ದಾನ ಪಡೆದ ರಕ್ತದಿಂದ 5 ಮಕ್ಕಳಿಗೆ ಹೆಚ್‌ಐವಿ ಸೋಂಕು: ಮೂವರು ಆರೋಗ್ಯ ಸಿಬ್ಬಂದಿ ಅಮಾನತು

ಭೋಪಾಲ್‌: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಹೆಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರಿ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮೂವರು ಆರೋಗ್ಯ ಸಿಬ್ಬಂದಿಯನ್ನ ಅಮಾನತುಗೊಳಿಸಿ, ತನಿಖೆಗೆ ಆದೇಶಿಸಿದೆ. ಥಲಸ್ಸೆಮಿಯಾದಿಂದ ಬಳಲುತ್ತಿದ್ದ 15 ವರ್ಷದೊಳಗಿನ 6 ಮಕ್ಕಳಿಗೆ ರಕ್ತ ಕೊಡುವಾಗ ವೈದ್ಯರು ಯಡವಟ್ಟು ಮಾಡಿದ್ದಾರೆ. ಬಾಧಿತ ಮಕ್ಕಳಿಗಾಗಿ 3 ಬ್ಯಾಂಕ್‌ಗಳಿಂದ 189 ಯೂನಿಟ್‌ ರಕ್ತವನ್ನು ಸಂಗ್ರಹಿಸಲಾಗಿತ್ತು. ಈ […]

Continue Reading

ಅಂತರರಾಜ್ಯ ಕಳ್ಳನ ಬಂಧನ: 250 ಗ್ರಾಂ ಚಿನ್ನ ವಶ

ಸುದ್ದಿ ಸಂಗ್ರಹ ಹಾಸನ ನಗರದ ಪೆನ್ಷನ್‍ಮೊಹಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 79 ಪ್ರಕರಣಗಳಿರುವ ಅಂತರರಾಜ್ಯ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಂಗಳೂರಿನ ವಿನಾಯಕ ನಗರದ ಗೆದ್ದಲಹಳ್ಳಿ ಮೂಲದ ಸೋಹಿಲ್‍ಖಾನ್ (38) ಎಂದು ಗುರುತಿಸಲಾಗಿದೆ. ಈತ ಕರ್ನಾಟಕದಲ್ಲಿ 27 ಪ್ರಕರಣ, ಆಂಧ್ರಪ್ರದೇಶದಲ್ಲಿ 52 ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಉಡುಪಿ ಜಿಲ್ಲೆಯಲ್ಲಿ ನಡೆದಿದ್ದ ಒಂದು ಪ್ರಕರಣದಲ್ಲಿ ಆರೋಪಿ ಎಂಬುದು ಸಾಬೀತಾಗಿತ್ತು. ಸೋಹಿಲ್‍ಖಾನ್ ಪೆನ್ಷನ್‍ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಕಡೆ ಕಳ್ಳತನ ಮಾಡಿದ್ದ. ಈ ಬಗ್ಗೆ ಶಾರದ, ಪ್ರೇಮಾ […]

Continue Reading

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಧ್ವನಿಯಾದ ಮಕ್ಕಳ ಅಣಕು ವಿಧಾನಸಭಾ ಅಧಿವೇಶನ

ಸುದ್ದಿ ಸಂಗ್ರಹ ಚಿತ್ತಾಪುರಚಟುವಟಿಕೆ ಮೂಲಕ ಪಠ್ಯದ ಕಲಿಕಾoಶ ಮಾಡಿಸಿದಾಗ ಕಲಿಕೆಯು ಮಕ್ಕಳಲ್ಲಿ ಶಾಶ್ವತವಾಗಿ ಮನದಟ್ಟಾಗುತ್ತದೆ ಎಂದು ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಚುನಾವಣೆ ಸಾಕ್ಷರತಾ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಅಣಕು ವಿಧಾನಸಭಾ ಅಧಿವೇಶನವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಪ್ರತಿಭೆ ಇದೆ, ಕ್ರಿಯಾಶೀಲ ಶಿಕ್ಷಕರಿಂದ ಮಾತ್ರ ಮಕ್ಕಳ ಪ್ರತಿಭೆ ಅನಾವರಣವಾಗಲು ಸಾಧ್ಯ ಎಂದರು. ಕಾವ್ಯ (ಸಭಾಪತಿ): ಸಭಾಪತಿ ಪಾತ್ರ […]

Continue Reading

ಮಾನವ ಬಂಡವಾಳ ನಿರ್ಮಾಣಕ್ಕಾಗಿ ವಲಸೆಗೆ ಪ್ರೋತ್ಸಾಹ ಅಗತ್ಯ

ಸುದ್ದಿ ಸಂಗ್ರಹ ಕಲಬುರಗಿ ನಿರುದ್ಯೋಗದ ಸಮಸ್ಯೆ ನಿವಾರಣೆಗೆ ಮತ್ತು ಮಾನವ ಬಂಡವಾಳ ನಿರ್ಮಾಣಕ್ಕೆ ವಲಸೆಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ವಲಸೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಜನಸಂಖ್ಯೆ ಹಂಚಿಕೆಯ ಪ್ರಮಾಣ ಗಮನಿಸಿದರೆ ಸಮ ಪ್ರಮಾಣದಲ್ಲಿ ಹಂಚಿಕೆಯಾಗಿಲ್ಲ. ಕೆಲವು ಪ್ರದೇಶಗಳಲ್ಲಿ ಅತಿ ಹೆಚ್ಚು […]

Continue Reading

ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಅಗತ್ಯ

ಸುದ್ದಿ ಸಂಗ್ರಹ ಕಲಬುರಗಿ ಅಲ್ಪಸಂಖ್ಯಾತರ ಸರ್ವತೋಮುಖ ಬೆಳವಣಿಗೆಗೆ ಸಂವಿಧಾನ, ಕಾನೂನು ಅವರಿಗೆ ಹಕ್ಕುಗಳನ್ನು ನೀಡಿದ್ದು, ಅವುಗಳ ಬಗ್ಗೆ ಜನಜಾಗೃತಿ ಮೂಡಿಸಿ, ಅವುಗಳಿಗೆ ತೊಂದರೆಯಾಗದಂತೆ ಸಂರಕ್ಷಣೆ ಮಾಡಿದರೆ, ಅಲ್ಪಸಂಖ್ಯಾತರ ರಕ್ಷಣೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಹಿಂದ ಜಿಲ್ಲಾ ಗೌರವ ಅಧ್ಯಕ್ಷ ಡಾ.ಸಾಜಿದ್ ಅಲಿ ರಂಜೊಳ್ವಿ ಅಭಿಪ್ರಾಯಪಟ್ಟರು. ನಗರದ ಹಾಗರಗಾ ರಸ್ತೆಯ ಎಂ.ಬಿ.ಆರ್‌ಸಿಎಂ ಟ್ರೇಡರ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ ‘ರಾಷ್ಟ್ರೀಯ ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದರು. ಅಹಿಂದ ಜಿಲ್ಲಾಧ್ಯಕ್ಷ ಶರಣಪ್ಪ ಪರಿಗೇಡ್ […]

Continue Reading

ಶಹಾಬಾದ: ಡಿ.20 ರಂದು ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಸನ್ಮಾನ‌

ಸುದ್ದಿ ಸಂಗ್ರಹ ಶಹಾಬಾದಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಚುನಾಯಿತ ರಾಜ್ಯ ಕಾರ್ಯಕಾರಿ ಸದಸ್ಯರಿಗೆ, ಜಿಲ್ಲಾ ಪದಾಧಿಕಾರಿಗಳಿಗೆ, ಕಾರ್ಯಕಾರಿ ಸಮಿತಿ ಸದಸ್ಯರಿಗೆ ಡಿ.೨೦ ರಂದು ಶನಿವಾರ ನಗರದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಕರ್ತರಾದ ಲೋಹಿತ ಕಟ್ಟಿ ಮತ್ತು ನಿಂಗಣ್ಣ ಜಂಬಗಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು, ಶಹಾಬಾದ ತಾಲೂಕ ಪತ್ರಕರ್ತರ ವತಿಯಿಂದ ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದ್ದು, ರಾವೂರನ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು […]

Continue Reading

ಬಿಗ್‌ ಬಾಸ್‌ ಮನೆಗೆ ಕ್ರೇಜಿಸ್ಟಾರ್‌ ಎಂಟ್ರಿ: ತನ್ನ ಹೃದಯ ಕದ್ದ ಚೆಲುವೆ ಬಗ್ಗೆ ಮಾತಾಡಿದ ರವಿಚಂದ್ರನ್‌

ಬಿಗ್‌ ಬಾಸ್‌ ಮನೆಗೆ ವಿಶೇಷ ಅತಿಥಿಯೊಬ್ಬರ ಎಂಟ್ರಿಯಾಗಿದೆ. ಕ್ರೇಜಿಸ್ಟಾರ್‌ ರವಿಚಂದ್ರನ್‌ ದೊಡ್ಮನೆಗೆ ಬಂದಿದ್ದು, ಕಂಟೆಸ್ಟೆಂಟ್‌ಗಳ ಜೊತೆ ತಮ್ಮ ಲವ್‌ ಸ್ಟೋರಿ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. ಸದಾ ಟಾಸ್ಕ್‌, ಜಗಳ, ಕೂಗಾಟದಿಂದ ಕೂಡಿದ್ದ ಬಿಗ್‌ ಬಾಸ್‌ ಮನೆಯಲ್ಲಿ ಕ್ರೇಜಿಸ್ಟಾರ್‌ ಪ್ರೇಮಲೋಕ ತೆರೆದಿಟ್ಟಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಪ್ರೇಮಲೋಕ ತೆರೆದಿಟ್ಟವರು ಕ್ರೇಜಿಸ್ಟಾರ್‌ ರವಿಚಂದ್ರನ್.‌ ಅವರ ಬಹುಪಾಲು ಸಿನಿಮಾಗಳು ಪ್ರೀತಿ-ಪ್ರೇಮ-ಪ್ರಣಯ ಕುರಿತಾಗಿವೆ. ರವಿಚಂದ್ರನ್‌ ರಿಯಲ್‌ ಲೈಫ್‌ನ ಲವ್‌ ಹೇಗಿತ್ತು ಎಂಬ ಕುತೂಹಲ ಯಾರಿಗಾದರು ಇದ್ದೆ ಇರುತ್ತೆ. ಅದನ್ನು ಕೇಳುವ ಸೌಭಾಗ್ಯ ಬಿಗ್‌ ಬಾಸ್‌ ಸ್ಪರ್ಧಿಗಳದ್ದಾಗಿದೆ. […]

Continue Reading

ನಕಲಿ ದಾಖಲೆ ಸೃಷ್ಟಿಸಿ 512 ಎಕರೆ ಭೂಮಿ ಕಬಳಿಕೆ ಯತ್ನ: ಆರೋಪಿ ಬಂಧನ

ಸುದ್ದಿ ಸಂಗ್ರಹ ಮೂಡಿಗೆರೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬರೋಬ್ಬರಿ 512 ಎಕರೆ 21 ಗುಂಟೆ ಅರಣ್ಯ ಕಂದಾಯ ಭೂಮಿಯನ್ನು ಕಬಳಿಸಲು ಯತ್ನಿಸಿದ ಆರೋಪದ ಮೇಲೆ ಮರೆಬೈಲ್ ಗ್ರಾಮದ ಮನ್ಮಥ (ನೇಮಣ್ಣಗೌಡ) ಎಂಬಾತನನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ. 512 ಎಕರೆ 21 ಗುಂಟೆ ತನ್ನ ಪೂರ್ವಜರಾದ ಈರೇಗೌಡರಿಗೆ 1974ರಲ್ಲಿ ಭೂಮಿ ಹಕ್ಕು ಮರು ವರ್ಗಾವಣೆಯಾಗಿದೆ ಎಂಬ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದ ಆರೋಪಿ, ಗ್ರಾಮ ಲೆಕ್ಕಾಧಿಕಾರಿಯ ನಕಲಿ ಸಹಿ ಹಾಗೂ ನಕ್ಷೆಯನ್ನು ಬಳಸಿದ್ದ ಎನ್ನಲಾಗಿದೆ. ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳ […]

Continue Reading

ನಿವೃತ್ತ ನೌಕರರಿಗೆ ಪಿಂಚಣಿ ಅಗತ್ಯ   

ಸುದ್ದಿ ಸಂಗ್ರಹ ಕಲಬುರಗಿ ಪಿಂಚಣಿ ನೌಕರನ ಹಕ್ಕಾಗಿದೆ, ನೌಕರರು ನಿವೃತ್ತಿಯಾದ ನಂತರ ಬದುಕು ಸಾಗಿಸಲು ಪಿಂಚಣಿ ನೀಡುವುದು ಅವಶ್ಯಕ ಎಂದು ನಿವೃತ್ತ ಕೃಷಿ ಅಧಿಕಾರಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ ಹೇಳಿದರು.          ನಗರದ ಗೋವಾ ಹೋಟೆಲ್ ಎದುರುಗಡೆಯ ಸಕ್ಸಸ್ ಕಂಪ್ಯೂಟರ್ ತರಬೇತಿ ಸಂಸ್ಥೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ರಾಷ್ಟ್ರೀಯ ಪಿಂಚಣಿ‌ದಾರರ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, 2006ರ ಎ.1ರಿಂದ ನೇಮಕಗೊಂಡ ಸರ್ಕಾರಿ ನೌಕರರಿಗೂ ಕೂಡಾ ಹಳೆಯ ಮಾದರಿಯ […]

Continue Reading

ಸೈಬರ್‌ ಅಪರಾಧದ ಬಗ್ಗೆ ಜಾಗೃತಿ ವಹಿಸಿ: ಡಿವೈಎಸ್‌ಪಿ ಶಂಕರಗೌಡ ಪಾಟೀಲ್

ಸುದ್ದಿ ಸಂಗ್ರಹ ಚಿತ್ತಾಪುರ ಸೈಬರ್ ಅಪರಾಧ ಮತ್ತು ವಂಚನೆಗಳ ಬಗ್ಗೆ ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರು ಜಾಗೃತಿ ವಹಿಸಬೇಕು ಎಂದು ಡಿವೈಎಸ್‌ಪಿ ಶಂಕರಗೌಡ ಪಾಟೀಲ್‌ ಹೇಳಿದರು. ತಾಲೂಕಿನ ಮಾಡಬೂಳ ಕ್ರಾಸ್‌’ನಲ್ಲಿ ಮಾಡಬೂಳ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೈಬರ್ ವಂಚನೆ ತಡೆಗಟ್ಟಲು ಕ್ಲಿಷ್ಟಕರವಾದ ಪಾಸ್‌ವರ್ಡ್ ಬಳಸಬೇಕು. ಅಪರಿಚಿತ ಲಿಂಕ್’ಗಳನ್ನು ಕ್ಲಿಕ್ ಮಾಡಬಾರದು. ಆ್ಯಂಟಿ ವೈರಸ್ ಸಾಫ್ಟ್‌ವೇರ್ ಅಳವಡಿಸಬೇಕು. ಆನ್‌’ಲೈನ್‌ನಲ್ಲಿ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವಾಗ ಜಾಗರೂಕತೆ ವಹಿಸಬೇಕು ಎಂದರು. ವಾಹನಗಳ […]

Continue Reading