ಜೇವರ್ಗಿ ಸರ್ಕಾರಿ ಪಿಯು ಕಾಲೇಜು: ಸಂಭ್ರಮ-ಸಡಗರದಿಂದ ಪ್ರಾರಂಭ

ಕಲಬುರಗಿ: ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ 2025-26ನೇ ಶೈಕ್ಷಣಿಕ ಸಾಲಿನ ಕಾಲೇಜು ಪ್ರಾರಂಭೋತ್ಸವ ಅತ್ಯಂತ ಸಂಭ್ರಮ- ಸಡಗರದಿಂದ ಸೋಮವಾರ ಜರುಗಿತು. ತಳಿರು-ತೋರಣಗಳಿಂದ ಅಲಂಕರಿಸಿ, ರಂಗೋಲಿ ಬಿಡಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ, ಸಿಹಿ ವಿತಿರಿಸಿ, ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾಲೇಜಿನ ವತಿಯಿಂದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ಕಾಲೇಜಿನ ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ ಮಾತನಾಡಿ, ನಮ್ಮ ಕಾಲೇಜು ಜೇವರ್ಗಿ ತಾಲೂಕಿನಲ್ಲಿ ಅತ್ಯಂತ ಹಿರಿಯ ಕಾಲೇಜಾಗಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮುನ್ನುಡಿ ಬರೆದಿದೆ. […]

Continue Reading

ರೈತರು ಬಿತ್ತನೆ ಮಾಡುವಾಗ ಜಾಗೃತಿ ವಹಿಸಬೇಕು

ಕಲಬುರಗಿ: ರೈತರು ನಕಲಿ ಬೀಜಗಳಿಂದ ಮುನ್ನೆಚ್ಚರಿಕೆ ವಹಿಸಿ, ಬಿತ್ತನೆ ಮಾಡುವಾಗ ಜಾಗೃತಿ ವಹಿಸುವದು ಅಗತ್ಯ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್.ಬಿರಾದಾರ ರೈತರಿಗೆ ಸಲಹೆ ನೀಡಿದರು. ಆಳಂದ ತಾಲೂಕಿನ ತೆಲ್ಲೂರ ಗ್ರಾಮದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಮುಂಗಾರು ಕೃಷಿ ಜಾಗೃತಿ ಮತ್ತು ರೈತರೊಂದಿಗೆ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ನು ಕೆಲವೆ ದಿವಸಗಳಲ್ಲಿ ಮುಂಗಾರು ಮಳೆ ಆಗಮಿಸಲಿದೆ, ರೈತರು ಬಿತ್ತನೆ ಕಾರ್ಯ ಮಾಡಬೇಕಾಗುತ್ತದೆ. ಬಿತ್ತನೆ ಬೀಜಗಳನ್ನು ಖರೀದಿಸುವಾಗ ಲೇಬಲ್, ಅಗಮಾರ್ಕ […]

Continue Reading

ಒಂದೆ ಬಾರಿಗೆ 20 ಜನ ಎಸ್ಪಿಗಳಿಗೆ ಮುಂಬಡ್ತಿ, 20 ಡಿಐಜಿ ಕೇಡರ್ ಹುದ್ದೆ, 1 ಡಿಜಿಪಿ ಹುದ್ದೆ ಸೃಷ್ಟಿ

ಬೆಂಗಳೂರು: ರಾಜ್ಯ ಪೊಲೀಸ್ ವ್ಯವಸ್ಥೆಗೆ ಮೇಜರ್ ಸರ್ಜರಿ ನಡೆಸಲು ಸದ್ದಿಲ್ಲದೆ ಸಿದ್ಧತೆ ನಡೆದಿದೆ. ಹೊಸದಾಗಿ 20 ಉಪ ಮಹಾನಿರೀಕ್ಷಕ (ಡಿಐಜಿ) ಕೇಡರ್ ಹುದ್ದೆಗಳು ಹಾಗೂ ಒಂದು ಡಿಜಿಪಿ ಹುದ್ದೆ ಸೃಷ್ಟಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪೊಲೀಸ್‌ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಈ ಮನವಿಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಸಕಾರಾತ್ಮಕವಾಗಿ ಸ್ಪಂದಿಸಿದರೆ ಮೊದಲ ಬಾರಿಗೆ ಒಂದೆ ಹಂತದಲ್ಲಿ 20 ಎಸ್ಪಿಗಳಿಗೆ ಡಿಐಜಿ ಸ್ಥಾನಕ್ಕೆ ಮುಂಬಡ್ತಿ ಪಡೆಯುವ ಭಾಗ್ಯ ಸಿಗಲಿದೆ. ಅದೆ ರೀತಿ ಡಿಜಿ-ಐಜಿಪಿ ಜೊತೆಗೆ ಪ್ರಸ್ತುತ ಚಾಲ್ತಿಯಲ್ಲಿರುವ […]

Continue Reading

ವಾಡಿ: ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರ ರೈಲ್ವೆ ಸಚಿವರಿಗೆ ಮನವಿ

ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದ ತ್ವರಿತ ಕಾಮಗಾರಿ ಅಭಿವೃದ್ಧಿಗೆ ಬಿಜೆಪಿ ಮುಖಂಡರು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು. ಕಲಬುರಗಿ ನಗರಕ್ಕೆ ಆಗಮಿಸಿದ ಕೇಂದ್ರ ರೈಲ್ವೆ ಸಚಿವರನ್ನು ಮಾಜಿ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ ಅವರೊಂದಿಗೆ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ, ವಾಡಿ ಬಿಜೆಪಿ‌ ಮಹಾಶಕ್ತಿ ಕೇಂದ್ರ ಅಧ್ಯಕ್ಷ ವೀರಣ್ಣ ಯಾರಿ ಮತ್ತು ಮುಖಂಡ ಸುಭಾಷ್ ವರ್ಮಾ ಅವರು ಕಲಬುರಗಿ ನಗರದ ಪ್ರವಾಸಿ ಮಂದಿರದಲ್ಲಿ ವಾಡಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ […]

Continue Reading

ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಪ್ರಮುಖ: ಎಚ್.ಬಿ ಪಾಟೀಲ

ಕಲಬುರಗಿ: ಮಕ್ಕಳನ್ನು ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿಸಿ, ಸಮಾಜದ ದೊಡ್ಡ ಆಸ್ತಿಯನ್ನಾಗಿಸುವಲ್ಲಿ ಪಾಲಕರ ಪಾತ್ರ ಪ್ರಮುಖವಾಗಿದೆ. ಮಕ್ಕಳು ತಮ್ಮ ಪಾಲಕ-ಪೋಷಕರ ಶ್ರಮ ಮರೆಯಬಾರದು. ಅವರಿಗೆ ಗೌರವಯುತವಾಗಿ ಕಾಣುವುದು ಅಗತ್ಯ. ಮಕ್ಕಳು ಪಾಲಕರನ್ನು ಎಂದಿಗೂ ವೃದ್ಧಾಶ್ರಮಕ್ಕೆ ನೂಕುವ ಪ್ರವೃತ್ತಿ ಬೆಳಿಸಿಕೊಳ್ಳಬೇಡಿ ಎಂದು ಉಪನ್ಯಾಸಕ, ಸಾಮಾಜಿಕ ಚಿಂತಕ ಎಚ್.ಬಿ ಪಾಟೀಲ ಮಾರ್ಮಿಕವಾಗಿ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಜಾಗತಿಕ ಪಾಲಕರ ದಿನಾಚರಣೆ’ ಉದ್ಘಾಟಿಸಿಯಲ್ಲಿ […]

Continue Reading

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಮತ್ತು ಸರ್ಕಾರಿ ಸೌಲಭ್ಯಗಳು ದೊರೆಯಲಿ

ಕಲಬುರಗಿ: ಹೈನೋದ್ಯಮ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವುದು, ಸೂಕ್ತ ಫಲಾನುಭವಿಗೆ ಸಾಲ ಸೌಲಭ್ಯ, ಸಬ್ಸಿಡಿ, ಶೆಡ್ ನಿರ್ಮಾಣಕ್ಕೆ ಧನ ಸಹಾಯ, ಮೇವು ಕತ್ತರಿಸುವ ಹಾಗೂ ಹಾಲೂ ಕರೆಯುವ ಯಂತ್ರ ನೀಡುವುದು ಸೇರಿದಂತೆ ಇನ್ನಿತರ ಸರ್ಕಾರಿ ಸೌಲಭ್ಯಗಳು ದೊರೆಯಬೇಕು. ಅಂದಾಗ ಮಾತ್ರ ಹೈನುಗಾರಿಕೆಯತ್ತ ಜನರ ಒಲವು ಹೆಚ್ಚಾಗಲು ಸಾಧ್ಯ ಎಂದು ಹಿರಿಯ ಹೈನುಗಾರಿಕೆ-ರೈತ ಶಾಂತಪ್ಪ ದುಧನ್ ಮಾರ್ಮಿಕವಾಗಿ ನುಡಿದರು. ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ತಮ್ಮ ಹೈನುಗಾರಿಕೆ ಕೇಂದ್ರದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ವಿಶ್ವ […]

Continue Reading

ರಸ್ತೆಯಲ್ಲಿ ಏಕಾಏಕಿ ವಾಹನ ಅಡ್ಡ ಹಾಕುವಂತಿಲ್ಲ, ಕೀ ಕಸಿಯುವಂತಿಲ್ಲ: ಪೊಲೀಸರಿಗೆ ಡಿಜಿಪಿ ಕಟ್ಟಾಜ್ಞೆ

ಬೆಂಗಳೂರು: ಮಂಡ್ಯ ಪೊಲೀಸರ ಕರ್ತವ್ಯ ಲೋಪದಿಂದ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತಿರುವ ಪೊಲೀಸ್‌ ಇಲಾಖೆ, ತಪಾಸಣೆ ನೆಪದಲ್ಲಿ ಸಕಾರಣವಿಲ್ಲದೆ ವಾಹನಗಳನ್ನು ಏಕಾಏಕಿ ತಡೆದು ನಿಲ್ಲಿಸಬಾರದು ಎಂದು ಕಟ್ಟಾಜ್ಞೆ ಹೊರಡಿಸಿದೆ. ಈ ಕುರಿತು ಶನಿವಾರ ರಾಜ್ಯದ ಎಲ್ಲಾ ಜಿಲ್ಲೆಗಳ ಪೊಲೀಸರಿಗೆ ಸುತ್ತೋಲೆ ಹೊರಡಿಸಿರುವ ಪ್ರಭಾರ ಡಿಜಿಪಿ ಡಾ.ಎಂ.ಎ ಸಲೀಂ, ವಾಹನಗಳ ತಪಾಸಣೆ ಸಂಬಂಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಿದ್ದಾರೆ. ಹೆದ್ದಾರಿಗಳಲ್ಲಿ ಜಿಗ್‌ಜಾಗ್‌ ಬ್ಯಾರಿಕೇಡ್‌ ಅಳವಡಿಸಿ ತಡೆಯಬಾರದು. ರಸ್ತೆಯಲ್ಲಿ ಏಕಾಏಕಿ ಅಡ್ಡಬಂದು ವಾಹನಗಳನ್ನು ನಿಲ್ಲಿಸಬಾರದು. ವಾಹನಗಳ ಕೀ ತೆಗೆದುಕೊಳ್ಳಬಾರದು. […]

Continue Reading

ಹೈಕೋರ್ಟ್​ ಆದೇಶಕ್ಕೆ ಮಣಿದ ಸರ್ಕಾರ: ಐಪಿಎಸ್​ ಅಧಿಕಾರಿ ರೂಪಾಗೆ ಮುಂಬಡ್ತಿ

ಬೆಂಗಳೂರು: ಕರ್ನಾಟಕ ರೇಷ್ಮೆ ಮಾರುಕಟ್ಟೆ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಐಪಿಎಸ್​ ಮಹಿಳಾ ಅಧಿಕಾರಿ ಡಿ.ರೂಪಾ ಮೌದ್ಗಿಲ್​ ಅವರಿಗೆ ರಾಜ್ಯ ಸರ್ಕಾರ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ. 2000ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿರುವ ರೂಪಾ ಅವರನ್ನು ಐಜಿಪಿಯಿಂದ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕಿಯಾಗಿ (ಎಡಿಜಿಪಿ) ಸರ್ಕಾರವು ಮುಂಬಡ್ತಿ ನೀಡಿ, ಈಗ ಇರುವ ಹುದ್ದೆಯಲ್ಲೆ ಮುಂದುವರೆಸಿದೆ. ಮುಂಬಡ್ತಿ ಸಂಬಂಧ ಡಿ. ರೂಪಾ ಅವರು ಏಪ್ರಿಲ್ 25 ರಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯವಾಗಿ ತಮಗೆ ಸಿಗಬೇಕಾದ ಬಡ್ತಿ ನೀಡುವ ಕುರಿತು […]

Continue Reading

ಕರ್ತವ್ಯದಿಂದ ನಿವೃತ್ತಿಯಾಗುವ ದಿನವೆ ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಇಂಜಿನಿಯರ್

ಧಾರವಾಡ: ಕರ್ತವ್ಯದಿಂದ ನಿವೃತ್ತಿಯಾದ ದಿನವೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ)ಯ ಉತ್ತರ ವಲಯ ಮುಖ್ಯ ಇಂಜಿನಿಯರ್ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ ಘಟನೆ ಶನಿವಾರ ನಡೆದಿದೆ. ಮುಖ್ಯ ಅಭಿಯಂತರ ಎಚ್ ಸುರೇಶ ಅವರ ಕಚೇರಿ, ಕೆಸಿಡಿ ಗಣಪತಿ ದೇವಸ್ಥಾನದ ಹಿಂಭಾಗದಲ್ಲಿರುವ ಸರಕಾರಿ ನಿವಾಸದ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ತಂಡಗಳು ದಾಳಿ ಮಾಡಿದ್ದು, ಕೋಟ್ಯಾಂತರ ಮೌಲ್ಯದ ಸ್ಥಿರಾಸ್ತಿ ಕಾಗದ ಪತ್ರ, ಚರಾಸ್ತಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಕರ್ತವ್ಯದಿಂದ ನಿವೃತ್ತಿ ಹಿನ್ನೆಲೆಯಲ್ಲಿ ನಿವಾಸದಲ್ಲಿ ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿತ್ತಲ್ಲದೆ ಇಲಾಖೆ ಸಿಬ್ಬಂದಿಗಳಿಂದ ಬೀಳ್ಕೊಡುಗೆ […]

Continue Reading

ಕಲಬುರಗಿ: ನಾಳೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಕಲಬುರಗಿ: ಮಹಾಸಾದ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತ್ಯೋತ್ಸವ ಆಚರಣೆ ಮತ್ತು ರೆಡ್ಡಿ ಸಮಾಜದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಶರಣಬಸಪ್ಪ ಕಾಮರೆಡ್ಡಿ ತಿಳಿಸಿದ್ದಾರೆ. ನಗರದ ಖೂಬಾ ಕಲ್ಯಾಣ ಮಂಟಪದಲ್ಲಿ ಜೂ.1 ರಂದು ಬೆಳಿಗ್ಗೆ 11 ಗಂಟೆಗೆ ಮಹಾಸಾದ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತ್ಯೋತ್ಸವ ಆಚರಣೆ ಮತ್ತು ರೆಡ್ಡಿ ಸಮಾಜದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ.

Continue Reading