ಬೀದರ: ಸೆ.7 ರಂದು ದ್ವಿತೀಯ ಅಖಿಲ ಕರ್ನಾಟಕ ಗಜಲ್ ಸಮ್ಮೇಳನ

ಕಲಬುರಗಿ: ಅಖಿಲ ಕರ್ನಾಟಕ ದ್ವಿತೀಯ ಗಜಲ್ ಸಾಹಿತ್ಯ ಸಮ್ಮೇಳನವನ್ನು ಸೆಪ್ಟೆಂಬರ್ 7 ರಂದು ರವಿವಾರ ಬೀದರ ನಗರದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಗಜಲ್ ಸಮ್ಮೇಳನದ ರೂವಾರಿ ಆಗಿರುವ ಕರ್ನಾಟಕ ಗಜಲ್ ಅಕಾಡೆಮಿ ಕಾರ್ಯದರ್ಶಿ ಮಹಿಪಾಲರೆಡ್ಡಿ ಸೇಡಂ ತಿಳಿಸಿದ್ದಾರೆ. ಕಳೆದ ವರ್ಷ ಕಲಬುರಗಿಯ ವಿಶ್ವವಿದ್ಯಾಲಯದಲ್ಲಿ ಪ್ರಥಮ ಗಜಲ್ ಸಾಹಿತ್ಯ ಸಮ್ಮೇಳನ ನಡೆಸಲಾಗಿತ್ತು, ಈ ಬಾರಿ ಕರ್ನಾಟಕದ ಮುಕುಟಪ್ರಾಯ ಎನಿಸಿರುವ ಧರಿನಾಡಿನಲ್ಲಿ ದ್ವಿತೀಯ ಗಜಲ್ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದ್ದು, ಸಮ್ಮೇಳನಾಧ್ಯಕ್ಷರಾಗಿ ಕನ್ನಡದ ಹಿರಿಯ ಕವಿ, ಬಹುಭಾಷಾ ವಿದ್ವಾಂಸರು ಮತ್ತು ಗಜಲ್ […]

Continue Reading

ವಿಶ್ವ ಬುಡಕಟ್ಟು ದಿನಾಚರಣೆ ನಾಳೆ

ಕಲಬುರಗಿ: ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ವತಿಯಿಂದ ದಿ.8ರಂದು ಶುಕ್ರವಾರ ‘ವಿಶ್ವ ಬುಡಕಟ್ಟು ದಿನಾಚರಣೆ’ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಬಿ ಪಾಟೀಲ ತಿಳಿಸಿದ್ದಾರೆ. ನಗರದ ಹೊಸ ಜೇವರ್ಗಿ ರಸ್ತೆಯ ಖಮೀತಕರ್ ಕಲ್ಯಾಣ ಮಂಟಪದ ಸಮೀಪವಿರುವ ಗೆಟ್ಸ್ ಡಿಗ್ರಿ ಕಾಲೇಜಿನಲ್ಲಿ ಬೆ.10.30ಕ್ಕೆ ಕಾರ್ಯಕ್ರಮ ಜರುಗಲಿದೆ. ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ ಉದ್ಘಾಟಿಸಲಿದ್ದಾರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ಗುವಿವಿ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಸುನೀಲಕುಮಾರ ಎಚ್.ವಂಟಿ, […]

Continue Reading

ನೇಕಾರರಿಗೆ ಆರ್ಥಿಕ ಭದ್ರತಾ ಸೌಲಭ್ಯ ದೊರೆಯಲಿ

ಕಲಬುರಗಿ: ಸಮಾಜಕ್ಕೆ ಬಟ್ಟೆ ನೀಡಿ ಮಾನವನ್ನು ಕಾಪಾಡುವ ನೇಕಾರರ ಬದುಕು ಸಂಕಷ್ಟದಲ್ಲಿದೆ. ವೃತ್ತಿಗೆ ಸಂಬಂಧಿಸಿದಂತೆ ಮೂಲಭೂತ ಸೌಕರ್ಯ, ಆರ್ಥಿಕ ಸಹಾಯ ಸೇರಿದಂತೆ ಮುಂತಾದ ಸೌಲಭ್ಯಗಳನ್ನು ಒದಗಿಸಿಕೊಟ್ಟು, ನೇಕಾರರ ಬದುಕು ಹಸನುಗೊಳಿಸುವ ಕಾರ್ಯವಾಗಬೇಕು ಎಂದು ಹಿರಿಯ ಕೈಮಗ್ಗ ಮಹಾದೇವ ಹುಲ್ಮನಿ ಒತ್ತಾಸೆ ಮಾಡಿದರು. ಆಳಂದ ತಾಲೂಕಿನ ಸುಂಟನೂರ ಗ್ರಾಮದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ‘11ನೇ ರಾಷ್ಟೀಯ ಕೈಮಗ್ಗ ನೇಕಾರರ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನೇಕಾರರು ನೂರಾರು ವರ್ಷಗಳಿಂದ ಬಟ್ಟೆ ನೇಯ್ಗೆ ವೃತ್ತಿಯನ್ನೇ […]

Continue Reading

ಕುಡಿತದ ಚಟ ಬಿಡಿಸಲು ನಾಟಿ ಔಷಧಿ ಸೇವಿಸಿ ನಾಲ್ವರು ಸಾವು: ನಕಲಿ ವೈದ್ಯ ಅರೆಸ್ಟ್

ಕಲಬುರಗಿ: ಕುಡಿತದ ಚಟ ಬಿಡಿಸಲು ನಕಲಿ ವೈದ್ಯನಿಂದ ಚಿಕಿತ್ಸೆ ಪಡೆದು ನಾಲ್ವರು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮಿ, ಗಣೇಶ್ ರಾಠೋಡ, ನಾಗೇಶ್ ಹಾಗೂ ಮನೋಹರ ಮೃತ ದುರ್ದೈವಿಗಳು. ನಕಲಿ ವೈದ್ಯ ಸಾಯಪ್ಪ ಮುತ್ಯಾ ಅಲಿಯಾಸ್ ಫಕೀರಪ್ಪ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮದ್ಯವ್ಯಸನಿಗಳಾಗಿದ್ದ ಲಕ್ಷ್ಮಿ, ಗಣೇಶ ರಾಠೋಡ, ನಾಗೇಶ್ ಹಾಗೂ ಮನೋಹರ ತಮ್ಮ ಕುಟುಂಬಸ್ಥರೊಂದಿಗೆ ಸೇಡಂ ತಾಲೂಕಿನ ಇಮಡಾಪುರ ಗ್ರಾಮಕ್ಕೆ ಬಂದಿದ್ದರು. ಇಮಡಾಪುರ ಗ್ರಾಮದ ಸಾಯಪ್ಪ ಮುತ್ಯಾ ಅಲಿಯಾಸ್ ಫಕೀರಪ್ಪ ಎಂಬ […]

Continue Reading

ಬಸ್ ಬಾರದ್ದಕ್ಕೆ ಹಾಲಿನ ಗಾಡಿ ಹತ್ತಿದ ವಿದ್ಯಾರ್ಥಿಗಳು– ವಾಹನ ಪಲ್ಟಿ, 7 ಜನರಿಗೆ ಗಾಯ

ಮೈಸೂರು: ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, ಬಸ್ ಬಾರದ ಹಿನ್ನೆಲೆಯಲ್ಲಿ ಹಾಲಿನ ವಾಹನ ಹತ್ತಿದ್ದರು, ಆ ವಾಹನ ಪಲ್ಟಿಯಾದ ಪರಿಣಾಮ 7 ಜನರು ಗಾಯಗೊಂಡಿರುವ ಘಟನೆ ಮೈಸೂರಿನ ಹುಣಸೂರು ತಾಲೂಕು ಸೋಮನಹಳ್ಳಿ ಬಳಿ ನಡೆದಿದೆ. ಹುಣಸೂರು ಬನ್ನಿಕುಪ್ಪೆ ಫ್ರೌಢಶಾಲೆಯ ತೆರಳುತ್ತಿದ್ದ ಮೂಕನಹಳ್ಳಿ ಗ್ರಾಮದ ಪಾಲಾಕ್ಷ, ವಿದ್ಯಾಚರಣ, ಅಪ್ಪು, ನಿತಿನ್, ಚಂದ್ರಶೇಖರ್, ಮನುಕುಮಾರ್, ಎಮ್ಮೆಕೊಪ್ಪಲಿನ ಸಂಜಯ್ ಗಾಯಗೊಂಡ ವಿದ್ಯಾರ್ಥಿಗಳು. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿ ಪಾಲಾಕ್ಷಗೆ ಗಂಭೀರ ಗಾಯವಾಗಿದ್ದು, ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, […]

Continue Reading

ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧಾರ: ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ. ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದರು. ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರಿಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಮಾತ್ರ ಜನೌಷಧಿ ಕೇಂದ್ರಗಳನ್ನ ನಿರ್ಬಂಧಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಜನಸಾಮಾನ್ಯರಿಗೆ ಉಚಿತ ಔಷಧಿಗಳನ್ನು ನಿರಾಕರಿಸುವ […]

Continue Reading

ಪರಮಾಣು ಶಕ್ತಿಯಿಂದ ರಾಷ್ಟ್ರದ ಅಭಿವೃದ್ಧಿ ಸಾಧ್ಯ: ಎಚ್.ಬಿ ಪಾಟೀಲ

ಕಲಬುರಗಿ: ಪರಮಾಣು ಶಕ್ತಿ ಬಳಸಿ ವಿದ್ಯುಚ್ಛಕ್ತಿ ಉತ್ಪಾದನೆ, ಕೈಗಾರಿಕಾ ಕ್ಷೇತ್ರ ಸೇರಿದಂತೆ ಇನ್ನಿತರ ಅಭಿವೃದ್ಧಿಗೆ ಬಳಸಿದರೆ, ನಾಶವಾಗುವುದು ತಪ್ಪುತ್ತದೆ ಮತ್ತು ರಾಷ್ಟ್ರದ ಅಭಿವೃದ್ಧಿಯಾಗಲು ಸಾಧ್ಯವಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಹಿರೋಷಿಮಾ ಮತ್ತು ನಾಗಾಸಾಕಿ ಕರಾಳ ದಿನಾಚರಣೆ’ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಮಾಣು ಶಕ್ತಿ ಬಳಸಿಕೊಂಡು ಹಿರೋಷಿಮಾ ಮತ್ತು ನಾಗಾಸಾಕಿ ಮೇಲೆ ದಾಳಿಮಾಡುವ […]

Continue Reading

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ: ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯ ಧರಾಲಿಯಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ನಾಲ್ಕು ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ಜಲಪ್ರಳಯದಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿರುವುದಾಗಿ ಮೂಲಗಳು ತಿಳಿಸಿವೆ. ಖೀರ್ ಗಂಗಾ ನದಿಯ ರೌದ್ರಾವತಾರಕ್ಕೆ ಇಡಿ ಊರಿಗೆ ಊರೇ ಸರ್ವನಾಶವಾಗಿದೆ. ಬೆಟ್ಟದ ಮೇಲಿಂದ ಏಕಾಏಕಿ ನೀರು ಹರಿದು ಬಂದಿದ್ದು, ಗ್ರಾಮವೇ ಕೊಚ್ಚಿಕೊಂಡು ಹೋಗಿದೆ. ಪರಿಣಾಮ 4 ಜನರು ಸಾವನ್ನಪ್ಪಿದ್ದು, ಪ್ರವಾಸಿಗರು, ಅಲ್ಲಿನ ಸ್ಥಳೀಯರು ಸೇರಿದಂತೆ 60ಕ್ಕೂ ಹೆಚ್ಚು ಜನರು ಜಲಪ್ರಳಯದಲ್ಲಿ ಕೊಚ್ಚಿ ಹೋಗಿದ್ದಾರೆ. ಸದ್ಯ ಸ್ಥಳದಲ್ಲಿ ಉತ್ತರಕಾಶಿ ಪೊಲೀಸ್, ರಾಜ್ಯ […]

Continue Reading

ಮುಷ್ಕರ ನಡೆಸಿದ ಸಾರಿಗೆ ಸಂಘಟನೆಗೆ ಹೈಕೋರ್ಟ್ ತರಾಟೆ, ಅರೆಸ್ಟ್ ಎಚ್ಚರಿಕೆಗೆ ಅಧ್ಯಕ್ಷರು ಥಂಡಾ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಖಡಕ್​ ಎಚ್ಚರಿಕೆ ನೀಡಿದ ಬೆನ್ನಲ್ಲೇ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್​ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿದ್ದೆವೆ ಎಂದು ಘೋಷಿಸಿದ್ದಾರೆ. ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್​ ಸೂಚನೆ ನೀಡಿದ ನಂತರವೂ ಸಾರಿಗೆ ನೌಕರರು ಮಂಗಳವಾರ ಮುಷ್ಕರ ನಡೆಸಿದರು. ಇದರಿಂದ ಗರಂ ಆದ ಹೈಕೋರ್ಟ್​, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿತು. ಮುಷ್ಕರ ನಿಲ್ಲಿಸದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು. […]

Continue Reading

ಕನ್ನಡಗಿಯಲ್ಲಿ ಸಂಭ್ರಮದ ಪಲ್ಲಕ್ಕಿ ಉತ್ಸವ

ಕಾಳಗಿ: ಬೆಣ್ಣೆತೊರಾ ಜಲಾಶಯದ ದಡದಲ್ಲಿರುವ ಕನ್ನಡಗಿಗ್ರಾಮದಲ್ಲಿ ಶ್ರಾವಣ ಎರಡನೇ ಸೋಮವಾರದಂದು ಅಪಾರ ಭಕ್ತರ ಜೈಘೋಷ ಮಧ್ಯೆ ಅದ್ದೂರಿಯಾಗಿ ಶ್ರೀ ಮಲ್ಲಿಕಾರ್ಜುನ ದೇವರ ಪಲ್ಲಕ್ಕಿ ಉತ್ಸವ ನಡೆಯಿತು. ಬೆಳೆಗ್ಗೆ ಮೂಲ ವಿಗ್ರಹಕ್ಕೆ ರುದ್ರಾಭಿಷೇಕ, ವಿಶೇಷ ಪೂಜೆ ಜರುಗಿತು. ಮಧ್ಯಾಹ್ನ ನಂದಿಕೋಲು ಉತ್ಸವ, ಸಾಯಂಕಾಲ ಪಲ್ಲಕ್ಕಿ ಉತ್ಸವ ಡೋಲು, ಹಲಗೆ, ಪುರವಂತರ ಮೆರವಣಿಗೆ ಹಾಗೂ ಅಪಾರ ಭಕ್ತರ ಜೈ ಘೋಷಗಳ ಮಧ್ಯೆ ಸಡಗರದಿಂದ ಜರುಗಿತು. ಆಗಮಿಸಿದ್ದ ಭಕ್ತಾದಿಗಳಿಗೆ ಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನದ ಅರ್ಚಕರಿಂದ ವಿಶೇಷ ಪೂಜೆ […]

Continue Reading