ಪಿಚ್ಚರ್ ಅಭಿ ಬಾಕಿ ಹೈ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಕಲಬುರಗಿಆರ್‌ಎಸ್‌ಎಸ್‌ಗೆ ಬರೆದ ಪತ್ರಕ್ಕೆ ಇನ್ನೂ ಉತ್ತರ ಬಂದಿಲ್ಲ. ಬರಲಿ ಬಿಡಿ ಅವಸರವೇಕೆ ? ಪಿಚ್ಚರ್ ಅಭಿ ಬಾಕಿ ಹೈ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಲವಾರು ಪ್ರಶ್ನೆಗಳನ್ನು ಹಾಕಿ ಆರ್‌ಎಸ್‌ಎಸ್‌ಗೆ ಪತ್ರ ಬರೆದಿದ್ದೆನೆ. ಇನ್ನೂ ಉತ್ತರ ನೀಡಿಲ್ಲ. ನೀಡಲಿ ಬಿಡಿ ಅವಸರವೇಕೆ, ಅಭೀ ಪಿಚ್ಚರ್ ಬಾಕಿ ಹೈ ಅವರೂ ಕೂಡಾ ನನ್ನ ಹಾಗೂ ಕುಟುಂಬದ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿದ್ದಾರೆ, […]

Continue Reading

ವರದಕ್ಷಿಣೆ ಕಿರುಕುಳ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಸುದ್ದಿ ಸಂಗ್ರಹ ಚಿತ್ತಾಪುರವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಪಟ್ಟಣದಲ್ಲಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೀಜಾ ಅಬ್ದುಲ್ ಹುಸೇನ್ ಶೇಖ್ (24) ಆತ್ಮಹತ್ಯೆಗೆ ಶರಣಾದವರು. ರಮೀಜಾ ಪತಿ ಅಬ್ದುಲ್ ಹುಸೇನ್ ಶೇಖ್, ಅತ್ತೆ ಸಾಹೇರಾ ಬಾನು, ಅಜ್ಜಿ ಹಫೀಜಾ, ಪತಿಯ ಅಣ್ಣನ ಪತ್ನಿ ನಿಶಾದ್ ಅಬ್ದುಲ್ ಗಫೂರ್ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ಶೇಖ್‌ನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ವಿವರ: 5 ರ್ಷಗಳ ಹಿಂದೆ ಅಬ್ದುಲ್‌ ಜೊತೆ ರಮೀಜಾ […]

Continue Reading

ಗೃಹ‌ ಸಚಿವ‌ರಾದ ಬಳಿಕ ಕಲಬುರಗಿಗೆ ಭೇಟಿ: ಪ್ರಿಯಾಂಕ್‌ ಖರ್ಗೆಗೆ ಅದ್ದೂರಿ ಸ್ವಾಗತ

ಸುದ್ದಿ ಸಂಗ್ರಹ ಕಲಬುರಗಿರಾಜ್ಯದ ಗೃಹ ಸಚಿವರಾದ ಬಳಿಕ‌ ಇದೆ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ‌ ಸಚಿವ ‌ಪ್ರಿಯಾಂಕ್ ಖರ್ಗೆ ಅವರನ್ನು ‌ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು ಮತ್ತು ಅಭಿಮಾನಿಗಳು ‌ಅದ್ದೂರಿಯಾಗಿ ಭರಮಾಡಿಕೊಂಡರು. ನಗರದ ನೆಹರೂ ಗಂಜ್ ಪ್ರದೇಶದ ನಗರೇಶ್ವರ ಶಾಲೆಯ ಎದುರು ಬಂದಿಳಿದ ಕಲಬುರಗಿ, ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಪ್ರಿಯಾಂಕ್ ಖರ್ಗೆ ಅವರನ್ನು ಮೊದಲಿಗೆ ತೆರೆದ ಕಾರಿನಲ್ಲಿ, ನಂತರ ಸಿಂಗರಿಸಿದ ಲಾರಿಯ ಮೇಲೆ ಏರಿಸಿ‌ ಮೆರವಣಿಗೆ ಮಾಡಲಾಯಿತು. ಬಗೆಬಗೆಯ ಪುಷ್ಪಗಳ ವೃಷ್ಟಿಗೈದು ಸಂಭ್ರಮಿಸಿದರು. ದಾರಿಯುದ್ದಕ್ಕೂ […]

Continue Reading

ಅಪರೂಪದ ಶಿಕ್ಷಕ ಶಿವಲಿಂಗಪ್ಪ ಹೆಬ್ಬಾಳಕರ್ ಅಭಿನಂದನಾ ಗ್ರಂಥ ಬಿಡುಗಡೆ

ಸುದ್ದಿ ಸಂಗ್ರಹ ಶಹಾಬಾದ್ಸರಳ ಮತ್ತು ಸೌಮ್ಯ ಸ್ವಭಾವದ ಅಪರೂಪದ ಶಿಕ್ಷಕ ಎಂದರೆ ಶಿವಲಿಂಗಪ್ಪ ಹೆಬ್ಬಾಳಕರ್ ಎಂದು ತಹಸೀಲ್ದಾರ್ ನೀಲಪ್ರಭಾ ಬಬಲಾದ್ ಹೇಳಿದರು. ನಗರದ ರಾಯಲ್ ಗಾರ್ಡನ್ ಕಲ್ಯಾಣ ಮಂಟಪದಲ್ಲಿ ಶನಿವಾರ ಗಿರಿಶಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಹಾಗೂ ಹೆಬ್ಬಾಳಕರ್ ಅವರ ಅಭಿಮಾನಿ ಬಳಗದ ವತಿಯಿಂದ ‘ಪ್ರಜ್ಞೆಶೀಲ ಅಭಿನಂದನಾ ಗ್ರಂಥ’ ಬಿಡುಗಡೆ ಹಾಗೂ ವಯೋನಿವೃತ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿವಲಿಂಗಪ್ಪ ಹೆಬ್ಬಾಳಕರ್ ಶಿಕ್ಷಣ ಇಲಾಖೆಯಲ್ಲಿ ಸುಮಾರು 36 ವರ್ಷಗಳ ಸೇವೆ ಸಲ್ಲಿಸಿ ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. […]

Continue Reading

ಜನರಿಗೆ ಭಯ ಹುಟ್ಟಿಸುವ ರೀತಿ ಬಂದೂಕು ಹಿಡಿದು ರೀಲ್ಸ್‌: ಮೂವರು ಯುವಕರ ಬಂಧನ

ಸುದ್ದಿ ಸಂಗ್ರಹ ಬಳ್ಳಾರಿಜನರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ನಕಲಿ ಬಂದೂಕು ಹಿಡಿದು ರೀಲ್ಸ್‌ ಮಾಡಿದ್ದ ಮೂವರು ಯುವಕರನ್ನು ಬಳ್ಳಾರಿಯ ಕೌಲ್‌ ಬಜಾರ್‌ ಪೊಲೀಸರು ಬಂಧಿಸಿದ್ದಾರೆ. ಸಾಹಿಲ್, ವಿಕಾಸ್ ಮತ್ತು ಅಭಿಷೇಕ್ ಬಂಧಿತ ಆರೋಪಿಗಳು. ನಗರದ ಬಂಡಿಹಟ್ಟಿ ಬಳಿಯ ಹೆಚ್‌ಎಲ್‌ಸಿ ಕಾಲುವೆ ಮೇಲೆ ಭಯ ಹುಟ್ಟಿಸುವ ರೀತಿ ಆರೋಪಿಗಳು ರೀಲ್ಸ್ ಮಾಡಿದ್ದರು. ನಕಲಿ ಡಬಲ್ ಬ್ಯಾರೆಲ್ ಬಂದೂಕು ಹಾಗೂ ಪಿಸ್ತೂಲ್ ಹಿಡಿದುಕೊಂಡು ರೀಲ್ಸ್ ಮಾಡಿದ್ದರು. ಭಯ ಹುಟ್ಟಿಸುವ ರೀತಿಯಲ್ಲಿ ರೀಲ್ಸ್ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದರು. ಪ್ರಕರಣ […]

Continue Reading

ಪೋಕ್ಸೊ ಆರೋಪಿ ಪರಾರಿ ಪ್ರಕರಣ: ಅಫಜಲಪುರ ಪಿಎಸ್ಐ ಅಮಾನತು

ಸುದ್ದಿ ಸಂಗ್ರಹ ಕಲಬುರಗಿಪೋಕ್ಸೊ ಪ್ರಕರಣದ ಆರೋಪಿ ಠಾಣೆಯಿಂದ ತಪ್ಪಿಸಿಕೊಂಡ ಹೋಗಿದ್ದ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ್ದಕ್ಕಾಗಿ ಅಫಜಲಪುರ ಠಾಣೆಯ ಪಿಎಸ್‌ಐ ಸೋಮಲಿಂಗ ಒಡೆಯರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಆದೇಶ ಹೊರಡಿಸಿದ್ದಾರೆ. ಬಾಲಕಿಯನ್ನು ಅಪಹರಿಸಿ ಪುಣೆಗೆ ಕರೆದೊಯ್ದಿದ್ದ ಆರೋಪಿ ಮಂಜುನಾಥ ಇಂಗಳೆ (23)ಯನ್ನು ಬಂಧಿಸಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ. ಘಟನೆಯ ಬೆನ್ನಲ್ಲೆ ಅಫಜಲಪುರ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ರವಿದಾಸ್ ಕಟ್ಟಿಮನಿ, ಕಾನ್‌ಸ್ಟೆಬಲ್‌ಗಳಾದ ಶಿವಣ್ಣ ಮತ್ತು ಪ್ರಶಾಂತ್ […]

Continue Reading

ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ದೇವಿಂದ್ರ ಅರಣಕಲ್

ಸುದ್ದಿ ಸಂಗ್ರಹ ಚಿತ್ತಾಪುರ ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದು ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ದೇವಿಂದ್ರಅರಣಕಲ್ ಹೇಳಿದರು. ಪಟ್ಟಣದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಸಂಘದ ಕಚೇರಿ ಹತ್ತಿರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಸಹಕಾರ ಸಚಿವಾಲಯ 5 ವರ್ಷ ಪೂರೈಸುತ್ತಿರುವ ನಿಮಿತ್ತ ಸಹಕಾರ ಸಪ್ತಾಹ ಆಚರಣೆ, ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಹಕಾರ ಸಪ್ತಾಹದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಹಮ್ಮಿಕೊಳ್ಳಲಾಗಿದೆ. ಪರಿಸರ ಉಳಿಸಿ […]

Continue Reading

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ ?: ಪ್ರಿಯಾಂಕ್ ಖರ್ಗೆ ಗರಂ

ಸುದ್ದಿ ಸಂಗ್ರಹ ಬೆಂಗಳೂರುಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ ? ಅವರದ್ದೆ ತಾನೆ ಜವಾಬ್ದಾರಿ ಎಂದು ಎಸ್‌ಐಆರ್ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಎಸ್‌ಐಆರ್ ಲೋಪ ಎಂಬ ವಿಪಕ್ಷಗಳ ಆರೋಪದ ಕುರಿತು ಮಾತನಾಡಿ, ಏನೆ ಮಾಡಿದ್ರು ಕಾನೂನು ಮೀರಿ ಯಾರೂ ಏನು ಮಾಡೋಕೆ ಆಗೊಲ್ಲ. ಎಲೆಕ್ಷನ್ ಕಮಿಷನ್ ದು ವೀಕ್ಷಕರು ಇರ್ತಾರೆ. ಅಂತಹ ಲೋಪ ಆಗಿದ್ದರೆ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬಹುದು. ರಾಜ್ಯ ಸರ್ಕಾರದವರು ಯಾರಿಗೂ ಒತ್ತಾಯ ಮಾಡಿ SIR ಮಾಡಿಸುತ್ತಿಲ್ಲ. […]

Continue Reading

ಪೋಕ್ಸೋ ಆರೋಪಿ ಮತ್ತೆ ಪೊಲೀಸರ ಬಲೆಗೆ: ಮಹಾರಾಷ್ಟ್ರಕ್ಕೆ ಪರಾರಿಯಾಗುವ ಮುನ್ನವೇ ಸೆರೆ

ಸುದ್ದಿ ಸಂಗ್ರಹ ಕಲಬುರಗಿಅಫಜಲಪುರ ಪೊಲೀಸ್ ಠಾಣೆಯಿಂದ ಪರಾರಿಯಾಗಿ ಪೊಲೀಸರಿಗೆ ತಲೆನೋವಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಮಂಜುನಾಥ್ ಕೊನೆಗೂ ಮತ್ತೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಹಾರಾಷ್ಟ್ರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ತೆಲ್ಲೂರು ಬಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‌.ಪಿ ಆಡೂರು ಶ್ರೀನಿವಾಸಲು ತಿಳಿಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಂಜುನಾಥ್‌ನ್ನು ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿ ಅಫಜಲಪುರಕ್ಕೆ ಕರೆತರಲಾಗಿತ್ತು. ಆದರೆ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದ ವೇಳೆ ಆತ ಪೊಲೀಸರ […]

Continue Reading

ರಾಜ್ಯದಲ್ಲಿ 7,925 ಪೊಲೀಸ್ ಹುದ್ದೆಗಳ ನೇಮಕಾತಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 2026-27ನೇ ಸಾಲಿನಲ್ಲಿ 7,925 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಅತ್ಯಂತ ಪಾರದರ್ಶಕವಾಗಿ ನಡೆಸಲಾಗುತ್ತಿದೆ ಎಂದು ಹೇಳಿದರು. ಒಟ್ಟು ಹುದ್ದೆಗಳ ಪೈಕಿ 1,639 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಿರಿಸಲಾಗಿದ್ದು, ಉಳಿದ ಹುದ್ದೆಗಳು ರಾಜ್ಯದ ಇತರೆ ಭಾಗಗಳಿಗೆ ಮೀಸಲಾಗಿದೆ. ಈ ನೇಮಕಾತಿಯಲ್ಲಿ ಡಿಟೆಕ್ಟಿವ್ ಸಬ್‌-ಇನ್‌ಸ್ಪೆಕ್ಟರ್, ಸಶಸ್ತ್ರ […]

Continue Reading