ತೆಂಗಳಿ: ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

ತೆಂಗಳಿ: ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು. ನ್ಯಾಯಬೆಲೆ ಅಂಗಡಿ ವರ್ತಕರ ಸಂಘದ ತಾಲೂಕು ಅಧ್ಯಕ್ಷ ವೀರಭದ್ರಯ್ಯ ಸಾಲಿಮಠ ಮಾತನಾಡಿ, ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶಾಂತಿ, ಸಹಬಾಳ್ವೆ ಮತ್ತು ಸಮಾನತೆಯ ಮಹತ್ವ ಸಾರಿ ಮಾನವ ಧರ್ಮಕ್ಕೆ ಜಯವಾಗಲಿ ಎಂದರು. ಭೇಧ ಭಾವಗಳನ್ನು ತೊಡೆದು ಹಾಕಿ ಸಮಾಜದಲ್ಲಿ ಸಮಾನತೆ ಸಾರಿದ ಅವರು ತತ್ವಗಳನ್ನು ಪಾಲಿಸಿದರೆ ಶಾಂತಿ ನೆಲೆಸುತ್ತದೆ, ಸಮಾಜದಲ್ಲಿ ಮಾನವೀಯತೆಯ ಬೀಜ ಬಿತ್ತಿ ಸಮಾಜಕ್ಕೆ ನಾಂದಿ ಹಾಡಿದ್ದಾರೆ ಎಂದರು. ಈ ಸಂದರ್ಭದಲ್ಲಿ […]

Continue Reading

ವಾಡಿ: ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶಾಂತಿ, ಸಹಬಾಳ್ವೆ ಮತ್ತು ಸಮಾನತೆಯ ಮಹತ್ವ ಸಾರಿ ಮಾನವ ಧರ್ಮಕ್ಕೆ ಜಯವಾಗಲಿ ಎಂದವರು ಶ್ರೀ ರೇಣುಕಾಚಾರ್ಯರು ಎಂದರು. ಭೇಧ ಭಾವಗಳನ್ನು ತೊಡೆದು ಹಾಕಿ ಸಮಾಜದಲ್ಲಿ ಸಮಾನತೆ ಸಾರಿದ ಅವರು ತತ್ವಗಳನ್ನು ಪಾಲಿಸಿದರೆ ಶಾಂತಿ ನೆಲೆಸುತ್ತದೆ ಎಂದು ಸಮಾಜದಲ್ಲಿ ಮಾನವೀಯತೆಯ ಬೀಜ ಬಿತ್ತಿ ಮಾನವೀಯ ಸಮಾಜಕ್ಕೆ ನಾಂದಿ ಆಡಿದ್ದಾರೆ ಎಂದರು. ಈ […]

Continue Reading

ಧೂಮಪಾನದಿಂದ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ

ಕಲಬುರಗಿ: ಧೂಮಪಾನ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕದ ಮೇಲೆ ದುಷ್ಪರಿಣಾಮವಾಗುತ್ತದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಬುಧವಾರ ಜರುಗಿದ ‘ರಾಷ್ಟೀಯ ಧೂಮಪಾನ ನಿಷೇಧ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಯುವ ಶಕ್ತಿಯಿದೆ. ರಾಷ್ಟ್ರದ ಅಭಿವೃದ್ಧಿಯಲ್ಲಿ ಸದೃಢ ಮಾನವ ಸಂಪನ್ಮೂಲ ತುಂಬಾ ಅಗತ್ಯವಾಗಿದೆ. ಅದರಲ್ಲಿಯೂ ಯುವಕರು ರಾಷ್ಟ್ರದ ಶಕ್ತಿಯಾಗಿದ್ದಾರೆ. ಆದರೆ ನಮ್ಮ […]

Continue Reading

ಜೇವರ್ಗಿ: ಚಿರತೆ ದಾಳಿ ಕುರಿಗಾಹಿಗೆ ಗಾಯ

ಜೇವರ್ಗಿ: ತಾಲೂಕಿನ ರೇವನೂರ ಗ್ರಾಮದ ಹೊಲವೊಂದರಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಚಿರತೆಗಳು ಕಂಡುಬಂದಿವೆ, ಅದರಲ್ಲಿ ಒಂದು ಚಿರತೆ ಕುರಿಗಾಹಿ ಮೇಲೆ ದಾಳಿ ನಡೆಸಿದ ಪರಿಣಾಮ ಸಣ್ಣಪುಟ್ಟ ಗಾಯಗಳಾಗಿವೆ. ನಿಂಗಪ್ಪ ಮಾಳಪ್ಪ ಆಲೂರ (45) ಚಿರತೆ ದಾಳಿಗೊಳಗಾಗಿದ್ದು, ಅವರನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರ ಭೀಮು ಸಾಲೋಟಗಿ ಎಂಬುವವರು ತಮ್ಮ ಮೆಕ್ಕೆಜೋಳದ ಹೊಲದಲ್ಲಿ ಮಲಗಿದ್ದ ಸಂದರ್ಭದಲ್ಲಿ ನಾಯಿಗಳು ಬೊಗಳಲು ಪ್ರಾರಂಭಿಸಿವೆ. ತಕ್ಷಣ ಎದ್ದು ನೋಡಿದಾಗ ಎರಡು ಚಿರತೆಗಳು ಹೋಗುವುದನ್ನು ಗಮನಿಸಿ ಗ್ರಾಮಸ್ಥರಿಗೆ ಫೋನ್ […]

Continue Reading

ಸೂಕ್ತ ತಯಾರಿಯಿಂದ ಪರೀಕ್ಷೆ ಸುಲಭ: ಡಾ. ಪ್ರಹ್ಲಾದ ಬರ‍್ಲಿ

ಚಿತ್ತಾಪುರ: 10ನೇ ತರಗತಿ ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಮಹತ್ವದ ಘಟ್ಟ. ಸೂಕ್ತ ತಯಾರಿ ಮಾಡಿಕೊಂಡರೆ ಎಂತಹ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಬಹುದು ಎಂದು ಆರ್.ಜೆ ಕಾಲೇಜಿನ ಪ್ರಾಚಾರ್ಯ ಡಾ. ಪ್ರಲ್ಹಾದ್ ಬರ‍್ಲಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 10ನೇ ತರಗತಿ ಮಕ್ಕಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸು ಬೇರೆಡೆಗೆ ಸೆಳೆಯುವ ಆಕರ್ಷಣೆ ಇದ್ದರು ಕೂಡ ಲೆಕ್ಕಿಸದೆ ಓದಿನ ಕಡೆಗೆ ಮಾತ್ರ ಗಮನಹರಿಸಿ ಅಧ್ಯಯನ ಮಾಡಿದರೆ, ಉತ್ತಮ […]

Continue Reading

ಬದಲಿ ವಿದ್ಯಾರ್ಥಿನಿಯಾಗಿ ಪರೀಕ್ಷೆಗೆ ಹಾಜರು: ಸಂಪೂರ್ಣ ಪೊಲೀಸ್ ಕಸ್ಟಡಿಗೆ

ಕಲಬುರಗಿ: ದ್ವಿತೀಯ ಪಿಯುಸಿ ರಾಜ್ಯಶಾಸ್ತ್ರ ಪ್ರಶ್ನೆ ಪತ್ರಿಕೆಯ ಪರೀಕ್ಷೆಯಲ್ಲಿ ಬದಲಿ ವಿದ್ಯಾರ್ಥಿನಿಯಾಗಿ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣ ಪಾಟೀಲ ಅವರನ್ನು ಇಲ್ಲಿನ 4ನೇ ಜೆಎಂಎಫ್‌ಸಿ ನ್ಯಾಯಾಲಯ ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ. ನಗರದ ಮಿಲಿಂದ್ ಶಾಲೆಯಲ್ಲಿ ಅರ್ಚನಾ ಎಂಬ ವಿದ್ಯಾರ್ಥಿನಿಯ ಬದಲಿಗೆ ಅಕ್ರಮವಾಗಿ ಸಂಪೂರ್ಣ ಪಾಟೀಲ ಬರೆಯುತ್ತಿರುವುದನ್ನು ದಲಿತ ಸೇನೆ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ. ಆಕ್ಷೇಪ ವ್ಯಕ್ತಪಡಿಸುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತು. ತಕ್ಷಣ ಪೊಲೀಸರು […]

Continue Reading

ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಹಿಂಪಡೆಯಲು ಒತ್ತಾಯ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಹೂಗುಚ್ಛಗಳು ನ್ಯಾಷನಲ್‌ ವೇಸ್ಟ್‌ ಎಂಬ ಹೇಳಿಕೆ ನೀಡಿರುವುದು ಸರಿಯಲ್ಲ. ಅವರು ತಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ ಅರವಿಂದ್‌ ಒತ್ತಾಯಿಸಿದ್ದಾರೆ. ತೇಜಸ್ವಿ ಸೂರ್ಯ ಅವರು ತಮ್ಮ ಮದುವೆಯ ಅರತಕ್ಷತೆಗೆ ಫೇಸ್‌ಬುಕ್‌ ಲೈವ್‌ ಮೂಲಕ ಸಾರ್ವಜನಿಕರನ್ನು ಆಹ್ವಾನಿಸುವ ಸಂದರ್ಭದಲ್ಲಿ ಹೂಗುಚ್ಛಗಳು ನ್ಯಾಷನಲ್‌ ವೇಸ್ಟ್‌, ಅವುಗಳನ್ನು ನೀಡುವುದು ಬೇಡವೆಂದು ಮನವಿ ಮಾಡಿದ್ದರು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು […]

Continue Reading

ಸದೃಢ ಆರೋಗ್ಯ– ಮಾದಕವಸ್ತು ಮುಕ್ತ ಕರ್ನಾಟಕಕ್ಕಾಗಿ ಓಟ

ಕಲಬುರಗಿ: ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಅಪರಾಧ ತಡೆ ಮತ್ತು ತಂಬಾಕು ನಿಷೇಧ ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿದ್ದ ಮ್ಯಾರಥಾನ್ – 2025 ಓಟದಲ್ಲಿ 5 ಕಿ.ಮೀ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಹೆಬ್ಬಾಳ ಮಕ್ಕಳು ಭಾಗವಹಿಸಿ ಕ್ರಮವಾಗಿ ಮಹೇಶ 6ನೇ ಸ್ಥಾನ ಮತ್ತು ಸಮೀರ್ 8ನೇ ಸ್ಥಾನ ಪಡೆದಿದ್ದಕ್ಕಾಗಿ ಕಲಬುರಗಿ ನಗರ ಪೊಲಿಸ್ ಆಯುಕ್ತರಿಂದ ಪದಕ ಮತ್ತು ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಿಗೆ ಇಂದು (ಸೋಮವಾರ) ಶಾಲೆಯಲ್ಲಿ ಪ್ರಭಾರಿ ಮುಖ್ಯ ಗುರುಗಳು ಮತ್ತು ಶಿಕ್ಷಕರಿಂದ […]

Continue Reading

ಭಾರತೀಯರ ಕನಸು ನನಸು: ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ

ದುಬೈ: 140 ಕೋಟಿ ಭಾರತೀಯರ ಕನಸು ನನಸಾಗಿದೆ. ನ್ಯೂಜಿಲೆಂಡ್ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕೆ ಇದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 […]

Continue Reading

3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್‌: ಹೆಣ್ಣು ಜನಿಸಿದರೆ 50 ಸಾವಿರ, ಗಂಡು ಜನಿಸಿದರೆ ಹಸು ಗಿಫ್ಟ್‌

ಅಮರಾವತಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ತೆಲುಗು ದೇಶಂ ಪಕ್ಷದ ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಅವರು, 3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್‌ ಕೊಡುಗೆ ಘೋಷಣೆ ಮಾಡಿದ್ದಾರೆ. ಇದು ಆಂಧ್ರಪ್ರದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ, ಮಹಿಳೆಯೊಬ್ಬರು 3ನೇ ಮಗುವಿಗೆ ಜನ್ಮ ನೀಡಿದರೆ ವಿಶೇಷ ಉಡುಗೊರೆ ನೀಡಲಾಗುವುದು. ಹೆಣ್ಣು ಮಗುವಿಗೆ ಜನ್ಮ ನೀಡಿದರೆ ನನ್ನ ಸ್ವಂತ ವೇತನದಲ್ಲಿ 50 ಸಾವಿರ ರೂ, ಗಂಡು ಮಗುವಿಗೆ […]

Continue Reading