ಸರ್ಕಾರಿ ಜೀಪ್ ಮತ್ತು ಕಾರಿನ ನಡುವೆ ಅಪಘಾತ: ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಕಾರು
ಸುದ್ದಿ ಸಂಗ್ರಹ ಆನೇಕಲ್ ಸರ್ಕಾರಿ ಜೀಪ್ ಮತ್ತು ಕಿಯಾ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿಗೆ ಸ್ಥಳದಲ್ಲಿಯೇ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಯಡವನಹಳ್ಳಿ ಗೇಟ್ ಬಳಿ ನಡೆದಿದೆ. ಬೆಳ್ಳಂಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ, ಸರ್ಕಾರಿ ಜೀಪ್ ಹಾಗೂ ಕಿಯಾ ಕಾರು ನಡುವೆ ಅಪಘಾತ ಸಂಭವಿಸಿದೆ. ಇನ್ನು ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಬೆಂಕಿ ಹತ್ತಿಕೊಂಡಿದ್ದು, ಕಾರು ಸ್ಥಳದಲ್ಲೆ ಸುಟ್ಟು ಕರಕಲಾಗಿದೆ. […]
Continue Reading