ಬೆಂಗಳೂರಿನಲ್ಲಿ ಮೋಡಗಳ ಮರೆಯಲ್ಲಿ ಮರೆಯಾಗಿರುವ ಚಂದ್ರ, ನೆಲಮಂಗಲದಲ್ಲಿ ಹುಣ್ಣಿಮೆ ಚಂದ್ರನ ದರ್ಶನ

ಬೆಂಗಳೂರು: ನಭೋಮಂಡಲದ ವಿಸ್ಮಯದ ಅದ್ಭುತ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ. ಈಗಷ್ಟೇ ಚಂದ್ರಗ್ರಹಣದ ಪ್ರಕ್ರಿಯೆ ಆರಂಭವಾಗಿಬಿಟ್ಟಿದೆ. ರಾತ್ರಿ 9:57ರಿಂದ ಮಧ್ಯರಾತ್ರಿ 1:26ರ ವರೆಗೆ ಒಟ್ಟು ಮೂರುವರೆ ಗಂಟೆಗಳ ಕಾಲ ನಿಧಾನವಾಗಿ ಗ್ರಹಣ ಸಂಭವಿಸಲಿದೆ. ಸದ್ಯ ದೇಶದಲ್ಲಿ ಲಡಾಖ್‌ನಲ್ಲಷ್ಟೇ ಗ್ರಹಣ ಗೋಚರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು, ತಮಿಳುನಾಡು ಸೇರಿ ನಾಲ್ಕು ಕಡೆಗಳಲ್ಲಿ ಮೋಡ ಕವಿದ ಹಿನ್ನೆಲೆಯಲ್ಲಿ ಚಂದ್ರ ಕಣ್ಮರೆಯಾಗಿದ್ದಾನೆ. ಆಗಾಗ್ಗೆ ಭುವಿಯತ್ತ ಇಣುಕಿ ಮತ್ತೆ ಮೋಡದಲ್ಲಿ ಮರೆಯಾಗುತ್ತಿದ್ದಾನೆ. ನೆಲಮಂಗಲದಿಂದ ಆಕಾಶದಲ್ಲಿ ಹುಣ್ಣಿಮೆ ಚಂದ್ರನ ದರ್ಶನವಾಗಿದೆ. ನೆಲಮಂಗಲ ತಾಲೂಕಿನ […]

Continue Reading

ಹೋಗಿ ಮೋದಿ, ಶಾ ಹತ್ತಿರ ಕೇಳು: ಕಷ್ಟ ಹೇಳಲು ಬಂದಿದ್ದ ಯುವ ರೈತನ ವಿರುದ್ಧ ಖರ್ಗೆ ಆಕ್ರೋಶ

ಕಲಬುರಗಿ: ಅತಿವೃಷ್ಠಿಯಿಂದ ನಾನು ಬೆಳೆದಿದ್ದ ಬೆಳೆ ಹಾಳಾಗಿದೆ ಎಂದು ತನ್ನ ಕಷ್ಟವನ್ನು ಹೇಳಿಕೊಳ್ಳಲು ಬಂದಿದ್ದ ಯುವ ರೈತನ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿಯ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಬಂದಿದ್ದ ಯುವಕ ಅತಿವೃಷ್ಠಿಯಿಂದ 4 ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆ ಹಾಳಾಗಿದೆ ಸರ್ ಎಂದು ಹೇಳಿದ್ದಾನೆ. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕನಿಗೆ ನೀನು ಎಷ್ಟು ಎಕರೆಯಲ್ಲಿ ಬೆಳೆ ಬೆಳೆದಿದ್ದಿಯಾ ಎಂದು ಪ್ರಶ್ನಿಸುತ್ತಾರೆ. ಅದಕ್ಕೆ ಯುವಕ 4 ಎಕರೆಯಲ್ಲಿ ಬೆಳೆ ಬೆಳೆದಿದ್ದೆ […]

Continue Reading

ಜಾತಿ, ದ್ವೇಷದ ಗೋಡೆಯನ್ನು ಒಡೆದ ಗುರು: ವೀರಣ್ಣ ಯಾರಿ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಅಂಗವಾಗಿ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜಾತಿ, ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿ ಭಾತೃತ್ವ ಬೀಜ ಬಿತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಆದರ್ಶಪೂರ್ಣವಾದದ್ದು ಎಂದರು. ಮಹಾಭಾರತದಲ್ಲಿ ಶ್ರೀ ಕೃಷ್ಣನು ಜಗತ್ತಿನಲ್ಲಿ ಅಧರ್ಮ ಯಾವಾಗ ಹೆಚ್ಚುತ್ತದೆ ಅದನ್ನು ಮಟ್ಟ ಹಾಕಿ, ಧರ್ಮವನ್ನು ಪುನರ್ ಸ್ಥಾಪಿಸಲು ನಾನು ಮತ್ತೆ ಮತ್ತೆ ಜನ್ಮ ಎತ್ತುತ್ತೆನೆ ಎಂದು […]

Continue Reading

ಆ ಗಂಡನನ್ನು ಬಿಟ್ಟು ಬೇರೊಬ್ಬನ ಜೊತೆಗೆ ಮದುವೆ, ಈಗ ಇವನನ್ನು ಬಿಟ್ಟು ಮತ್ತೊಬ್ಬನ ಜೊತೆ ಓಡಿ ಹೋದಳು: ಬಾಳು ಕೊಟ್ಟ ಪತಿ, 3 ಮಕ್ಕಳು ಅನಾಥ

ಆನೇಕಲ್: 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನು ಬಿಟ್ಟು 3 ಮಕ್ಕಳ ತಾಯಿ ಪ್ರಿಯಕರನ ಜೊತೆ ಎಸ್ಕೇಪ್‌ ಆಗಿರುವ ಘಟನೆ ಬೆಂಗಳೂರಿನ ಬನ್ನೆರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿದೆ. 11 ವರ್ಷಗಳ ಹಿಂದೆ ಮಂಜುನಾಥ​ ಎಂಬ ವ್ಯಕ್ತಿಯ ಜೊತೆಗೆ ಲೀಲಾವತಿ ಎಂಬ ಮಹಿಳೆ ಮದುವೆಯಾಗಿದ್ದಳು. ಇವರಿಗೆ ಮೂರು ಮಕ್ಕಳು ಸಹ ಇದ್ದಾರೆ. ಆದರೆ ಮೂರು ಮಕ್ಕಳ ತಾಯಿ ಲೀಲಾವತಿ ಮತ್ತೊರ್ವನ ಜೊತೆ ಓಡಿಹೋಗಿದ್ದಾಳೆ. ಪತಿ ಮಂಜುನಾಥ, ಮೂರು ಮಕ್ಕಳು ಕಣ್ಣೀರಿಡುತ್ತಿದ್ದಾರೆ. ಮೂವರು ಮಕ್ಕಳು ಮತ್ತು ಗಂಡನನ್ನು […]

Continue Reading

ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ.6 ಮತ್ತು ಅಲೆಮಾರಿ ಸಮುದಾಯಕ್ಕೆ ಶೇ.1 ರಷ್ಟು ಮೀಸಲು ನೀಡಲು ಆಗ್ರಹ

ಚಿತ್ತಾಪುರ: ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ.6, ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲು ನೀಡುವಂತೆ ಆಗ್ರಹಿಸಿ ಬಂಜಾರ, ಭೋವಿ, ಕೊರಚಾ ಮತ್ತು ಕೊರಮ ಸಮಾಜಗಳ ಕ್ಷೇಮಾಭಿವೃದ್ಧಿ ಸಂಘದಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಂಘದ ಉಪಾಧ್ಯಕ್ಷ ಚಂದು ಜಾಧವ ಮಾತನಾಡಿ, ಒಳ ಮೀಸಲಾತಿ ಕುರಿತು ನಾಗಮೋಹನ್‌ದಾಸ್ ಆಯೋಗವು ಮಾಡಿರುವ ಶಿಫಾರಸ್ಸು ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರ ಮತ್ತು ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ 2022ರ ಸೆಕ್ಷನ್ (1)ರ […]

Continue Reading

60 ಕೋಟಿ ವಂಚನೆ ಕೇಸ್: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

ಮುಂಬೈ: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್‌ ಹೊರಡಿಸಿದ್ದಾರೆ. ತಮ್ಮ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ನ (ಈಗ ಕಾರ್ಯನಿರ್ವಹಿಸುತ್ತಿಲ್ಲ) ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಈ ಸೆಲೆಬ್ರಿಟಿ ದಂಪತಿ, ಉದ್ಯಮಿಯೊಬ್ಬರಿಗೆ ಸುಮಾರು 60 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆರ್ಥಿಕ ಅಪರಾಧಗಳ ವಿಭಾಗ ಮೂಲಗಳು ಸೂಚಿಸುವಂತೆ ಪೊಲೀಸರು ಈಗ ಶೆಟ್ಟಿ ಮತ್ತು ಕುಂದ್ರಾ ಅವರ […]

Continue Reading

ಕಲಬುರಗಿ: ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ

ಕಲಬುರಗಿ: ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಬಿತ್ತನೆ ಕಾರ್ಯ ಜೋರಾಗಿದೆ. ಇದನ್ನೆ ಬಂಡವಾಳ ಮಾಡಿಕೊಂಡು ಕಲಬುರಗಿ ಜಿಲ್ಲೆಯ ರೈತರಿಂದ ದುಪ್ಪಟ್ಟು ಹಣ ಪಡೆದು ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಲಾಗಿದೆ. ಅದನ್ನೆ ಬಂಡವಾಳ ಮಾಡಿಕೊಂಡಿರುವ ಅಫಜಲಪುರ ತಾಲೂಕಿನ ಗಾಣಗಾಪುರದ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಗೊಬ್ಬರ ಅಂಗಡಿ […]

Continue Reading

ವಿದ್ಯಾರ್ಥಿ ಸ್ನೇಹಿ ಶಿಕ್ಷಕರು ಹೆಚ್ಚಾಗಲಿ

ಕಾಳಗಿ: ವಿದ್ಯಾರ್ಥಿಗಳು ತಮ್ಮ ಮಕ್ಕಳಂತೆ ಕಾಳಜಿ ವಹಿಸಿ, ಅವರಿಗೆ ಜ್ಞಾನ, ಬುದ್ಧಿ, ಕೌಶಲಗಳನ್ನು ನೀಡಿ, ದೇಶದ ಅಮೂಲ್ಯ ಸಂಪತ್ತನ್ನಾಗಿಸುವ ವಿದ್ಯಾರ್ಥಿ ಸ್ನೇಹಿ ಶಿಕ್ಷಕರ ಸಂಖ್ಯೆ ಹೆಚ್ಚಾಗಬೇಕು ಎಂದು ಮುಖ್ಯ ಶಿಕ್ಷಕ ಹಾಗೂ ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ತಾಲೂಕಿನ ಕೋರವಾರ ಅಣವೀರಭದ್ರೇಶ್ವರ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗ‌ ಮತ್ತು ಕಾಳಗಿ ಕನ್ನಡ ಸಾಹಿತ್ಯ ಪರಿಷತ್’ನ ತಾಲೂಕಾ ಘಟಕ ಇವುಗಳು ಜಂಟಿಯಾಗಿ ಶುಕ್ರವಾರ ಏರ್ಪಡಿಸಿದ್ದ ‘63ನೇ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ : ಶಿಕ್ಷಕರಿಗೆ […]

Continue Reading

ಶಿಕ್ಷಕರ ಕೈಯಲ್ಲಿ ಮಕ್ಕಳ ಭವಿಷ್ಯವಿದೆ: ಡಾ. ಚಂದ್ರಕಾಂತ ಕೆಳಮನಿ

ಸುದ್ದಿ ಸಂಗ್ರಹ ಚಿತ್ತಾಪುರ ಶಿಕ್ಷಕ ಕೇವಲ ವ್ಯಕ್ತಿಯಲ್ಲ ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಚಂದ್ರಕಾಂತ ಕೆಳಮನಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳಲ್ಲಿ ನಕಾರಾತ್ಮಕ ಭಾವನೆಗಳು ತುಂಬದೆ ನಿಮ್ಮಿoದ ಎಲ್ಲವೂ ಸಾಧ್ಯವೆಂಬ ಸಕಾರಾತ್ಮಕ ಭಾವನೆ ತುಂಬುವ ಕೆಲಸ ಮಾಡಬೇಕು. ಶಿಕ್ಷಕ […]

Continue Reading

ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ

ಸುದ್ದಿ ಸಂಗ್ರಹ ಶಹಾಬಾದ್ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತಮಹತ್ವವಾದದ್ದು ಎಂದು ಮುಖ್ಯಗುರು ಸಂಗೀತಾ ದೇವರಮನಿ ಹೇಳಿದರು. ಪಟ್ಟಣದ ಚವ್ಹಾಣ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಅವರು ನಂದಗೋಕುಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ ಮಾತನಾಡಿದ ಅವರು, ಒಬ್ಬ ಶಿಕ್ಷಕ ಜವಾಬ್ದಾರಿ ಅರಿತು ಕೆಲಸ ಮಾಡಿ ಮಕ್ಕಳ ಭವಿಷ್ಯ ರೂಪಿಸಿದರೆ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು‌. ಭಾರತೀಯ ಶಿಕ್ಷಣ ವ್ಯವಸ್ಥೆಗೆ ಗುರು-ಶಿಷ್ಯರ ಪರಂಪರೆಭದ್ರ ಅಡಿಪಾಯವಾಗಿದೆ. ಶಿಕ್ಷಕರು ಪಾಠಕ್ಕೆ […]

Continue Reading