ಯುಪಿಐ ದೈನಂದಿನ ವಹಿವಾಟು ಮಿತಿ 10 ಲಕ್ಷದವರೆಗೆ ಏರಿಕೆ

ನವದೆಹಲಿ: ಡಿಜಿಟಲ್‌ ಪಾವತಿಯಲ್ಲಿ ಕ್ರಾಂತಿಗೆ ಕಾರಣವಾದ ಯುಪಿಐ ನಿಯಮದಲ್ಲಿ ಸರ್ಕಾರ ಕೆಲ ಬದಲಾವಣೆ ಮಾಡಿದ್ದು, ಸೆ.15ರಿಂದ ಈ ಬದಲಾವಣೆ ಜಾರಿಗೆ ಬಂದಿದೆ. ಬದಲಾವಣೆ ಅನ್ವಯ ಸಾಲ, ಇಎಂಐ, ಬಂಡವಾಳ ಮಾರುಕಟ್ಟೆ ಹೂಡಿಕೆ, ವಿಮಾ ಕಂತುಗಳ ಪಾವತಿಯ ದೈನಂದಿನ ಮಿತಿಯನ್ನು ದಿನಕ್ಕೆ 10 ಲಕ್ಷ ರೂ.ಗೆ ಏರಿಸಲಾಗಿದೆ. ಒಂದು ಬಾರಿಗೆ 5 ಲಕ್ಷ ರೂ. ಮೊತ್ತದ ವಹಿವಾಟು ನಡೆಸಬಹುದು. ಉಳಿದಂತೆ ಕ್ರೆಡಿಟ್‌ ಕಾರ್ಡ್‌ ಬಿಲ್‌ ಪಾವತಿಯನ್ನು ಒಂದು ಬಾರಿಗೆ 5 ಲಕ್ಷ ರೂ.ನಂತೆ ದಿನಕ್ಕೆ ಗರಿಷ್ಠ 6 ಲಕ್ಷ […]

Continue Reading

ಬೀದರ್: 3ನೇ ಮಹಡಿಯಿಂದ ತಳ್ಳಿ ಮಲ ಮಗಳನ್ನು ಕೊಲೆ ಮಾಡಿದ ಮಹಿಳೆ

ಬೀದರ್: ಆಟ ಆಡಿಸುವ ನೆಪದಲ್ಲಿ ಮಲ ಮಗಳನ್ನು ಟೆರೇಸ್ ಮೇಲೆ ಕರೆದುಕೊಂಡು ಹೋಗಿ ಮೂರನೇ ಮಹಡಿಯಿಂದ ಮಲತಾಯಿ ತಳ್ಳಿ ಕೊಲೆ ಮಾಡಿದ ಅಮಾನವೀಯ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ. 7 ವರ್ಷದ ಸಾನ್ವಿ ಮೃತ ಬಾಲಕಿ (ಮಲಮಗಳು) ಹಾಗೂ ಆರೋಪಿಯನ್ನು ರಾಧಾ (ಮಲತಾಯಿ) ಎಂದು ಗುರುತಿಸಲಾಗಿದೆ. ಆ.27ರಂದು ಮಲತಾಯಿ ರಾಧಾ ಬಾಲಕಿಗೆ (ಮಲಮಗಳು) ಆಟ ಆಡಿಸುವ ನೆಪದಲ್ಲಿ 3ನೇ ಮಹಡಿಗೆ ಕರೆದುಕೊಂಡು ಹೋಗಿದ್ದಳು. ಆ ವೇಳೆ ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು. ಎಲ್ಲರಿಗೂ […]

Continue Reading

ರಾಜ್ಯದಲ್ಲಿ 3 ದಿನ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 16 ಮತ್ತು 17ರಂದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೆ.18 ರಂದು ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಗ್ರಾಮಾಂತರ, […]

Continue Reading

ಅಂಬುಲೆನ್ಸ್‌ಗೆ ದಾರಿ ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

ಧಾರವಾಡ: ಅಂಬುಲೆನ್ಸ್‌ಗೆ ಎಷ್ಟೋ ಜನ ದಾರಿ ಬಿಟ್ಟುಕೊಡುವುದಿಲ್ಲ. ಇನ್ನು ಸಿಎಂ ಕಾರು ಬರುವಾಗ ಅಂಬುಲೆನ್ಸ್‌ಗೆ ದಾರಿ ಬಿಟ್ಟುಕೊಡುವುದಿಲ್ಲ, ಟ್ರಾಫಿಕ್‌ನಲ್ಲೆ ಅಂಬುಲೆನ್ಸ್ ಸಿಲುಕುತ್ತೆ ಎಂದು ದೂರಿದವರೆ ಹೆಚ್ಚು. ಆದರೆ ಸಿಎಂ ಸಿದ್ದರಾಮಯ್ಯ, ಅಂಬುಲೆನ್ಸ್‌ಗೆ ದಾರಿ ಮಾಡಿಕೊಡುವ ಮೂಲಕ ಅಪವಾದದಿಂದ ಮುಕ್ತರಾಗಿದ್ದಾರೆ. ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಅಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುವಾಗ ದಾರಿ ಬಿಟ್ಟುಕೊಟ್ಟಿದ್ದಾರೆ ಸಿಎಂ ಸಿದ್ದರಾಮಯ್ಯ. ಧಾರವಾಡ ಕೃಷಿ ವಿವಿಯ ಕೃಷಿ ಮೇಳ ಉದ್ಘಾಟನೆ ಕಾರ್ಯಕ್ರಮ ಮುಗಿಸಿ ಹುಬ್ಬಳ್ಳಿಗೆ ವಾಪಸ್ ಆಗುತ್ತಿದ್ದ ವೇಳೆ ಧಾರವಾಡ ನಗರದ ಎನ್‌ಟಿಟಿಎಫ್ ಬಳಿ […]

Continue Reading

ಸ್ಯಾಂಡಲ್‌ವುಡ್‌ನ ಬುದ್ಧಿವಂತನಿಗೂ ಹ್ಯಾಕರ್‌ ಕಾಟ: ವಿಡಿಯೋ ಹಂಚಿಕೊಂಡ ಉಪ್ಪಿ ದಂಪತಿ

ಬೆಂಗಳೂರು: ಇತ್ತೀಚೆಗೆ ಮೊಬೈಲ್ ಹ್ಯಾಕರ್‌ಗಳ ಕಾಟ ಹೆಚ್ಚಾಗಿದೆ. ಈ ಬಿಸಿ ಈಗ ಸ್ಯಾಂಡಲ್‌ವುಡ್‌ನ ಬುದ್ಧಿವಂತನಿಗೂ ತಟ್ಟಿದೆ. ಉಪೇಂದ್ರ ಹಾಗೂ ಪ್ರಿಯಾಂಕಾ ದಂಪತಿ ಬೆಳ್ಳಂಬೆಳಗ್ಗೆ ವೀಡಿಯೋ ಮೂಲಕ ತಮ್ಮ ಮೊಬೈಲ್ ಹ್ಯಾಕ್ ಆಗಿರುವ ವಿಚಾರ ಬಹಿರಂಗಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ನಮ್ಮಿಬ್ಬರ ಫೋನ್ ಹ್ಯಾಕ್ ಆಗಿದೆ. ಯಾರಾದರೂ ನಮ್ಮ ಹೆಸರಲ್ಲಿ ಹಣ ಕೇಳಿದರೆ ಕೊಡಬೇಡಿ, ಅದಕ್ಕೂ ಮುನ್ನ ಅನೌನ್ಸ್ ಮಾಡ್ತಿದ್ದೆವೆ. ಮುಂದೆ ಪೊಲೀಸರಿಗೆ ದೂರು ಕೊಡುತ್ತೆವೆ ಎಂದಿದ್ದಾರೆ ದಂಪತಿ. ಫೋನ್ ಹ್ಯಾಕ್ ಆಗಿದ್ದು ಹೇಗೆ ?ಆನ್‌ಲೈನ್‌ನಲ್ಲಿ ವಸ್ತುವೊಂದನ್ನು […]

Continue Reading

ಜೇವರ್ಗಿ ಪುರಸಭೆಯಲ್ಲಿ ಗೋಲ್ಮಾಲ್: 3 ವರ್ಷದಲ್ಲಿ 188 ನಕಲಿ ಖಾತೆಗಳು ಪತ್ತೆ

ಕಲಬುರಗಿ: ಇತ್ತೀಚೆಗಷ್ಟೇ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಗೋಲ್ಮಾಲ್ ಪ್ರಕರಣ ವರದಿಯಾದ ಬೆನ್ನಲ್ಲೆ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ಜೇವರ್ಗಿ ಪುರಸಭೆಯಲ್ಲಿ 3 ವರ್ಷದಲ್ಲಿ 188 ನಕಲಿ ಖಾತೆಗಳು ಪತ್ತೆಯಾಗಿದ್ದು, 100ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ. ಜಮೀನು, ನಿವೇಶನ ಮತ್ತು ಕಮರ್ಷಿಯಲ್ ಅಂಗಡಿಗಳ ನಕಲಿ ಖಾತೆಗಳ ನೋಂದಣಿ ತಡೆಯಲು ಸರ್ಕಾರ ಹಲವು ಕಠಿಣ ನಿಯಮ ಜಾರಿಗೆ ತರುತ್ತಿದೆ. ಆದರೆ ಜೇವರ್ಗಿ ಪುರಸಭೆಯಲ್ಲಿ ಅಧಿಕಾರಿಗಳ ಲಂಚಗುಳಿತನಕ್ಕೆ ನಕಲಿ ಖಾತೆಗಳ ಪ್ರಕರಣ ಹೆಚ್ಚಾಗಿದೆ. ಜೇವರ್ಗಿ ಪಟ್ಟಣದ ಶಾಂತಿ […]

Continue Reading

ಹ್ಯಾಂಡ್‌ಶೇಕ್ ನೀಡದಿದ್ದಕ್ಕೆ ಮುಜುಗರ: ಭಾರತದ ವಿರುದ್ಧ ಎಸಿಸಿಗೆ ದೂರು ನೀಡಿದ ಪಾಕ್‌

ದುಬೈ: ಇಲ್ಲಿ ನಡೆದ ಏಷ್ಯಾ ಕಪ್ 2025 ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಗೆದ್ದು ಬೀಗಿದೆ. ಟಾಸ್ ಸಮಯದಲ್ಲಿ ಮತ್ತು ಪಂದ್ಯದ ನಂತರ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಪಾಕ್‌ ತಂಡದ ನಾಯಕ ಸಲ್ಮಾನ್ ಆಘಾ ಅವರನ್ನು ನಿರ್ಲಕ್ಷಿಸಿ, ಹ್ಯಾಂಡ್‌ಶೇಖ್‌ ಸಹ ಮಾಡಲಿಲ್ಲ. ಈ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಟೀಂ ಇಂಡಿಯಾ ನಾಯಕನ ದಿಟ್ಟತನದಿಂದ ಮುಜುಗರಕ್ಕೊಳಗಾದ ಪಾಕಿಸ್ತಾನ ತಂಡದ ವ್ಯವಸ್ಥಾಪಕ ನವೀದ್ ಅಖ್ತರ್ ಚೀಮಾ, ಭಾರತೀಯ ತಂಡದ ವಿರುದ್ಧ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ಗೆ ಅಧಿಕೃತವಾಗಿ ದೂರು […]

Continue Reading

ಅಪ್ಪ-ಅಮ್ಮನ ಜಗಳಕ್ಕೆ ಮಕ್ಕಳು ಬಲಿ: ತಂದೆ ನೇಣಿಗೆ ಶರಣು, ಪ್ರಾಣಪಾಯದಿಂದ ತಾಯಿ ಪಾರು

ಬೆಂಗಳೂರು ಗ್ರಾಮಾಂತರ: ಗಂಡ-ಹೆಂಡತಿ ಜಗಳಕ್ಕೆ ಇಬ್ಬರು ಮಕ್ಕಳು ಬಲಿಯಾಗಿರುವ ಘಟನೆ ಹೊಸಕೋಟೆಯ ಗೊಣಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಲ್ಲದೆ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಂಡ ಶಿವು, ಮಗಳು ಚಂದ್ರಕಲಾ, ಮಗ ಉದಯ ಸೂರ್ಯ ಸಾವನ್ನಪ್ಪಿದ್ದಾರೆ. ಶಿವು ಪತ್ನಿ ಮಂಜುಳಾ ಪ್ರಾಣಪಾಯದಿಂದ ಪಾರಾಗಿದ್ದಾಳೆ. ಗಂಡ-ಹೆಂಡತಿ ಇಬ್ಬರು ಸಹ ಸಾಲದ ಬಾಧೆಯಲ್ಲಿ ಸಿಲುಕಿಕೊಂಡಿದ್ದರು. ಗಂಡನಿಗೆ ಕೆಲ ದಿನಗಳ ಹಿಂದೆ ಅಪಘಾತವಾಗಿತ್ತು ಎನ್ನಲಾಗಿದೆ. ಇದರಿಂದ ಎಲ್ಲರೂ ಸಹ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದರೆ ಮಂಜುಳಾ […]

Continue Reading

ಪೊಲೀಸ್ ವಾಹನದ ಕೀ ಕದ್ದು, ಮನೆಗೆ ಡ್ರಾಪ್ ಕೇಳಿದ ಕುಡುಕರು

ಭುವನೇಶ್ವರ: ಮದ್ಯದ ಅಮಲಿನಲ್ಲಿದ್ದವ ಯಾರ ಮಾತನ್ನೂ ಕೇಳುವುದಿಲ್ಲ ಎಂಬ ಮಾತಿದೆ. ಆದರೆ ಇಲ್ಲಿ ಇಬ್ಬರು ಭೂಪರು ಕಂಠಪೂರ್ತಿ ಮದ್ಯಸೇವಿಸಿ ಪೊಲೀಸರನ್ನೆ ಮನೆಗೆ ಡ್ರಾಪ್ ಮಾಡುವಂತೆ ಕೇಳಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಒಡಿಶಾದಲ್ಲಿ ಈ ಘಟನೆ ನಡೆದಿದ್ದು, ಮದ್ಯ ಸೇವಿಸಿದ ಇಬ್ಬರು ವ್ಯಕ್ತಿಗಳು ಪೊಲೀಸರಿಂದ ಅವರ ಕಾರಿನ ಕೀ ಕದ್ದಿದ್ದಾರೆ. ಬಳಿಕ ಬೊಲೆರೋ ಕಾರಿನೊಳಗೆ ಕುಳಿತು ತಮ್ಮನ್ನು ಮನೆಗೆ ಡ್ರಾಪ್ ಮಾಡುವಂತೆ ಒತ್ತಾಯಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಪೊಲೀಸ್ ಅಧಿಕಾರಿ ವಾಹನದ ಕೀ ಕೊಡುವಂತೆ ಕೇಳಿದರೂ […]

Continue Reading

ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ: ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ

ದಿಸ್ಪುರ: ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಬಂಗಾಳ ಮತ್ತು ನೆರೆಯ ಭೂತಾನ್‌ನಲ್ಲೂ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರವು 5 ಕಿಲೋಮೀಟರ್ ಆಳದಲ್ಲಿದ್ದು, ಉದಲ್ಗುರಿ ಪಟ್ಟಣದಲ್ಲಿತ್ತು ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಗುವಾಹಟಿಯಲ್ಲಿ ಭಯಭೀತರಾದ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋದರು. ಇಲ್ಲಿಯವರೆಗೆ ಯಾವುದೆ ಗಾಯ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ವರದಿಗಳಾಗಿಲ್ಲ. ಈಶಾನ್ಯವು ಹೆಚ್ಚಿನ ಭೂಕಂಪನ ವಲಯದಲ್ಲಿ ಬರುವುದರಿಂದ ಈ ಪ್ರದೇಶದಲ್ಲಿ ಭೂಕಂಪಗಳು ಆಗಾಗ್ಗೆ ಸಂಭವಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೆ […]

Continue Reading