ಪ್ರಥಮ ಚಿಕಿತ್ಸೆ ಜೀವ ರಕ್ಷಕ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ಯಾವುದೆ ರೀತಿಯ ಅಪಘಾತ, ದೇಹವು ಅನಾರೋಗ್ಯಕ್ಕೆ ತುತ್ತಾದಾಗ ಆಸ್ಪತ್ರೆ ತೆರಳುವಕ್ಕಿಂತ ಮುಂಚಿತವಾಗಿ, ಮನೆ ಅಥವಾ ಅಫಘಾತವಾದ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಥಮ ಚಿಕಿತ್ಸೆ ಮಾಡುವುದು ತುಂಬಾ ಅವಶ್ಯಕ ಎಂದು ಖ್ಯಾತ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ‘ಅಂತಾರಾಷ್ಟ್ರೀಯ ಪ್ರಥಮ ಚಿಕಿತ್ಸೆ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಪ್ರಥಮ […]

Continue Reading

ಡ್ರಗ್ ಪೆಡ್ಲರ್‌ಗಳ ಜೊತೆಗೆ ಪೊಲೀಸರ ನಂಟು ಆರೋಪ: ಇನ್‌ಸ್ಪೆಕ್ಟರ್‌ ಸೇರಿ 11 ಪೊಲೀಸರು ಸಸ್ಪೆಂಡ್‌

ಬೆಂಗಳೂರು: ಡ್ರಗ್ ಪೆಡ್ಲರ್‌ಗಳ ಜೊತೆಗೆ ಪೊಲೀಸರ ನಂಟು ಆರೋಪದಲ್ಲಿ ಇನ್‌ಸ್ಪೆಕ್ಟರ್‌ ಸೇರಿದಂತೆ 11 ಜನ ಪೊಲೀಸರನ್ನು ಅಮಾನತು ಮಾಡಲಾಗಿದೆ. ಚಾಮರಾಜಪೇಟೆ, ಜೆಜೆ ನಗರ ಪೊಲೀಸರನ್ನು ಅಮಾನತು ಮಾಡಿ ಪೊಲೀಸ್ ಕಮಿಷನರ್ ಸೀಮಂತಕುಮಾರ್ ಸಿಂಗ್ ಅದೇಶ ಹೊರಡಿಸಿದ್ದಾರೆ. ನಾಲ್ವರು ಡ್ರಗ್ ಪೆಡ್ಲರ್‌ಗಳ ಜೊತೆಗೆ ಸಂಬಂಧ ಹೊಂದಿದ ಆರೋಪದಲ್ಲಿ ಚಾಮರಾಜಪೇಟೆ ಇನ್‌ಸ್ಪೆಕ್ಟರ್‌ ಟಿ.ಮಂಜಣ್ಣ ಸೇರಿ ಹನ್ನೊಂದು ಪೊಲೀಸ್‌ ಸಿಬ್ಬಂದಿ ಅಮಾನತಾಗಿದ್ದಾರೆ. ಪೊಲೀಸರು ತಿಂಗಳಿಗೆ ಒಂದೂವರೆಯಿಂದ 2 ಲಕ್ಷ ಮಾಮೂಲಿ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

Continue Reading

ಹಾಟ್ ಏರ್ ಬಲೂನ್ ಹಾರುವ ಮುನ್ನವೆ ಬೆಂಕಿ: ಮಧ್ಯಪ್ರದೇಶ ಸಿಎಂ ಬಚಾವ್

ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂದಸೋರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಿಗ್ಗೆ (ಸೆ.13) ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್‌ ಏರ್‌ ಬಲೂನ್‌ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲೆ ಎಂಜಿನ್‌ನ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೆ ಭದ್ರತಾ ಸಿಬ್ಬಂದಿ ಅವರನ್ನು ಕೆಳಗಿಳಿಸಿ, ಸುರಕ್ಷಿತ ಸ್ಥಳಕ್ಕೆ […]

Continue Reading

ಕುಟುಂಬ ರಾಜಕಾರಣ: ದೇಶದಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ನವದೆಹಲಿ: ದೇಶದಲ್ಲಿ ಕುಟುಂಬ ರಾಜಕಾರಣ ಎಷ್ಟು ಬೇರೂರಿದೆ ಎಂಬ ವರದಿಯೊಂದು ಬಹಿರಂಗಪಡಿಸಿದೆ. ದೇಶದಲ್ಲಿ 21% ಸಂಸದರು, ಶಾಸಕರು ಕುಟುಂಬ ರಾಜಕಾರಣದ ಹಿನ್ನೆಲೆ ಹೊಂದಿದವರು ಎನ್ನಲಾಗಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ ವರದಿಯಲ್ಲಿ ಈ ಮಾಹಿತಿ ಹೊರಹಾಕಿದೆ. ಕುಟುಂಬ ರಾಜಕಾರಣದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 94 ಜನ ವಂಶಪಾರಂಪರ್ಯದಿಂದ ಅಧಿಕಾರಕ್ಕೆ ಬಂದವರಿದ್ದಾರೆ. ಉತ್ತರ ಪ್ರದೇಶದಲ್ಲಿ 141 ಜನ, ಮಹಾರಾಷ್ಟ್ರದಲ್ಲಿ 129 ಜನ, ಬಿಹಾರದಲ್ಲಿ 96 ಜನ ಇದ್ದಾರೆ. ಕೊನೆಯ ಸ್ಥಾನದಲ್ಲಿ ಅಸ್ಸಾಂ ಇದ್ದು, ಇಲ್ಲಿ ಕೇವಲ 9 […]

Continue Reading

ಗಂಡನ ಪ್ರೀತಿ ಕಡಿಮೆಯಾಗಿದ್ದಕ್ಕೆ 40 ದಿನದ ಮಗುವಿನ ಬಾಯಿಗೆ ಟಿಶ್ಯೂ ಪೇಪರ್ ತುರುಕಿ ಕೊಂದ ತಾಯಿ

ಚೆನ್ನೈ: ತಾಯಿಯೇ ಮಗುವನ್ನು ಕೊಂದಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಗಂಡನ ಪ್ರೀತಿ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿರೋದಾಗಿ ಮಹಿಳೆ ಹೇಳಿಕೆ ನೀಡಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಘಟನೆ ಸಂಬಂಧ ಪೊಲೀಸರು ಆರೋಪಿ ತಾಯಿಯನ್ನು ಬಂಧಿಸಿದ್ದಾರೆ. ಮಗುವನ್ನು ಕೊಂದ ಮಹಿಳೆಯನ್ನು ಬೆನಿತಾ ಜಯ ಅನ್ನಲ್ (20) ಎಂದು ಗುರುತಿಸಲಾಗಿದೆ. ಬೆನಿತಾ ಕನ್ಯಾಕುಮಾರಿ ಜಿಲ್ಲೆಯ ಕರುಂಗಲ್ ಬಳಿಯ ಬಾಲೂರ್ ಕಟ್ಟುವಿಲೈ ಪ್ರದೇಶದ ನಿವಾಸಿ. ಒಂದು ವರ್ಷದ ಹಿಂದೆ ದಿಂಡಿಗಲ್ ಜಿಲ್ಲೆಯ ಉತ್ತರ ವೇದಚಂದೂರಿನ ನಾಗಕೋಣನೂರು […]

Continue Reading

ಆಡಿಷನ್‌ನಲ್ಲಿ ಪರಿಚಯ, ಲವ್‌ ಮ್ಯಾರೇಜ್‌: ಎಸ್‌‌.ನಾರಾಯಣ ಮಗ-ಸೊಸೆ ನಡುವೆ ಬಿರುಕು ಬರಲು ಕಾರಣ ಇದೆನಾ ?

ಬೆಂಗಳೂರು: ನಿರ್ದೇಶಕ ಎಸ್ ನಾರಾಯಣ್ ಕುಟುಂಬದ ವಿರುದ್ಧ ದಾಖಲಾಗಿರುವ ವರದಕ್ಷಿಣೆ ಪ್ರಕರಣದ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ನೋಟಿಸ್ ನೀಡಿರುವ ಖಾಕಿ ಟೀಂ ಸ್ಪಾಟ್ ಮಹಜರು ನಡೆಸಿದ್ದಾರೆ‌. ಪವಿತ್ರಾಗೆ ಎಸ್ ನಾರಾಯಣ್ ಅವರ ಎರಡನೇ ‌ಪುತ್ರ ಪವನ್‌ ಸಿನಿಮಾದ ಆಡಿಷನ್‌ನಲ್ಲಿ ಪರಿಚಯವಾಗಿದ್ದರು, ನಂತರ ‌ಇಬ್ಬರ ನಡುವೆ ಪ್ರೇಮಾಂಕುರವಾಗಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದರು. ಒಂದು ವರ್ಷದ ನಂತರ 2022 ರಲ್ಲಿ ಆರ್’ಆರ್ ನಗರದಲ್ಲಿರುವ ಎಸ್ ನಾರಾಯಣ್ ನಿವಾಸದಿಂದ ಹೊರಬಂದು ಸಪ್ರೇಟಾಗಿ ಜೀವನ ಆರಂಭಿಸಿದ್ದರು. ಆಗ ಗಂಡನಿಗೆ ಕಾರು ಕೊಡಿಸಿದ್ದಾರೆ […]

Continue Reading

ಟೇಕ್ ಆಫ್ ವೇಳೆ ಉರುಳಿದ ಚಕ್ರ: ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್ ವಿಮಾನ ತುರ್ತು ಭೂಸ್ಪರ್ಶ

ಮುಂಬೈ: ಮುಂಬೈನಲ್ಲಿ ಸ್ಪೈಸ್ ಜೆಟ್ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಗುಜರಾತ್‌ನ ಕಾಂಡ್ಲಾದಿಂದ ಬಂದಿದ್ದ ಸ್ಪೈಸ್‌ಜೆಟ್ ವಿಮಾನದ ಟೇಕಾಫ್​ ವೇಳೆ ಹೊರಚಕ್ರ ಕೆಳಗೆ ಬಿದ್ದ ಹಿನ್ನೆಲೆಯಲ್ಲಿ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ. ಈ ಘಟನೆಯಲ್ಲಿ ಯಾವುದೆ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ. ಈ ವಿಮಾನವು ಕಾಂಡ್ಲಾ ವಿಮಾನ ನಿಲ್ದಾಣದಿಂದ ಹೊರಟು ಮುಂಬೈಗೆ ತೆರಳುತ್ತಿತ್ತು. ವಿಮಾನದ ಆರಂಭಿಕ ಹಂತದ ರನ್‌ವೇಯಲ್ಲಿ ಹೊರ ಚಕ್ರ ಪತ್ತೆಯಾಗಿತ್ತು. ನಂತರ ಆ ಚಕ್ರ ಉರುಳಿ ಬಿದ್ದಿತ್ತು.

Continue Reading

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಪ್ರಮಾಣ ವಚನ ಸ್ವೀಕರಿಸಿದ ಸುಶೀಲಾ ಕರ್ಕಿ

ಕಠ್ಮಂಡು: ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಮಧ್ಯಂತರ ಪ್ರಧಾನಿಯಾಗಿ ಶುಕ್ರವಾರ ರಾತ್ರಿ ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ಕರ್ಕಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಸುಶೀಲಾ ಕರ್ಕಿ ಅವರ ಮಧ್ಯಂತರ ಸಂಪುಟದಲ್ಲಿ ಯಾವುದೆ ಸಚಿವರನ್ನು ಸೇರಿಸಿಕೊಳ್ಳಲಾಗಿಲ್ಲ. ಅಧ್ಯಕ್ಷ ರಾಮ್ ಚಂದ್ರ ಪೌಡೆಲ್, ನೇಪಾಳ ಸೇನಾ ಮುಖ್ಯಸ್ಥ ಜನರಲ್ ಅಶೋಕರಾಜ್ ಸಿಗ್ಡೆಲ್ ಮತ್ತು ವಾರದ ಆರಂಭದಲ್ಲಿ ಮಾಜಿ ಪ್ರಧಾನಿ ಕೆ.ಪಿ ಶರ್ಮಾ ಒಲಿ ಅವರ ರಾಜೀನಾಮೆಗೆ ಕಾರಣವಾದ ಜನರೇಷನ್ ಝಡ್ […]

Continue Reading

ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ: ಟ್ರಕ್‌ ಹರಿದು 6 ಜನ ಸ್ಥಳದಲ್ಲೆ ಸಾವು

ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದೆ. ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು 6 ಮಂದಿ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ದೌಡಾಯಿಸಿದ್ದಾರೆ.

Continue Reading

ಬಿರುಗಾಳಿಗೆ ಸಿಲುಕಿದ ಸಚಿನ್ ತೆಂಡೂಲ್ಕರ್ ಪ್ರಯಾಣಿಸುತ್ತಿದ್ದ ಖಾಸಗಿ ಜೆಟ್: ಕಾಡು ಪ್ರಾಣಿಗಳಿದ್ದ ಜಾಗದಲ್ಲಿ ಲ್ಯಾಂಡಿಂಗ್

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಕೆಲವೇ ದಿನಗಳ ಹಿಂದೆ ತಮ್ಮ ಕುಟುಂಬದೊಂದಿಗೆ ಆಫ್ರಿಕಾ ಪ್ರವಾಸ ಮಾಡಿದ್ದರು. ಇದೀಗ ಆ ಪ್ರವಾಸದಲ್ಲಿ ನಡೆದ ರೋಮಾಂಚನಕಾರಿ ಘಟನೆಯ ವಿಡಿಯೋವೊಂದನ್ನು ಕ್ರಿಕೆಟ್ ದೇವರು ಇಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಾಸ್ತವವಾಗಿ ಸಚಿನ್ ಹಾಗೂ ಅವರ ಕುಟುಂಬ ಆಫ್ರಿಕಾದ ಮಸಾಯಿ ಮಾರಾಕ್ಕೆ ಖಾಸಗಿ ಜೆಟ್​ನಲ್ಲಿ ತೆರಳಿದ್ದರು. ಆ ಸಂದರ್ಭದಲ್ಲಿ ನಡೆದ ಘಟನೆಯ ವಿಡಿಯೋ ಇದೀಗ ಸಚಿನ್ ತೆಂಡೂಲ್ಕರ್ ಬಿಡುಗಡೆ ಮಾಡಿದ್ದಾರೆ. ವೀಡಿಯೊದಲ್ಲಿ ಸಚಿನ್ ವಿವರಿಸುತ್ತಾ, ‘ನಾವು ವಿಮಾನದೊಳಗೆ […]

Continue Reading