ಪನ್ನೀರ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಆಹಾರ ಇಲಾಖೆ ಪರೀಕ್ಷೆ ವೇಳೆ ಬ್ಯಾಕ್ಟೀರಿಯಾ ಅಂಶ ಪತ್ತೆ

ಬೆಂಗಳೂರು: ಇತ್ತೀಚೆಗೆ ಆಹಾರ ಇಲಾಖೆ ಕಳಪೆ ಆಹಾರ ಪದಾರ್ಥಗಳ ವಿರುದ್ಧ ಸಮರ ಸಾರಿತ್ತು. ರಾಸಾಯನಿ ಬಳಕೆಗಳ ವಿರುದ್ಧ ಚಾಟಿ ಬೀಸಿತ್ತು. ಹೀಗಾಗಿ ಪನ್ನೀರ್ ಸೇರಿದಂತೆ ಇತರೆ ಆಹಾರ ಉತ್ಪನ್ನಗಳ ಸ್ಯಾಂಪಲ್ ಪಡೆದು ಟೆಸ್ಟ್​ಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದೆ, ಪನ್ನೀರ್​ನಲ್ಲಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆಯಾಗಿರುವದು ದೃಢವಾಗಿದೆ. ಆ ಮೂಲಕ ಪನ್ನೀರ್​​​​​ ಪ್ರಿಯರಿಗೆ ಆಹಾರ ಇಲಾಖೆ ಶಾಕ್​ ನೀಡಿದೆ. ಉಳಿದ ಸ್ಯಾಂಪಲ್​​ಗಳ ವರದಿಗಾಗಿ ಆಹಾರ ಇಲಾಖೆ ಕಾಯುತ್ತಿದೆ. ಪನ್ನೀರ್​ನಲ್ಲಿ ಅಸುರಕ್ಷಿತ ಅಂಶ ಪತ್ತೆ ಕಲಬೆರಕೆ ಹಿನ್ನೆಲೆಯಲ್ಲಿ ಕಳೆದ […]

Continue Reading

ದೇಶಾದ್ಯಂತ UPI ಸೇವೆಗಳಲ್ಲಿ ವ್ಯತ್ಯಯ

ನವದೆಹಲಿ: ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಗ್ರಾಹಕರು ಬೇರೆಯವರಿಗೆ ಹಣವನ್ನು ಕಳುಹಿಸಲು ಸಾಧ್ಯವಾಗುತ್ತಿಲ್ಲ. ಗೂಗಲ್‌ಪೇ, ಫೋನ್‌ಪೇ, ಪೇಟಿಎಂ ಸೇರಿದಂತೆ ಹಲವಾರು ಯುಪಿಐ ಸಂಯೋಜಿತ ಅಪ್ಲಿಕೇಶನ್‌ಗಳಲ್ಲಿ ಏಕಕಾಲಕ್ಕೆ ಸಮಸ್ಯೆಯಾಗಿದೆ. ಯಾವ ಕಾರಣಕ್ಕೆ ಈ ಸಮಸ್ಯೆ ಎದುರಾಗಿದೆ ಎನ್ನುವುದು ತಿಳಿದು ಬಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಜನರು ತಮಗೆ ಸಮಸ್ಯೆಯಾದ ಬಗ್ಗೆ ಪೋಸ್ಟ್‌ ಮಾಡುತ್ತಿದ್ದಾರೆ.

Continue Reading

ಕರ್ನಾಟಕದಲ್ಲಿ ಏ.1 ರಿಂದ ಟೋಲ್‌ ದರ ಹೆಚ್ಚಳ: ಗ್ರಾಹಕರಿಗೆ ತಟ್ಟಲಿರುವ ಬಿಸಿ

ಬೆಂಗಳೂರು: ರಾಜ್ಯದ ಜನರಿಗೆ ಮತ್ತೊಂದು ಶಾಕ್ ಕಾದಿದೆ. ಕರ್ನಾಟಕದ ಟೋಲ್ ದರಗಳು ಏಪ್ರಿಲ್ 1 ರಿಂದ ಹೆಚ್ಚಾಗಲಿವೆ. ಇದು ವಾರ್ಷಿಕವಾಗಿ ನಡೆಯುವ ಹಣದುಬ್ಬರ ಆಧಾರಿತ ಪರಿಷ್ಕರಣೆ ಆಗಿದ್ದು, ದರಗಳು ಕನಿಷ್ಠ ಶೇ 3 ರಿಂದ ಗರಿಷ್ಠ 5 ರಷ್ಟು ಏರಿಕೆಯಾಗಲಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಪ್ರಕಾರ, ಈ ಹೆಚ್ಚಳವು ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಜಾರಿಯಾಗಲಿದೆ. ಟೋಲ್ ಗುತ್ತಿಗೆ ಅವಧಿ ಆಧರಿಸಿ ದರಗಳು ಬದಲಾಗಲಿವೆ. ಈ ಹೆಚ್ಚುವರಿ ಶುಲ್ಕ ಗ್ರಾಹಕರಿಗೆ ವರ್ಗಾಯಿಸಲಾಗುವುದು ಎಂದು ಕರ್ನಾಟಕ ರಾಜ್ಯ […]

Continue Reading

ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೆನು ? ಪರಿಹಾರವೆನು ?

ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ʻನಾಸಾʼದ ಗಗನಯಾತ್ರಿಗಳಾದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ ಮತ್ತು ಬುಚ್‌ ವಿಲ್ಮೋರ್‌ ಭೂಮಿಗೆ ಸುರಕ್ಷಿತವಾಗಿ ಮರಳಿದ್ದು ಇಡೀ ದೇಶವೇ ಸಂಭ್ರಮಿಸಬೇಕಾದ ಸಂಗತಿ. 8 ದಿನಗಳ ಕಾರ್ಯಾಚರಣೆಗೆಂದು ತೆರಳಿದ್ದ ಇವರು ತಾಂತ್ರಿಕ ದೋಷದಿಂದಾಗಿ ಸುಮಾರು 286 ದಿನಗಳ ಕಾಲ ಬಾಹ್ಯಾಕಾಶದಲ್ಲೇ ಉಳಿಯಬೇಕಾಗಿತ್ತು. ಅದ್ರೆ ಇವರನ್ನು ಹೊತ್ತಿದ್ದ ಸ್ಪೇಸ್‌ಎಕ್ಸ್‌ ಸಂಸ್ಥೆಯ ಕ್ಯಾಪ್ಸೂಲ್‌ ಫ್ಲೋರಿಡಾದ ಸಮುದ್ರದಲ್ಲಿ ಜಲಸ್ಪರ್ಧ ಮಾಡಿರುವುದು ಸುದೀರ್ಘ ಅವಧಿಯಿಂದ ಮನೆ ಮಾಡಿದ್ದ ಅನಿಶ್ಚಿತತೆಯೊಂದನ್ನು ಕೊನೆಗೊಳಿಸಿದೆ. ಹಾಗಾದ್ರೆ ಭೂಮಿಗೆ ಬಂದ ನಂತ್ರ ಮುಂದೇನು? ತಕ್ಷಣಕ್ಕೆ […]

Continue Reading

ದೇವಿ ಪುರಾಣ ಆಲಿಸಿದರೆ ಚಿಂತೆಗಿಲ್ಲ ಜಾಗ: ಸಿದ್ದಸೋಮೇಶ್ವರ ಶಿವಾಚಾರ್ಯರು

ಚಿತ್ತಾಪುರ: ದೇವಿ ಪುರಾಣ ಆಲಿಸುವುದರಿಂದ ನಮ್ಮ ಜೀವನದ ಚಿಂತೆ ದೂರವಾಗಿ ಶಾಂತಿ ಮತ್ತು ನೆಮ್ಮದಿಯ ಜೀವನ ಸಾಗಿಸಲು ಸಾಧ್ಯ ಎಂದು ಗುಂಡೆಪಲ್ಲಿಯ ಸೋಮೇಶ್ವರ ಮಠದ ಸಿದ್ದಸೋಮೇಶ್ವರ ಶಿವಾಚಾರ್ಯರು ಹೇಳಿದರು. ತಾಲೂಕಿನ ದಿಗ್ಗಾಂವ ಪಂಚಗೃಹ ಹಿರೇಮಠದಲ್ಲಿ ಹಮ್ಮಿಕೊಳ್ಳಲಾಗಿರುವ ದೇವಿ ಪುರಾಣ ಪ್ರವಚನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಜಗತ್ತಿನ ಇತಿಹಾಸವನ್ನು ಹೇಳಿಕೊಡುವ ದೇವಿ ಪುರಾಣ ತುಂಬಾ ವಿಶೇಷವಾಗಿದೆ. ಬೇರೆ ಎಲ್ಲಾ ಪುರಾಣಕ್ಕು ದೇವಿ ಪುರಾಣಕ್ಕು ತುಂಬಾ ವ್ಯತ್ಯಾಸವಿದೆ, ದೇವಿ ಪುರಾಣ ಕೇಳುತ್ತಿದ್ದರೆ ಮೈ ರೋಮಾಂಚನಗೊಳ್ಳುತ್ತದೆ ಇಷ್ಟೊಂದು ವಿಶೇಷವಾಗಿದೆ […]

Continue Reading

ವಾಡಿ: ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮನವಿ

ವಾಡಿ: ಪಟ್ಟಣದ ಆದಾನಿ ಒಡೆತನದ ಎಸಿಸಿ ಸಿಮೆಂಟ್ ಕಂಪನಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲು ಆಗಮಿಸಿದ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರಿಗೆ ಪಟ್ಟಣದ ಜನರ ಸಂಕಷ್ಟಕ್ಕೆ ಸ್ಪಂದಿಸಿ ಮೂಲಭೂತ ಸೌಕರ್ಯ ಒದಗಿಸುವಂತೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮನವಿ ಸಲ್ಲಿಸಿದರು. ವಾರ್ಡ್‌ ಸಂಖ್ಯೆ ಒಂದರ ಬಸವನ‌ ಖಣಿಯಲ್ಲಿ ಸುಮಾರು ಇಪ್ಪತ್ತು ವರ್ಷಗಳಿಂದ ಇರುವ ಪುರಸಭೆ ಜನಸಾಮಾನ್ಯರಿಗೆ ಮೂಲಭೂತ ಸೌಕರ್ಯ ಒದಗಿಸದೆ ಇರುವುದು ದುರಾದೃಷ್ಟ, ಬಹುತೇಕ ಕಡೆ ಸ್ಥಳೀಯರಿಗೆ ವಾಸಿಸುವ ಹಕ್ಕು ಪತ್ರ ಕೂಡಾ ಕೊಟ್ಟಿಲ್ಲ, ಅಲ್ಲಿನ ನಿವಾಸಿಗಳು ತೆರಗೆ […]

Continue Reading

ಕರೆಂಟ್‌ಗೂ ಟೋಲ್ ಮಾದರಿ ಶುಲ್ಕ: ಸ್ಮಾರ್ಟ್ ಮೀಟರ್ ಹೆಸರಲ್ಲಿ ಜನರಿಂದ ಲೂಟಿ

ಬೆಂಗಳೂರು: ಸ್ಮಾರ್ಟ್ ಮೀಟರ್ ವಿರುದ್ಧ ಬೆಂಗಳೂರಿನ ನಿವಾಸಿಗಳು ಅಸಮಾಧಾನ ಹೊರಹಾಕಿದ್ದಾರೆ. ಈಗಾಗಲೇ ಕರೆಂಟ್ ಬಿಲ್ ಹೆಚ್ಚು ಬರುತ್ತಿದ್ದು, ಅದರ ಜೊತೆಗೆ ಮತ್ತೆ ಈಗ ಲೂಟಿ ಮಾಡುವ ಪ್ಲ್ಯಾನ್ ಎಂದು ಕಿಡಿಕಾರಿದ್ದಾರೆ. ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ವ್ಯವಸ್ಥೆ ಇಂಧನ ಇಲಾಖೆ ಜಾರಿಗೊಳಿಸಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಸ್ಮಾರ್ಟ್ ಮೀಟರ್ ಅಳವಡಿಕೆ ಸಂಬಂಧ 2024ರ ಮಾ.6 ರಂದು ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಹಂತಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ಬದಲಾವಣೆ […]

Continue Reading

ಅತ್ತಿಗೆಯನ್ನು ಮಂಚಕ್ಕೆ ಕರೆದ ಮೈದುನ: ಒಪ್ಪದಿದ್ದಕ್ಕೆ ಎಲ್ಲೆಂದರಲ್ಲಿ ಕಚ್ಚಿದ ಕಾಮುಕ

ಧಾರವಾಡ: ಅತ್ತಿಗೆ ಎಂದರೆ ತಾಯಿ ಸಮಾನ ಅಂತಾರೆ. ಹೀಗಾಗಿ ಅತ್ತಿಗೆಗೆ ಯಾವಾಗಲೂ ತಾಯಿಯ ಸ್ಥಾನಮಾನ ನೀಡಲಾಗುತ್ತದೆ. ಅದಕ್ಕಾಗಿಯೆ ಅವರ ಬಗ್ಗೆ ಯಾವಾಗಲೂ ಗೌರವದ ಭಾವನೆ ಇರಬೇಕು. ಆದರೆ ಇಲ್ಲೊರ್ವ ವ್ಯಕ್ತಿ, ಅಣ್ಣನ ಹೆಂಡತಿ‌ ಮೇಲೆ ಕಣ್ಣು ಹಾಕಿ ಲೈಂಗಿಕವಾಗಿ ಸಹಕರಿಸುವಂತೆ ಕರೆದಿದ್ದಾನೆ. ಆದರೆ ಇದಕ್ಕೆ ನಿರಾಕರಿಸಿದ ಅತ್ತಿಗೆ ಮೇಲೆ ಮೈದುನ ಎಲ್ಲೆಂದರಲ್ಲಿ ಕಚ್ಚಿ ಮೃಗದ ವರ್ತನೆ ತೋರಿದ್ದಾನೆ‌. ಈ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸ ಕಟ್ಟಿ ಗ್ರಾಮದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ […]

Continue Reading

3.5 ಕೋಟಿಗೆ ಖರೀದಿಸಿದ್ದ ಅಪಾರ್ಟ್‌ಮೆಂಟ್‌ 6.6 ಕೋಟಿಗೆ ಮಾರಿದ ಅಕ್ಷಯಕುಮಾರ

ಮುಂಬೈ: ಬಾಲಿವುಡ್ ನಟ ಅಕ್ಷಯಕುಮಾರ ಅವರು ಮುಂಬೈನಲ್ಲಿರುವ ಎರಡು ಅಪಾರ್ಟ್‌ಮೆಂಟ್‌ ಅನ್ನು ದುಬಾರಿ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ. 3.5 ಕೋಟಿಗೆ ಖರೀದಿಸಿದ್ದ ಅಪಾರ್ಟ್‌ಮೆಂಟ್‌ ಅನ್ನು 6.6 ಕೋಟಿಗೆ ಮಾರಾಟ ಮಾಡಿ ಲಾಭ ಗಳಿಸಿದ್ದಾರೆ. ಮುಂಬೈನಲ್ಲಿ ಬೊರಿವಲಿಯಲ್ಲಿ ಎರಡು ಅಪಾರ್ಟ್‌ಮೆಂಟ್‌ ಮಾರಾಟ ಮಾಡುವ ಮೂಲಕ 6.6 ಕೋಟಿ ರೂ. ಗಳಿಸಿದ್ದಾರೆ. ಇವುಗಳಲ್ಲಿ ಒಂದು 5.35 ಕೋಟಿಗೆ ಮಾರಾಟವಾಗಿದೆ. ಮತ್ತೊಂದು 1.25 ಕೋಟಿಗೆ ಮಾರಾಟವಾಗಿದೆ. ಮೂಲಗಳ ಪ್ರಕಾರ, 5.35 ಕೋಟಿಗೆ ಮಾರಾಟವಾಗಿರುವ ಅಪಾರ್ಟ್‌ಮೆಂಟ್‌ ಅನ್ನು ನವೆಂಬರ್‌ 2017ರಲ್ಲಿ 2.82 ಕೋಟಿಗೆ […]

Continue Reading

ಕ್ಷಯರೋಗ ಮುಕ್ತ ಭಾರತಕ್ಕೆ ಸಮುದಾಯದ ಸಹಕಾರ ಅಗತ್ಯ

ಕಲಬುರಗಿ: ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕಫದ ಜೊತೆಗೆ ರಕ್ತ ಕಾಣಿಸುವುದು, ವಿಶೇಷವಾಗಿ ರಾತ್ರಿ ವೇಳೆ ಜ್ವರ ಬರುವುದು, ತೂಕ ಇಳಿಕೆ, ಬೆವರುವುದು, ಹಸಿವಾಗದಿರುವುದು ಕ್ಷಯರೋಗದ ಲಕ್ಷಣಗಳಾಗಿವೆ. ಇದರ ಬಗ್ಗೆ ನಿರ್ಲಕ್ಷ ಮಾಡದೆ ತಕ್ಷಣವೇ ಟಿ.ಬಿ ಕಾಯಿಲೆಯ ಪರೀಕ್ಷೆ ಮಾಡಿಸಿಕೊಂಡು, ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕು. 2030ಕ್ಕೆ ಕ್ಷಯರೋಗ ಮುಕ್ತ ಭಾರತಕ್ಕೆ ಸಮುದಾಯದ ಸಹಕಾರ ಅಗತ್ಯ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ […]

Continue Reading