ರುದ್ರಾಕ್ಷಿ ಧಾರಣೆಯಿಂದ ಆಧ್ಯಾತ್ಮಿಕ, ಭೌತಿಕ ಲಾಭ: ಚರಲಿಂಗ ಶ್ರೀ

ಕಲಬುರಗಿ: ರುದ್ರಾಕ್ಷಿ ಪವಿತ್ರ ವಸ್ತುವಾಗಿದ್ದು, ಇದನ್ನು ಧರಿಸುವುದರಿಂದ ಆಧ್ಯಾತ್ಮಿಕ ಮತ್ತು ಭೌತಿಕ ಪ್ರಯೋಜನ ಪಡೆಯಬಹುದು, ರಕ್ತದೊತ್ತಡ ಮತ್ತು ಚರ್ಮದ ಸಮಸ್ಯೆಗಳಿಗೆ ಪರಿಹಾರ ಇದರಲ್ಲಿದೆ. ಇದು ಆಧ್ಯಾತ್ಮಿಕ ಪ್ರಗತಿಗೆ ಸಹಾಯ ಮಾಡುತ್ತದೆ‌ ಎಂದು ಗದ್ದುಗೆ ಮಠದ ಪೂಜ್ಯ ಚರಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಬಿಲಗುಂದಿ ಪೆಟ್ರೋಲ್ ಪಂಪ್ ಎದುರುಗಡೆಯ ಬಡೆಪೂರ ಕಾಲೋನಿಯ ಭಕ್ತರ ಮನೆಗಳಿಗೆ ಹೋಗಿ ರುದ್ರಾಕ್ಷಿ ಧಾರಣೆ ಕಾರ್ಯಕ್ರಮ ಮತ್ತು ಸದ್ಭಾವನ ಪಾದಯಾತ್ರೆ ಪ್ರಾರಂಭಿಸಿ ಮಾತನಾಡಿದ ಅವರು, ಧ್ಯಾನ ಮತ್ತು ಪ್ರಾರ್ಥನೆಗಳಿಗೆ ರುದ್ರಾಕ್ಷಿ ಬಳಸಲಾಗುತ್ತದೆ. ನಕರಾತ್ಮಕ ಶಕ್ತಿಗಳಿಂದ […]

Continue Reading

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ 2 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. […]

Continue Reading

ಧರ್ಮ ಆಧ್ಯಾತ್ಮದ ತವರೂರು, ಶಿಕ್ಷಣದ ಕಾಶಿ ಹರಸೂರು: ಮುಡುಬಿ

ಕಾಳಗಿ: ಕಲ್ಯಾಣ ಚಾಲುಕ್ಯರ ಮತ್ತು ರಾಷ್ಟ್ರಕೂಟರ ಕಾಲದಲ್ಲಿ ನಾಡಿಗೆ ವಿದ್ಯಾದಾನಗೈದ ಕೀರ್ತಿ ಹರಸೂರು ಗ್ರಾಮಕ್ಕೆ ಸಲ್ಲುತ್ತದೆ ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಹರಸೂರ ಗ್ರಾಮದಲ್ಲಿ ಬಸವೇಶ್ವರ ಸೇವಾ ಬಳಗ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ- 28ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಹರಸೂರ ಗ್ರಾಮವು ಪ್ರಾಚೀನ ಕಾಲದಲ್ಲಿ ಆಧ್ಯಾತ್ಮದ ತವರೂರಾಗಿತ್ತು. ಗ್ರಾಮದ ಹೆಸರೇ ಸೂಚಿಸುವಂತೆ ಸಾಕ್ಷಾತ ಹರ(ಶಿವ)ನೇ ನೆಲೆ ನಿಂತ ಗ್ರಾಮವು ಹರಸೂರಾಗಿದೆ. ಗ್ರಾಮದಲ್ಲಿ ಶಿವನಿಗೆ ಸೇರಿದಂತೆ ಅವತಾರಗಳು, […]

Continue Reading

ಮಲೆನಾಡು, ಕಲ್ಯಾಣ ಕರ್ನಾಟಕದಲ್ಲಿ ಭಾರಿ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಚಿಕ್ಕಮಗಳೂರು, ಕೊಡಗು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರವಿವಾರ ಧಾರಾಕಾರ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ಮಲೆನಾಡಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕುದುರೆ ಮುಖ ಭಾಗದಲ್ಲಿ ಭಾರಿ ಮಳೆ ಇದ್ದು, ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶೃಂಗೇರಿ ಪಟ್ಟಣದ ಗಾಂಧಿ ಮೈದಾನ, ದೇಗುಲದ ವಾಹನ ನಿಲುಗಡೆ ತಾಣದಲ್ಲಿದ್ದ ವಾಹನಗಳು ನೀರಿನಲ್ಲಿ ಮುಳುಗಿವೆ. ಆಸುಪಾಸಿನ ಜಮೀನು, ತೋಟಗಳಿಗೆ ನೀರು ನುಗ್ಗಿದೆ. ಕೊಪ್ಪ, ಕಳಸ, ಎನ್.ಆರ್ ಪುರ, ಮೂಡಿಗೆರೆ ವ್ಯಾಪ್ತಿಯಲ್ಲಿ ಜೋರು ಮಳೆ ಇದೆ. ಚಾರ್ಮಾಡಿ ಘಾಟಿಯಲ್ಲಿ ಜೋರು […]

Continue Reading

ನಾಲವಾರ: ಆ.21 ರಂದು ಭಕ್ತರಿಗೆ ಗುರುದೀಕ್ಷಾ, ಅಯ್ಯಾಚಾರ ಕಾರ್ಯಕ್ರಮ

ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾ ಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಇಷ್ಟಲಿಂಗ ಸಹಿತ ಗುರುಪಾದಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿ ಭಾವದಿಂದ ನಡೆಯುತ್ತಿದ್ದು, ಶ್ರಾವಣ ಸಂಭ್ರಮ ಕಳೆಗಟ್ಟಿದೆ ಎಂದು ಮಠದ ವಕ್ತಾರ ಮಹಾದೇವ ಕೆ ಗಂವ್ಹಾರ ತಿಳಿಸಿದ್ದಾರೆ. ಪ್ರತಿ ವರ್ಷದ ಪದ್ಧತಿಯಂತೆ ಶ್ರಾವಣದ ಕೊನೆಯ ಗುರುವಾರ ಆಗಸ್ಟ್ 21ರಂದು ಶ್ರೀಮಠದ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಭಕ್ತರಿಗೆ ಗುರುದೀಕ್ಷೆ ಹಾಗೂ ಜಂಗಮ […]

Continue Reading

ಸಾಲ ಕೊಟ್ಟವರ ಮನೆಯಲ್ಲಿ ಕನ್ನ: ತಂಗಿ ಕೃತ್ಯಕ್ಕೆ ಅಣ್ಣ ಸಾಥ್,​ ಆರು ಜನರ ಬಂಧನ

ನೆಲಮಂಗಲ: ಸಾಲ ತೀರಿಸಲು ಸಾಲ ಕೊಟ್ಟವರ ಮನೆಯಲ್ಲಿ ಕಳ್ಳತನ ಮಾಡಿದ ಗ್ಯಾಂಗ್​ವೊಂದು ಸಿಕ್ಕಿಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬಾಗಲಗುಂಟೆ ಠಾಣೆಯ ಪೊಲೀಸರು 6 ಜನ ಆರೋಪಿಗಳನ್ನು ಬಂಧಿಸಿ, 9.9 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಕುಖ್ಯಾತ ಕಳ್ಳ ಮೋರಿ ರಾಜ, ವೆಂಕಟೇಶ್, ಕವಿತಾ, ಹರೀಶ್, ನಾಗರಾಜ್ ಮತ್ತು ಪ್ರತಾಪ್​ ಬಂಧಿತರು. ಘಟನೆ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹ ಧಮ್ ಬಿರಿಯಾನಿ ಹೆಸರಿನ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ಮಂಗಳಾ ಎಂಬುವವರ ಬಳಿ ಕವಿತಾ […]

Continue Reading

ನ್ಯಾ.ಎಚ್‌.ಎನ್‌ ನಾಗಮೋಹನ್‌ ದಾಸ್‌ ಒಳಮೀಸಲಾತಿ ವರದಿ ಅವೈಜ್ಞಾನಿಕ ಎಂಬ ಬೆಣ್ಣೂರಕರ್ ಆರೋಪ ಸತ್ಯಕ್ಕೆ ದೂರ: ದೀಪಕ್ ಹೊಸೂರಕರ್

ಚಿತ್ತಾಪುರ: ನ್ಯಾ.ಎಚ್‌.ಎನ್‌ ನಾಗಮೋಹನ್‌ ದಾಸ್‌ ಒಳಮೀಸಲಾತಿ ವರದಿ ಅವೈಜ್ಞಾನಿಕ ಎಂಬ ಜಿ‌‌.ಪಂ ಮಾಜಿ ಸದಸ್ಯ ಬಸವರಾಜ ಬೆಣ್ಣೂರಕರ್ ಆರೋಪ ಸತ್ಯಕ್ಕೆ ದೂರ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸೂರಕರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಗಸ್ಟ್ 19ರ ವಿಶೇಷ ಸಂಪುಟ ಸಭೆಯಲ್ಲಿ ಒಳ ಮಿಸಲಾತಿ ಜಾರಿಗೆ ಅಂತಿಮ ತೀರ್ಮಾನ ಸರ್ಕಾರ ಕೈಗೊಳ್ಳಲೇಬೇಕು. ಇಲ್ಲವಾದರೆ ರಾಜ್ಯದ 29 ಸಾವಿರ ಹಳ್ಳಿಗಳಲ್ಲಿ ಅಸ್ಪೃಶ್ಯ ಸಮಾಜದವರು ಬೀದಿಗಿಳಿದು ಮಾಡು ಇಲ್ಲವೇ ಮಡಿ ಹೋರಾಟ […]

Continue Reading

ದಂಡೋತಿ: ಪ್ರವಾಹದಲ್ಲಿ ಕಿತ್ತುಹೋದ ಸೇತುವೆ ರಸ್ತೆ

ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದಹತ್ತಿರದ ಕಾಗಿಣಾ ನದಿಗೆ ಕಟ್ಟಿರುವ ಸೇತುವೆ ಮೇಲಿನ ರಸ್ತೆ ಪ್ರವಾಹದಲ್ಲಿ ಕಿತ್ತು ಹೋಗಿದೆ. ಸೇತುವೆ ಮೇಲಿನ ಡಾಂಬರ್ ರಸ್ತೆ ಮತ್ತು ಸಿಮೆಂಟ್ ಕಾಂಕ್ರಿಟ್ ರಸ್ತೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದೆ. ಗುರುವಾರ ದಿನವಿಡಿ ಪ್ರವಾಹದಲ್ಲಿ ಸೇತುವೆ ಮುಳುಗಿತ್ತು. ಶುಕ್ರವಾರ ಬೆಳಿಗ್ಗೆ ಪ್ರವಾಹ ಕಡಿಮೆಯಾದಾಗ ಸೇತುವೆ ಮೇಲಿನ ರಸ್ತೆ ಕಿತ್ತು ಹೋಗಿರುವುದು ಬೆಳಕಿಗೆ ಬಂದಿದೆ. ಸೇತುವೆ ಮೇಲಿನ ಅನೇಕ ಸಿಮೆಂಟ್ ಕಂಬಗಳು ಕೊಚ್ಚಿಕೊಂಡು ಹೋಗಿವೆ. ಸೇತುವೆ ಮೇಲೆ ಅಳವಡಿಸಿದ ಮೊಬೈಲ್ ನೆಟ್‌ವರ್ಕ್ ಮತ್ತು ಕೇಬಲ್ ಕಿತ್ತು […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಮಾಜಿ ಪ್ರಧಾನಿ ಅಟಲ್’ಜಿ ಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ಸ್ಮರಣೆ ಜರುಗಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ವಿಶ್ವವೇ ಅಚ್ಚರಿಯಿಂದ ನೋಡುವಂತೆ ದೇಶವನ್ನು ಮುನ್ನಡೆಸಿದ ಕೀರ್ತಿಗೆ ಪಾತ್ರರಾದ ವಾಜಪೇಯಿ ಅವರು ಮೂರು ಬಾರಿ ಪ್ರಧಾನಿ ಹುದ್ದೆಗೇರಿದ್ದರು ಎಂದರು. ಒಂದು ಬಾರಿ 13 ದಿನಕ್ಕೆ ಅಧಿಕಾರ ಕಳೆದುಕೊಂಡರೆ, ಮತ್ತೊಮ್ಮೆ 13 ತಿಂಗಳಿಗೆ ಅಧಿಕಾರ ಕಳೆದುಕೊಂಡರು. ಮೂರನೇ ಬಾರಿಗೆ ಪ್ರಧಾನಿ ಪಟ್ಟ ಅಲಂಕರಿಸಿ ಐದು ವರ್ಷ ಅಧಿಕಾರ […]

Continue Reading

ವಾಹನ ಮಾಲೀಕರಿಗೆ ಸೂಚನೆ: ಮೊಬೈಲ್ ನಂಬರ್ ಲಿಂಕ್ ಕಡ್ಡಾಯ, ಆನ್‌ಲೈನ್ ಪ್ರಕ್ರಿಯೆ ಹೇಗೆ ?

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಹತ್ವದ ಅಪ್‌ಡೇಟ್ ನೀಡಿದೆ. ವಾಹನ ಮಾಲೀಕರು ಮತ್ತು ಡ್ರೈವಿಂಗ್ ಲೈಸೆನ್ಸ್ ಹೋಲ್ಡರ್ ಮೊಬೈಲ್ ನಂಬರ್ ಅಪ್‌ಡೇಟ್ ಅಥವಾ ಲಿಂಕ್ ಮಾಡಿಕೊಳ್ಳಬೇಕು, ಇದು ಕಡ್ಡಾಯವಾಗಿದೆ. ದೇಶಾದ್ಯಂತ ಈ ಅಪ್‌ಡೇಟ್ ನಡೆಯಲಿದೆ. ಪಾರದರ್ಶಕತೆ, ಸಂವಹನ ಸೇರಿದಂತೆ ಇತರ ಹಲವು ತಾಂತ್ರಿಕ ಕಾರಣಗಳಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ. ಸಾರಿಗೆಯ ಹಲವು ಸೇವೆಗಳಿಗೆ ಮೊಬೈಲ್ ನಂಬರ್ ಲಿಂಕಿಂಗ್ ಮತ್ತು ಆಧಾರ್ ಅಥೆಂಟಿಕೇಶನ್ ಕಡ್ಡಾಯ ಮಾಡಲಾಗಿದೆ. ಲೈಸೆನ್ಸ್, […]

Continue Reading