ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಆಸ್ತಿ, ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ. ಅ.16 ರಂದು ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಸರ್ಕಾರ ನಿರ್ಣಯ ಕೈಗೊಂಡಿತ್ತು. ಸಂಘ ಸಂಸ್ಥೆಗಳು, ಸಂಘಟನೆಗಳು ಯಾರಿಂದ ಅನುಮತಿ ಪಡೆಯಬೇಕು ?

Continue Reading

ಡಾ.ಬರಗೂರು ರಾಮಚಂದ್ರಪ್ಪನವರು ಪ್ರಗತಿಪರ ಚಿಂತಕ, ಬಂಡಾಯ ಸಾಹಿತಿ: ಎಚ್.ಬಿ ಪಾಟೀಲ

ಕಲಬುರಗಿ: ಸಮಾಜದಲ್ಲಿರುವ ತಳಮಟ್ಟದ ಸಮುದಾಯ, ಅಸಹಾಯಕರು, ಧ್ವನಿಯಿಲ್ಲದವರ ಬಗ್ಗೆ ತಮ್ಮ ಆಳವಾದ ಚಿಂತನೆಯ ಸಾಹಿತ್ಯದ ಮೂಲಕ ಸಮಾಜವನ್ನು ಜಾಗೃತಗೊಳಿಸುತ್ತಿರುವ ಬಂಡಾಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪನವರು ಶ್ರೇಷ್ಠ ಚಿಂತಕ, ಲೇಖಕ, ಕಾದಂಬರಿಕಾರರಾಗಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ಸಮೀಪದ ಸನಲೈಟ್ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಡಾ.ಬರಗೂರು ರಾಮಚಂದ್ರಪ್ಪನವರ 79ನೇ ಜನ್ಮ ದಿನಾಚರಣೆ’ಯ ಪ್ರಯುಕ್ತ ಬರಗೂರ್‌ರ ಬದುಕು-ಬರಹ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, […]

Continue Reading

ವಚನಗಳ ಅಳವಡಿಕೆಯಿಂದ ಆಂತರಿಕ ಕತ್ತಲೆ ದೂರ

ಕಲಬುರಗಿ: ದೀಪಗಳು ಬೆಳಕನ್ನು ನೀಡಿ ಹೊರಗಿನ ಕತ್ತಲೆಯನ್ನು ಕಳೆಯುತ್ತವೆ. ಬಸವಾದಿ ಶರಣರು ರಚಿಸಿರುವ ವಚನಗಳ ಅಧ್ಯಯನ ಮಾಡಿ, ಅದರ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅಜ್ಞಾನ, ಮೌಢ್ಯತೆ, ಕಂದಾಚಾರ, ಅಂಧಶೃದ್ಧೆ, ಶೋಷಣೆ, ಅಸಮಾನತೆ ಭಾವನೆ ಎಂಬ ಆಂತರಿಕ ಕತ್ತಲೆ ದೂರವಾಗಿ ಬದುಕು ಸುಂದರವಾಗುತ್ತದೆ ಎಂದು ಶರಣ ಚಿಂತಕ ರವೀಂದ್ರ ಶಾಬಾದಿ ಅಭಿಮತಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಿದ್ದ ‘ವಚನ-ದೀಪೋತ್ಸವ ವಿಶೇಷ ಕಾರ್ಯಕ್ರಮ’ದಲ್ಲಿ ವಿದ್ಯಾರ್ಥಿಗಳಿಗೆ ವಚನಗಳ ಪುಸ್ತಕ […]

Continue Reading

ಚಿತ್ತಾಪುರ: ಆರ್‌ಎಸ್‌ಎಸ್ ಅಳವಡಿಸಿದ್ದ ಬ್ಯಾನರ್, ಭಗವಾಧ್ವಜ ತೆರವು

ಚಿತ್ತಾಪುರ: ದಿ.19 ರಂದು ರವಿವಾರ ಪಟ್ಟಣದಲ್ಲಿ ಪಥ ಸಂಚಲನ ಕಾರ್ಯಕ್ರಮ ಆಯೋಜನೆ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತರು ಮುಖ್ಯ ಬೀದಿಗಳಲ್ಲಿ ಅಳವಡಿಸಿದ್ದ ಬಂಟಿಂಗ್ಸ್, ಭಗವಾಧ್ವಜ ಮತ್ತು ಕಟೌಟ್‌ಗಳನ್ನು ಶುಕ್ರವಾರ ರಾತ್ರಿ ಪುರಸಭೆ ಆಡಳಿತವು ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವುಗೊಳಿಸಿದೆ. ಬ್ಯಾನರ್ ಮತ್ತು ಕಟೌಟ್ ತೆರವು ಮಾಡುತ್ತಿರುವ ವಿಷಯ ತಿಳಿಯುತ್ತಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಲಾಡ್ಜಿಂಗ್ ಕ್ರಾಸ್‌ಗೆ ದೌಡಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪಥ ಸಂಚಲನಕ್ಕೆ ಅನುಮತಿ ಕೋರಿ ಬಂದಿರುವ ಅರ್ಜಿ ಕುರಿತು ವರದಿ ನೀಡುವಂತೆ […]

Continue Reading

ಪ್ರೀತಿಸಿ ಮದ್ವೆಯಾದ, ವಿಚ್ಛೇದನ ಪಡೆದು ಮಾಜಿ ಪತ್ನಿ ಕೊಂದ ಪೊಲೀಸಪ್ಪ

ಬೆಳಗಾವಿ: ಪ್ರೀತಿಸಿ ಮದುವೆಯಾಗಿ ವಿಚ್ಛೇದನ ಪಡೆದ ಬಳಿಕ ಮಾಜಿ ಪತ್ನಿಯನ್ನು ಪೊಲೀಸಪ್ಪ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪತ್ನಿಗೆ ಚಟ್ಟಕಟ್ಟಿ ಮನೆಯ ಹೊರಗಿನಿಂದ ಬೀಗ ಹಾಕಿಕೊಂಡು ಪೊಲೀಸಪ್ಪ ಕಾಣೆಯಾಗಿದ್ದ ಎನ್ನಲಾಗಿದೆ. ಮೃತದೇಹ ಕೊಳೆತು ವಾಸನೆ ಬಂದಾಗ ಸ್ಥಳೀಯರಿಂದ ಪ್ರಕರಣ ಬೆಳಕಿಗೆ ಬಂದಿದೆ. ‌ಮನೆಗೆ ನುಗ್ಗಿ ಭೀಕರವಾಗಿ ಹತ್ಯೆಗೈದ ಬಳಿಕ ಡೋರ್ ಲಾಕ್ ಮಾಡಿಕೊಂಡು ಹಂತಕ ಪರಾರಿಯಾಗಿದ್ದ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಈ ದಾರುಣ ಘಟನೆ ನಡೆದಿದೆ. ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಕಾಶಮ್ಮ‌ […]

Continue Reading

ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ ಖಂಡಿಸಿ: ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದ ಸರ್ಕಾರಿ ಸ್ಥಳಗಳಲ್ಲಿ ಹಾಗೂ ಶಾಲೆಗಳ ಜಾಗದಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಿಸುವಂತೆ ಕೋರಿ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದುಷ್ಕರ್ಮಿಗಳು ಕರೆ ಮಾಡಿ ಬೆದರಿಸುತ್ತಿರುವುದುನ್ನು ಖಂಡಿಸಿ ಶುಕ್ರವಾರ ಬೆಳಗ್ಗೆ ನಗರದ ವಾಡಿ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರೆ 150ರ ಮೇಲೆ ಬ್ಲಾಕ್ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಮಾಡಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.    ಕಲಬುರಗಿ ಕಾಡಾ ಅಧ್ಯಕ್ಷ ಡಾ.ಎಮ್.ಎ ರಶೀದ ಮತ್ತು ಜಿ.ಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ್ ಮಾತನಾಡಿ, […]

Continue Reading

ರೈತರು ಉತ್ತಮ ಸಾಗುವಳಿ ಕ್ರಮಗಳ ಮೂಲಕ ಬಿತ್ತನೆ ಮಾಡಿ

ಕಲಬುರಗಿ: ಹಿಂಗಾರು ಬಿತ್ತನೆ ಕಾಲ ಪ್ರಾರಂಭವಾಗಿದ್ದು, ಪ್ರಮುಖವಾಗಿ ಜೋಳ, ಕಡಲೆ, ಕುಸುಬೆ, ಗೋದಿ ಬಿತ್ತನೆ ಮಾಡಲಾಗುತ್ತದೆ. ರೈತರು ಬೀಜದ ಪ್ರಮಾಣ, ರಸಗೊಬ್ಬರ ಬಳಕೆ, ಬಿತ್ತನೆಯ ವಿಧಾನ ಅನುಸರಿಸುವ ಮೂಲಕ ಉತ್ತಮ ಸಾಗುವಳಿ ಕ್ರಮಗಳ ಮೂಲಕ ಬಿತ್ತನೆ ಮಾಡುವುದು ಅಗತ್ಯವಾಗಿದೆ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್.ಬಿರಾದಾರ ರೈತರಿಗೆ ಸಲಹೆ ನಿಡಿದರು. ಆಳಂದ ರಸ್ತೆಯ ಟೋಲಗೇಟ್ ಸಮೀಪದ ಇಟಗಿಯವರ ತೋಟದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರೈತರಿಗೆ ಹಿಂಗಾರು ಬಿತ್ತನೆಯ ಸಲಹೆಗಳು’ ಕಾರ್ಯಕ್ರಮದಲ್ಲಿ ಮಾತನಾಡಿದ […]

Continue Reading

ಹೊಸ ದಾಖಲೆ ಬರೆದ ಹಾಸನಾಂಬೆ: ಒಂದೆ ವಾರದಲ್ಲಿ ದೇಗುಲಕ್ಕೆ ಬಂತು ಕೋಟ್ಯಂತರ ರೂ. ಆದಾಯ

ಹಾಸನ: ಹಾಸನಾಂಬ ದರ್ಶನೋತ್ಸವ ಆರಂಭಗೊಂಡು ಕೇವಲ ಒಂದೆ ವಾರದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಇಲ್ಲಿಯವರೆಗೂ 15 ಲಕ್ಷ 30 ಸಾವಿರ ಭಕ್ತರು ಹಾಸನಾಂಬ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇನ್ನು ಕೇವಲ 8 ದಿನದಲ್ಲಿ ದೇವಾಲಯಕ್ಕೆ 10.5 ಕೋಟಿ ರೂ. ಆದಾಯ ಹರಿದು ಬಂದಿದ್ದು ದಾಖಲೆಯಾಗಿದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದುಪಡಿಸಿರುವುದರಿಂದ ಭಕ್ತರು ಸುಗಮವಾಗಿ ದರ್ಶನ ಪಡೆಯುತ್ತಿದ್ದಾರೆ. ಇದರಿಂದಾಗಿ ಭಕ್ತರಲ್ಲಿ ಸಂತಸ ಮೂಡಿದೆ. ನಾಡಿನ ನಾನಾ ಭಾಗಗಳಿಂದ ಭಕ್ತರ ದಂಡೆ ಹಾಸನಾಂಬೆಯ ದರ್ಶನಕ್ಕೆ ಹರಿದು ಬರುತ್ತಿದೆ. […]

Continue Reading

ಆಹಾರ ಪ್ರತಿಯೊಂದು ಜೀವಿಯ ಅಮೃತ: ಚಂದ್ರಶ್ಯಾ ಇಟಗಿ

ಸುದ್ದಿ ಸಂಗ್ರಹ ಕಲಬುರಗಿ ಪ್ರತಿಯೊಂದು ಜೀವಿಗೆ ಆಹಾರ ಅಮೃತವಿದ್ದಂತೆ ಎಂದು ಪ್ರಗತಿಪರ, ಸಾವಯುವ ರೈತ ಚಂದ್ರಶ್ಯಾ ಇಟಗಿ ಅಭಿಪ್ರಾಯಪಟ್ಟರು. ಆಳಂದ ರಸ್ತೆಯ ಟೋಲಗೇಟ್ ಸಮೀಪದ ತೋಟದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಆಹಾರ ದಿನಾಚರಣೆ’ ಗೌರವ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಾನವ ಸೇರಿ ಎಲ್ಲಾ ಜೀವಿಗಳಿಗೆ ಆಹಾರ ಅವಶ್ಯಕ. ಪ್ರತಿಯೊಬ್ಬ ಮನುಷ್ಯನಿಗೆ ಸದೃಢ ಮತ್ತು ಪೌಷ್ಠಿಕ ಆಹಾರ ದೊರೆಯಬೇಕು. ಆಹಾರ ಉತ್ಪಾದನೆಯ ಕಷ್ಟ ರೈತನಿಗೆ ಗೊತ್ತು. ಆಹಾರವನ್ನು ಅನಾವಶ್ಯಕವಾಗಿ ವ್ಯರ್ಥ […]

Continue Reading

ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಸಿ ಚಿತ್ತಾಪುರ ಬಂದ್

ಚಿತ್ತಾಪುರ: ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್ಚಟುವಟಿಕೆಗಳನ್ನು ನಿಷೇಧಿಸುವಂತೆ ಸಚಿವ ಪ್ರಿಯಾಂಕ್ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವಹಿನ್ನೆಲೆಯಲ್ಲಿ ಅವರಿಗೆ ಬೆದರಿಕೆ ಕರೆಗಳು ಬಂದಿರುವ ಬೆನ್ನಲ್ಲೇ ಸಚಿವ ಖರ್ಗೆ ಅವರನ್ನು ಬೆಂಬಲಿಸಿ, ಕಾಂಗ್ರೆಸ್ ಮುಖಂಡರು ಚಿತ್ತಾಪುರ ಬಂದ್ ಮಾಡಲಾಯಿತು, ಚಿತ್ತಾಪುರ ಬಂದ್’ಗೆ ಉತ್ತಮ ಸ್ಪಂದನೆ ವ್ಯಕ್ತವಾಯಿತು. , ಬ್ಲಾಕ್ ಕಾಂಗ್ರೆಸ್ ವತಿಯಿಂದ ಕರೆ ನೀಡಿದ್ದ ಬಂದ್ ಕರೆಗೆ ಉತ್ತಮ ಸ್ಪಂದನೆ ದೊರಕಿದೆ. ಚಿತ್ತಾಪುರ ಪಟ್ಟಣದಲ್ಲಿರುವ ಬಹುತೇಕ ಅಂಗಡಿಗಳು ಸ್ವಯಂಪ್ರೇರಿತವಾಗಿ ಮುಚ್ಚಿದ್ದವು. ಅಲ್ಲದೆ ಯಾವುದೆ ಬಸ್ ಗಳು ರಸ್ತೆಗೆ ಇಳಿಯಲಿಲ್ಲ. ಬಂದ್‌ ಕರೆ […]

Continue Reading