರಾಗಿ ಲಾಲ್ ಪಟೇಲ್ ತಂದೆ ಮಕಬೂಲ್ ಪಟೇಲ್ ಅವರನ್ನು ನೇಮಕ ಮಾಡಲಾಯಿತು. ನಗರದ ಒಕ್ಸ್ ಎಲೈಟ್ ಹೋಟೆಲ್’ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಾಸಿಕ ಸಭೆಯಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಕಾಶಿ ಮತ್ತು ಕರವೇ ಜಿಲ್ಲಾಧ್ಯಕ್ಷ ಆನಂದ್ ದೊಡ್ಮನಿ ಅವರು ಕಾಳಗಿ ತಾಲೂಕಿನ ಅರಂಬಗಾ ಗ್ರಾಮ ಘಟಕದ ಅಧ್ಯಕ್ಷರನ್ನು ನೇಮಕ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸರ್ವ ತಾಲೂಕು ಅಧ್ಯಕ್ಷರು, […]

Continue Reading

ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

Continue Reading

ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು, ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಸಮಗ್ರ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ವಿಧಾನಪರಿಷತ್‌ನಲ್ಲಿ ಗಮನ ಸೆಳೆಯುವ ಸೂಚನೆಯಡಿ ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಹಾಗೂ ಬಿಜೆಪಿಯ ಡಿ.ಎಸ್‌ ಅರುಣ್‌ ಅವರ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸುವ ವಿಷಯದ ಬಗ್ಗೆ ಉತ್ತರ ನೀಡಿದರು. ಸ್ಥಳೀಯ ಸಂಸ್ಥೆಗಳಿಗೆ […]

Continue Reading

ಅಂಗಾಂಗ ದಾನ ಜೀವದಾನಕ್ಕೆ ಸಮಾನ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ರಕ್ತದಾನ, ಅಂಗಾಂಗ ದಾನ, ದೇಹ ದಾನ ಮಾಡುವುದರಿಂದ ಮತ್ತೊಬ್ಬರ ಜೀವ ಉಳಿಯುವುದರ ಜೊತೆಗೆ ದಾನಿ ಸತ್ತ ನಂತರವು ದಾನ ಮಾಡಿದ ಅಂಗಾಂಗಳ ಮೂಲಕ ಬದುಕಬಹುದಾಗಿದೆ, ಅಂಗಾಂಗ ದಾನಿಗಳಿಗೆ ಸಾವಿಲ್ಲ ಎಂದು ಖ್ಯಾತ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ಜೆ.ಆರ್ ನಗರದಲ್ಲಿನ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಬುಧವಾರ ಸಂಜೆ ಜರುಗಿದ ‘ವಿಶ್ವ ಅಂಗಾಂಗ ದಾನ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, […]

Continue Reading

ಕರ್ತವ್ಯ ಲೋಪ: ಧಾರವಾಡ ಜಿ.ಪಂ ಯೋಜನಾಧಿಕಾರಿ ಅಮಾನತು

ಧಾರವಾಡ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಧಾರವಾಡ ಜಿ.‌ಪಂ ಯೋಜನಾಧಿಕಾರಿ ರೇಖಾ ಡೊಳ್ಳಿನ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯದರ್ಶಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ರೇಖಾ ಅವರು ಕಾನೂನು ಬಾಹಿರವಾಗಿ ಕೋಟಿ ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಜಿಲ್ಲಾ ಮಟ್ಟದ ಅನುದಾನ ಪ್ರಸ್ತಾವನೆ ಸಲ್ಲಿಸುವಾಗ ಕಾನೂನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ರಾಜೀವ್ ಗಾಂಧಿ ಚೈತನ್ಯ ಯೋಜನೆಯಡಿ ಗ್ರಾಮೀಣ ಜನರಿಗೆ ಕೌಶಲ್ಯ ಕೊಡುವ ಯೋಜನೆ ಇತ್ತು. 2017-18ರಲ್ಲಿ ಈ ಯೋಜನೆಯ ಕಾರ್ಯಕ್ರಮಕ್ಕೆ ಕೈಗೊಂಡ ಅಭಿಯಾನದ […]

Continue Reading