ಪಕ್ಷ ಅಧಿಕಾರಕ್ಕೆ ತರಲು 5 ವರ್ಷ ಕಷ್ಟ ಪಟ್ಟಿದ್ದು ನಾನು, ಕೃಷ್ಣ CM ಆದ್ರು: ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಮ ಮಾಡಿದಂತಾಯಿತು

ವಿಜಯಪುರ: ಮುಖ್ಯಮಂತ್ರಿ ಸ್ಥಾನ ಕೈತಪ್ಪಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪರೋಕ್ಷವಾಗಿ ನೋವು ತೋಡಿಕೊಂಡಿದ್ದಾರೆ. ಬಿಎಲ್​​ಡಿ ಸಂಸ್ಥೆಯ ಸಂಸ್ಥಾಪಕ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶ ಇತ್ತು. ಆದರೆ ಅದು ಕೈ ತಪ್ಪಿತು. 1999ರಲ್ಲಿ ಸಿಎಂ ಆಗೋದು ಕೈತಪ್ಪಿತು. ನಾನು ವಿಧಾನಸಭಾದ ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡಿದೆ. 4 ತಿಂಗಳ ಹಿಂದೆ ಪಕ್ಷ ಸೇರಿದ್ದ ಎಸ್.ಎಂ ಕೃಷ್ಣ ಮುಖ್ಯಮಂತ್ರಿ ಆದರು ಎಂದು […]

Continue Reading

ರಾಷ್ಟ್ರಕ್ಕೆ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಕೊಡುಗೆ ಅಪಾರ

ಕಲಬುರಗಿ: ರಾಷ್ಟ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಕೊಡುಗೆ ಅಪಾರವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ರವಿವಾರ ಜರುಗಿದ ‘ಡಾ.ಎ.ಪಿ.ಜೆ. ಅಬ್ದುಲ್ ಕಲಾಂರ ಪುಣ್ಯ ಸ್ಮರಣೆ’ಯ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ವಿಜ್ಞಾನಿಯಾಗಿ, ರಾಷ್ಟ್ರಪತಿಯಾಗಿ, ತತ್ವಜ್ಞಾನಿಯಾಗಿ, ಶಿಕ್ಷಣ ತಜ್ಞರಾಗಿ, ಕ್ಷಿಪಣಿಯ ರೂವಾರಿಯಾಗಿ, ಧೀಮಂತ ಧುರಿಣರಾಗಿ, ಯುವ ಜನತೆಯ ದಾರಿ ದೀಪವಾಗಿದ್ದಾರೆ ಎಂದರು. […]

Continue Reading

ಶೈಕ್ಷಣಿಕ ಕ್ಷೇತ್ರದ ಸಾಧಕ ಚನ್ನಬಸಪ್ಪ ಗಾರಂಪಳ್ಳಿಗೆ ಗೌರವ ಸತ್ಕಾರ

ಕಲಬುರಗಿ: ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಮತ್ತು ಶಿವಾ ಶಾಲೆಗಳನ್ನು ಪ್ರಾರಂಭಿಸಿ, ಬಡ, ಮಧ್ಯಮ ವರ್ಗದ ಸಾವಿರಾರು ವಿದ್ಯಾರ್ಥಿಗಳ ಬದುಕು ಕಟ್ಟಿಕೊಟ್ಟ, ಕಳೆದ 19 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿರುವ ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ ಅವರಿಗೆ ಸ್ವಾತಿ ಪ್ರೌಢ ಶಾಲೆಯ ಆವರಣದಲ್ಲಿ ರವಿವಾರ ಜರುಗಿದ ಕಾರ್ಯಕ್ರಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸತ್ಕರಿಸಿ, ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಎಚ್.ಬಿ ಪಾಟೀಲ್, ನರಸಪ್ಪ ಬಿರಾದಾರ ದೇಗಾಂವ, ಶಿವಯೋಗೆಪ್ಪಾ ಎಸ್.ಬಿರಾದಾರ, ಸಂಗೀತಾ ಸಾಲಿ […]

Continue Reading

ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಪಾಲಕರ ಪಾತ್ರ ಪ್ರಮುಖ

ಕಲಬುರಗಿ: ಮಕ್ಕಳನ್ನು ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿಸಿ, ಸಮಾಜದ ದೊಡ್ಡ ಆಸ್ತಿಯನ್ನಾಗಿಸಿ, ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಪಾಲಕರ ಪಾತ್ರ ಪ್ರಮುಖವಾಗಿದೆ. ಎಂದು ಎಂದು ಚಿಂತಕ ನರಸಪ್ಪ ಬಿರಾದಾರ ದೇಗಾಂವ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ‘ಸ್ವಾತಿ ಪ್ರೌಢಶಾಲೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ರವಿವಾರ ಜರುಗಿದ ‘ರಾಷ್ಟೀಯ ಪಾಲಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ತಮ್ಮ ಪಾಲಕ-ಪೋಷಕರ ಶ್ರಮ ಮರೆಯಬಾರದು. ಅವರ ಇಳಿ ವಯಸ್ಸಿನಲ್ಲಿ ಪಾಲಕರಿಗೆ ಆರೈಕೆ ಮಾಡಬೇಕು ಎಂದರು. ಉಪನ್ಯಾಸಕ ಎಚ್.ಬಿ […]

Continue Reading

ಆದಾಯ ಪ್ರಮಾಣ ಪತ್ರ ಪಡೆಯಲು ಹೋದ ವ್ಯಕ್ತಿಗೆ ಶಾಕ್​: ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಜಾತಿಗೆ ಸೇರಿಸಿದ ಕಲಬುರಗಿ ಅಧಿಕಾರಿಗಳು

ಕಲಬುರಗಿ: ಕೆಲ ಸಂದರ್ಭಗಳಲ್ಲಿ ಪ್ರಮಾಣ ಪತ್ರದಲ್ಲಿ ಹೆಸರು, ವಿಳಾಸ ಅಥವಾ ಫೋಟೋ ಬದಲಾವಣೆ ಆಗಿರುವುದನ್ನು ನಾವು ನೋಡಿದ್ದೆವೆ. ಆದರೆ ಕಲಬುರಗಿಯಲ್ಲಿ ವಿಚಿತ್ರ ಘಟನೆ ನಡೆದಿದೆ. ತಹಸೀಲ್ದಾರ್ ​ ಕಚೇರಿ ಅಧಿಕಾರಿಗಳ ಎಡವಟ್ಟಿನಿಂದ ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಧರ್ಮಕ್ಕೆ ಸೇರಿಸಿ ಪ್ರಮಾಣ ಪತ್ರ ವಿತರಣೆ ಮಾಡಲಾಗಿದೆ. ತಪ್ಪು ಸರಿಪಡಿಸುವಂತೆ ಸೂಚಿಸಿದರೂ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲವೆಂದು ಆರೋಪ ಕೇಳಿಬಂದಿದೆ. ಜಾತಿ ಕಾಲಂನಲ್ಲಿ ಮುಸ್ಲಿಂ ಅಂತಾ ಉಲ್ಲೇಖ‌ ಕಲಬುರಗಿಯ ರಾಮತೀರ್ಥ ನಗರದ ಮಹಾಂತಪ್ಪ ಕೊತ್ಲೆ ಎಂಬ ವ್ಯಕ್ತಿ ವೀರಶೈವ ಲಿಂಗಾಯತ ಸಮುದಾಯದವರು. ಇವರು […]

Continue Reading

ವಾಡಿ: ರಾಷ್ಟ್ರ ಧ್ವಜದೊಂದಿಗೆ ಕಾರ್ಗಿಲ್ ವಿಜಯೋತ್ಸವ

ವಾಡಿ: ಪಟ್ಟಣದ ಮೌಲಾನಾ ಅಬ್ದುಲ್ ಕಲಾಂ ಅಜಾದ್ ವೃತ್ತದಲ್ಲಿ ಬಿಜೆಪಿ ಪಕ್ಷದ ಮುಖಂಡರು ಶನಿವಾರ 26ನೇ ಕಾರ್ಗಿಲ್ ವಿಜಯ ದಿನಾಚರಣೆ ನಿಮಿತ್ಯ ರಾಷ್ಟ್ರ ಧ್ವಜದೊಂದಿಗೆ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪ್ರತಿ ವರ್ಷ ಜು.26 ರಂದು ನಾವೆಲ್ಲರು ಸ್ಮರಿಸಿ, ಗೌರವಿಸಬೇಕಾದ ದಿನ. ಶತ್ರುರಾಷ್ಟ್ರ ದಾಳಿಯಿಂದ ಸದಾ ನಮ್ಮ ತಾಯ್ನಾಡಿನಲ್ಲಿ ನಾವುಗಳು, ಕೆಚ್ಚೆದೆಯ ನಮ್ಮ ವೀರಸೈನಿಕರ ತ್ಯಾಗ, ಬಲಿದಾನದ ಫಲವಾಗಿ ಇಂದು ಸುರಕ್ಷಿತವಾಗಿದ್ದೆವೆ ಎಂದರು. ನಾವು ಕಾರ್ಗಿಲ್ ಯುದ್ಧವನ್ನು ಮರೆಯಲು ಸಾಧ್ಯವಿಲ್ಲ. ಈ […]

Continue Reading

ದಂಡೋತಿ: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ, ಅಪಾರ ಹಾನಿ

ಕಲಬುರಗಿ: ಕೆಲವು ದಿನಗಳಿಂದ ಬಿಟ್ಟು ಬಿಡದೆಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಿಲ್ಲೆಯವಿವಿಧ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ,ಅದರಲ್ಲೂ ದಂಡೋತಿ ಗ್ರಾಮದಲ್ಲಿ ಎರಡು ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮುಹಮ್ಮದ್ ರಫೀಕ್ ರಸೂಲ್ ಸಾಬ್ ಡೋಂಗಾ ಹಾಗೂ ಪುಥಲಿ ಬೇಗಂ ಹುಸೇನ್ ಸಾಬ್ ಡೋಂಗಾ ಎನ್ನುವವರ ಮನೆಯ ಗೋಡೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ದಂಡೋತಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಮೈನೋದ್ದೀನ್ ಮಾತನಾಡಿ, ಕಳೆದ ಕೆಲವು […]

Continue Reading

ಆಧುನಿಕ ಕನ್ನಡ ಸಾಹಿತ್ಯದ ಶ್ರೇಷ್ಟ ಕಾದಂಬರಿಕಾರ ಡಾ.ಎಸ್.ಎಲ್ ಭೈರಪ್ಪ

ಕಲಬುರಗಿ: ಡಾ.ಎಸ್.ಎಲ್ ಭೈರಪ್ಪನವರು ಆಧುನಿಕ ಕನ್ನಡ ಸಾಹಿತ್ಯದ ಶ್ರೇಷ್ಟ ಕಾದಂಬರಿಕಾರರು ಮತ್ತು ಲೇಖಕರು ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ್ ಹೇಳಿದರು.  ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಡಾ.ಎಸ್.ಎಲ್ ಭೈರಪ್ಪನವರ 94ನೇ ಜನುಮ ದಿನಾಚರಣೆ’ ಪ್ರಯುಕ್ತ ‘ಡಾ.ಎಸ್.ಎಲ್ ಭೈರಪ್ಪನವರ ಬದುಕು-ಬರಹ’ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಅವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ […]

Continue Reading

ಯುವಕರು ಸೈನಿಕರಂತೆ ದೇಶ ಸೇವೆ ಮಾಡಲಿ

ಕಲಬುರಗಿ: ದೇಶದ ಪ್ರತಿಯೊಬ್ಬರಲ್ಲಿ ಯುವಕರು ಸೈನಿಕರಂತೆ ದೇಶದ ರಕ್ಷಣೆ, ಒಳಿತಿಗಾಗಿ ಸೇವೆ ಸಲ್ಲಿಸುವುದು ಅಗತ್ಯವಾಗಿದೆ ಎಂದು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಮಾಜಿ ಸೈನಿಕ ಶಿವಶರಣಪ್ಪ ಎಸ್ ತಾವರಖೇಡ್ ಯುವಕರಿಗೆ ಸಲಹೆ ನೀಡಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ‘26ನೇ ಕಾರ್ಗಿಲ್ ವಿಜಯ ದಿನಾಚರಣೆ’ ಅಂಗವಾಗಿ ಏರ್ಪಡಿಸಿದ್ದ ‘ಕಾರ್ಗಿಲ್ ವಿಜಯೋತ್ಸವದ ಯಶೋಗಾಥೆ’ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮಗಿಷ್ಟವಾದ ಯಾವುದೆ ಕೋರ್ಸ ಅಧ್ಯಯನ ಮಾಡಿಕೊಂಡು, ಕ್ಷೇತ್ರದಲ್ಲಿ […]

Continue Reading

ಶರಣ ಸಾಹಿತ್ಯಕ್ಕೆ ಜಯದೇವಿ ತಾಯಿ ಲಿಗಾಡೆ ಕೊಡುಗೆ ಅನನ್ಯ

ಕಲಬುರಗಿ: ಕರ್ನಾಟಕದ ಗಡಿ ಭಾಗದಲ್ಲಿನ ಮರಾಠಿ ಪ್ರಾಬಲ್ಯದಿಂದ ಕನ್ನಡವನ್ನು ಉಳಿಸಿ, ಬೆಳೆಸುವಲ್ಲಿ ಮತ್ತು ಶರಣ ಸಾಹಿತ್ಯದ ರಕ್ಷಕರಾಗಿ ತಮ್ಮದೆಯಾದ ಅಮೂಲ್ಯವಾದ ಕೊಡುಗೆಯನ್ನು ಶರಣೆ ಜಯದೇವಿ ತಾಯಿ ಲಿಗಾಡೆಯವರು ನೀಡಿದ್ದಾರೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಶರಣೆ ಜಯದೇವಿ ತಾಯಿ ಲಿಗಾಡೆಯವರ ಸ್ಮರಣೋತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಆಧ್ಯಾತ್ಮ ಚಿಂತಕಿ, ಸಮಾಜ […]

Continue Reading