ವಾಡಿ: ಪಹಲ್ಗಾಮ್ ಘಟನೆಯಲ್ಲಿ ಬಲಿಯಾದವರಿಗೆ ನಮನ, ಪಾಕಿಸ್ತಾನದ ವಿರುದ್ಧ ಘೋಷಣೆ

ವಾಡಿ: ಪಟ್ಟಣದ ಅಜಾದ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು ಮೇಣದ ಬತ್ತಿ ಬೆಳಗುವ ಮೂಲಕ ಪಹಲ್ಗಾಮ್ ಘಟನೆಯಲ್ಲಿ ಉಗ್ರಗಾಮಿಗಳ ದಾಳಿಗೆ ಬಲಿಯಾದವರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪಹಲ್ಗಾಮ್’ದಲ್ಲಿ ಉಗ್ರಗಾಮಿಗಳು ಹಿಂದೂಗಳನ್ನು ಗುರಿಯಾಗಿಟ್ಟುಕೊಂಡು ಭೀಕರವಾಗಿ ಹತ್ಯೆ ಮಾಡಿದ್ದಾರೆ. ದಾಳಿ ವೇಳೆ ಉಗ್ರರು ಪ್ರವಾಸಿಗರ ಧರ್ಮ ಯಾವುದು ಎಂದು ಕೇಳಿ ಗುಂಡಿಕ್ಕಿ ಕೊಂದಿರುವುದು ಅತ್ಯಂತ ಹೇಯ ಕೃತ್ಯವಾಗಿದೆ ಎಂದರು. ದುಷ್ಕರ್ಮಿಗಳು ಧರ್ಮದ ಹೆಸರಿನಲ್ಲಿ ಅಮಾಯಕ, ಮುಗ್ಧ ಜನರನ್ನು ಬಲಿ ತೆಗೆದುಕೊಂಡಿದ್ದಾರೆ. […]

Continue Reading

ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಒರ್ವ ಬಂಧನ

ಕೋಲಾರ: ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದಲ್ಲಿ ನಡೆದಿದೆ. ಮುಳಬಾಗಿಲು ನಗರದ ನೂಕಲಬಂಡೆಯ ನಿವಾಸಿ ಸೈಯದ್ ಸಾದಿಕ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಆರೋಪಿ ಸಾರ್ವಜನಿಕರಿಂದ ನಗದು ರೂಪದಲ್ಲಿ ಹಾಗೂ ಆನ್‌ಲೈನ್‌ನಲ್ಲಿ ವರ್ಗಾವಣೆ ಮಾಡಿಸಿಕೊಂಡು ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳ ಮೂಲಕ ಐಪಿಎಲ್ […]

Continue Reading

ಮೇ.1 ರಿಂದ ದೇಶವಾಸಿಗಳಿಗೆ ಸಿಗಲಿವೆ 10 ಸೇವೆಗಳು ಫ್ರೀ, ಫ್ರೀ

ನವದೆಹಲಿ: ಪ್ರತಿವರ್ಷ ಸರ್ಕಾರ ದೇಶದ ಜನತೆಗೆ ಹೊಸ ಹೊಸ ಯೋಜನೆ ನೀಡುತ್ತದೆ. ಹಾಗೆ ಹಳೆಯ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವ ಆದೇಶ ಪ್ರಕಟಿಸುತ್ತಿರುತ್ತದೆ. 2025ರಲ್ಲಿ ಹಲವು ಯೋಜನೆಗಳನ್ನು ಪರಿಚಯಿಸಲಾಗಿದೆ, ಈ ಮೂಲಕ ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸುವ ಉದ್ದೇಶ ಸರ್ಕಾರ ಹೊಂದಿರುತ್ತದೆ. ಇದರ ಜೊತೆಗೆ ದೇಶವಾಸಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಗುರಿ ಹೊಂದಿರುತ್ತವೆ. ಉಚಿತ ಪಡಿತರ ವಿತರಣೆ, ವಿದ್ಯುತ್, ಶಿಕ್ಷಣ, ಕೌಶಲ್ಯ ತರಬೇತಿ, ಪಿಂಚಣಿ, ತೆರಿಗೆ ಸೇರಿದಂತೆ ಇನ್ನಿತರ ಸೇವೆಗಳನ್ನು ಒಳಗೊಂಡಿರುತ್ತದೆ. ಮೇ 1ರಿಂದ ದೇಶದ ಜನತೆಗೆ […]

Continue Reading

ಕಲಬುರಗಿ SBI ಎಟಿಎಂ ದರೋಡೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡೇಟು ಕೊಟ್ಟು ಬಂಧನ

ಕಲಬುರಗಿ: ನಗರದ ರಿಂಗ್ ರಸ್ತೆಯ SBI ಎಟಿಎಂ ಧ್ವಂಸಗೊಳಿಸಿ ದರೋಡೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಸಬರ್ಬನ್ ಠಾಣೆಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಹರಿಯಾಣ ಮೂಲದ ದರೋಡೆ ಪ್ರಕರಣದ ಆರೋಪಿಗಳಾದ ತಸ್ಲೀಮ್ (28) ಮತ್ತು ಷರೀಫ್ ( 22) ಗಾಯಗೊಂಡವರು. ಜಿಮ್ಸ್ ಆವರಣದ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲಬುರಗಿಯ ಬೇಲೂರ ಕ್ರಾಸ್ ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಆ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ […]

Continue Reading

225 ಪ್ರಕರಣದಲ್ಲಿ 345 ಆರೋಪಿಗಳ ಬಂಧನ: 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ

ವಿಜಯಪುರ: ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದು, 225 ಕೇಸ್‌ನಲ್ಲಿದ್ದ 345 ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಬೇಧಿಸಿ, ಚಿನ್ನ, ಬೆಳ್ಳಿ ಹಾಗೂ ಇನ್ನಿತರ ವಸ್ತುಗಳು ಸೇರಿದಂತೆ ಒಟ್ಟು 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು ಸಂಬಂಧಪಟ್ಟ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಒಟ್ಟು 5,145.02 ಗ್ರಾಂ ಚಿನ್ನದ ಆಭರಣ ಮತ್ತು 1,723 ಗ್ರಾಂ ಬೆಳ್ಳಿ ಆಭರಣ, 1,06,72,000 ರೂ. ಮೌಲ್ಯದ 73 […]

Continue Reading

ನಾಲವಾರ ರೈಲ್ವೆ ನಿಲ್ದಾಣದ ಸಲಹಾ ಸಮಿತಿಗೆ ನೇಮಕ

ನಾಲವಾರ: ದಕ್ಷಿಣ ಮಧ್ಯ ರೈಲ್ವೆಯ ಗುಂತಕಲ್ ವಿಭಾಗದ ನಾಲವಾರ ರೈಲ್ವೆ ನಿಲ್ದಾಣದ ಸಲಹಾ ಸಮಿತಿಯ ಸದಸ್ಯರನ್ನಾಗಿ ರಾಮರೆಡ್ಡಿ ಪಾಟೀಲ ಕೊಳ್ಳಿ, ವೀರಣ್ಣ ಯಾರಿ ಹಾಗೂ ಸರ್ವರ್ ಬೇಗ್ ಅವರನ್ನು ದಕ್ಷಿಣ ಮಧ್ಯ ರೈಲ್ವೆ ಗುಂತಕಲ್ ವಿಭಾಗದ ವ್ಯವಸ್ಥಾಪಕ ಧನಂಜಯಕುಮಾರ ಸಿಂಗ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದಾರೆ. ಬಿಜೆಪಿ ಹಿರಿಯ ಮುಖಂಡ ಹಾಗೂ ರಾಜ್ಯ ತೊಗರಿ ಮಂಡಳಿ ಮಾಜಿ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ ನೂತನ ಸದಸ್ಯರುಗಳಿಗೆ ಪತ್ರ ನೀಡಿದರು. ಈ ಸಲಹಾ ಸಮಿತಿಯ ಸದಸ್ಯರುಗಳು ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ […]

Continue Reading

ಮುಂದಿನ 4 ದಿನ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಣಹವೆಯ ವಾತಾವರಣ ಇದೆ, ತಿಂಗಳಾಂತ್ಯಕ್ಕೆ ತಾತ್ಕಾಲಿಕವಾಗಿ ಕೊನೆಯಾಗಲಿದೆ. ಎಲ್ಲೆಡೆ ಮಬ್ಬು ವಾತಾವರಣ ಸೃಷ್ಟಿಯಾಗಲಿದೆ. ಸಾಧಾರಣದಿಂದ ಭಾರಿ ಮಳೆಯಾಗುವ ಲಕ್ಷಣಗಳು ಇವೆ. ಏಪ್ರಿಲ್ 28 ರಿಂದ ಮೇ 1ರವರೆಗೆ 4 ದಿನಗಳ ಕಾಲ ರಾಜ್ಯಾದ್ಯಂತ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗ ಮತ್ತು ಒಳನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಏಪ್ರಿಲ್ 28ರವರೆಗೆ ಅಧಿಕ ತಾಪಮಾನದ ವಾತವರಣ ಮುಂದುವರೆಯಲಿದೆ. ಕೆಲವೆಡೆ ಲಘು ಮಳೆಯಾಗಬಹುದು. ನಂತರ 4 ದಿನಗಳ ಕಾಲ ಗುಡುಗು ಮಿಂಚು […]

Continue Reading

ಏ.27 ರಂದು ನಾಲವಾರದಲ್ಲಿ ಹಳೆಯ ಜಾತ್ರೆ, ಸದ್ಭಕ್ತರ ಹರಕೆಯ ತನಾರತಿ ಉತ್ಸವ

ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಏ. 27 ರಂದು ರವಿವಾರ ಪೀಠಾಧಿಪತಿ ಪೂಜ್ಯಶ್ರೀ ಡಾ. ಸಿದ್ದತೋಟೆಂದ್ರ ಮಹಾಸ್ವಾಮಿಗಳ ದಿವ್ಯ ಸನ್ನಿಧಿಯಲ್ಲಿ ಶ್ರೀಮಠದ ಹಳೆಯ ಜಾತ್ರೆ ಹಾಗೂ ಪ್ರಸಕ್ತ ವರ್ಷದ ಎರಡನೆಯ ತನಾರತಿ ಉತ್ಸವ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ಅಕ್ಷಯತದಿಗೆ ಅಮಾವಾಸ್ಯಯ ದಿನ ಬೆಳಿಗ್ಗೆ ಕರ್ತೃ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ನಡೆಯಲಿದೆ, ಸಂಜೆ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ, ನಾಡಿನ ಹಲವು […]

Continue Reading

ಸಿದ್ದಲಿಂಗ ಮಹಾಸ್ವಾಮಿಗಳ ಜನ್ಮದಿನದ ಪ್ರಯುಕ್ತ ಉಚಿತ ಕ್ಷೌರ ಸೇವೆ

ಚಿತ್ತಾಪುರ: ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳ 33ನೇ ಜನ್ಮದಿನದ ಪ್ರಯುಕ್ತ ರಾವೂರನ ಬಾಳಿ ಕಾಂಪ್ಲೆಕ್ಸ್’ನಲ್ಲಿನ ಗುರು ಮೆನ್ಸ್ ಪಾರ್ಲರ್ ವತಿಯಿಂದ ಉಚಿತ ಕ್ಷೌರ ಸೇವೆ ಮಾಡಲಾಯಿತು. ಎರಡು ವರ್ಷಗಳಿಂದ ತಮ್ಮ ವೃತ್ತಿಯಲ್ಲಿ ದುಡಿಯುತ್ತಾ ಪೂಜ್ಯರ ಜನ್ಮದಿನದ ಪ್ರಯುಕ್ತ ಎರಡನೇ ವರ್ಷ ಒಂದು ದಿನ ಸಾರ್ವಜನಿಕರಿಗೆ ಉಚಿತ ಕ್ಷೌರ ಸೇವೆ ಮಾಡುವ ಸಂಕಲ್ಪದೊಂದಿಗೆ ಮಹಾದೇವ ವಡಗೇರಿ, ಅಂಬರೀಷ್ ವಡಗೇರಿ, ಶರಣು ವಡಗೇರಿ, ಭಾಗಣ್ಣ ವಡಗೇರಿ ಮತ್ತು ಗಂಗಾಧರ ವಡಗೇರಿಯವರು ಇಂತಹ ಸತ್ಕಾರ್ಯ […]

Continue Reading

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 33.4 […]

Continue Reading