ಭಕ್ತರ ಕೈಯಲ್ಲಿದ್ದ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣದ ಪರ್ಸ್‌ ಕಸಿದು ಪರಾರಿಯಾದ ಮಂಗ

ಉತ್ತರಪ್ರದೇಶ: ಭಕ್ತರೊಬ್ಬರ ಕೈಯಲ್ಲಿದ್ದ ಸುಮಾರು 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹೊಂದಿರುವ ಪರ್ಸ್‌ ಮಂಗವೊಂದು ಕಸಿದುಕೊಂಡು ಪರಾರಿಯಾಗಿರುವ ಘಟನೆ ಮಥುರಾ ಸಮೀಪದ ಠಾಕೂರ್‌ ಬಂಕೆ ಬಿಹಾರಿ ದೇವಸ್ಥಾನದ ಬೃಂದಾವನ ಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಅಲಿಗಢ್‌ ನಿವಾಸಿ ಅಭಿಷೇಕ್‌ ಅಗರ್ವಾಲ್‌ ತಮ್ಮ ಕುಟುಂಬದ ಸದಸ್ಯರ ಜೊತೆಗೆ ವೃಂದಾವನಕ್ಕೆ ಭೇಟಿ ನೀಡಿದ್ದರು. ದೇವಸ್ಥಾನಕ್ಕೆ ತೆರಳಿ ವಾಪಸ್‌ ಆಗುವಾಗ ಅಗರ್ವಾಲ್‌ ಅವರ ಪತ್ನಿಯ ಕೈಯಲ್ಲಿದ್ದ ಪರ್ಸ್‌ನ್ನು ಮಂಗ ಕಸಿದುಕೊಂಡು ಪರಾರಿಯಾಗಿದೆ. ಪರ್ಸ್‌’ನಲ್ಲಿ ಬೆಲೆಬಾಳುವ ಚಿನ್ನಾಭರಣ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ […]

Continue Reading

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ 1.5 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನರೇಂದ್ರಕುಮಾರ್ (51) ಬೆಂಗಳೂರಿನ ಕೆಐಎಡಿಬಿಯಲ್ಲಿ ಸರ್ವೇ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸ್ಕೆಚ್ ಸಿದ್ಧಪಡಿಸಲು ಮತ್ತು ಅದಕ್ಕೆ ಅನುಮೋದನೆ ನೀಡಲು ಆರೋಪಿ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರುದಾರ ರವಿ ಆರೋಪಿಸಿದ ನಂತರ ಲೋಕಾಯುಕ್ತ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಆರೋಪಿ ಸರ್ಕಾರಿ […]

Continue Reading

ಬೆಂಗಳೂರು ಕಾಲ್ತುಳಿತ ಕೇಸ್‌: ವಿರಾಟ್‌ ಕೊಹ್ಲಿ ವಿರುದ್ಧ ದೂರು ದಾಖಲು

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ವಿರಾಟ್‌ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ. ಕೊಹ್ಲಿ ವಿರುದ್ಧ ನೈಜ್ಯ ಹೋರಾಟಗಾರರ ಸಂಘ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದೆ. ದೂರಿನಲ್ಲಿ, ಈ ನೂಕು ನುಗ್ಗಲಿಗೆ ಕೊಹ್ಲಿ ಸಹ ಕಾರಣ ಎಂದು ಆರೋಪಿಸಲಾಗಿದೆ. ಅಲ್ಲದೆ ದುರಂತ ನಡೆದ ಕುಟುಂಬವನ್ನು ಕೊಹ್ಲಿ ಭೇಟಿ ಮಾಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿಂದೆ ಅಲ್ಲು ಅರ್ಜುನ್ ಸಿನಿಮಾ ಸಂದರ್ಭದಲ್ಲಿ ದುರಂತಕ್ಕೆ ನಟ ಕಾರಣ […]

Continue Reading

ಮನೆ ಮೇಲೆ ಕಾರು ಇಟ್ಟ ಮೆಕ್ಯಾನಿಕ್‌: ಕಾರನ್ನು ದೇವರಂತೆ ಪೂಜಿಸುವ ಕುಟುಂಬ

ಬೆಳಗಾವಿ: ನಿಪ್ಪಾಣಿ ತಾಲೂಕಿನ ಬೇಡಕಿಹಾಳ ಗ್ರಾಮದ ಮೆಕ್ಯಾನಿಕ್‌ ಸೂರಜ್ ನಾರೆ ಅವರು ನೆಚ್ಚಿನ ಕಾರನ್ನು ತಮ್ಮ ಮೂರು ಅಂತಸ್ತಿನ ಮನೆಯ ಮೇಲೆ ಇಟ್ಟಿದ್ದಾರೆ. ಕ್ರೇನ್‌ ನೆರವಿನಿಂದ ಮೇಲೆ ಇಡಲಾಗಿರುವ ಕಾರು ಸುಲಭವಾಗಿ ಕಾಣುವಂತೆ ಇಳಿಜಾರಿನಲ್ಲಿ ಇರಿಸಲಾಗಿದೆ. ಬೇಡಕಿಹಾಳದ ಕಡುಬಡ ಕುಟುಂಬದಲ್ಲಿ ಜನಿಸಿದ ಸೂರಜ್‌ ಐಟಿಐ ಓದಿ, ಮಹಾರಾಷ್ಟ್ರದ ಪುಣೆಯಲ್ಲಿ ಗ್ಯಾರೇಜ್‌ನಲ್ಲಿ ಮೆಕ್ಯಾನಿಕ್ ಆಗಿ 4 ವರ್ಷ ದುಡಿದರು. 12 ವರ್ಷಗಳ ಹಿಂದೆ ಸ್ವಗ್ರಾಮಕ್ಕೆ ಬಂದು, ತಮ್ಮದೆ ಚಿಕ್ಕ ಗ್ಯಾರೇಜ್‌ ತೆರೆದರು. ಜೊತೆಗೆ ಕಾರು ಚಾಲನಾ ತರಬೇತಿ ಕೇಂದ್ರ […]

Continue Reading

ಕನ್ನಡಕ್ಕೆ ಮಾಸ್ತಿಯವರು ಅಮೂಲ್ಯ ಆಸ್ತಿ: ಡಾ.ವಾಸುದೇವೆ ಸೇಡಂ

ಕಲಬುರಗಿ: ಕನ್ನಡ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಮಾಸ್ತಿ ವೆಂಕಟೇಶ ಅಯ್ಯಂಗಾರ ಅವರು ಕನ್ನಡದ ಅಮೂಲ್ಯವಾದ ಆಸ್ತಿಯಾಗಿದ್ದಾರೆ ಎಂದು ಗುವಿವಿ ವಿಶ್ರಾಂತ ಪ್ರಾಧ್ಯಾಪಕ, ಸಾಹಿತಿ ಡಾ.ವಾಸುದೇವೆ ಸೇಡಂ ಎಚ್. ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಮಾಸ್ತಿ ವೆಂಕಟೇಶ ಅಯ್ಯಂಗಾರ್’ರ 134ನೇ ಜನ್ಮ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ವಿಶ್ವದ ಪ್ರಮುಖ ಭಾಷೆಗಳಲ್ಲಿ ಸ್ಥಾನ ಪಡೆಯುವಲ್ಲಿ ಶ್ರಮಿಸಿದ, […]

Continue Reading

ಮಗಳ ಮೇಲೆ ತನ್ನ ಪ್ರಿಯಕರ ಮತ್ತು ಆತನ ಸ್ನೇಹಿತ ಅತ್ಯಾಚಾರ ಎಸಗೊಕೆ ಹೆತ್ತ ತಾಯಿಯೆ ಸಪೋರ್ಟ್‌: ಬಿಜೆಪಿ ಮಾಜಿ ನಾಯಕಿ ಅರೆಸ್ಟ್‌

ಹರಿದ್ವಾರ: ಉತ್ತರಾಖಂಡದ ಹರಿದ್ವಾರದ ಮಾಜಿ ಬಿಜೆಪಿ ನಾಯಕಿ ಮತ್ತು ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷೆ ಅನಾಮಿಕಾ ಶರ್ಮಾ ಅವರ ವಿರುದ್ಧ ತನ್ನ 13 ವರ್ಷದ ಮಗಳ ಮೇಲೆ ತನ್ನ ಪ್ರಿಯಕರ ಮತ್ತು ಅವನ ಸಹಾಯಕನಿಂದ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ಆರೋಪ ಕೇಳಿಬಂದಿದೆ. ಈ ಘಟನೆ ಜನವರಿಯಿಂದ ಮಾರ್ಚ್ 2025ರವರೆಗೆ ಹಲವು ಬಾರಿ ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಹರಿದ್ವಾರ, ಆಗ್ರಾ, ಮತ್ತು ಬೃಂದಾವನದಲ್ಲಿ ಅನಾಮಿಕಾ ಶರ್ಮಾ ಅವರ 30ರ ವಯಸ್ಸಿನ ಪ್ರಿಯಕರ ಸುಮಿತ್ ಪಟ್ವಾಲ್ […]

Continue Reading

ಡಾ.ಎಚ್ ನರಸಿಂಹಯ್ಯ ಬಹುಮುಖ ವ್ಯಕ್ತಿತ್ವದ ಸಮಾಜ ಸುಧಾರಕ: ಎಚ್.ಬಿ ಪಾಟೀಲ

ಕಲಬುರಗಿ: ದೇಶ ಕಂಡ ಶ್ರೇಷ್ಠ ಶಿಕ್ಷಣ ತಜ್ಞರಲ್ಲಿ ಒಬ್ಬರಾದ ಡಾ.ಎಚ್ ನರಸಿಂಹಯ್ಯನವರು ಬಹುಮುಖ ವ್ಯಕ್ತಿತ್ವದ ಸಮಾಜ ಸುಧಾರಕರಾಗಿ ಜನಮಾನಸದಲ್ಲಿ ಅಚಳಿಯದೇ ಉಳಿದಿದ್ದಾರೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ಸಮೀಪದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಬೆಳಿಗ್ಗೆ ಏರ್ಪಡಿಸಿದ್ದ ‘ಡಾ.ಎಚ್.ನರಸಿಂಹಯ್ಯನವರ 105ನೇ ಜನ್ಮ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ರಾಷ್ಟ್ರದ ಅಭಿವೃದ್ಧಿಯ ಜೀವಾಳವಾದ […]

Continue Reading

ವಾಡಿ: ವಿಶ್ವ ಪರಿಸರ ದಿನಾಚರಣೆ ಆಚರಣೆ

ವಾಡಿ: ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಬಿಜೆಪಿ ಮುಖಂಡರು ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿದ ಅವರು, ಕೇವಲ ಒಂದು ದಿನ ಪರಿಸರ ದಿನಾಚರಣೆ ಮಾಡಿದರೆ ಸಾಲದು. ವರ್ಷಪೂರ್ತಿ ಪರಿಸರ ದಿನಾಚರಣೆ ನಡೆಸಬೇಕಾಗಿದೆ ಎಂದರು. ಅರಣ್ಯ ನಾಶದಿಂದ ಅಂತರ್ಜಲದ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ, ಕುಡಿಯುವ ನೀರಿಗೂ ಪರಿತಪಿಸಬೇಕಾದ ದಿನಗಳು ಎದುರಾಗುತ್ತಿವೆ. ಗಿಡಮರಗಳನ್ನು ಕಡಿದು ಕಾಡನ್ನು ಬರಿದಾಗಿಸುತ್ತಿರುವುದರಿಂದ ಮಳೆ ಕೊರತೆಯಾಗಿದೆ ಪರಿಸರ ಸಂರಕ್ಷಣೆ ಹಾಗೂ ಉತ್ತಮ […]

Continue Reading

ಗಿಡಗಳು ನೆಟ್ಟು ಪರಿಸರ ಸಂರಕ್ಷಣೆ ಮಾಡಿ

ಕಲಬುರಗಿ: ಎಲ್ಲರು ಗಿಡಗಳನ್ನು ನೆಟ್ಟು ಮಗುವಿನಂತೆ ಪೋಷಣೆ ಮಾಡಿ ಪರಿಸರ ಸಂರಕ್ಷಣೆ ಮಾಡುವ ಕಾರ್ಯ ಸಾಮೂಹಿಕವಾಗಿ ಮಾಡೋಣ ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ ಹೇಳಿದರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಪರಿಸರ ದಿನಾಚರಣೆ’ಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಸಿ ಮಾತನಾಡಿದ ಅವರು, ಪರಿಸರ ಸಮತೋಲನಕ್ಕೆ ಶೇ.33ರಷ್ಟು ಅರಣ್ಯ ಪ್ರದೇಶದ ಅವಶ್ಯಕತೆಯಿದ್ದು, ಇದರ ಪ್ರಮಾಣ ಕಡಿಮೆ ಇರುವುದರಿಂದ ಪರಿಸರ ಅಸಮತೋಲನವಾಗುತ್ತಿದೆ ಎಂದರು. ಎನ್’ಎಸ್’ಎಸ್ ಅಧಿಕಾರಿ […]

Continue Reading

ಆರ್‌ಸಿಬಿ ಗೆಲುವು: ಕಪ್ ಹಿಡಿದು ಕುಪ್ಪಳಿಸಿದ ಅಭಿಮಾನಿಗಳು

ವಾಡಿ: ಪಟ್ಟಣದಲ್ಲಿ ಆರ್‌ಸಿಬಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತು. ಆರ್‌ಸಿಬಿ ಗೆದ್ದ ತಕ್ಷಣ ಮಕ್ಕಳು, ಯುವಕರು, ಅಭಿಮಾನಿಗಳು ಮನೆಯಿಂದ ಹೊರಗೆ ಬಂದು ಆರ್‌ಸಿಬಿ ವಿಜಯೋತ್ಸವದಲ್ಲಿ ಭಾಗಿಯಾದರು. ಅಭಿಮಾನಿಗಳೊಂದಿಗೆ ಗೆಲುವಿ ಸಂಭ್ರಮಾಚರಣೆಯಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜಗತ್ತಿನಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದೆ ಆರ್‌ಸಿಬಿ ತಂಡ, ಆಟಗಾರರ ಕ್ರೀಡಾ ಸ್ಪೂರ್ತಿ, ಭಾವನಾತ್ಮಕವಾಗಿ ಪ್ರೇಕ್ಷಕರ ಮತ್ತು ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣದೊಂದಿಗೆ ಇರುವ ಒಡನಾಟದಿಂದ ಹದಿನೆಂಟು ವರ್ಷಗಳ ಸತತವಾಗಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದೆ,ಇಲ್ಲಿಯವರೆಗೂ ಕಪ್ ಗೆಲ್ಲಲಿಲ್ಲ. ಈ ಸಲ […]

Continue Reading