ನಾಲವಾರ ಶ್ರೀಗಳ ಜನ್ಮದಿನೋತ್ಸವ: ಅಂಧ, ಬುದ್ಧಿಮಾಂದ್ಯರಿಗೆ ಉಚಿತ ಕ್ಷೌರ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ಚಿತ್ತಾಪುರ ತಾಲೂಕಿನ ಶ್ರೀಕ್ಷೇತ್ರ ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಜನ್ಮದಿನದ ಪ್ರಯುಕ್ತ ಅ.1 ರಂದು ಅನಾಥ, ನಿರ್ಗತಿಕ, ಬುದ್ಧಿಮಾಂದ್ಯರಿಗೆ ಉಚಿತ ಕ್ಷೌರ ಸೇವೆ ಮಾಡಲಾಗುವುದು ಎಂದು ಹಡಪದ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ (ಎನ್) ಹೇಳಿದರು. ಕಲಬುರಗಿ ನಗರದ ಬಿದ್ದಾಪೂರ ಕಾಲೋನಿಯ ಅನಾಥ, ನಿರ್ಗತಿಕ ಮತ್ತು ಬುದ್ಧಿಮಾಂದ್ಯರ ಕೇಂದ್ರಕ್ಕೆ ಭೇಟಿ ನೀಡಿ ಉಚಿತ ಕ್ಷೌರ ಸೇವೆ […]

Continue Reading

ದುಷ್ಟತೆಯ ನಾಶ, ಶಿಷ್ಟತೆಯ ರಕ್ಷಣೆಯ ಸಂಕೇತ ವಿಜಯದಶಮಿ: ಮಹಾದೇವಯ್ಯ ಕರದಳ್ಳಿ

ಕಲಬುರಗಿ: ಮನುಷ್ಯನಲ್ಲಿ ಅಡಗಿರುವ ದ್ವೇಷ, ಅಸೂಯೆ, ಸ್ವಾರ್ಥತೆ, ಕೆಟ್ಟ ಆಲೋಚನೆಯಂಥಹ ಮುಂತಾದ ದುಷ್ಟ ಶಕ್ತಿಯ ಗುಣಗಳನ್ನು ನಾಶಪಡಿಸಿ, ಪರಸ್ಪರ ಪ್ರೀತಿ, ಸಹಬಾಳ್ವೆ, ಸಹಕಾರ, ಪರೋಪಕಾರದಂಥಹ ಶಿಷ್ಟತೆಯ ಗುಣಗಳು ಮೈಗೂಡಿಕೊಂಡು ಜೀವನ ಸಾಗಿಸಬೇಕೆಂಬ ಮೇರು ಸಂದೇಶ ವಿಜಯದಶಮಿ ಹೊಂದಿದೆ ಎಂದು ಚಿಂತಕ ಮಹಾದೇವಯ್ಯ ಕರದಳ್ಳಿ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯ ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ‘ನಾಡಹಬ್ಬ ದಸರಾ ಸಂದೇಶ’ ವಿಶೇಷ ಉಪನ್ಯಾಸ […]

Continue Reading

ಭಾಷಾಂತರದಿಂದ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆ ಸಾಧ್ಯ: ಎಚ್.ಬಿ ಪಾಟೀಲ

ಕಲಬುರಗಿ: ಕೆಲವೇ ಭಾಷೆಗಳು ಎಲ್ಲೆಡೆ ಬಳಕೆ ಮಾಡಿದರೆ ಜನಸಾಮಾನ್ಯರಿಗೆ ಅರ್ಥವಾಗುವುದಿಲ್ಲ. ಅವುಗಳನ್ನು ಮಾತೃಭಾಷೆಗೆ ಪರಿವರ್ತಿಸುವುದು ಅಗತ್ಯ. ಇದರಿಂದ ಮಾತೃಭಾಷೆ, ಸಾಹಿತ್ಯ ಬೆಳವಣಿಗೆಯಾಗುವುದರ ಜೊತೆಗೆ ಜನಸಾಮಾನ್ಯರಿಗೆ ಗ್ರಹಿಕೆ ಸುಲಭವಾಗುತ್ತದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್’ನಲ್ಲಿ ಬಸವೇಶ್ವರ ಪದವಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಮಂಗಳವಾರ ಏರ್ಪಡಿಸಲಾಗಿದ್ದ ‘ಅಂತರಾಷ್ಟ್ರೀಯ ಭಾಷಾಂತರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನ ಭಾಷಾಂತಕಾರರಿಗೆ ಗೌರವ ಸಲ್ಲಿಸುವುದು ದಿನಾಚರಣೆ ಉದ್ದೇಶವಾಗಿದೆ. ವಿವಿಧ ದೇಶ, ಸಂಸ್ಕೃತಿ ಬೆಸೆಯುವಲ್ಲಿ […]

Continue Reading

ಎಲೆಕ್ಟ್ರಿಕ್‌ ವಾಹನಗಳಿಗೆ ಶಬ್ದ ಕಡ್ಡಾಯಗೊಳಿಸಿದ ಸರಕಾರ

ಹೊಸದಿಲ್ಲಿ: ಎಲೆಕ್ಟ್ರಿಕ್‌ ವಾಹನಗಳು ಚಲಿಸುತ್ತಿರುವುದು ಪಾದಚಾರಿಗಳು ಮತ್ತು ಇತರ ವಾಹನ ಚಾಲಕರ ಗಮನಕ್ಕೆ ಬರುವಂತೆ ಮಾಡಲು ಎಲೆಕ್ಟ್ರಿಕ್‌ ವಾಹನಗಳಿಗೆ ಸ್ಪೀಕರ್‌ ಅಳವಡಿಕೆಗೆ ಕೇಂದ್ರ ಸರಕಾರ ಮುಂದಾಗಿದೆ. ಇದಕ್ಕಾಗಿ ಕರಡು ನಿಯಮ ಬಿಡುಗಡೆ ಮಾಡಿದ್ದು, 1 ಅಗಸ್ಟ್ 2027 ರಿಂದ ಎಲ್ಲ ವಾಹನಗಳಿಗೆ ಇದನ್ನು ಕಡ್ಡಾಯ ಮಾಡಲಾಗುವುದು ಎಂದು ತಿಳಿಸಿದೆ. ಎಲೆಕ್ಟ್ರಿಕ್‌ ವಾಹನಗಳು ಯಾವುದೆ ಶಬ್ದವಿಲ್ಲದೆ ಚಲಿಸುವುದರಿಂದ ಇಂತಹ ವಾಹನಗಳು ಬರುವುದು ಇತರರಿಗೆ ತಿಳಿಯುವುದಿಲ್ಲ. ಹೀಗಾಗಿ ಈ ವಾಹನಗಳಲ್ಲಿ ಸ್ಪೀಕರ್‌ ಅಳವಡಿಸಿ, ವೇಗ ಕಡಿಮೆ ಇದ್ದಾಗ ಸಾಮಾನ್ಯ ಕಾರುಗಳು […]

Continue Reading

ಭಕ್ತಿ, ಶಕ್ತಿಯ ಸಾಂಕೇತಿಕ ನೃತ್ಯಗಳೆ ಗರ್ಬಾ, ದಾಂಡಿಯಾ ನೃತ್ಯ

ಕಲಬುರಗಿ: ಯಾವುದೆ ಉಪಕರಣವಿಲ್ಲದೃ ಕೈ ಚಲನೆಯ ಮೂಲಕ ಮಾಡುವ ಗರ್ಬಾ ನೃತ್ಯ ಭಕ್ತಿಯ ಸಾಂಕೇತಿಕವಾದರೆ, ಎರಡು ಕೋಲುಗಳಿಂದ ಮಾಡುವ ಶಕ್ತಿಯ ಸಂಕೇತ ತೋರಿಸುವುದು ದಾಂಡಿಯಾ ನೃತ್ಯವಾಗಿದೆ. ಇದು ದುರ್ಗಾ ದೇವಿಯು ಮಹಿಷಾಸುರನ ಮೇಲೆ ವಿಜಯ ಸಾಧಿಸಿದ ಪೌರಾಣಿಕ ಹಿನ್ನೆಲೆಯೇ ಈ ನವರಾತ್ರಿ ಉತ್ಸವದ ವಿಶೇಷ ಎಂದು ಅಂಡಗಿ ಪ್ರತಿಷ್ಠಾನ ಕಾರ್ಯದರ್ಶಿ ರೇಖಾ ಅಂಡಗಿ ಹೇಳಿದರು. ನಗರದ ಬಸವೇಶ್ವರ ಆಸ್ಪತ್ರೆಯ ಎದುರುಗಡೆಯ ವಿದ್ಯಾನಗರ ಕಾಲೋನಿಯ ರಾಜ್ವಿಕಾ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ದಾಂಡಿಯಾ ಮತ್ತು ಗರ್ಬಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ […]

Continue Reading

ಹುಂಡಿಯಿಂದ ಹಣ ಕದ್ದು ಆಸ್ತಿ ಖರೀದಿ: 7 ಆಸ್ತಿಗಳು ತಿರುಪತಿಗೆ ದಾನ ಮಾಡಿದ ದಂಪತಿ

ತಿರುಮಲ: ತಿರುಪತಿ ದೇಶದ ಅತ್ಯಂತ ಶ್ರೀಮಂತ, ಅತಿ ಹೆಚ್ಚು ಆದಾಯ ತರುವ ದೇವಾಲಯಗಳಲ್ಲಿ ಒಂದು ತಿರುಪತಿ ತಿಮ್ಮಪ್ಪನಿಗೆ ದುಡ್ಡು ನೀಡಿದಷ್ಟು ದುಪ್ಪಟ್ಟು ಶ್ರೀಮಂತರಾಗುತ್ತಾರೆ ಎಂಬ ನಂಬಿಕೆ ಹಿಂದು ಸಮುದಾಯದ ಭಕ್ತರಿಗೆ ಇರುವುದರಿಂದ ಭಕ್ತರು ಸಾಕಷ್ಟು ವಸ್ತುಗಳನ್ನು ತಿಮ್ಮಪ್ಪನಿಗೆ ದಾನ ಮಾಡುತ್ತಾರೆ. ದಿನವೂ ಇಲ್ಲಿನ ದೇಗುಲಕ್ಕೆ 60 ಸಾವಿರದಿಂದ ಲಕ್ಷಾಂತರ ಸಂಖ್ಯೆಯ ಭಕ್ತರು ಬರುತ್ತಾರೆ. ಲಕ್ಷಾಂತರ ಮೊತ್ತದ ಹಣವನ್ನು ಇಲ್ಲಿನ ಹುಂಡಿಗಳಿಗೆ ಹಾಕಿ ತೆರಳುತ್ತಾರೆ. ಬರಿ ಹಣ ಮಾತ್ರವಲ್ಲದೆ, ಚಿನ್ನ, ಬೆಳ್ಳಿ, ಆಭರಣಗಳು ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳು […]

Continue Reading

ಅ.1 ರಂದು ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಜನ್ಮದಿನೋತ್ವವ ಪ್ರವಾಹ ಪರಿಸ್ಥಿತಿ ಹಿನ್ನೆಲೆ ಸರಳವಾಗಿ ಆಚರಣೆಗೆ ನಿರ್ಧಾರ

ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ಕಲಬುರಗಿ ಜಿಲ್ಲೆಯ ಶ್ರೀಕ್ಷೇತ್ರ ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧಿಪತಿ ಲಿಂ.ತೋಟೇಂದ್ರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಹಾಗೂ ಪ್ರಸ್ತುತ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಜನ್ಮದಿನೋತ್ಸವ ಕಾರ್ಯಕ್ರಮ ಬುಧವಾರ ಆಯುಧ ಪೂಜೆಯ ದಿನದಂದು ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀಮಠದ ಸಹಸ್ರಾರು ಸದ್ಭಕ್ತರು ಶ್ರೀಗಳ ಜನ್ಮದಿನಾಚರಣೆ ಕಾರ್ಯಕ್ರಮ ಅದ್ಧೂರಿಯಾಗಿ ಆಚರಣೆ ಮಾಡಲು ಎಲ್ಲಾ ಸಿದ್ಧತೆಗಳು ಮಾಡಿಕೊಂಡಿದ್ದರು.ಆದರೆ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಅತಿವೃಷ್ಟಿ, […]

Continue Reading

ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ಅಧಿಕಾರಿಗಳು ಮಧ್ಯದಲ್ಲೇ ಲಾಕ್

ವಿಜಯಪುರ: ಮಹಾರಾಷ್ಟ್ರದಲ್ಲಿ ಮಳೆ ಎಫೆಕ್ಟ್‌ ಹಿನ್ನೆಲೆ ಜಯಪುರದಲ್ಲಿ ಭೀಮಾನದಿ‌ ಪ್ರವಾಹ ಉಂಟಾಗಿದೆ. ಹೀಗಾಗಿ ಈ ಭಾಗದ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ಅಧಿಕಾರಿಗಳು ಮಧ್ಯದಲ್ಲೇ ಲಾಕ್ ಆದ ಘಟನೆ ನಡೆದಿದೆ. ನೀರಿದ್ದ ಕಾರಣ ಸೇತುವೆ ಮೇಲೆ ವಾಹನ ಕೆಟ್ಟು ಅಧಿಕಾರಿಗಳು ಸಮಸ್ಯೆ ಅನುಭವಿಸಿದ್ದಾರೆ. ಪಿಡಬ್ಲ್ಯೂಡಿ ಅಧಿಕಾರಿಗಳು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಿಂದ ಭೀಮಾ ನದಿ ಪಾತ್ರಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಪ್ರವಾಹದಿಂದ ಅಧಿಕ ನೀರು ಬಂದಿದ್ದು, ರಸ್ತೆಯ ಮೇಲೆ ಸಂಚಾರ ಮಾಡುವಾಗ ವಾಹನ ಕೈಕೊಟ್ಟಿದೆ. ಕೊನೆಗೆ […]

Continue Reading

ಬಿಜೆಪಿ ಕಛೇರಿಯಲ್ಲಿ ಭಗತ್ ಸಿಂಗ್ ಸ್ಮರಣೆ

ವಾಡಿ: ಬಿಜೆಪಿ ಕಛೇರಿಯಲ್ಲಿ ಭಗತ್ ಸಿಂಗ್ ಅವರ 118ನೇ ಜಯಂತಿ ಪ್ರಯುಕ್ತ ಭಗತ್ ಸಿಂಗ್ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ದೇಶದ ಸ್ವಾತಂತ್ರ್ಯ ಸಂಗ್ರಾಮದ ಚರಿತ್ರೆಯಲ್ಲಿ ಭಗತ್ ಸಿಂಗ್ ಅಚ್ಚಳಿಯದ ಹೆಸರು ಎಂದರು. ಅಸಾಧಾರಣ ಧೈರ್ಯದಿಂದ ಬ್ರಿಟಿಷರ ಎದೆ ನಡುಗಿಸಿದ ಕ್ರಾಂತಿಕಾರಿ. ಚಿಕ್ಕ ವಯಸ್ಸಿನಲ್ಲೇ ದೇಶ ಪ್ರೇಮದಿಂದ ಪ್ರೇರಿತರಾಗಿ, ಬ್ರಿಟಿಷ್ ಆಡಳಿತದ ವಿರುದ್ಧ ಸಕ್ರಿಯವಾಗಿ ತೊಡಗಿಸಿಕೊಂಡ ಅವರು, ರೈತರು ಮತ್ತು ಕಾರ್ಮಿಕರನ್ನು ಒಗ್ಗೂಡಿಸಲು ‘ನೌಜವಾನ್ ಭಾರತ್ […]

Continue Reading

ವೈದ್ಯಕೀಯ ಕ್ಷೇತ್ರದಲ್ಲಿ ಫಾರ್ಮಸಿಸ್ಟ್‌ ಪಾತ್ರ ಅನನ್ಯ

ಕಲಬುರಗಿ: ನಾಗರಿಕರ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಸುರಕ್ಷತೆ ಜೊತೆಗೆ ಔಷಧಗಳ ಬಗ್ಗೆ ಸಲಹೆ-ಸೂಚನೆ ನೀಡುವ ಔಷಧ ತಜ್ಞರು ಆರೋಗ್ಯ ರಕ್ಷಕರಾಗಿ ಕಾರ್ಯನಿರ್ವಹಿಸುತ್ತಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಫಾರ್ಮಸಿಸ್ಟ್‌ ಕೊಡುಗೆ ಅನನ್ಯವಾಗಿದೆ ಎಂದು ಫಾರ್ಮಸಿಸ್ಟ್‌ ಶಿವರಾಜ ಲೋಹಾರ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ಬಸವಗಂಗಾ ಮೆಡಿಕಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಫಾರ್ಮಸಿಸ್ಟ್‌ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಕರೋನಾದ ಸಂದಿಗ್ಧ ಪರಿಸ್ಥಿಯಲ್ಲಿ ಕರೋನಾ ರೋಗಿಗಳು ಮತ್ತು ಸಾಮಾನ್ಯ […]

Continue Reading