ಹಂಪಿ ಉತ್ಸವ ಯುವ ಕವಿಗೋಷ್ಠಿಗೆ ವಿಜಯಭಾಸ್ಕರರೆಡ್ಡಿ ಆಯ್ಕೆ

ಸೇಡಂ: ವಿಜಯನಗರ ಜಿಲ್ಲೆಯಲ್ಲಿ ಫೆ.28 ರಂದು ನಡೆಯುವ ಪ್ರಖ್ಯಾತ ಹಂಪಿ ಉತ್ಸವದ ಯುವ ಕವಿಗೋಷ್ಠಿಗೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕವಿ, ಪತ್ರಕರ್ತ ವಿಜಯಭಾಸ್ಕರರೆಡ್ಡಿ ಅವರು ಆಯ್ಕೆಯಾಗಿದ್ದಾರೆ. ಫೆ.28 ರಿಂದ ಮಾ.2 ವರೆಗೆ ನಡೆಯಲಿರುವ ಹಂಪಿ ಉತ್ಸವದಲ್ಲಿ ಮಾರ್ಚ್ 2 ರಂದು ಬೆಳಿಗ್ಗೆ 10.30 ಕ್ಕೆ ವಿರೂಪಾಕ್ಷೇಶ್ವರ ದೇವಸ್ಥಾನ ವೇದಿಕೆಯಲ್ಲಿ ಜರುಗಲಿರುವ ಯುವ ಕವಿ ಗೋಷ್ಠಿಯಲ್ಲಿ ವಿಜಯಭಾಸ್ಕರರೆಡ್ಡಿ ತಮ್ಮ ಕವಿತೆ ವಾಚಿಸಲಿದ್ದಾರೆ. ವಿಮರ್ಶಕ ಡಾ.ವೆಂಕಟಗಿರಿ ದಳವಾಯಿ ಉದ್ಘಾಟಿಸಲಿದ್ದಾರೆ, ಸಾಹಿತಿ ಎಸ್.ವಿ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.

Continue Reading

ಮಲಘಾಣ ಶಾಲೆಯ 21 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕಾಳಗಿ: ತಾಲೂಕಿನ ಮಲಘಾಣ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಂಜೆ 5 ವಿದ್ಯಾರ್ಥಿಗಳಲ್ಲಿ ಹೊಟ್ಟೆನೋವು, ಕಸಿವಿಸಿ, ತಲೆಸುತ್ತು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು, ಕಾಳಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಶಾಲೆಗೆ ಬಂದಿರುವ 16 ವಿದ್ಯಾರ್ಥಿಗಳಿಗೆ ಪುನ: ಅದೆ ತರಹದ ಹೊಟ್ಟೆ ನೋವು, ಕಸಿವಿಸಿ, ತಲೆಸುತ್ತು ಈ ಲಕ್ಷಣಗಳು ಕಾಣಿಸಿಕೊಂಡು ಅಸ್ವಸ್ಥರಾಗಿದ್ದು, ತಕ್ಷಣ ಮುಖ್ಯಗುರುಗಳು, ಶಿಕ್ಷಕರು. ಪಾಲಕರು ಮಕ್ಕಳಿಗೆ ಕಾಳಗಿ ಸಮೂದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ […]

Continue Reading

ಸಾಮ್ರಾಟ ಅಶೋಕ ಸಮಾಜಮುಖಿ ಅರಸ

ಚಿತ್ತಾಪುರ: ಇಂದ್ರಿಯಗಳ ಸಂಯಮ, ಭಾವಶುದ್ಧಿ ಚಿಂತನೆ, ಕೃತಜ್ಞತಾ ಭಾವ, ದೃಢ ಭಕ್ತಿ, ದಯೆ, ದಾನ, ಆತ್ಮ ಶುದ್ಧತೆ, ಸತ್ಯ, ಸೇವಾಗುಣದಂತಹ ತತ್ವಗಳನ್ನು ಅಳವಡಿಸಿಕೊಂಡು ಎಲ್ಲಾ ಪ್ರಜೆಗಳಿಗೆ ಸಮಾನವಾಗಿ ಕಂಡ ಸಾಮ್ರಾಟ ಅಶೋಕ ಅಪರೂಪದ ಅರಸನಾಗಿದ್ದರು ಎಂದು ಸಮಾಜ ಸೇವಕ, ಚಿಂತಕ ಡಾ.ಸುನೀಲಕುಮಾರ ಎಚ್ ವಂಟಿ ಹೇಳಿದರು. ತಾಲೂಕಿನ ಸನ್ನತಿ ಗ್ರಾಮದ ಬುದ್ಧ ವಿಹಾರದ ಅಶೋಕ ಶಾಸನದ ಸ್ಥಳಕ್ಕೆ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಐತಿಹಾಸಿಕ ಕ್ಷೇತ್ರಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-11’ರಲ್ಲಿ ಮಾತನಾಡಿದ […]

Continue Reading

ಕ್ರಿಕೆಟ್ ಆಡುತ್ತಾ ಜಾರಿ ಬಿದ್ದ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ

ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದಾಗ ರನೌಟ್​ನಿಂದ ಬಚಾವಾಗಲು ಯತ್ನಿಸಿದ ವೇಳೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕುಮಾರ ರೈ ಜಾರಿಬಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ವೇಳೆ ಶಾಸಕರು ಜಾರಿಬಿದ್ದರು. ಬಂಟರ ಸಂಘದ ವತಿಯಿಂದ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ ಶಾಸಕ ಅಶೋಕುಮಾರ ರೈ ಕ್ರಿಕೆಟ್ ಆಡಿದರು. ಬಿದ್ದ ಶಾಸಕರನ್ನು ಸಹ ಆಟಗಾರರು ಎಬ್ಬಿಸಿದರು.

Continue Reading

Google Pay, PhonePe ಬಳಕೆದಾರರಿಗೆ ಬಿಗ್ ಶಾಕ್: ಇನ್ಮುಂದೆ UPI ಗೂ ಶುಲ್ಕ ಪಾವತಿಸಬೇಕಂತೆ

ಇಂದಿನ ಅತ್ಯಾಧುನಿಕ ಯುಗದಲ್ಲಿ ಫೋನ್ ಪೇ ಸೇರಿದಂತೆ ಎಲ್ಲಾ ರೀತಿಯ ಪೇಗಳಲ್ಲಿ (Digital Pay) ಬಳಸುವ UPI (Unified Payments Interface) ಗೂ ಕೂಡ ಇನ್ನುಮುಂದೆ ಕಮರ್ಷಿಯಲ್ ಆಗಲಿದೆ, ಎಲ್ಲಿಯಾದರೂ ಪೇ ಮಾಡಬೇಕಾದರೆ ಶುಲ್ಕ ವಿಧಿಸಲಿದೆ ಎಂದು ವರದಿಯಾಗಿದೆ. ಪೋನ್‌ನಂತೆ ಯುಪಿಐ ಕೂಡ ನಮ್ಮ ಜೀವನದಅಂಗವಾಗಿದೆ. ಒಬ್ಬ ವ್ಯಕ್ತಿಯ ದೈನಂದಿನ ವಹಿವಾಟಿನ ಶೇ.60 ರಿಂದ 80ರಷ್ಟು ಯುಪಿಐ ಮೂಲಕ ಪಾವತಿ ಮಾಡುತ್ತಾನೆ. ಭಾರತದಲ್ಲಿ ಪ್ರತಿದಿನ ಕೋಟ್ಯಾಂತರ ಯುಪಿಐ ವಹಿವಾಟುಗಳು ನಡೆಯುತ್ತವೆ. Paytm, Google Pay ಮತ್ತು PhonePe […]

Continue Reading

ಇನ್ನುಮುಂದೆ 10 ನಿಮಿಷದಲ್ಲಿ ಮುಗಿಯುತ್ತೆ ಜಮೀನು ಸರ್ವೆ

ಬೆಂಗಳೂರು: ಜಮೀನು ಸರ್ವೆ ಮಾಡುವ ವಿಧಾನದಲ್ಲಿ ಕಂದಾಯ ಇಲಾಖೆಯು ಐತಿಹಾಸಿಕ ಬದಲಾವಣೆ ತಂದಿದೆ. ದಶಕಗಳಿಂದ ಚಾಲ್ತಿಯಲ್ಲಿದ್ದ ಚೈನ್ ಹಿಡಿದು ಜಮೀನು ಅಳತೆ ಮಾಡುವ ಪದ್ಧತಿಗೆ ಗುಡ್‌ಬೈ ಹೇಳಿದೆ. ಚೈನ್‌ ಬದಲಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್‌ ಭೂ ಮಾಪಕರಿಗೆ ವಿತರಿಸಿದೆ. ಸರ್ವೆ ಆಯುಕ್ತರ ಕಚೇರಿಯಲ್ಲಿ ಫೆ.20 ರಂದು ಗುರುವಾರ ನಡೆದ ಕಾರ್ಯಕ್ರಮದಲ್ಲಿ 465 ಭೂ ಮಾಪಕರಿಗೆ ಈ ಆಧುನಿಕ ತಂತ್ರಜ್ಞಾನವುಳ್ಳ ರೋವರ್ ಅನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ವಿತರಿಸಿದರು. ಸರ್ವೆ ಕೆಲಸವನ್ನು ಮೊದಲಿನಿಂದಲೂ ಚೈನ್ ಹಿಡಿದು ಭೂಮಿ […]

Continue Reading

ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿ ಮಾತ್ರೆ ಕೇಳಿದ ಸೊಸೆ

ಬೆಂಗಳೂರು: ಅತ್ತೆಯನ್ನು ತಾಯಿ ಸ್ಥಾನದಲ್ಲಿ ನೋಡುತ್ತಾರೆ. ಆದರೆ ನಗರದಲ್ಲಿ ಅತ್ತೆಯನ್ನು ಕೊಲ್ಲಲು ಸೊಸೆ ವೈದ್ಯರ ಬಳಿ ಮಾತ್ರೆ ಕೇಳಿದ ಘಟನೆ ನಡೆದಿದೆ. ಡಾಕ್ಟರ್ ಒಬ್ಬರಿಗೆ ನನ್ನ ಅತ್ತೆಯನ್ನು ಸಾಯಿಸಲು ಮಾತ್ರೆ ಬರೆದುಕೊಡಿ ಎಂದು ಕೇಳಿದ್ದು, ಡಾಕ್ಟರ್ ಒಂದು ಕ್ಷಣ ಶಾಕ್ ಆಗಿದ್ದಾರೆ. ಅತ್ತೆ ಜೊತೆಗಿನ ಜಗಳಕ್ಕೆ ರೋಸಿ ಹೋದ ಸೊಸೆಯೊಬ್ಬರು, ಅತ್ತೆಯನ್ನು ಕೊಲ್ಲುವ ಪ್ಲ್ಯಾನ್‌ ಮಾಡಿದ್ದಾರೆ. ಬಳಿಕ ಡಾಕ್ಟರ್ ಸುನೀಲಕುಮಾರ ಎನ್ನುವವರಿಗೆ ವಾಟ್ಸಾಪ್‌ನಲ್ಲಿ ಸಂಪರ್ಕಿಸಿದ್ದಾರೆ. ನಮ್ಮ ಅತ್ತೆ ತುಂಬಾ ಹಿಂಸೆ ಕೊಡುತ್ತಿದ್ದಾರೆ. ಅವರಿಗೆ ವಯಸ್ಸಾಗಿದೆ. ಅವರನ್ನು ಹೇಗೆ ಸಾಯಿಸೋದು […]

Continue Reading

ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಬಂದ್: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿತರಣೆ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 1 ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರದ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶ (ಅನ್‌ಸ್ಯಾಚುರೇಟೆಡ್ ಫ್ಯಾಟ್) ಹೆಚ್ಚಾಗಿದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದಿದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿತರಣೆ […]

Continue Reading

ಕಾರಿನಲ್ಲಿ ಸಾಗಿಸುತ್ತಿದ್ದ 40 ಲಕ್ಷ ಮೌಲ್ಯದ ಗಾಂಜಾ ವಶ: ಇಬ್ಬರ ಬಂಧನ

ಕಲಬುರಗಿ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಂದಾಜು 40 ಲಕ್ಷ ರೂ ಮೊತ್ತದ ಗಾಂಜಾ ವಶಪಡಿಸಿಕೊಂಡು, ಸಾಗಾಟಕ್ಕೆ ಬಳಸಿದ 5 ಲಕ್ಷ ರೂ ಮೊತ್ತದ ಕಾರು ಹಾಗೂ 50 ಸಾವಿರ ಮೌಲ್ಯದ ಬೈಕ್ ವಶಪಡಿಸಿಕೊಳ್ಳಲಾಗಿದೆ ಮತ್ತು ಇಬ್ಬರನ್ನು ಬಂಧಿಸಲಾಗಿದೆ , ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲಿ ಗ್ರಾಮದ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಲಕ್ಷ್ಮಣ ನಾಯಕ ತಾಂಡಾದ ಹತ್ತಿರ ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿರುವ […]

Continue Reading

ಕಳ್ಳರ ಹಾವಳಿಗೆ ಒನಕೆ ಒಬವ್ವನ ರೂಪ ತಾಳಿದ ಮಹಿಳೆಯರು ಗಸ್ತು ಸಂಚಾರ

ಬಾಗಲಕೋಟೆ: ಮನೆಗಳ್ಳರ ಹಾವಳಿ‌ಗೆ ಬೇಸತ್ತ ಮಹಿಳೆಯರು ಒನಕೆ ಓಬವ್ವನ ರೂಪ ತಾಳಿ ಗಮನ ಸೆಳೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ‌ ಮುಧೋಳ ನಗರದಲ್ಲಿ ನಡೆದಿದೆ. ನಗರದ ಜಯನಗರ ನಿವಾಸಿಗಳೇ ಓಬವ್ವನ ರೂಪ ತಾಳಿದ ಮಹಿಳೆಯರು. ಕಳ್ಳರ‌ ಕಾಟದಿಂದ ಬೇಸತ್ತ ಮಹಿಳೆಯರು, ರಾತ್ರಿಪೂರ್ತಿ ಬಡಿಗೆ ಹಿಡಿದು ಬಡಾವಣೆಯಲ್ಲಿ ಗಸ್ತು ತಿರುಗಿ ಗಮನ ಸೆಳೆದಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಜಯನಗರದಲ್ಲಿ ಎರಡು ಮನೆಗಳ ಕಳ್ಳತನವಾಗಿದ್ದರೆ ಜಿಲ್ಲೆಯಲ್ಲಿ 10ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿವೆ. ಇದರಿಂದ ಅಲರ್ಟ್ ಆದ ಮಹಿಳೆಯರು ಪೊಲೀಸರನ್ನು ನಂಬದೆ, […]

Continue Reading