ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು

ಹಾಸನ: ದೇವಾಲಯದ ಕಬ್ಬಿಣದ ಬಾಗಿಲು ತೆರೆದು ಕಲ್ಲಿನ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಬೇಲೂರು ಪುರಸಭೆ ಆವರಣದ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಪ್ರತಿನಿತ್ಯ ಪೂಜೆ ಕೈಂಕರ್ಯಗಳು ನಡೆಯುತ್ತವೆ. ಪ್ರತಿನಿತ್ಯ ವ್ಯಾಪಾರಿಗಳು ಬೆಳಗ್ಗೆ ಗಣೇಶ ಮೂರ್ತಿಗೆ ಕೈಮುಗಿದು ವ್ಯಾಪಾರ ಆರಂಭಿಸುತ್ತಾರೆ. ಶನಿವಾರ ರಾತ್ರಿ ಪುರಸಭೆ ಗೇಟ್‌ಗೆ ಬೀಗ ಹಾಕಿಕೊಂಡು ತೆರಳಿದ್ದರು. ಇಂದು ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿ […]

Continue Reading

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ 2026ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣದಲ್ಲಿ www.kseab.karnataka.gov.in ವೇಳಾಪಟ್ಟಿ ಪ್ರಕಟಿಸಲಾಗಿದೆ. 2026ರ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 09 ರವರೆಗೆ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಯನ್ನು ಮಂಡಲಿಯ ಇ-ಮೇಲ್ ವಿಳಾಸ: chairpersonkseab@gmail.com ಗೆ ಹಾಗೂ ಹಾರ್ಡ್ ಪ್ರತಿಯನ್ನು […]

Continue Reading

ಜನರ ಸಂಕಟಕ್ಕೆ ಸ್ಪಂದಿಸಲು ಮುಖ್ಯಾಧಿಕಾರಿಗೆ ಬಿಜೆಪಿ ಆಗ್ರಹ

ವಾಡಿ: ಪಟ್ಟಣದ ಪುರಸಭೆ ಜನಸಾಮಾನ್ಯರಿಗೆ ಮೂಲಸೌಕರ್ಯ ಒದಗಿಸುವಲ್ಲಿ ವಿಫಲವಾಗುತ್ತಿದೆ, ಇದನ್ನು ಸರಿಪಡಿಸಿ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮತ್ತು ಮುಖಂಡರು ಆಗ್ರಹಿಸಿದರು. ಅಭಿವೃದ್ಧಿ ಬಗ್ಗೆ ಕೇಳಿದರೆ ಜನಪ್ರತಿನಿಧಿಗಳಿಲ್ಲದ ಕಾರಣ ಕೋಟ್ಯಾಂತರ ರೂ ವಾಪಸ್ ಹೋಗಿದೆ ಅಂತಿರಾ, ಹೀಗಾದರೆ ಇಲ್ಲಿನ ಜನರ ಸಂಕಟಕ್ಕೆ ಪರಿಹಾರ ಯಾವಾಗ ಎಂದರು. ಕುಡಿಯುವ ನೀರು 3-4 ದಿನಗಳಿಗೊಮ್ಮೆ ರಾಡಿ ನೀರು ಸರಬರಾಜು, ನೀರು ಸರಬರಾಜಾದರೆ ಪೈಪ್’ಗಳ ಸೋರಿಕೆ, ಅಕಾಲಿಕ ಮಳೆಯಿಂದ ಚರಂಡಿ ನೀರು ರಸ್ತೆ ಹಾಗೂ ಮನೆಯೊಳಗೆ, ಅಸಮರ್ಪಕ ಬಿದಿ ದೀಪಗಳು, […]

Continue Reading

ಸೆ.22 ರಿಂದ ಜಾತಿ ಜನಗಣತಿ ಆರಂಭ: ಸರ್ಕಾರದಿಂದ ಅಧಿಕೃತ ಆದೇಶ ಜಾರಿ

ಬೆಂಗಳೂರು: ಜಾತಿ ಜನಗಣತಿ ನಡೆಯುವುದು ಖಚಿತವಾಗಿದ್ದು ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ. ಸೆ.22 ರಿಂದ ಅ.7 ರವರೆಗೆ ಸಮೀಕ್ಷೆ ನಡೆಸಲಾಗುವುದು ಎಂದು ಆದೇಶಲ್ಲಿ ತಿಳಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ನಡೆಸಲಾಗುತ್ತಿದ್ದು ಸಮೀಕ್ಷೆಗೆ ಸಿದ್ಧರಿರುವಂತೆ ರಾಜ್ಯದ ಜನತೆಗೆ ತಿಳಿಸಲಾಗಿದೆ. ಆದರೆ ಈಗ ಎದ್ದಿರುವ ಗೊಂದಲ ಬಗೆಹರಿಸುವ ಬಗ್ಗೆ ಆದೇಶದಲ್ಲಿ ಯಾವುದೆ ಸ್ಪಷ್ಟನೆ ನೀಡಿಲ್ಲ. ಈಗಾಗಲೇ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ […]

Continue Reading

ರಾವೂರ: ಸೆ.21 ರಿಂದ ಸಿದ್ದಲಿಂಗ ಶ್ರೀಗಳ ಮೌನಾನುಷ್ಠಾನ

ರಾವೂರ: ನವರಾತ್ರಿ ಉತ್ಸವದ ಅಂಗವಾಗಿ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಸೆ.21 ರಿಂದ ಮೌನ ಅನುಷ್ಠಾನ ಕೈಗೊಳ್ಳಲಿದ್ದಾರೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ.ಗುಂಡಣ್ಣ ಬಾಳಿ ತಿಳಿಸಿದ್ದಾರೆ. ಆಲೂರ ಗ್ರಾಮದ ಶಿಖರೇಶ್ವರ ದೇವಸ್ಥಾನದಲ್ಲಿ ಸೆಪ್ಟೆಂಬರ್ 21 ರಂದು ರವಿವಾರ ರಾತ್ರಿ ಮೌನ ಅನುಷ್ಠಾನ ಪ್ರಾರಂಭಿಸುವರು. ಅಕ್ಟೋಬರ್ 2 ರಂದು ದಸರಾ ಹಬ್ಬದ ದಿನ ಗುರುವಾರ ಮೌನ ಅನುಷ್ಠಾನ ಮಂಗಲವಾಗಿ ಅಂದು ಸಂಜೆ 5.30 ಕ್ಕೆ ಪೂಜ್ಯರು ರಾವೂರ ಸಿದ್ದಲಿಂಗೇಶ್ವರ ಸಂಸ್ಥಾನ ಮಠದಲ್ಲಿ […]

Continue Reading

ಬಿದಿರಿನಿಂದ ಆರ್ಥಿಕ ಸದೃಢತೆ ಸಾಧ್ಯ: ಎಚ್.ಬಿ ಪಾಟೀಲ

ಕಲಬುರಗಿ: ಬಹುಪಯೋಗಿಯಾದ ಬಿದರಿನಿಂದ ಆರ್ಥಿಕವಾಗಿ ಸದೃಢವಾಗಲು ಸಾಧ್ಯ, ರೈತರು ಇದರ ಬಗ್ಗೆ ಚಿತ್ತ ಹರಿಸುವುದು ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಬಿದಿರು ದಿನಾಚರಣೆ’ಯನ್ನು ಬಿದಿರಿನ ಗಿಡಗಳಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಬಿದಿರು ಅರಣ್ಯ ಬೆಳೆಯಾಗಿದ್ದು, ಬುಟ್ಟಿ, ಪೀಠೋಪಕರಣಗಳ ತಯಾರಿಕೆ, ಕೃಷಿ ಉಪಕರಣಗಳ ತಯಾರಿಕೆ, ಮನೆ ನಿರ್ಮಾಣಕ್ಕೆ ಸಲಕರಣೆ, ಜೊತೆಗೆ […]

Continue Reading

ಜಲ ಸಂರಕ್ಷಣೆ, ಸೂಕ್ತ ನಿರ್ವಹಣೆ ಅಗತ್ಯ: ಎಚ್.ಬಿ ಪಾಟೀಲ್

ಕಲಬುರಗಿ: ಸಕಲ ಜೀವರಾಶಿಗಳಿಗೆ ಆಸರೆಯಾದ ಜಲವನ್ನು ಹಾಳು ಮಾಡದೆ, ಸಂರಕ್ಷಣೆ ಮತ್ತು ಸೂಕ್ತ ನಿರ್ವಹಣೆ ಮಾಡಬೇಕು ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದಲ್ಲಿನ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಜಲ ಮೇಲ್ವಿಚಾರಣೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾಗತಿಕ ನೀರಿನ ಬಿಕ್ಕಟ್ಟಿನ ಬಗ್ಗೆ ಜಾಗೃತಿ ಮೂಡಿಸುವುದು, ಜಲ ಸಂರಕ್ಷಣೆಯ ಬಗ್ಗೆ ಕ್ರಮ ತೆಗೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸುವ ಕಾರ್ಯ ಇನ್ನೂ ಹೆಚ್ಚಿನ ಮಟ್ಟದಲ್ಲಿ […]

Continue Reading

ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ: ತನಿಖೆಗೆ ಆದೇಶಿಸಿದ ಹೈಕೋರ್ಟ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ. ಹಳೆಯ ತಾಮ್ರ ಮತ್ತು ಚಿನ್ನದ ಲೇಪನ ಮೂರ್ತಿಗಳ ತೂಕದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಆಯುಕ್ತರು ಆರೋಪಿಸಿದ್ದಾರೆ. 2019ರಲ್ಲಿ ದೇವರ ಮೂರ್ತಿಗಳಿಗೆ ಪುನರ್‌ಲೇಪನ ಮಾಡಲಾಗಿತ್ತು. ಈ ವೇಳೆ ತಾಮ್ರದ ಮೂರ್ತಿಗೆ ಹೊದಿಸಿದ್ದ ಚಿನ್ನದ ಕವಚದಲ್ಲಿ 4.5 ಕೆಜಿ ಚಿನ್ನ ಕಳ್ಳತನವಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೈಕೋರ್ಟ್‌ […]

Continue Reading

ಕೇರಳದಲ್ಲಿ ಭೀತಿ ಹುಟ್ಟಿಸಿದ ಮೆದುಳು ತಿನ್ನುವ ಅಮೀಬಾ

ವಿಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ಹೊಸ ಹೊಸ ಸಂಶೋಧನೆಗಳು ಅಚ್ಚರಿ ಮೂಡಿಸುತ್ತಿದ್ದರೆ, ಹೊಸ ಮಾದರಿಯ ವೈರಸ್‌ಗಳು ವಿಶ್ವದಾದ್ಯಂತ ಜನರ ನಿದ್ದೆಗೆಡಿಸಿವೆ. ಕೆಲ ದಿನಗಳ ಹಿಂದೆ ಚೀನಾದಲ್ಲಿ ಪತ್ತೆಯಾಗಿದ್ದ ನ್ಯುಮೋನಿಯಾ ಮಾದರಿಯ ವೈರಸ್ ವಿಶ್ವವನ್ನೆ ಆತಂಕಕ್ಕೆ ದೂಡಿತ್ತು. ನಿರ್ಲಕ್ಷ್ಯ ವಹಿಸಿದರೆ ಇದರಿಂದ ಭಾರತಕ್ಕೂ ಸಂಕಷ್ಟ ಕಟ್ಟಿಟ್ಟಬುತ್ತಿ ಎಂದು ಸಾಂಕ್ರಾಮಿಕ ರೋಗ ತಜ್ಞರು ಎಚ್ಚರಿಸಿದ್ದರು. ಅದಕ್ಕಿಂತಲೂ ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಕಾಣಿಸಿಕೊಂಡಿರುವ ಮೆದುಳು ತಿನ್ನುವ ಅಮೀಬಾ ಸೋಂಕು ಜನರ ನಿದ್ದೆಗೆಡಿಸಿದೆ. 1962ರಲ್ಲಿ ಕಾಣಿಸಿಕೊಂಡಿದ್ದ ಈ ಸೋಂಕು ಭಾರತದಲ್ಲಿ ಮೊದಲು ಕಾಣಿಸಿಕೊಂಡಿದ್ದು, ಹರಿಯಾಣದ […]

Continue Reading

ವಾಡಿ: ಪ್ರಧಾನಿ ಮೋದಿಯವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ

ವಾಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಮುಖಂಡರು ಪಟ್ಟಣದ ಶಕ್ತಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜೀವನದುದ್ದಕ್ಕೂ ದೇಶದ ಒಳಿತಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆರೋಗ್ಯದಿಂದ ನೂರಾರು ವರ್ಷಗಳು ಬಾಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೆವೆ ಎಂದರು. ಪುರಸಭೆ ಮಾಜಿ ವಿರೋಧ ಪಕ್ಷದ ನಾಯಕ ಭೀಮಶಾ ಜಿರೋಳ್ಳಿ ಮಾತನಾಡಿ, ದೇಶದ ಕಟ್ಟಕಡೆಯ ವ್ಯಕ್ತಿಯೂ ನಿರ್ಭೀತಿಯಿಂದ ನೆಮ್ಮದಿಯ ಜೀವನ […]

Continue Reading