ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ ರಾಷ್ಟ್ರಪತಿ ಪದಕ

ಕಲಬುರಗಿ: ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪ್ರದಾನ ಮಾಡಿದರು.‌ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕರ್ನಾಟಕ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಗೌರವಾನ್ವಿತ ರಾಜ್ಯಪಾಲರಿಂದ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಹಾಗೂ ಶ್ಲಾಘನೀಯ ಸೇವಾ ಪದಕ ಸಮಾರಂಭದಲ್ಲಿ ಪ್ರಾಮಾಣಿಕ ಮತ್ತು ದಕ್ಷತೆಯಿಂದ […]

Continue Reading

ವಿದ್ಯಾರ್ಥಿಗಳಲ್ಲಿ ಸ್ಪಷ್ಟ ಗುರಿ, ನಿರಂತರ ಪ್ರಯತ್ನವಿರಲಿ

ಕಲಬುರಗಿ: ವಿದ್ಯಾರ್ಥಿಗಳು ಸ್ಪಷ್ಟವಾದ ಗುರಿಯನ್ನು ನಿರ್ಧರಿಸಿ, ಅದರ ಸಾಧನೆಗೆ ನಿರಂತರ ಪ್ರಯತ್ನ ಮಾಡಬೇಕು. ಸೃಜನಶೀಲತೆ, ಮಾನವೀಯತೆ, ದೇಶಭಕ್ತಿ, ಛಲಗಾರಿಕೆ, ಧನಾತ್ಮಕ ಚಿಂತನೆ ಬೆಳೆಸಿಕೊಂಡು, ಉನ್ನತವಾದ ಸಾಧನೆ ಮಾಡಬೇಕು ಎಂದು ಚಿಂತಕ ಮಹಾದೇಯ್ಯ ಕರದಳ್ಳಿ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯಲ್ಲಿನ ಗೆಟ್ಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ‘ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ’ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಪ್ರಾವೀಣ್ಯತೆ ಬೆಳೆಸಿಕೊಳ್ಳಬೇಕು. ಸ್ವ-ಅಧ್ಯಯನ ಅಗತ್ಯ. ಸಾಧಿಸುವ ಛಲಗಾರಿಕೆ ಅಗತ್ಯ. ಉದ್ದೇಶ ಸ್ಪಷ್ಟವಾಗಿರಲಿ. […]

Continue Reading

ವಿದ್ಯಾರ್ಥಿ, ಸಮಾಜಪರ ಕಾಳಜಿಯುಳ್ಳ ಶಿಕ್ಷಕರ ಸಂಖ್ಯೆ ಹೆಚ್ಚಾಗಲಿ

ಕಲಬುರಗಿ: ರಾಜಶೇಖರ ಗುಂಡದ್ ಅವರು ಎಲ್ಲಾ ಶಿಕ್ಷಕರಿಗೆ ಮಾದರಿಯಾಗಿದ್ದಾರೆ. ಸೇವೆ ಸಲ್ಲಿಸಿದ ಶಾಲೆಗೆ ನಿವೃತ್ತಿಯಾದ ನಂತರವು ದೇಣಿಗೆ ನೀಡಿ ಸದಾ ಅಭಿವೃದ್ಧಿ ಬಯಸುವರಾಗಿದ್ದಾರೆ. ಅವರಲ್ಲಿರುವ ವಿದ್ಯಾರ್ಥಿಗಳ ಬಗ್ಗೆಯಿದ್ದ ಕಾಳಜಿ, ಕಲಿಸುವ ಹಂಬಲ, ಕರ್ತವ್ಯಬದ್ಧತೆ, ಸೇವಾ ಮನೋಭಾವ ಶ್ಲಾಘನೀಯವಾಗಿದೆ. ಅಪರೂಪ ಹಾಗೂ ಮೇರು ವ್ಯಕ್ತಿತ್ವದ ಶಿಕ್ಷಕರ ಸಂಖ್ಯೆ ಪ್ರಸ್ತುತ ಸಂದರ್ಭದಲ್ಲಿ ಹೆಚ್ಚಾಗಬೇಕಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ತಾಲೂಕಿನ ಹತಗುಂದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಇತ್ತೀಚಿಗೆ ವಯೋನಿವೃತ್ತಿ ಹೊಂದಿರುವ ಗುಂಡದ್ […]

Continue Reading

ಚಿತ್ತಾಪುರ: ಭಂಕಲಗಾ ಗ್ರಾಮದಲ್ಲಿ ಕೊಟ್ಟಿಗೆ ಕುಸಿದು 40 ಮೇಕೆಗಳು ಸಾವು

ಚಿತ್ತಾಪುರ: ಧಾರಾಕಾರ ಮಳೆಗೆ ಕೊಟ್ಟಿಗೆ ಕುಸಿದು ಬಿದ್ದು ಕೊಟ್ಟಿಗೆಯಲ್ಲಿದ್ದ ನಲವತ್ತು ಮೇಕೆಗಳು ಮೃತಪಟ್ಟಿರುವ ಘಟನೆ ತಾಲೂಕಿನ ಭಂಕಲಗಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಗ್ರಾಮದ ಮಾಳಪ್ಪಾ ಧೂಳಪ್ಪಾ ಪೂಜಾರಿ ಅವರಿಗೆ ಸೇರಿದಮೇಕೆಗಳು ಕೊಟ್ಟಿಗೆಯ ಮಾಳಿಗೆ ಮತ್ತು ಕಟ್ಟಡದ ಅವಶೇಷಗಳಡಿ ಸಿಲುಕಿ ಮೃತಪಟ್ಟಿವೆ. ಮೇಕೆಗಳ ಸಾವಿನಿಂದ ಮಾಳಪ್ಪಾ ಅವರು ಲಕ್ಷಾಂತರ ರೂ ನಷ್ಟ ಅನುಭವಿಸಿದ್ದಾರೆ. ಘಟನೆಯ ಸುದ್ದಿ ತಿಳಿದು ಕಂದಾಯ ಇಲಾಖೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಶು ವೈದ್ಯಾಧಿಕಾರಿಗೆ ಮಾಹಿತಿ ನೀಡಿ ಮೃತಪಟ್ಟಿರುವ ಆಡುಗಳ […]

Continue Reading

ಲಂಚ ಪಡೆಯುವಾಗ ದಾಳಿ: ಎಸಿಪಿ ಶರಣಬಸಪ್ಪ ಸುಬೇದಾ‌ರ್ ಸೇರಿ ಐವರು ಲೋಕಾಯುಕ್ತ ಬಲೆಗೆ

ಕಲಬುರಗಿ: ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶರಣಬಸಪ್ಪ ಸುಬೇದಾರ್ ಸೇರಿ ಐವರು ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ನಗರ ಪೊಲೀಸ್ ಆಯುಕ್ತಾಲಯದ ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶರಣಬಸಪ್ಪ ಸುಬೇದಾರ್, ಅವರ ರೈಟರ್ ಚಂದ್ರಕಾಂತ್, ಕಾನ್ಸ್‌ಟೇಬಲ್ ರಾಘವೇಂದ್ರ ಮತ್ತು ಇಬ್ಬರು ಖಾಸಗಿ ವ್ಯಕ್ತಿಗಳು ಸೈಟ್ ವಿವಾದವೊಂದನ್ನು ಬಗೆಹರಿಸಲು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ 40 ಲಕ್ಷ ರೂ ಬೇಡಿಕೆ ಇಟ್ಟಿದ್ದರು, ಅದರಲ್ಲಿ ಮುಂಗಡವಾಗಿ 10 ಲಕ್ಷ ರೂ ಪಡೆದಿದ್ದರು. ಉಳಿದ 30 ಲಕ್ಷಕ್ಕೆ […]

Continue Reading

ಅತಿವೃಷ್ಟಿಯಿಂದ ಬೆಳೆ ಹಾನಿ, ಎಕರೆಗೆ 25 ಸಾವಿರ ಪರಿಹಾರ ನೀಡಲು ಕರವೇ ಆಗ್ರಹ

ಚಿತ್ತಾಪುರ: ಅತಿವೃಷ್ಟಿಯಿಂದ ಮುಂಗಾರು ಬೆಳೆಗಳು ಹಾನಿಯಾಗಿವೆ. ಹೀಗಾಗಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು ಮತ್ತು ಹೆಸರು, ಉದ್ದು ಬೆಳೆಗೆ ಸರ್ಕಾರದಿಂದ ಯೋಗ್ಯ ಬೆಲೆಯಲ್ಲಿ ಖರೀದಿಸಬೇಕು ಎಂದು ಕರವೇ ನಾರಾಯಣಗೌಡ ಬಣದ ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಗ್ರಹಿಸಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಚಂದರ್ ಚವ್ಹಾಣ ಮಾತನಾಡಿ, ಎರಡು ತಿಂಗಳುಗಳಿಂದ ಸುರಿದ ಭಾರಿ ಮಳೆಯಿಂದ ಮುಂಗಾರು ಬೆಳೆಗಳು ಸಂಪೂರ್ಣ ನಾಶವಾಗಿವೆ. ಇದರಿಂದ ರೈತರು ಬಹಳ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅತಿವೃಷ್ಟಿಯಿಂದ ತಾಲೂಕಿನ ಬೆಳೆಗಳು […]

Continue Reading

‌ಡಾ.ವಿಷ್ಣುವರ್ಧನ್ ಸಮಾಧಿ ಕೆಡವಿದವರ ಪ್ಲ್ಯಾನ್‌ ಉಲ್ಟಾ ಮಾಡಿ ಶಾಕ್‌ ಕೊಟ್ಟ ಸರ್ಕಾರ, ಆದೇಶ ಪತ್ರದಲ್ಲಿ ಏನಿದೆ ?

ಬೆಂಗಳೂರು: ಅಭಿಮಾನ್‌ ಸ್ಟುಡಿಯೋ ಹಾಗೂ ವಿಷ್ಣುವರ್ಧನ್‌ ಸಮಾಧಿ ಇದ್ದ ಜಾಗವನ್ನು ಸರ್ಕಾರ ಈಗ ಅರಣ್ಯ ಪ್ರದೇಶ ಎಂದು ಆದೇಶ ಹೊರಡಿಸಿದೆ. ಸರ್ಕಾರ ಹೊರಡಿಸಿದ ಆದೇಶ ಪತ್ರದಲ್ಲಿ ಏನಿದೆ ? ಬೆಂಗಳೂರು ದಕ್ಷಿಣ ತಾಲುಕು, ಕೆಂಗೇರಿ ಹೋಬಳಿ, ಮೈಲಸಂದ ಗ್ರಾಮದ ಸರ್ವೆ ನಂ.26ರಲ್ಲಿ ಅಭಿಮಾನ್ ಸ್ಟುಡಿಯೋಗೆ ನೀಡಿರುವ ಅರಣ್ಯ ಪ್ರದೇಶ ಆದೇಶವನ್ನು ರದ್ದು ಪಡಿಸಿ, ಹಿಂಪಡೆಯುವ ಬಗ್ಗೆ ಬೆಂಗಳೂರು ದಕ್ಷಿಣ ತಾಲೂಕು, ಕೆಂಗೇರಿ ಹೋಬಳಿ, ಮೈಲಸಂದ್ರ ಗ್ರಾಮದ ಸರ್ವೆ ನಂ.22 (78.3-18ಗು), ಸರ್ವೆ ನಂ.2 (b2ಎ-20ಗು)ರ ಪ್ರದೇಶವನ್ನು ಶುರಹಳ್ಳಿ […]

Continue Reading

ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ಬಾಲಕಿಗೆ ಹೆರಿಗೆ: ಗಂಡು ಮಗುವಿಗೆ ಜನನ

ಶಹಾಪುರ: ನಗರದ ವಸತಿ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ‌ ಜನ್ಮ ನೀಡಿದ್ದಾರೆ. ವಸತಿ ಶಾಲೆಯ ಶೌಚಾಲಯದಲ್ಲಿ ಬುಧವಾರ ಮಧ್ಯಾಹ್ನ‌ 2.30ರ ಸುಮಾರಿಗೆ ಬಾಲಕಿಗೆ ಹೆರಿಗೆಯಾಗಿದೆ. ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೂ ತರಲಿಲ್ಲ. ಬೇರೆ ಮೂಲಗಳಿಂದ ಗಮನಕ್ಕೆ ಬಂದಿದ್ದು, ಕ್ರಮಕ್ಕೆ ಮುಂದಾಗಿದ್ದೆವೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು. ಪ್ರಸ್ತುತ […]

Continue Reading

ಭಾರಿ ಮಳೆ: 3 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್’ ಮತ್ತು ಬಹುತೇಕ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ನೀಡಿದ್ದು, ಭಾರಿ ಮಳೆಯಾಗಲಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ […]

Continue Reading

ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಪಾಲಕರ ಸಭೆ ಪೂರಕ

ಕಲಬುರಗಿ: ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಪಾಲಕರ ಸಭೆಗಳು ಪೂರಕವಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ಜೇವರ್ಗಿ ಪಟ್ಟಣದ ಕೋರ್ಟ್ ಸಮೀಪದ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಜರುಗಿದ ‘ಪಾಲಕರ ಸಭೆ’ ಉದ್ಘಾಟಿಸಿ ಮಾತನಾಡಿದ ಅವರು, ಪಾಲಕರ ಸಭೆಗಳು ಮಕ್ಕಳ ಶಿಕ್ಷಣಕ್ಕೆ ನಿರ್ಣಾಯಕವಾಗಿವೆ. ಏಕೆಂದರೆ ಪಾಲಕರು ಮತ್ತು ಶಿಕ್ಷಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ. ಮಗುವಿನ ಶೈಕ್ಷಣಿಕ, ಸಾಮಾಜಿಕ ಮತ್ತು ಭಾವನಾತ್ಮಕ ಪ್ರಗತಿಯನ್ನು ಚರ್ಚಿಸಲು ಅವಕಾಶ ಒದಗಿಸುತ್ತವೆ. ಈ ಸಭೆಗಳು ಪೋಷಕರು ತಮ್ಮ […]

Continue Reading