ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಶೇ.14.25 ರಿಂದ ಶೇ.15.75ಕ್ಕೆ ಏರಿಕೆ ಮಾಡಿದೆ. ಶೇ.1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗಲಿದೆ. ಇದರಿಂದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ. ಪ್ರಸ್ತುತ ಮೂಲ ವೇತನದ ಶೇ.14.25 ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.15.75 ಕ್ಕೆ ಪರಿಷ್ಕರಿಸಲಾಗಿದೆ. ಅಂದರೆ ಒಟ್ಟು ಶೇ.1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವಾದಂತಾಗಿದ್ದು, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ […]

Continue Reading

ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟಕ್ಕೆ ಬ್ರೇಕ್: ನಿಯಮ ಉಲ್ಲಂಘಿಸಿದರೆ ಬಂಕ್‌ ವಿರುದ್ಧ ಕ್ರಮ

ಸುದ್ದಿ ಸಂಗ್ರಹ ಬೆಂಗಳೂರುಜಾಗತಿಕ ಮಾರುಕಟ್ಟೆಯಲ್ಲಿನ ಸನ್ನಿವೇಶ ಹಾಗೂ ರಾಜ್ಯದಲ್ಲಿ ಇಂಧನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ನಾಗರಿಕ ಹಾಗೂ ಆಹಾರ ಸರಬರಾಜು ಇಲಾಖೆಯು ಪೆಟ್ರೋಲ್ ಮತ್ತು ಡೀಸೆಲ್ ವಿತರಣೆಗೆ ಸಂಬಂಧಿಸಿದಂತೆ ಹೊಸ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದೆ. ಗ್ರಾಹಕರ ಹಿತದೃಷ್ಟಿಯಿಂದ ಮತ್ತು ಸುರಕ್ಷತೆಯ ಕಾರಣಗಳಿಗಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಇಂಧನ ವಿತರಣಾ ಕೇಂದ್ರಗಳಿಗೆ ಪ್ರಮುಖ ಸೂಚನೆ ನೀಡಲಾಗಿದೆ. ಇಲಾಖೆಯ ಈ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ನಿಯಮ ಉಲ್ಲಂಘಿಸುವ ಪೆಟ್ರೋಲ್ ಬಂಕ್‌ಗಳ ವಿರುದ್ಧ ಕಠಿಣ […]

Continue Reading

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ

ಸುದ್ದಿ ಸಂಗ್ರಹ ಚಾಮರಾಜನಗರನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ. ಪರಿಹಾರ ಘೋಷಿಸಿದೆ. ಮೇ.10 ರಂದು ರವಿವಾರ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ವೇಳೆ ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕ ಸಾವನ್ನಪ್ಪಿದ್ದ. ಸದ್ಯ ಅರಣ್ಯ ಇಲಾಖೆ ಬಾಲಕನ ಕುಟುಂಬಸ್ಥರಿಗೆ 20 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಈಗಾಗಲೆ 5 ಲಕ್ಷ ರೂ. ಚೆಕ್ ನೀಡಿದ್ದಾರೆ. ಇನ್ನುಳಿದ ಹಣವನ್ನು ಅಕೌಂಟ್ ಮಾಹಿತಿ ಪಡೆದು ಶೀಘ್ರದಲ್ಲೆ ಕಳುಹಿಸಲು ಅಧಿಕಾರಿಗಳ ತೀರ್ಮಾನಿಸಿದ್ದಾರೆ. […]

Continue Reading

ಯುವಕರು ಮಾದಕ ವ್ಯಸನದಿಂದ ದೂರವಿರಲಿ: ಸೋಮಶೇಖರ ಶಿವಾಚಾರ್ಯರು

ಸುದ್ದಿ ಸಂಗ್ರಹ ಚಿತ್ತಾಪುರಇಂದಿನ ಸಮಾಜದಲ್ಲಿ ಮದ್ಯವ್ಯಸನವು ಮಾನವ ಜೀವನದ ಮೌಲ್ಯಗಳನ್ನು ಕುಗ್ಗಿಸುತ್ತಿದ್ದು, ಯುವಪೀಳಿಗೆ ಮಾದಕ ವ್ಯಸನದಿಂದ ದೂರವಿರುವುದು ಅತ್ಯಗತ್ಯವಾಗಿದೆ ಎಂದು ಕಂಬಳೇಶ್ವರ ಸಂಸ್ಥಾನ ಮಠದ ಸೋಮಶೇಖರ ಶಿವಾಚಾರ್ಯರು ಹೇಳಿದರು. ಪಟ್ಟಣದ ಕಂಬಳೇಶ್ವರ ಸಂಸ್ಥಾನ ಮಠದಲ್ಲಿ ಈಚೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ವಿವಿಧ ಸಮಾಜಮುಖಿ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ‘2051ನೇ ಮದ್ಯ ವರ್ಜನ ಶಿಬಿರದ’ ಸಮಾರೋಪ ಸಮಾರಂಭದ ಸಾನ್ನಿಧ್ಯ […]

Continue Reading

ನಾಗಮಲೆಗೆ ಪಾದಯಾತ್ರೆ ಹೊರಟಿದ್ದ ಬಾಲಕ ಚಿರತೆ ದಾಳಿಗೆ ಬಲಿ

ಸುದ್ದಿ ಸಂಗ್ರಹ ಚಾಮರಾಜನಗರ ನಾಗಮಲೆಗೆ ಪಾದಯಾತ್ರೆ ಹೋಗುತ್ತಿದ್ದ ಬೆಂಗಳೂರು ಮೂಲದ ಬಾಲಕನನ್ನು ಚಿರತೆ (ಪೋಷಕರ ಕಣ್ಣೆದುರಲ್ಲೆ) ಎಳೆದೊಯ್ದು ಕೊಂದು ಹಾಕಿದ ಘೋರ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕನನ್ನು ಬೆಂಗಳೂರಿನ ಲಗ್ಗೆರೆ ನಿವಾಸಿ ಹರ್ಷಿತ್ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಕುಟುಂಬದ 10 ಮಂದಿ ಸದಸ್ಯರೊಂದಿಗೆ ಹರ್ಷಿತ್ ನಾಗಮಲೆ ಹಾದಿಯಲ್ಲಿ ತೆರಳುತ್ತಿದ್ದಾಗ, ಇಂಡಿಗನತ್ತ ಸಮೀಪ ಚಿರತೆ ದಾಳಿ ಮಾಡಿದೆ. ಕುಟುಂಬಸ್ಥರ ಕಣ್ಣೆದುರೇ ಬಾಲಕನನ್ನು ಚಿರತೆ ಎಳೆದೊಯ್ದಿದೆ. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದಾಗ, […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಪ್ರಯುಕ್ತ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರ ಅವರು ಮಲ್ಲಮ್ಮ ಹೇಮರೆಡ್ಡಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಪಕ್ಷದ ಮುಖಂಡರು ಪರಸ್ಪರ ಸಿಹಿ ಹಂಚಿ ಜಯಂತಿ ಆಚರಿಸಿದರು. ತಾಲೂಕಕಿನ ಮಂಡಲ ಅಧ್ಯಕ್ಷ ರವಿ ಸಜ್ಜನಶೆಟ್ಟಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, 14ನೇ ಶತಮಾನದ ಸ್ತ್ರೀಕುಲದ ದೇವತೆ ಹೇಮರೆಡ್ಡಿ‌ ಮಲ್ಲಮ್ಮ ಅವರು ತಮ್ಮ ಬದುಕಿನಲ್ಲಿ ಎದುರಿಸಿದ ಸಂಕಷ್ಟಗಳನ್ನೆ ಸಾಧನೆಯ ಮೆಟ್ಟಿಲುಗಳನ್ನಾಗಿ‌ ಬದಲಾಯಿಸಿ ಸಮಾಜದ […]

Continue Reading

ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ: ಕುರ್ಚಿ ಕಿತ್ತಾಟಕ್ಕೆ ಮೋದಿ ಲೇವಡಿ

ಸುದ್ದಿ ಸಂಗ್ರಹ ಬೆಂಗಳೂರುಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಬೆನ್ನಲ್ಲೆ ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಕಾಂಗ್ರೆಸ್ ಸರ್ಕಾರದ ಆಂತರಿಕ ಭಿನ್ನಮತ ಮತ್ತು ಅಧಿಕಾರ ಹಂಚಿಕೆ ಕಿತ್ತಾಟ ಟೀಕಿಸಿ ವ್ಯಂಗ್ಯವಾಡಿದ್ದಾರೆ. ಎಚ್‌ಎಎಲ್ ಆವರಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಮೋದಿ, ರಾಜ್ಯ ಸರ್ಕಾರದ ನಾಯಕರ ನಡುವಿನ ಶೀತಲ ಸಮರವನ್ನು ಲೇವಡಿ ಮಾಡಿದರು. “ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು ತಮ್ಮ ಕುರ್ಚಿಯಲ್ಲಿ ಎಷ್ಟು ದಿನ ಇರುತ್ತಾರೋ ಯಾರಿಗೂ ಗೊತ್ತಿಲ್ಲ. ಅಧಿಕಾರ ಹಂಚಿಕೆಯ ಈ […]

Continue Reading

ಅಂಬೇಡ್ಕರ್ ಜಯಂತಿ ಪೋಸ್ಟರ್ ಬಿಡುಗಡೆ

ಸುದ್ದಿ ಸಂಗ್ರಹ ಶಹಾಬಾದನಗರದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ನಿಮಿತ್ತ ಮೇ.13 ರಂದು ಸಂಜೆ 5 ಗಂಟೆಗೆ ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಅಂಬೇಡ್ಕರ್ ಹಬ್ಬ ಕಾರ್ಯಕ್ರಮದ ವಾಲ್ ಪೋಸ್ಟರ್‌ ಶನಿವಾರ ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆಗೊಳಿಸಿದರು. ಜಯಂತ್ಯೋತ್ಸವ ಸಮಿತಿಯಿಂದ ಪ್ರತಿ ವರ್ಷ ಡಾ.ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದ್ದು, ಕಲಬುರ್ಗಿಯಲ್ಲಿ ಈ ಬಾರಿಯ ಪೋಸ್ಟರ್ ಬಿಡುಗಡೆ ಮಾಡಿದ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತೆನೆ ಎಂದು ತಿಳಿಸಿದ್ದಾರೆ ಎಂದು ದಸಂಸ ರಾಜ್ಯ ಸಂ.ಸಂಚಾಲಕ ಮರಿಯಪ್ಪ ಹಳ್ಳಿ ಮತ್ತು ತಾಲೂಕ ಜಯಂತ್ಯೋತ್ಸವ […]

Continue Reading

ಕಲಬುರಗಿ: ಮೇ ನಲ್ಲಿಯೇ ಎರಡು ತಿಂಗಳ ಅಕ್ಕಿ ವಿತರಣೆ

ಸುದ್ದಿ ಸಂಗ್ರಹ ಕಲಬುರಗಿಸರ್ಕಾರದ ನಿರ್ದೇಶನದಂತೆ ಪ್ರಸಕ್ತ ಮೇ ಹಾಗೂ ಜೂನ್ ಎರಡು ತಿಂಗಳ ಆಹಾರ ಧಾನ್ಯಗಳನ್ನು ಮೇ ತಿಂಗಳಲ್ಲೆ ವಿತರಿಸಲಾಗುತ್ತಿದ್ದು, ಪಡಿತರದಾರರು ಎರಡು ಬಾರಿ ಬಯೋಮೆಟ್ರಿಕ್ ನೀಡಿ ಪಡಿತರ ಧಾನ್ಯ ಪಡೆದುಕೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂತ್ಯೋದಯ ಕಾರ್ಡ್‌ಗಳನ್ನು ಹೊಂದಿರುವ ಪ್ರತಿ ಪಡಿತರ ಚೀಟಿಗೆ ಒಂದು ತಿಂಗಳಿಗೆ 35 ಕೆ.ಜಿಯಂತೆ ಒಟ್ಟು 70 ಕೆ.ಜಿ ಅಕ್ಕಿ ಮತ್ತು ಬಿಪಿಎಲ್ ಕಾರ್ಡ್‌ ಹೊಂದಿದ ಪ್ರತಿ ಸದಸ್ಯರಿಗೆ ತಲಾ 10 […]

Continue Reading

ಯಡಿಯೂರಪ್ಪರಂತಹ ನಾಯಕ ದಕ್ಷಿಣ ಭಾರತದಲ್ಲಿ ಯಾರು ಇಲ್ಲ: ಅಮಿತ್‌ ಶಾ ಬಣ್ಣನೆ

ಸುದ್ದಿ ಸಂಗ್ರಹ ಚಿತ್ರದುರ್ಗಬಿ.ಎಸ್‌ ಯಡಿಯೂರಪ್ಪ ಅವರಂತಹ ನಾಯಕ ದಕ್ಷಿಣ ಭಾರತದಲ್ಲಿ ಯಾರು ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಡಿ ಹೊಗಳಿದ್ದಾರೆ. ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ರೈತರ ನಾಯಕ ಯಡಿಯೂರಪ್ಪ ಅವರು 50 ವರ್ಷ ರಾಜಕೀಯ ಸೇವೆ ಮಾಡಿದ್ದಾರೆ. ಯಡಿಯೂರಪ್ಪ ವ್ಯಕ್ತಿತ್ವದ ಕಾರಣ ಎಲ್ಲಾ ಧರ್ಮದ ಸ್ವಾಮೀಜಿಗಳು ವೇದಿಕೆ ಮೇಲೆ ಇದ್ದಾರೆ. ವೇದಿಕೆಯಲ್ಲಿ ಎಲ್ಲಾ ವರ್ಗದ ಸ್ವಾಮೀಜಿಗಳನ್ನು ಆಶ್ಚರ್ಯ ಮತ್ತು ಸಂತೋಷವಾಗಿದೆ. ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಂದು […]

Continue Reading