ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ದೀಪಾವಳಿ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿಗೆ ಯೆಲ್ಲೋ ಅಲರ್ಟ್‌ ಜಾರಿಯಾಗಿದ್ದು ಮಧ್ಯಾಹ್ನ ಅಥವಾ ಸಂಜೆ ಮಳೆ ಸುರಿಯುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. […]

Continue Reading

ಅತಿವೃಷ್ಟಿ: ಮಹಾರಾಷ್ಟ್ರಕ್ಕೆ 1,566.40 ಕೋಟಿ ರೂ. ಕರ್ನಾಟಕಕ್ಕೆ ಕೇವಲ 384 ಕೋಟಿ

ನವದೆಹಲಿ: ಅತಿವೃಷ್ಟಿಯಿಂದ ಹಾನಿಯುಂಟಾಗಿರುವ ಹಿನ್ನೆಲೆ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವಾಲಯವು ಎಸ್‌ಡಿಆರ್‌ಎಫ್‌ನಿಂದ 2ನೇ ಕಂತಿನ ಹಣ ಬಿಡುಗಡೆ ಮಾಡಿದೆ. ನೈಋತ್ಯ ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿ ಅಡಿಯಲ್ಲಿ ಒಟ್ಟು 1,950 ಕೋಟಿ ಮುಂಗಡೆಯಾಗಿ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಅಮಿತ್ ಶಾ ಅವರು ಕನ್ನಡಲ್ಲೇ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕಕ್ಕೆ ಕೇವಲ 384.40 ಕೋಟಿ ರೂ.ಸಿಕ್ಕಿದ್ದರೆ, ಮಹಾರಾಷ್ಟ್ರಕ್ಕೆ ಬರೋಬ್ಬರಿ 1,566.40 ಕೋಟಿ ರೂ. ನೀಡಲಾಗಿದೆ. […]

Continue Reading

ಜಗತ್ತಿನ ಅಪರೂಪದ ಪ್ರಕರಣಕ್ಕೆ ಸುಖಾಂತ್ಯ ಹಾಡಿದ ಕಿಮ್ಸ್ ವೈದ್ಯರು: ಮಗು ಮನೆಗೆ

ಹುಬ್ಬಳ್ಳಿ: ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆ ಪ್ರಕರಣ ಸಂಬಂಧ ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ನವಜಾತ ಗಂಡು ಶಿಶುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆಯಾದ ಹಿನ್ನಲೆ ಡಾ. ರಾಜಶಂಕರ್ ನೇತೃತ್ವದ ವೈದ್ಯರ ತಂಡ ಅಕ್ಟೋಬರ್ 8ರಂದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿತ್ತು. ಬಳಿಕ ಮಗುವನ್ನು ತುರ್ತು ನಿಘಾ ಘಟಕದಲ್ಲಿಡಲಾಗಿತ್ತು. ಈಗ ಮಗು ಸಂಪೂರ್ಣವಾಗಿ ಗುಣಮುಖವಾಗಿರುವ ಹಿನ್ನೆಲೆಯಲ್ಲಿ ತಾಯಿ, ಮಗುವನ್ನು ಮನೆಗೆ ಕಳುಹಿಸಿಕೊಡಲಾಗಿದೆ. ಸೆಪ್ಟೆಂಬರ್​ 23ರಂದು ಹೆರಿಗೆಗೆಂದು ದಾಖಲಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ […]

Continue Reading

ಆರ್‌ಎಸ್‌ಎಸ್‌ Vs ಸರ್ಕಾರ: ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು ?

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ವಿಚಾರ ಈಗ ಹೈಕೋರ್ಟ್‌ ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ವಾದವನ್ನು ಕೋರ್ಟ್‌ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ತಾಲೂಕು ಆಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಕೋರ್ಟ್‌ ಇಂದು ಯಾವುದೆ ಆದೇಶ ಪ್ರಕಟಿಸದೆ ಮುಂದಿನ […]

Continue Reading

7ನೇ ಕ್ಲಾಸ್ ವಿದ್ಯಾರ್ಥಿನಿಯ ರೇಪ್ ಮಾಡಿದ ಟ್ಯೂಷನ್ ಟೀಚರ್‌ಗೆ 10 ವರ್ಷ ಜೈಲು: ತೆಲಂಗಾಣ ಕೋರ್ಟ್ ಆದೇಶ

ಹೈದರಾಬಾದ್: 7ನೇ ಕ್ಲಾಸ್ ವಿದ್ಯಾರ್ಥಿನಿಯ ರೇಪ್ ಮಾಡಿದ ಟ್ಯೂಷನ್ ಟೀಚರ್‌ಗೆ ತೆಲಂಗಾಣ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಸುದೀರ್ಘ ವಿಚಾರಣೆಯ ನಂತರ ಶನಿವಾರ (ಅ.18) ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ವಿಶೇಷ ನ್ಯಾಯಾಲಯ ಶಿಕ್ಷಕ ದ್ರೋಣರಾಜು ಸುಬ್ರಹ್ಮಣ್ಯೇಶ್ವರ ರಾವ್‌ನ್ನು (60) ಅಪರಾಧಿ ಘೋಷಿಸಿ, 10 ವರ್ಷ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. 2017ರ ಡಿಸೆಂಬರ್‌ನಲ್ಲಿ ಈ ಕೃತ್ಯ ನಡೆದಿದೆ. ಸಂತ್ರಸ್ತ ಬಾಲಕಿ ರಾಜೇಂದ್ರ ನಗರ […]

Continue Reading

ಅಪ್ಪು ಆ್ಯಪ್ ಟ್ರೈಲರ್‌ಗೆ ಕಿಚ್ಚನ ಧ್ವನಿ: ಆ್ಯಪ್‌ನ ಸ್ಪೆಷಾಲಿಟಿ ಏನು ?

ಪವರ್‌ಸ್ಟಾರ್ ಪುನೀತ್ ರಾಜಕುಮಾರ ಅಗಲಿಕೆಗೆ 4 ವರ್ಷ ತುಂಬುತ್ತಿದೆ. ಇದೆ ವೇಳೆ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಅಪ್ಪು ಅಭಿಮಾನಿಗಳಿಂದ ಅಭಿಮಾನಿಗಳಿಗಾಗಿ ಅಂತ ಅಪ್ಪು ಪತ್ನಿ ಅಶ್ವಿನಿ ಪುನೀತ್‌ ರಾಜಕುಮಾರ ಹೊಸ ಹೆಜ್ಜೆಯೊಂದನ್ನು ಇಟ್ಟಿದ್ದಾರೆ. ಅಪ್ಪು ಅಪ್ಲಿಕೇಷನ್ ಅನಾವರಣ ಮಾಡಲು ಸಜ್ಜಾಗಿದ್ದಾರೆ. ಅದಕ್ಕೂ ಮೊದಲು ಟ್ರೈಲರ್ ರಿಲೀಸ್ ಮಾಡಲಾಗಿದೆ. ಪುನೀತ್ ರಾಜಕುಮಾರ ಅವರ ಪ್ರತಿಭೆ, ಸಮಾಜಸೇವೆ, ಮಾನವೀಯ ಮೌಲ್ಯಗಳು, ಅವರ ಜೀವನ, ಸಾಧನೆ ಪ್ರತಿಯೊಬ್ಬರಿಗೂ ತಲುಪಿಸಲು ಮತ್ತು ಸ್ಫೂರ್ತಿ ತುಂಬಲು ಪಿಆರ್‌ಕೆ ಹೆಸರಿನ ಅಪ್ಲಿಕೇಶನ್ ನಿರ್ಮಿಸಲಾಗಿದ್ದು, ಅದನ್ನು ಅ.25 […]

Continue Reading

ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಆಸ್ತಿ, ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ. ಅ.16 ರಂದು ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಸರ್ಕಾರ ನಿರ್ಣಯ ಕೈಗೊಂಡಿತ್ತು. ಸಂಘ ಸಂಸ್ಥೆಗಳು, ಸಂಘಟನೆಗಳು ಯಾರಿಂದ ಅನುಮತಿ ಪಡೆಯಬೇಕು ?

Continue Reading

ಡಾ.ಬರಗೂರು ರಾಮಚಂದ್ರಪ್ಪನವರು ಪ್ರಗತಿಪರ ಚಿಂತಕ, ಬಂಡಾಯ ಸಾಹಿತಿ: ಎಚ್.ಬಿ ಪಾಟೀಲ

ಕಲಬುರಗಿ: ಸಮಾಜದಲ್ಲಿರುವ ತಳಮಟ್ಟದ ಸಮುದಾಯ, ಅಸಹಾಯಕರು, ಧ್ವನಿಯಿಲ್ಲದವರ ಬಗ್ಗೆ ತಮ್ಮ ಆಳವಾದ ಚಿಂತನೆಯ ಸಾಹಿತ್ಯದ ಮೂಲಕ ಸಮಾಜವನ್ನು ಜಾಗೃತಗೊಳಿಸುತ್ತಿರುವ ಬಂಡಾಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪನವರು ಶ್ರೇಷ್ಠ ಚಿಂತಕ, ಲೇಖಕ, ಕಾದಂಬರಿಕಾರರಾಗಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ಸಮೀಪದ ಸನಲೈಟ್ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಡಾ.ಬರಗೂರು ರಾಮಚಂದ್ರಪ್ಪನವರ 79ನೇ ಜನ್ಮ ದಿನಾಚರಣೆ’ಯ ಪ್ರಯುಕ್ತ ಬರಗೂರ್‌ರ ಬದುಕು-ಬರಹ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, […]

Continue Reading

ವಚನಗಳ ಅಳವಡಿಕೆಯಿಂದ ಆಂತರಿಕ ಕತ್ತಲೆ ದೂರ

ಕಲಬುರಗಿ: ದೀಪಗಳು ಬೆಳಕನ್ನು ನೀಡಿ ಹೊರಗಿನ ಕತ್ತಲೆಯನ್ನು ಕಳೆಯುತ್ತವೆ. ಬಸವಾದಿ ಶರಣರು ರಚಿಸಿರುವ ವಚನಗಳ ಅಧ್ಯಯನ ಮಾಡಿ, ಅದರ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅಜ್ಞಾನ, ಮೌಢ್ಯತೆ, ಕಂದಾಚಾರ, ಅಂಧಶೃದ್ಧೆ, ಶೋಷಣೆ, ಅಸಮಾನತೆ ಭಾವನೆ ಎಂಬ ಆಂತರಿಕ ಕತ್ತಲೆ ದೂರವಾಗಿ ಬದುಕು ಸುಂದರವಾಗುತ್ತದೆ ಎಂದು ಶರಣ ಚಿಂತಕ ರವೀಂದ್ರ ಶಾಬಾದಿ ಅಭಿಮತಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಿದ್ದ ‘ವಚನ-ದೀಪೋತ್ಸವ ವಿಶೇಷ ಕಾರ್ಯಕ್ರಮ’ದಲ್ಲಿ ವಿದ್ಯಾರ್ಥಿಗಳಿಗೆ ವಚನಗಳ ಪುಸ್ತಕ […]

Continue Reading

ಚಿತ್ತಾಪುರ: ಆರ್‌ಎಸ್‌ಎಸ್ ಅಳವಡಿಸಿದ್ದ ಬ್ಯಾನರ್, ಭಗವಾಧ್ವಜ ತೆರವು

ಚಿತ್ತಾಪುರ: ದಿ.19 ರಂದು ರವಿವಾರ ಪಟ್ಟಣದಲ್ಲಿ ಪಥ ಸಂಚಲನ ಕಾರ್ಯಕ್ರಮ ಆಯೋಜನೆ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತರು ಮುಖ್ಯ ಬೀದಿಗಳಲ್ಲಿ ಅಳವಡಿಸಿದ್ದ ಬಂಟಿಂಗ್ಸ್, ಭಗವಾಧ್ವಜ ಮತ್ತು ಕಟೌಟ್‌ಗಳನ್ನು ಶುಕ್ರವಾರ ರಾತ್ರಿ ಪುರಸಭೆ ಆಡಳಿತವು ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವುಗೊಳಿಸಿದೆ. ಬ್ಯಾನರ್ ಮತ್ತು ಕಟೌಟ್ ತೆರವು ಮಾಡುತ್ತಿರುವ ವಿಷಯ ತಿಳಿಯುತ್ತಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಲಾಡ್ಜಿಂಗ್ ಕ್ರಾಸ್‌ಗೆ ದೌಡಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪಥ ಸಂಚಲನಕ್ಕೆ ಅನುಮತಿ ಕೋರಿ ಬಂದಿರುವ ಅರ್ಜಿ ಕುರಿತು ವರದಿ ನೀಡುವಂತೆ […]

Continue Reading