ರೋಷನ್’ಗೆ ಅನುಶ್ರೀನ ಪರಿಚಯಿಸಿದ್ದೆ ಶ್ರೀದೇವಿ ಭೈರಪ್ಪ, ವಿದೇಶದಿಂದ ಬಂದು ಹಾರೈಸಿದರು

ಬೆಂಗಳೂರು: ಕನ್ನಡದ ರಿಯಾಲಿಟಿ ಶೋಗಳ ಸ್ಟಾರ್ ಆಂಕರ್‌ ಅನುಶ್ರೀ ಅವರು ಇಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಕೂರ್ಗ್ ಮೂಲದ ಐಟಿ ಉದ್ಯೋಗಿ ರೋಷನ್ ರಾಮಮೂರ್ತಿ ಅವರೊಂದಿಗೆ ನಡೆದ ಮದುವೆಯಲ್ಲಿ ಆಪ್ತ ಸ್ನೇಹಿತರು , ಕುಟುಂಬಸ್ಥರು, ಕಿರುತೆರೆ ಮತ್ತು ಹಿರಿತೆರೆಯ ಹಲವಾರು ಗಣ್ಯರು ಭಾಗವಹಿಸಿದ್ದರು. ವಿಶೇಷವೆಂದರೆ ಇವರಿಬ್ಬರ ಪ್ರೀತಿಗೆ ಕೊಂಡಿಯಾಗಿದ್ದು ಶ್ರೀದೇವಿ ಬೈರಪ್ಪ ಎಂಬುದು ಬಹಿರಂಗವಾಗಿದೆ. ಶ್ರೀದೇವಿ ಬೈರಪ್ಪ ಮತ್ತು ರೋಷನ್ ಬಾಲ್ಯ ಸ್ನೇಹಿತರಾಗಿದ್ದು, ಪುನೀತ್ ರಾಜಕುಮಾರ ಅವರಿಗೆ ಸಂಬಂಧಿಸಿದ ಇವೆಂಟ್‌ ನಲ್ಲಿ ಶ್ರೀದೇವಿ ಅವರು ಅನುಶ್ರೀಯನ್ನು ಪರಿಚಯ […]

Continue Reading

ಕಾಗಿಣಾ- ಭೀಮಾ ನದಿಗಳ ಸಂಗಮವು ಕನ್ನಡ ಸಾಹಿತ್ಯ ಸಂಸ್ಕೃತಿಗೆ ಪ್ರೇರಣೆ: ಮುಡುಬಿ ಗುಂಡೇರಾವ

ಚಿತ್ತಾಪುರ: ಕಾಗಿಣಾ- ಭೀಮಾ ನದಿಗಳ ಸಂಗಮವು ಕನ್ನಡ ಸಾಹಿತ್ಯ ಸಂಸ್ಕೃತಿಗೆ ಪ್ರೇರಣೆ ನೀಡಿದೆ ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತವ್ಯಕ್ತ ಪಡಿಸಿದರು. ತಾಲೂಕಿನ ಕುಂದನೂರು- ಹೊನಗುಂಟಿ ಸಮೀಪದ ಕೂಡಲ ಸಂಗಮನಾಥ ದೇವಾಲಯದಲ್ಲಿ ಗ್ರಾಮದ ಬಸವೇಶ್ವರ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-35ದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕೊಂದನೂರು, ಹೊನಗುಂಟಾ, ಶಹಬಾದ, ಭಂಕೂರ, ಮರತೂರ, ಮಾಲಗತ್ತಿ ಮುಂತಾದ ಗ್ರಾಮಗಳು ಪ್ರಾಚೀನ ಕಾಲದಲ್ಲಿ ಪ್ರಸಿದ್ದಿ ಹೊಂದಿದ್ದವು. ಧರ್ಮ, ಆಧ್ಯಾತ್ಮ, ಶಿಕ್ಷಣ, ಕಲೆ, […]

Continue Reading

ರಾಷ್ಟ್ರಕೂಟ, ಕಲ್ಯಾಣ ಚಾಲುಕ್ಯರ ಕಲಾ ವೈಭವ ಬಿಂಬಿಸುವ ದೇವಾಲಗಳು: ಮುಡುಬಿ ಗುಂಡೇರಾವ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ದೊರೆಯುವ ಬಹುತೇಕ ಶಾಸನ, ಸ್ಮಾರಕಗಳು ರಾಷ್ಟ್ರಕೂಟ, ಕಲ್ಯಾಣ ಚಾಲುಕ್ಯರ ಕಲಾ ವೈಭವ, ದಾನ, ದತ್ತಿ, ಪರೋಪಕಾರತೆ ಇತಿಹಾಸವನ್ನು ಸಾರುತ್ತವೆ ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಜಿಲ್ಲೆಯ ಹೊನಗುಂಟಿ ಗ್ರಾಮದ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯದಲ್ಲಿ ಬಸವೇಶ್ವರ ಸೇವಾ ಬಳಗ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-36ದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಶಹಾಬಾದ ತಾಲೂಕಿನ ಭಂಕೂರ, ಮಾಲಗತ್ತಿ, ಮರತೂರ, ದೇವರ ತೆಗನೂರು, ಹೊನಗುಂಟಿ ಗ್ರಾಮಗಳಲ್ಲಿ ಐತಿಹಾಸಿಕ ಪ್ರಾಚೀನ ಕುರುಹುಗಳು, […]

Continue Reading

ಹವಾಮಾನ ಇಲಾಖೆ: ಆ.30ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ […]

Continue Reading

ಊಟ ಮುಗಿಸಿ ಬರುವಷ್ಟರಲ್ಲಿ 97 ಲಕ್ಷ ರೂ ತೆಗೆದುಕೊಂಡು ಪರಾರಿಯಾದ ಡ್ರೈವರ್

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದ ಘಟನೆ ಸಿನಿಮಾ ದೃಶ್ಯವನ್ನು ಹೋಲಿಸುವಂತಿತ್ತು. ಬಾಡಿಗೆ ಕಾರು ಚಾಲಕನು ಕಾರಿನಲ್ಲಿದ್ದ 97 ಲಕ್ಷ ರೂ ತೆಗೆದುಕೊಂಡು ಪರಾರಿಯಾಗಲು ಯತ್ನಿಸಿದ ಆದರೆ ಚಳ್ಳಕೆರೆ ಪೊಲೀಸರು ತಕ್ಷಣ ಬೆನ್ನಟ್ಟಿ ಆರೋಪಿ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಮೂಲದ ನಿವೃತ್ತ ಸಿಬಿಐ ಎಸ್ಪಿ ಗುರುಪ್ರಸಾದ್ ತಮ್ಮ ಪತ್ನಿ ಲಲಿತಾ ಜೊತೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ಕುಟುಂಬದ ಜಮೀನು ಮಾರಾಟ ಮಾಡಿ 97 ಲಕ್ಷ ರೂ ತೆಗೆದುಕೊಂಡು ಬೆಂಗಳೂರಿಗೆ ಹಿಂತಿರುಗುವಾಗ ಬಾಡಿಗೆ ಕಾರಿನಲ್ಲಿ […]

Continue Reading

ಕಲ್ಯಾಣ ಮಂಟಪಗಳಲ್ಲಿ ಕದ್ದ ಹಣದಲ್ಲಿ 3 ಸೈಟ್ ಖರೀದಿಸಿ,1 ಮನೆ ಕಟ್ಟಿದ ಖದೀಮ ಅಂದರ್

ಬೆಂಗಳೂರು: ಈತ ಟಿಪ್‌ಟಾಪ್‌ ಆಗಿ ಕಲ್ಯಾಣ ಮಂಟಪಕ್ಕೆ ಕಾಲಿಟ್ಟನೆಂದರೆ ಅಲ್ಲಿ ವಧು-ವರರ ಕುಟುಂಬಕ್ಕೆ ಸೇರಿದವರ ಚಿನ್ನಾಭರಣ, ನಗದು ಮಂಗಮಾಯವಾಗುವದು ಗ್ಯಾರಂಟಿ ಇತ್ತು, ಹೀಗಾಗಿಯೇ ಮದುವೆ ಮನೆಯಲ್ಲಿ ಕದ್ದ ಚಿನ್ನಾಭರಣಗಳಿಂದ 3 ನಿವೇಶನ ಖರೀದಿಸಿ, ವಾಸಿಸಲು ಸ್ವಂತ ಮನೆಕಟ್ಟಿಕೊಂಡು ಹೆಂಡತಿ-ಮಕ್ಕಳ ಜೊತೆಗೆ ಸಂಸಾರ ಮಾಡಿಕೊಂಡಿದ್ದ ವೃತ್ತಿಪರ ಖದೀಮನೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ತುಮಕೂರು ಜಿಲ್ಲೆ ಗುಬ್ಬಿ ನಿವಾಸಿ ಪರಮೇಶ್ ಈ ಖತರ್‌ನಾಕ್‌ ಕಳ್ಳ. ಕಲ್ಯಾಣ ಮಂಟಪಗಳಿಗೆ ಅತಿಥಿಯ ಸೋಗಿನಲ್ಲಿ ತೆರಳಿ ವಧು-ವರರ ಕೊಠಡಿಗಳಲ್ಲಿ ಚಿನ್ನಾಭರಣ ಕದಿಯುತ್ತಿದ್ದ ಈ ಚಾಲಾಕಿ […]

Continue Reading

ಗಣೇಶ ಹಬ್ಬದಂದು ಚಂದ್ರನನ್ನು ನೋಡಬಾರದು ಯಾಕೆ ?

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೆಯಾದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದೆಯಾದ ಕಥೆಗಳಿದ್ದು, ಗಣೇಶ ಹಬ್ಬಕ್ಕೂ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ. ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದರೆ ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದು ಎಂದು ಅನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೆವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ […]

Continue Reading

ನಾಲವಾರ: ಆ.28 ರಂದು ಶ್ರಾವಣ ಮಾಸದ ಮುಕ್ತಾಯ ಸಮಾರಂಭ

ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ದೇಶ್ವರ ಮಹಾಸಂಸ್ಥಾನ ಮಠದಲ್ಲಿ ಆಗಸ್ಟ್ 28 ರಂದು ಗುರುವಾರ ಶ್ರಾವಣ ಮಾಸದ ಮುಕ್ತಾಯ ಸಮಾರಂಭ ಅತ್ಯಂತ ಅದ್ಧೂರಿಯಾಗಿ ನೆರವೇರಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಕೆ ಗಂವ್ಹಾರ ತಿಳಿಸಿದ್ದಾರೆ. ಶ್ರಾವಣ ಮಾಸದ ಪರ್ಯಂತ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದ ನಿಮಿತ್ಯ ಗುರುವಾರ ಮಧ್ಯಾಹ್ನ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಪುರಪ್ರವೇಶ, ಅದ್ಧೂರಿ ಶೋಭಾಯಾತ್ರೆ ಮತ್ತು ಸದ್ಗುರು ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಪಲ್ಲಕ್ಕಿ ಉತ್ಸವ ನಡೆಯಲಿದೆ. […]

Continue Reading

ಕಲ್ಯಾಣ ಕರ್ನಾಟಕ ಭಾಗದಲ್ಲಿ 200 ಎಲೆಕ್ಟ್ರಿಕಲ್‌ ಸಿಟಿ ಬಸ್‌ಗಳ ಆರಂಭಿಸಲು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ಧಾರ

ಗಂಗಾವತಿ: ಕಲ್ಯಾಣ ಕರ್ನಾಟಕ ಭಾಗದ ಆಯ್ದ ನಗರಗಳಲ್ಲಿ ಸಂಚಾರ ದಟ್ಟಣೆಗೆ ಶೀಘ್ರವೇ ಪರಿಹಾರ ಸಿಗಲಿದೆ. ಅಕ್ಟೋಬರ್‌ ಆರಂಭದಲ್ಲಿ 200 ಎಲೆಕ್ಟ್ರಿಕಲ್‌ ಸಿಟಿ ಬಸ್‌ಗಳನ್ನು ರಸ್ತೆಗೆ ಇಳಿಸಲು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ಧರಿಸಿದೆ. ಪ್ರಧಾನಮಂತ್ರಿ ವಿದ್ಯುನ್ಮಾನ ಯೋಜನೆಯಡಿ (ಪಿಎಂಇ) ಮೊದಲ ಹಂತದಲ್ಲಿ ಕಲಬುರಗಿ, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್‌ ಬಸ್‌ಗಳನ್ನು ಓಡಿಸಲಾಗುತ್ತದೆ. ಸಾರಿಗೆ ನಿಗಮದ ಅನುದಾನದಲ್ಲಿ ಕೊಪ್ಪಳ, ವಿಜಯನಗರ, ಬೀದರ್‌ ಮತ್ತು ರಾಯಚೂರು ಜಿಲ್ಲೆಗಳಿಗೆ ಡೀಸೆಲ್‌ ಆಧರಿತ ನೂತನ ಸಿಟಿ ಬಸ್‌ಗಳನ್ನು ಪೂರೈಸಲಾಗುತ್ತದೆ. […]

Continue Reading

ಜಗತ್ತಿನ ಅತಿದೊಡ್ಡ ಉಚಿತ ಆಸ್ಪತ್ರೆ ಚಿಕ್ಕಬಳ್ಳಾಪುರದಲ್ಲಿ ಶೀಘ್ರ ಲೋಕಾರ್ಪಣೆ: ಇಲ್ಲಿ ಬಿಲ್ಲಿಂಗ್‌ ಕೌಂಟರೇ ಇರಲ್ವಂತೆ

ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೆನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಜಗತ್ತಿನಲ್ಲೇ ಅತಿ ದೊಡ್ಡ ಉಚಿತ ಆಸ್ಪತ್ರೆ ತಲೆ ಎತ್ತುತ್ತಿದೆ. ಮೊದಲ ಬಾರಿಗೆ ಜಗತ್ತಿನ ಎಲ್ಲಾ ಭಾಗದ ಎಲ್ಲಾ ಜನರಿಗೂ ಉಚಿತವಾಗಿ ವೈದ್ಯಕೀಯ ಸೇವೆ ಒದಗಿಸುವ ಬೃಹತ್‌ ಕಟ್ಟಡ ತಲೆ ಎತ್ತುತ್ತಿದೆ. ಸುಮಾರು 6,50,000 ಚದರಡಿ ವಿಸ್ತೀರ್ಣದಲ್ಲಿ ತಲೆ ಎತ್ತುತ್ತಿರುವ ಈ ಭವ್ಯ ಆಸ್ಪತ್ರೆಯಲ್ಲಿ 28 ವೈದ್ಯಕೀಯ ವಿಭಾಗಗಳು ಕಾರ್ಯನಿರ್ವಹಿಸಲಿವೆ. ಭಾರತದ ಮೊದಲ ಉಚಿತ ಗ್ರಾಮೀಣ ವೈದ್ಯಕೀಯ ಕಾಲೇಜಾಗಿ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ 2023ರಲ್ಲಿ […]

Continue Reading