ಕೂದಲೆಳೆ ಅಂತರದಲ್ಲಿ ಪಾರಾದ DMK ಸಂಸದ ರಾಜಾ

ಚೆನ್ನೈ: ಮೈಲಾಡುತುರೈನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಡಿಎಂಕೆ ಸಂಸದ ಎ ರಾಜಾ ಅವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿರುವಾಗ ಗಾಳಿ ಬೀಸುತ್ತಿತ್ತು. ಈ ವೇಳೆ ಬಲವಾದ ಗಾಳಿಯಿಂದಾಗಿ ವೇದಿಕೆಯ ಬಳಿ ಓವರ್‌ಹೆಡ್ ಫೋಕಸ್ ದೀಪಗಳು ಕುಸಿದು ಬಿದ್ದು ಡಯಾಜ್ ಮೇಲೆ ಬಿದ್ದಿದೆ. ಫೋಕಸ್‌ ದೀಪಗಳು ಬೀಳುವುದನ್ನು ನೋಡಿದ ರಾಜಾ ಅವರು ತಮ್ಮ ಎಡಗಡೆ ಸರಿದ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ಅವರು ಭಾಷಣ ಮಾಡುತ್ತಲೇ ಇರುತ್ತಿದ್ದರೆ ಗಾಯಗೊಳ್ಳುವ ಸಾಧ್ಯತೆ ಇತ್ತು. ಓವರ್‌ಹೆಡ್ […]

Continue Reading

ನಗುವಿನಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಗುಂಡಣ್ಣ ಡಿಗ್ಗಿ

ಕಲಬುರಗಿ: ನಗುವದರಿಂದ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಘಾತವಾಗುವ ಸಂಭವನೀಯತೆ ಕಡಿಮೆಯಾಗುತ್ತದೆ. ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಾನಸಿಕವಾಗಿ ನೆಮ್ಮದಿ, ವ್ಯಕ್ತಿಯ ಆಯಸ್ಸು ಹೆಚ್ಚಾಗುತ್ತದೆ ಎಂದು ಖ್ಯಾತ ಹಾಸ್ಯ ಕಲಾವಿದ ಗುಂಡಣ್ಣ ಡಿಗ್ಗಿ ಹೇಳಿದರು. ಅಫಜಲಪುರ ತಾಲೂಕಿನ ನೀಲೂರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಇವುಗಳ ವತಿಯಿಂದ ಜರುಗಿದ ‘ವಿಶ್ವ ನಗುವಿನ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಅವಿಭಕ್ತ ಕುಟುಂಬವಿದ್ದ […]

Continue Reading

ಶಾಲಾ ಮಕ್ಕಳಿಗೆ ನೀಡಿದ ಮಧ್ಯಾಹ್ನದ ಊಟದಲ್ಲಿ ಸತ್ತ ಹಾವು ಪತ್ತೆ

ಪಾಟ್ನಾ: ಸರ್ಕಾರಿ ಶಾಲೆಯಲ್ಲಿ ನೀಡಲಾದ ಮಧ್ಯಾಹ್ನದ ಊಟದಲ್ಲಿ ಸತ್ತ ಹಾವು ಪತ್ತೆಯಾಗಿದೆ. ಬಿಹಾರದ ಪಾಟ್ನಾ ಜಿಲ್ಲೆಯ ಮೊಕಾಮಾ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮಕ್ಕಳು ಅಸ್ವಸ್ಥರಾದ ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಆಲೂಗಡ್ಡೆ ಕರಿಯಲ್ಲಿ ಸತ್ತ ಹಾವು ಪತ್ತೆಯಾಗಿದೆ. ಈ ಘಟನೆ ಏಪ್ರಿಲ್ 26 ರಂದು ವರದಿಯಾಗಿದೆ. 500 ಮಕ್ಕಳಿಗೆ ಆಹಾರ ಒದಗಿಸಲಾಯಿತು. ಈ ಮಕ್ಕಳಲ್ಲಿ ಸುಮಾರು 100 ಮಕ್ಕಳು ಅಸ್ವಸ್ಥರಾಗಿದ್ದರು ಎಂದು ವರದಿಯಾಗಿದೆ. ಮಕ್ಕಳ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಪೊಲೀಸರು ಆಗಮಿಸಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು. […]

Continue Reading

ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಲಂಬಾಣಿ ಎಂದು ಬರೆಯಿಸಲು ಬಂಜಾರ ಸಮಾಜ ಮನವಿ

ಚಿತ್ತಾಪುರ: ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿಪ್ರತಿಯೊಂದು ಕುಟುಂಬ ಭಾಗವಹಿಸುವ ಮೂಲಕಲಂಬಾಣಿ ಎಂದು ಬರೆಯಿಸಬೇಕು ಎಂದು ಬಂಜಾರಸಮಾಜದ ತಾಲೂಕು ಅಧ್ಯಕ್ಷ ಭೀಮಸಿಂಗ್ ಚವ್ಹಾಣ ಮತ್ತು ತಾಲೂಕು ಯುವ ಅಧ್ಯಕ್ಷ ಜಗದೀಶ ಚವ್ಹಾಣ ಮನವಿ ಮಾಡಿದ್ದಾರೆ. 1 ಜುಲೈ 2024 ರಂದು ಸುಪ್ರೀಂಕೋರ್ಟ್ ತೀರ್ಪಿನಂತೆ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ಏಕ ಸದಸ್ಯ ವಿಚಾರಣೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಮೇ.5 ರಿಂದ 17 […]

Continue Reading

ಅಗ್ನಿಶಾಮಕರು ಸಮಾಜದ ರಕ್ಷಕರು: ಅಂಕುಶ್ ಆಳಂದೆ

ಕಲಬುರಗಿ: ಬೆಂಕಿ ಅವಗಡ, ಭೂಕಂಪ, ಅತಿವೃಷ್ಟಿ, ನೆರೆ ಹಾವಳಿ, ಪ್ರವಾಹದಂತಹ ತುರ್ತು ಸಂದರ್ಭದಲ್ಲಿ ಜೀವದ ಹಂಗನ್ನು ತೊರೆದು ಸಾರ್ವಜನಿಕರ ಜೀವ ರಕ್ಷಿಸುವ ಅಗ್ನಿಶಾಮಕರು ಸಮಾಜದ ಕಾವಲುಗಾರ ಹಾಗೂ ರಕ್ಷಕರಾಗಿದ್ದಾರೆ. ಅವರಿಗೆ ಸಾರ್ವಜನಿಕ ಸುರಕ್ಷತೆ, ಸಮಾಜದ ರಕ್ಷಣೆಯೆ ಪ್ರಮುಖವಾಗಿದೆ ಎಂದು ಅಗ್ನಿಶಾಮಕ ಠಾಣಾಧಿಕಾರಿ ಅಂಕುಶ್ ಎ ಆಳಂದೆ ಅಭಿಪ್ರಾಯಪಟ್ಟರು. ನಗರದ ಅಗ್ನಿಶಾಮಕ ಠಾಣೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಅಗ್ನಿಶಾಮಕ ಠಾಣೆಯ ಜಂಟಿ ಆಶ್ರಯದಲ್ಲಿ ರವಿವಾರ ಏರ್ಪಡಿಸಿದ್ದ್ ‘ಅಂತಾರಾಷ್ಟ್ರೀಯ ಅಗ್ನಿಶಾಮಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಡಿಸೆಂಬರ್ […]

Continue Reading

ಭೂಮಿಗೆ ಗಂಗೆಯನ್ನು ಹರಿಸಿದ ಭಗೀರಥ ಮಹರ್ಷಿ: ಎಚ್.ಬಿ ಪಾಟೀಲ

ಕಲಬುರಗಿ: ಭಾರತ ಅನೇಕ ಮಹನೀಯರ, ಶರಣರ, ಋಷಿ-ಮುನಿಗಳ ತವರೂರಾಗಿದೆ. ಇದರಲ್ಲಿ ಭಗೀರಥ ಮಹರ್ಷಿ ಕೇವಲ ರಾಜ ಮಾತ್ರನಾಗಿರದೆ, ಭಕ್ತಿಯ ಸಂಪನ್ನರಾಗಿದ್ದರು. ಅವರು ಘೋರವಾದ ತಪ್ಪಸ್ಸು ಮಾಡಿ ಭೂಮಿಗೆ ಗಂಗೆಯನ್ನು ಹರಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಭಗೀರಥ ಮಹರ್ಷಿ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ನಾವು ನುಡಿಗಟ್ಟಾಗಿ ಬಳಸುವ ‘ಭಗೀರಥ ಪ್ರಯತ್ನ’ ಎಂಬ […]

Continue Reading

ಮುಕ್ತ ಪತ್ರಿಕೋದ್ಯಮಕ್ಕೆ ಬೆಂಬಲ ನೀಡುವುದು ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಚಟುವಟಿಕೆ ಬಗ್ಗೆ ನಿಗಾ ವಹಿಸಿ, ದೇಶದ ಸಮಸ್ಯೆಗಳ ಬಗ್ಗೆ ಮೇಲಿಂದ ಮೇಲೆ ಬೆಳಕು ಚೆಲ್ಲಿ, ಅದಕ್ಕೆ ಪರಿಹಾರ ಹುಡುಕುವಂತೆ ಮಾಡಿ ಸ್ವಸ್ಥ, ಸಧೃಢ ರಾಷ್ಟ್ರ ನಿರ್ಮಾಣಕ್ಕೆ ‘ಮಾಧ್ಯಮ ರಂಗ’ ತನ್ನದೆಯಾದ ಅದ್ವಿತೀಯ ಕೊಡುಗೆಯನ್ನು ನೀಡುತ್ತಿದೆ. ಸಮಾಜಕ್ಕೆ ಸ್ವತಂತ್ರ, ನಿರ್ಭೀತ, ನ್ಯಾಯಯುತ ಪತ್ರಿಕೋದ್ಯಮ ಅಗತ್ಯ. ಪತ್ರಿಕೋದ್ಯಮವು ಮುಕ್ತವಾಗಿ ಕಾರ್ಯನಿರ್ವಹಿಸಲು ಬೆಂಬಲ ನೀಡುವುದು ಅವಶ್ಯಕ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ […]

Continue Reading

ದೇಶದ ಐಕ್ಯತೆಗಾಗಿ ಮೋದಿ ಸರ್ಕಾರ ಏನೆ ಕ್ರಮ ಕೈಗೊಂಡರು ಬೆಂಬಲ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ದೇಶದ ಐಕ್ಯತೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನೇ ನಿರ್ಧಾರಗಳನ್ನು ಅಥವಾ ಕ್ರಮಗಳನ್ನು ಕೈಗೊಂಡರೂ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದರು. ಪಹಲ್ಗಾಮ್ ಉಗ್ರ ದಾಳಿ ವಿಚಾರವಾಗಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ದೇಶಕ್ಕಾಗಿ ಏನೆ ನಿರ್ಧಾರ ಕೈಗೊಂಡರು ಬೆಂಬಲಿಸುತ್ತೆವೆ. ಆದರೆ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು ಎಂದರು. ಕೇವಲ ಭಾಷಣ […]

Continue Reading

ಚಿತ್ತಾಪುರ: ವಿದ್ಯಾನಿಕೇತನ ಪ್ರೌಢ ಶಾಲೆಗೆ ಸಹನಾ ಬಳ್ಳಾ ಟಾಪರ್

ಚಿತ್ತಾಪುರ: ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಹನಾ ಬಳ್ಳಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 611 ಅಂಕ ಪಡೆದಿದ್ದಾಳೆ. ಸಂಧ್ಯಾಕಾಲ ಪತ್ರಿಕೆಯ ವರದಿಗಾರ ಚಂದ್ರಶೇಖರ ಬಳ್ಳಾ ಅವರ ಪುತ್ರಿ ಸಹನಾ ಬಳ್ಳಾ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ 611 (ಶೇ.97.76) ಅಂಕ ಪಡೆಯುವ ಮೂಲಕ ವಿದ್ಯಾನಿಕೇತನ ಪ್ರೌಢ ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಮಗಳು ಸಹನಾಗೆ ಸಿಹಿ ತಿನ್ನಿಸಿ ಪೋಷಕರು ಸಂಭ್ರಮಿಸಿದ್ದಾರೆ. 2024-25ನೇ ಸಾಲಿನ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಹಾಜರಾದ ಒಟ್ಟು 54 ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. 20 ವಿದ್ಯಾರ್ಥಿಗಳು […]

Continue Reading

ಇನ್ನುಮುಂದೆ ಆಧಾರ್, ಪ್ಯಾನ್, ಪಡಿತರ ಚೀಟಿ ಭಾರತೀಯ ಪೌರತ್ವಕ್ಕೆ ಪುರಾವೆಯಲ್ಲ, ಈ 2 ಡಾಕ್ಯುಮೆಂಟ್‌ ಇದ್ದರೆ ಮಾತ್ರ ಭಾರತದ ಪ್ರಜೆ: ಸರ್ಕಾರದ ಹೊಸ ಆದೇಶ

ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನಿ ನಾಗರಿಕರನ್ನು ತನಿಖೆ ಮಾಡಿ ದೇಶದಿಂದ ಹೊರಹೋಗುವ ಮಾರ್ಗ ತೋರಿಸಲಾಗಿದೆ. ಇದಾದ ನಂತರ ಸರ್ಕಾರ ಆಧಾರ್, ಪ್ಯಾನ್, ಪಡಿತರ ಚೀಟಿ ಭಾರತೀಯ ಪೌರತ್ವಕ್ಕೆ ಪುರಾವೆಯಲ್ಲ ಎಂದು ಹೇಳಿದೆ. ಇವು ಆಡಳಿತಾತ್ಮಕ ಅಗತ್ಯಗಳನ್ನು ಮಾತ್ರ ಪೂರೈಸುತ್ತವೆ. ಇದಲ್ಲದೆ ಸರ್ಕಾರದಿಂದ ಗುರುತಿಸಲ್ಪಟ್ಟ ಏಕೈಕ ದಾಖಲೆಗಳು ಜನನ ಪ್ರಮಾಣಪತ್ರ ಮತ್ತು ನಿವಾಸ ಪ್ರಮಾಣಪತ್ರ ಎಂದು ಸರ್ಕಾರ ಹೇಳಿದೆ. ಇದರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಅಕ್ರಮ ವಿದೇಶಿ ನಾಗರಿಕರು ಪರಿಶೀಲನೆಯ ಸಮಯದಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಪ್ಯಾನ್ […]

Continue Reading