ಕನ್ನಡಕ್ಕೆ ಕಾರಂತರ ಕೊಡುಗೆ ಅಪಾರ: ಎಚ್.ಬಿ ಪಾಟೀಲ      

ಕಲಬುರಗಿ: ಕನ್ನಡದ “ಕಡಲತೀರದ ಭಾರ್ಗವ” ಎಂದೆ ಪ್ರಸಿದ್ಧರಾದ ಡಾ.ಕೆ.ಶಿವರಾಮ ಕಾರಂತರು ಕನ್ನಡ ಸಾಹಿತ್ಯದ ಮೇರು ವ್ಯಕ್ತಿ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ ಮತ್ತು ವೈಜ್ಞಾನಿಕ ಬರಹಗಾರ. ಕನ್ನಡಕ್ಕೆ ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ್ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಶಹಾಪುರ ರಸ್ತೆಯಲ್ಲಿನ ನರೇಂದ್ರ ಪದವಿ ಪೂರ್ವ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಡಾ.ಕೆ.ಶಿವರಾಮ ಕಾರಂತರ 123ನೇ  ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕಾರಂತರು 200ಕ್ಕೂ ಹೆಚ್ಚು ಕೃತಿಗಳನ್ನು […]

Continue Reading

ʻನೊಬೆಲ್‌ ಶಾಂತಿ ಪ್ರಶಸ್ತಿʼಯನ್ನು ಟ್ರಂಪ್‌ಗೆ ಅರ್ಪಿಸಿದ ಕೊರಿನಾ ಮಚಾದೋ

ನವದೆಹಲಿ: 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಿದ್ದು, ಮಾರಿಯಾ ಕೊರಿನಾ ಮಚಾದೋ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೆನೆಜುವೆಲಾದ ಜನರ ಪ್ರಜಾತಾಂತ್ರಿಕ ಹಕ್ಕುಗಳಿಗಾಗಿ ಮತ್ತು ಶಾಂತಿಗಾಗಿ ನಡೆಸಿದ ಹೋರಾಟಕ್ಕಾಗಿ ಮಾರಿಯಾ ಕೊರಿನಾ ಮಚಾದೋ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದೆ ಎಂದು ನಾರ್ವೆಯ ನೊಬೆಲ್ ಸಮಿತಿ ತಿಳಿಸಿದೆ. ಈ ಕುರಿತು ಎಕ್ಸ್‌ ಪೋಸ್ಟ್‌ನಲ್ಲಿ ಹರ್ಷ ವ್ಯಕ್ತಪಡಿಸಿರುವ ಮಚಾದೋ, ನೊಬೆಲ್‌ ಶಾಂತಿ ಪಾರಿತೋಷಕವು ಎಲ್ಲಾ ವೆನೆಜುವೆಲಾ ಜನರ ಹೋರಾಟಕ್ಕೆ ಸಿಕ್ಕ ಮನ್ನಣೆಯಾಗಿದೆ. ಈ ಪುರಸ್ಕಾರವನ್ನು ವೆನೆಜುವೆಲಾದ […]

Continue Reading

ಅಂಬಿಗರ ಚೌಡಯ್ಯ ಮೂರ್ತಿ ಭಗ್ನ: ಕೋಲಿ ಸಮಾಜದಿಂದ ಬೃಹತ್ ಪ್ರತಿಭಟನೆ‌

ಸುದ್ದಿ ಸಂಗ್ರಹ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾರೆ, ಕೋಲಿ ಸಮಾಜದ ಸ್ವಾಭಿಮಾನ ಕೆರಳಿಸಿದಂತಾಗಿದೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ ನಿಂಗಪ್ಪ ಹುಳಗೋಳಕರ ಉಗ್ರವಾಗಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಮುತ್ತಗಾ ಗ್ರಾಮದ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಘಟನೆ ವಿರೋಧಿಸಿ ಕೋಲಿ ಸಮಾಜದ ವತಿಯಿಂದ ಶುಕ್ರವಾರ ಭಂಕೂರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಅಂಬಿಗರ ಚೌಡಯ್ಯನವರು ಸಾಮಾಜಿಕ ಹರಿಕಾರರು, ಅವರು […]

Continue Reading

ಮುತ್ತಗಾ ಗ್ರಾಮದಲ್ಲಿ ಚೌಡಯ್ಯ ಮೂರ್ತಿ ಭಗ್ನ: ಉದ್ವಿಘ್ನ ಪರಿಸ್ಥಿತಿ ನಿರ್ಮಾಣ

ಶಹಾಬಾದ: ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಗುರುವಾರ ರಾತ್ರಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಪರಿಣಾಮ ತಾಲೂಕಿನಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದುಷ್ಕರ್ಮಿಗಳು ಕಲ್ಲಿನಿಂದ ಮೂರ್ತಿಯ ಕೈ ಕಟ್ ಮಾಡಿದ್ದಾರೆ. ಘಟನೆ ವಿಷಯ ತಿಳಿಯುತ್ತಿದ್ದಂತೆಯೇ ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಜಗದೇವಪ್ಪಾ ಪಾಳಾ, ಚಿತ್ತಾಪುರ ಸಿಪಿಐ ಚಂದ್ರಶೇಖರ ತಿಗಡಿ, ಶ್ವಾನದಳ ಅಧಿಕಾರಿಗಳು ಮತ್ತು ಗ್ರಾಮ ಲೇಖಾಧಿಕಾರಿ ರೇವಣಸಿದ್ದಪ್ಪ ಪಾಟಿಲ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ […]

Continue Reading

ಗಗನಕ್ಕೇರಿದ ಬಂಗಾರದ ಬೆಲೆ: 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ ಬೆಲೆ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೆ ದಿನಗಳು ಬಾಕಿಯಿದ್ದು, ಲಕ್ಷ್ಮೀ ಪೂಜೆಗೆ ಸಿದ್ಧತೆಗಳು ಆರಂಭವಾಗಿವೆ. ಜೊತೆಗೆ ಮದುವೆ ಸೀಜನ್ ಸಹ ಸ್ಟ್ರಾಟ್ ಆಗಿದೆ. ಆದರೆ ಈ ಸಮಯದಲ್ಲೇ ಬಂಗಾರ, ಬೆಳ್ಳಿ ಬಲು ಭಾರವಾಗಿದ್ದು, ಮಧ್ಯಮ ಮತ್ತು ಬಡ ವರ್ಗದವರಿಗೆ ಕೈಗೆಟುಕದಂತಾಗಿದೆ. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಬಂಗಾರದ ಬೆಲೆಯಲ್ಲಿ ಆಲ್ ಟೈಮ್ ರೆಕಾರ್ಡ್ ನಿರ್ಮಾಣವಾಗ್ತಿದೆ. ಕಳೆದ ಒಂದು ವರ್ಷದಲ್ಲಿ 65% ರಷ್ಟು ದರ ಏರಿಕೆ ಆಗಿದ್ದರೂ ಸಹ ಚಿನ್ನದ ಮೇಲೆ ಕ್ರೇಜ್ ಮಾತ್ರ ಕಡಿಮೆ ಆಗಿಲ್ಲ. […]

Continue Reading

ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ: 51 ಕೋಟಿ ಮೌಲ್ಯದ 40 ಕೆಜಿ ಚಿನ್ನದ ಗಟ್ಟಿ ವಶ

ಚಿತ್ರದುರ್ಗ: ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 51 ಕೋಟಿ ರೂ. ಮೌಲ್ಯದ 40 ಕೆಜಿ ಚಿನ್ನದ ಗಟ್ಟಿ ಪತ್ತೆಯಾಗಿದೆ. ಅಧಿಕಾರಿಗಳು ಚಳ್ಳಕೆರೆಯ ಫೆಡರಲ್ ಬ್ಯಾಂಕ್‌ ಸೇರಿದಂತೆ ಪಟ್ಟಣದ ಹಲವೆಡೆ ಶೋಧ ನಡೆಸಿದ್ದಾರೆ. ಅವರು ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆ ಎಂಬುದು ಇಡಿ ದಾಳಿ ವೇಳೆ ಬಯಲಾಗಿತ್ತು. ಈ ಹಿಂದೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು 103 […]

Continue Reading

ಮಹಿಳಾ ನೌಕರರಿಗೆ ವೇತನ ಸಹಿತ ಋತು ಚಕ್ರ ರಜೆ ಮಂಜುರಾತಿಗೆ ಸಂಪುಟ ಸಭೆ ಅನುಮೋದನೆ: ನೌಕರರ ಸಂಘ ಹರ್ಷ

ಕಲಬುರಗಿ: ಮಹಿಳಾ ನೌಕರರಿಗೆ ವೇತನ ಸಹಿತ ಋತು ಚಕ್ರ ರಜೆ ಮಂಜೂರಾತಿಗೆ ಸಂಪುಟ ಸಭೆ ಅನುಮೋದನೆ ನೀಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಡಿಶಾ ಸರ್ಕಾರ 2024ರಲ್ಲಿ ಮಹಿಳಾ ನೌಕರರಿಗೆ ವೇತನ ಸಹಿತ ಋತು ಚಕ್ರ ರಜಾ ಸೌಲಭ್ಯ ಜಾರಿಗೆ ತಂದಿದ್ದು, ಇದೆ ಮಾದರಿಯಲ್ಲಿ ಕರ್ನಾಟಕದಲ್ಲೂ ಜಾರಿಗೆ ತರಲು ಕಳೆದ ಜನವರಿ 10 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ […]

Continue Reading

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್‌

ಬೆಂಗಳೂರು: ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುಗಳಿಗೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯ ನೀಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದೆ. ಇಂದಿರಾ ಆಹಾರ ಕಿಟ್‌ (ಇಂದಿರಾ – ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮ) ಕಿಟ್‌ ನೀಡಲು ಸರ್ಕಾರ ನಿರ್ಧರಿಸಿದೆ. ಅದರಂತೆ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ನೀಡಲಾಗುತ್ತದೆ. […]

Continue Reading

ಪ್ರತಿಯೊಬ್ಬರು ಕಣ್ಣಿನ ಆರೋಗ್ಯದ ಬಗ್ಗೆ ಕಾಳಜಿ, ಮುಂಜಾಗ್ರತೆ ವಹಿಸಿ

ಕಲಬುರಗಿ: ಇತ್ತೀಚಿನ ದಿನಗಳಲ್ಲಿ ಅತಿಯಾದ ಮೊಬೈಲ್ ಮತ್ತು ಕಂಪ್ಯೂಟರ್ ಬಳಕೆಯಿಂದ ಕಣ್ಣಿನ ದೃಷ್ಟಿಯ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದ ಕಣ್ಣಿನ ಪೊರೆ, ಗ್ಲುಕೋಮಾ, ಡಯಾಬಿಟಿಕ್ ರೆಟಿನೋಪತಿ ಸೇರಿದಂತೆ ಇತರ ದೀರ್ಘಕಾಲದ ಕಣ್ಣಿನ ಅಸ್ವಸ್ಥತೆಗಳು ಹೆಚ್ಚಾಗುತ್ತಿದೆ. ಆದ್ದರಿಂದ ಇವುಗಳ ಬಳಕೆ ಮಿತಗೊಳಿಸಬೇಕು. ಪ್ರತಿಯೊಬ್ಬರು ಕಣ್ಣಿನ  ಆರೋಗ್ಯ ಬಗ್ಗೆ ಕಾಳಜಿ, ಮುಂಜಾಗ್ರತೆ ವಹಿಸಬೇಕು ಎಂದು ನೇತ್ರಾಧಿಕಾರಿ ಡಾ.ದಸ್ತಗಿರ್ ಸಲಹೆ ನೀಡಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ […]

Continue Reading

ಡಿಕೆಶಿ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಗ್‌ ಬಾಸ್‌ ಮನೆ ರೀ ಓಪನ್‌

ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡದಿ ಬಳಿ ಇರುವ ಬಿಗ್‌ಬಾಸ್‌ ಮನೆಯನ್ನು ತೆರೆಯಲಾಗಿದ್ದು ಸ್ಪರ್ಧಿಗಳನ್ನು ಶಿಫ್ಟ್‌ ಮಾಡಲಾಗಿದೆ. ನಸುಕಿನ ಜಾವ 2:45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್‌ಪಿ ಶ್ರೀನಿವಾಸ್ ಗೌಡ, ತಹಸಿಲ್ದಾರ್ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್‌ ಸ್ಟುಡಿಯೋದ ಗೇಟ್‌ ಸೀಲ್‌ ಓಪನ್‌ ಮಾಡಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಡಿಸಿಎಂ ಡಿ.ಕೆ ಶಿವಕುಮಾರ ಅವರ ನಿರ್ದೇಶನದಂತೆ ತೆರೆದಿದ್ದೆವೆ. […]

Continue Reading