ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ. ಏರಿಕೆ

ಸುದ್ದಿ ಸಂಗ್ರಹ ನವದೆಹಲಿ ನಿರೀಕ್ಷೆಯಂತೆ ಕೊಲ್ಲಿ ಯುದ್ಧದ ಬಿಸಿ ನಮ್ಮ ಮನೆ ಬಾಗಿಲಿಗೆ ತಟ್ಟಿದೆ. ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ ದರ 60 ರೂ. ಏರಿಕೆಯಾದರೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ದರ 115 ರೂ. ಏರಿಕೆಯಾಗಿದೆ. ಪರಿಷ್ಕೃತ ದರ ಶನಿವಾರದಿಂದ ಜಾರಿಗೆ ಬಂದಿದೆ. ದರ ಏರಿಕೆಯಿಂದ ಹೋಟೆಲ್‌, ರೆಸ್ಟೋರೆಂಟ್‌, ಸಣ್ಣ ವಾಣಿಜ್ಯ ಸಂಸ್ಥೆಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ. ಯಾವ ನಗರದಲ್ಲಿ ಎಷ್ಟು ?ದರ ಏರಿಕೆಗೂ ಮೊದಲು ಬೆಂಗಳೂರಿನಲ್ಲಿ ಗೃಹ ಬಳಕೆಯ […]

Continue Reading

ಸಿಎಂ ಆಗಮನಕ್ಕೆ ಭರದ ಸಿದ್ಧತೆ: ಡಿಸಿ ಭೇಟಿ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣಕ್ಕೆ ರವಿವಾರ ಸಿಎಂ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಭರದ ಸಿದ್ಧತೆ ನಡೆದಿದೆ. ಅಧಿಕಾರಿಗಳು ಚಿತ್ತಾಪುರದಲ್ಲಿ ಬೀಡುಬಿಟ್ಟಿದ್ದು, ವೇದಿಕೆ ನಿರ್ಮಾಣ ಸೇರಿದಂತೆ ಭದ್ರತೆ ಕಾರ್ಯಗಳಿಗೆ ಪ್ರಮುಖ ಆದ್ಯತೆ ನೀಡಿದ್ದಾರೆ. ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ಜಿ.ಪಂ ಸಿಇಒ ಭಂವರಸಿಂಗ್ ಮೀನಾ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿದರು. ಚಿತ್ತಾಪುರ ಪಟ್ಟಣದ ಹೊರವಲಯದಲ್ಲಿ ವೇದಿಕೆ ಸಿದ್ದಗೊಳ್ಳುತ್ತಿದ್ದು, ಅಗತ್ಯ ಹಾಗೂ ಸೂಕ್ತ ತಯಾರಿ ನಡೆಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಪ್ರಜಾಸೌಧದಲ್ಲಿ‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ, ಮುಖ್ಯಮಂತ್ರಿ, […]

Continue Reading

ಯಶಸ್ಸಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ

ಸುದ್ದಿ ಸಂಗ್ರಹ ಕಲಬುರಗಿಚಿತ್ತಾಪುರ ಪಟ್ಟಣದಲ್ಲಿ ಮಾ.8ರಂದು ಸಾವಿರಾರು ಕೋಟಿ ರೂ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಕಾರ್ಯಕ್ರಮ ಯಶಸ್ಸಿಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಾಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ಯಶಸ್ಸಿಗೆ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು. ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನೊಳಗೊಂಡು ರಚಿಸಲಾದ ವಿವಿಧ ಸಮಿತಿ ಸದಸ್ಯರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ರಾಜ್ಯಸಭೆಯ ವಿರೋಧ […]

Continue Reading

ಸತ್ತಿದ್ದ ವ್ಯಕ್ತಿ ಮತ್ತೆ ಜೀವಂತ: ಅಂತ್ಯಕ್ರಿಯೆಗೆ ಕರೆದೊಯ್ಯುವಾಗ ಮಾತಾಡಿದ್ದನ್ನು ಕಂಡು ಮನೆಯವರೆ ಶಾಕ್

ಸುದ್ದಿ ಸಂಗ್ರಹ ಬಾಗಲಕೋಟೆ ಸತ್ತಿದ್ದಾನೆ ಎಂದುಕೊಂಡಿದ್ದ ವ್ಯಕ್ತಿ ಬದುಕಿ ಮತ್ತೆ ಮಾತನಾಡಿರುವ ಅಚ್ಚರಿ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ಮೊಮಿನ್ ಗಲ್ಲಿಯ ನಿವಾಸಿ 65 ವರ್ಷದ ಮುಬಾರಕ್ ಅವಟಿ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಬಳಿಕ ಕುಟುಂಬದವರು ಅಂತಿಮ ಸಂಸ್ಕಾರಕ್ಕಾಗಿ ಊರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಲೋಕಾಪುರ ಬಳಿ ರೋಡ್ ಹಂಪ್ಸ್ ಬರುತ್ತಿದ್ದತೆ ವಾಹನ ಅಲುಗಾಡಿದೆ. ಆಗ ಮುಬಾರಕ್ ಹಠಾತ್ ಉಸಿರಾಡಲು ಆರಂಭಿಸಿ, ಕುಟುಂಬಸ್ಥರ […]

Continue Reading

ದೀರ್ಘಾವಧಿಯ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ

ಸುದ್ದಿ ಸಂಗ್ರಹ ಬೆಂಗಳೂರುಸಿಎಂ ಸಿದ್ದರಾಮಯ್ಯನವರು 2026–27ನೇ ಸಾಲಿನ ರಾಜ್ಯ ಬಜೆಟ್‌ ಇಂದು ಮಂಡಿಸಿದ್ದಾರೆ. ಈ ಮೂಲಕ ರಾಜ್ಯದ ವಿಧಾನಸಭೆ ಇತಿಹಾಸದಲ್ಲಿ ಹೆಚ್ಚು ಸಮಯ ಬಜೆಟ್‌ ಭಾಷಣ ಮಂಡಿಸಿದ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ದಾಖಲೆ ‌ಬರೆದಿದ್ದಾರೆ. ಹಲವು ನಿರೀಕ್ಷೆಗಳೊಂದಿಗೆ ಸಿದ್ದರಾಮಯ್ಯನವರು 4.48 ಲಕ್ಷ ಕೋಟಿ ಗಾತ್ರದ 17ನೇ ಬಜೆಟ್‌ ಮಂಡಿಸಿದರು. ಬಜೆಟ್‌ನಲ್ಲಿ ತಮ್ಮ ಭಾಷಣವನ್ನು ಸುಮಾರು 3 ಗಂಟೆ 40 ನಿಮಿಷಗಳ ಕಾಲ ಮಂಡಿಸಿದರು. ಈ ಮೂಲಕ ಬಜೆಟ್ ಅಧಿವೇಶನದಲ್ಲಿ ಹೆಚ್ಚು ಸಮಯ ಭಾಷಣ ಮಾಡಿದವರಲ್ಲಿ ಸಿದ್ದರಾಮಯ್ಯ ಒಬ್ಬರಾಗಿದ್ದಾರೆ. ಈ […]

Continue Reading

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌: 56,432 ಹುದ್ದೆಗಳ ಭರ್ತಿ

ಸುದ್ದಿ ಸಂಗ್ರಹ ಬೆಂಗಳೂರು ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಈ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತೆವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ನಾವು ಆದ್ಯತೆ ನೀಡಿದ್ದೆವೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೆವೆ ಎಂದಿದ್ದಾರೆ. ಉದ್ಯೋಗ ನೇಮಕಾತಿಗಳಲ್ಲಿ ನ್ಯಾಯಾಲಯದ ಪ್ರಕರಣಗಳಿಂದ […]

Continue Reading

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

ಸುದ್ದಿ ಸಂಗ್ರಹ ಮುಂಬೈ ಸಂಜು ಸ್ಯಾಮ್ಸನ್‌ ಸ್ಫೋಟಕ ಬ್ಯಾಟಿಂಗ್‌, ಅಕ್ಷರ್‌ ಪಟೇಲ್‌ ಸ್ಟನ್ನಿಂಗ್‌ ಕ್ಯಾಚ್‌, ಕೊನೆಯಲ್ಲಿ ಬುಮ್ರಾ ಬೌಲಿಂಗ್‌ ಕಮಾಲ್‌ನಿಂದ ಇಂಗ್ಲೆಂಡ್‌ ವಿರುದ್ಧ ಭಾರತ 7 ರನ್‌ಗಳ ರೋಚಕ ಜಯದೊಂದಿಗೆ ನಾಲ್ಕನೇ ಬಾರಿ ಟಿ20 ಫೈನಲ್‌ ಪ್ರವೇಶಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಭಾರತ 7 ವಿಕೆಟ್‌ ನಷ್ಟಕ್ಕೆ 253 ರನ್‌ ಗಳಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್‌ ಬೆಥೆಲ್‌ ಸ್ಫೋಟಕ ಶತಕ ಸಿಡಿಸಿಯೂ 7 ವಿಕೆಟ್‌ ನಷ್ಟಕ್ಕೆ 246 ರನ್‌ ಹೊಡೆದು ಸೋಲು ಒಪ್ಪಿಕೊಂಡಿತು. […]

Continue Reading

ಶುಕ್ರವಾರ ಬೆಳಗ್ಗೆ 10:15ಕ್ಕೆ ಬಜೆಟ್‌: ಪೆಟ್ರೋಲ್, ಡೀಸೆಲ್‌ ಮೇಲೆ 1 ರೂ. ಸೆಸ್ ?

ಸುದ್ದಿ ಸಂಗ್ರಹ ಬೆಂಗಳೂರು ದೀರ್ಘಕಾಲಿಕ ಮುಖ್ಯಮಂತ್ರಿಯಾಗಿ ರೆಕಾರ್ಡ್ ಮಾಡಿರುವ ಸಿಎಂ ಸಿದ್ದರಾಮಯ್ಯ ನಾಳೆ ದಾಖಲೆಯ 17ನೇ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿಎಂ, ನಾಳೆ ಬೆಳಗ್ಗೆ 10:15ಕ್ಕೆ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ ನಾಲ್ಕೂವರೆ ಲಕ್ಷ ಕೋಟಿ ಮುಟ್ಟುವ ಸಾಧ್ಯತೆ ಇದೆ. ಕಳೆದ ಬಾರಿ ಆದಾಯ ಸಂಗ್ರಹದ ಗುರಿ ಮುಟ್ಟಿಲ್ಲ. ಇದರ ಪರಿಣಾಮವೂ 2026-27ನೇ ಸಾಲಿನ ಬಜೆಟ್ ಮೇಲೆ ಪರಿಣಾಮ ಬೀರಲಿದೆ. ಸಾಲ ಮಾಡಿ ತುಪ್ಪ ತಿನ್ನುವುದು ರಾಜ್ಯಕ್ಕೆ ಹೊಸದೆನಲ್ಲ. ಈ ಬಾರಿ 75 […]

Continue Reading

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ ಕಾರ್ಡ್ ಪತ್ತೆ

ಸುದ್ದಿ ಸಂಗ್ರಹ ಮಂಗಳೂರು ಇಲ್ಲಿನ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ರಾಶಿರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಸಾವಿರಾರು ಆಧಾರ್ ಕಾರ್ಡ್‌ಗಳು ಬಿದ್ದಿರುವುದನ್ನು ಕಂಡ ಸಾರ್ವಜನಿಕರು ಶಾಕ್ ಆಗಿದ್ದು, ತಕ್ಷಣ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸ್ಥಳೀಯರು ಎಲ್ಲಾ ಆಧಾರ್ ಕಾರ್ಡ್‌ ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್ ದುರುಪಯೋಗ ಅಥವಾ ನಿರ್ಲಕ್ಷ್ಯದ ಬಗ್ಗೆ ಸೂಕ್ತ ತನಿಖೆ ನಡೆಸಲು ಅಧಿಕಾರಿಗಳಿಗೆ ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ. […]

Continue Reading

ಬೆಂಗಳೂರು, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಸುದ್ದಿ ಸಂಗ್ರಹ ಬೆಂಗಳೂರು ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆಯಿಂದಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ಎಲ್ಲೆಲ್ಲಿ, ಯಾರ ವಾಸ್ತವ್ಯಗಳ ಮೇಲೆ ಲೋಕಾ ದಾಳಿ ? ಬೆಳಗ್ಗೆ ಸುಮಾರು 6 ಗಂಟೆಯಿಂದ ಲೋಕಾಯುಕ್ತ ಪೊಲೀಸರು ಹಲವು ತಂಡಗಳಾಗಿ ವಿಭಜನೆಗೊಂಡು […]

Continue Reading