ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

ಸುದ್ದಿ ಸಂಗ್ರಹ ಬೀದರ್ ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ನಾನು ಯಾವತ್ತೂ ಫೋನ್ ಮಾಡಿಲ್ಲ. ಸಾಧ್ಯವಾದಷ್ಟು ವಸ್ತುನಿಷ್ಠೆ, ಸತ್ಯವನ್ನು ಜನರ ಮುಂದೆ ಇಡುವ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೀದರ್‌ನಲ್ಲಿ ನಡೆದ 40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌. ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದಿವಾ ಎಂದು […]

Continue Reading

ಏ.11ರಂದು ಬೀದರ್, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ

ಸುದ್ದಿ ಸಂಗ್ರಹ ಬೀದರ್/ಕಲಬುರಗಿ ಏ.11ರಂದು ಸಿಎಂ ಸಿದ್ದರಾಮಯ್ಯ ಅವರು ಬೀದರ್ ಹಾಗೂ ಕಲಬುರಗಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಏ.11ರಂದು ಬೀದರ್‌ನಲ್ಲಿ ನಡೆಯಲಿರುವ 40ನೇ ಪತ್ರಕರ್ತರ ಸಮ್ಮೇಳನದಲ್ಲಿ ಭಾಗಿಯಾಗಿ ಉದ್ಘಾಟನೆ ಮಾಡಲಿದ್ದಾರೆ. ನಂತರ ಬೀದರ್‌ನಿಂದ ಕಲಬುರಗಿಗೆ ತೆರಳಲಿದ್ದಾರೆ. ಈ ವೇಳೆ ಕಲಬುರಗಿಯ ಚಿತ್ತಾಪುರದಲ್ಲಿ ನೂತನವಾಗಿ ನಿರ್ಮಿಸಿರುವ ಭೋಜಲಿಂಗೇಶ್ವರರ ದೇವಸ್ಥಾನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಕೋಡಿ ಮಹಾಸಿದ್ದೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ರಾತ್ರಿ ಕಲಬುರಗಿಯಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

Continue Reading

ಬಗೆದಷ್ಟು ಬಯಲಾಗ್ತಿದೆ ಜಿಮ್ ಟ್ರೈನರ್ ಬಂಡವಾಳ: 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಸಮೀರ್

ಸುದ್ದಿ ಸಂಗ್ರಹ ಹುಬ್ಬಳ್ಳಿಲವ್ ಜಿಹಾದ್ ಪ್ರಕರಣದಲ್ಲಿ ಜಿಮ್ ಟ್ರೈನರ್ ಬಂಡವಾಳ ಬಗೆದಷ್ಟು ಬಯಲಾಗುತ್ತಿದೆ. ಇದೀಗ ಸಂತ್ರಸ್ತೆಗೆ ಸಮೀರ್ 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಎಂದು ತಿಳಿದುಬಂದಿದೆ. ಪೊಲೀಸರು ಸಮೀರ್ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಮತ್ತಷ್ಟು ಬಯಲಾಗಿದೆ. ಮೊಬೈಲ್‌ನಲ್ಲಿ ಕೆಲ ರೋಚಕ ವಿಡಿಯೋಗಳು, ಯುವತಿಯರೊಂದಿಗಿನ ವಾಟ್ಸಪ್ ಚಾಟ್‌ಗಳು ಪತ್ತೆಯಾಗಿದೆ. ಮೊಬೈಲ್‌ನಲ್ಲಿ ಸಂತಸ್ತೆ ಗರ್ಭಪಾತದ ಮಾತ್ರೆ ತೆಗೆದುಕೊಳ್ಳುತ್ತಿರುವ ವಿಡಿಯೋ ಕೂಡ ಸಿಕ್ಕಿವೆ. ಸಮೀರ್ ಪ್ರತಿ ಸಾರಿ ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಗರ್ಭಪಾತ […]

Continue Reading

ಹನುಮ ಜಯಂತಿ: ಅಂಜನಾದ್ರಿಗೆ ಆಗಮಿಸಿ ಮಾಲೆ ವಿಸರ್ಜಿಸಿದ ಭಕ್ತರು

ಸುದ್ದಿ ಸಂಗ್ರಹ ಕೊಪ್ಪಳ ಹನುಮ ಜಯಂತಿ ಹಿನ್ನೆಲೆ ಇಂದು ಅಂಜನಾದ್ರಿಗೆ ಹನುಮ ಮಾಲಾಧಾರಿಗಳು ಆಗಮಿಸಿ ಮಾಲೆಯನ್ನು ವಿಸರ್ಜನೆ ಮಾಡಿದರು. ರಾಮಾಯಣ ಕಾಲದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಜಯಂತಿ ಅಂಗವಾಗಿ ಹನುಮಮಾಲೆಯನ್ನು ಧಾರಣೆ ಮಾಡಿರುವ ನೂರಾರು ಮಾಲಾಧಾರಿಗಳು ಆಗಮಿಸಿ ಮಾಲೆಯನ್ನು ವಿಸರ್ಜನೆ ಮಾಡಿದರು. ಹನುಮ ಜಯಂತಿಯ ಅಂಗವಾಗಿ 11 ದಿನಗಳ ಮುಂಚಿತವಾಗಿಯೇ ಹನುಮಮಾಲೆ ಧಾರಣೆ ಮಾಡಿರುತ್ತಾರೆ. ಮಾಲಾಧಾರಿಗಳು ಕಠಿಣ ವ್ರತ ಕೈಗೊಂಡು ಹನುಮನ ಆರಾಧನೆ ಮಾಡುತ್ತಾರೆ. ಹನುಮ ಜಯಂತಿಯಂದು ಮಾಲಾಧಾರಿಗಳು […]

Continue Reading

ಹೊನ್ನಾಳಿಯಲ್ಲಿ ಸಿನಿಮಿಯ ರೀತಿಯ ದರೋಡೆ: ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

ಸುದ್ದಿ ಸಂಗ್ರಹ ದಾವಣಗೆರೆ ಕಾರು ಅಡ್ಡಗಟ್ಟಿ 38 ಲಕ್ಷ ರೂ. ಹಣ ದೋಚಿದ ಘಟನೆ ಹೊನ್ನಾಳಿ ತಾಲೂಕಿನ ಅರಕೆರೆ ಕಾಲೋನಿಯ ಸಮೀಪದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಭದ್ರಾವತಿಯ ಮಾಲತೇಶ್ ಹಣ ಕಳೆದುಕೊಂಡವರು. ಮಾಲತೇಶ್ ಅವರ ಸ್ನೇಹಿತ ಮಾನಚಾರಿ ಜೊತೆ ಹಗರಿಬೊಮ್ಮನಹಳ್ಳಿಯಲ್ಲಿ ತಮ್ಮ ಪೂರ್ವಿಕರ ಜಮೀನು ಮಾರಿ, ಓಮಿನಿ ಕಾರಲ್ಲಿ ಹಣ ತರುತ್ತಿದ್ದರು. 76 ಲಕ್ಷ ರೂ. ಹಣವನ್ನು ಒಂದು ಬ್ಯಾಗಿನಲ್ಲಿ 38 ಲಕ್ಷ ರೂ. ಹಣವನ್ನು ಮತ್ತೊಂದು ಬ್ಯಾಗಿನಲ್ಲಿ ಹಾಗೂ ಜೆಬಿನಲ್ಲಿ ಎರಡು ಲಕ್ಷ ಇಟ್ಟುಕೊಂಡು ಬರುತ್ತಿದ್ದರು. […]

Continue Reading

ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಮೂವರ ಕೈಕಾಲು ಮುರಿತ, ಹಲವರಿಗೆ ಗಾಯ

ಸುದ್ದಿ ಸಂಗ್ರಹ ಶಿವಮೊಗ್ಗ ಭದ್ರಾವತಿಯ ಕಾಗೇಹಳ್ಳದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ಅಪಘಾತದಲ್ಲಿ ಮೂವರು ಪ್ರಯಾಣಿಕರ ಕೈ, ಕಾಲು ಮುರಿದಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ದಾವಣಗೆರೆಯಿಂದ ಭದ್ರಾವತಿಗೆ ಬಸ್ ಬರುತ್ತಿತ್ತು. ಕಾಗೆಹಳ್ಳದ ಬಳಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಇಂದು ಮಧ್ಯಾಹ್ನ ಸುಮಾರು 12:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಾಲಕ‌, ಕಂಡಕ್ಟರ್‌ ಸೇರಿ ಒಟ್ಟು 35 ಜನ ಪ್ರಯಾಣಿಕರು […]

Continue Reading

8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ: 600 ಚೀಲಗಳಿದ್ದ ಲಾರಿ ಜಪ್ತಿ

ಸುದ್ದಿ ಸಂಗ್ರಹ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹಾಲಾಪುರದಿಂದ ಅಂದಾಜು 8 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು  ಪೊಲೀಸರು ಜಪ್ತಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲಾರಿಯನ್ನು ಹಿಂಬಾಲಿಸಿ, ಕವಿತಾಳ-ಮಸ್ಕಿ ರಸ್ತೆಯ ಜಂಗಮರ ಹಳ್ಳಿ ಕ್ರಾಸ್ ಬಳಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ 600 ಅಕ್ಕಿ ಚೀಲಗಳಿದ್ದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಅಂದಾಜು 8 ಲಕ್ಷ ರೂ. ಮೌಲ್ಯದ 30 ಟನ್ ಪಡಿತರ ಅಕ್ಕಿಯಿದ್ದ 600 ಚೀಲಗಳನ್ನು ಪೊಲೀಸರು […]

Continue Reading

ಸೈಬರ್‌ ವಂಚಕರ ಖೆಡ್ಡಾಕ್ಕೆ ಬಿದ್ದು ಕೋಟಿ ರೂಪಾಯಿ ಕಳೆದುಕೊಂಡ ಭೂಪ

ಸುದ್ದಿ ಸಂಗ್ರಹ ಚಿಕ್ಕಮಗಳೂರು ಕಡೂರು ತಾಲೂಕಿನ ಶಿವಪುರ ಗ್ರಾಮದ ವ್ಯಕ್ತಿಯೊಬ್ಬ ಅಲ್ಪ ಅವಧಿಯಲ್ಲಿ ಹೆಚ್ಚಿನ ಲಾಭ ಮಾಡುವ ಆಸೆಗೆ ಬಿದ್ದು, ಆನ್‌ಲೈನ್‌ ಟ್ರೇಡಿಂಗ್‍ ನಂಬಿ 1,28,10,000 ರೂ. ಹಣ ಕಳೆದುಕೊಂಡಿದ್ದಾನೆ. ಗ್ರಾಮದ ಕಲ್ಲೇಗೌಡ ಹಣ ಕಳೆದುಕೊಂಡ ನತದೃಷ್ಟ. ಈತ ಫೇಸ್ಬುಕ್‌ನಲ್ಲಿ ಟ್ರೇಡಿಂಗ್ ಲಿಂಕ್ ನೋಡಿದ್ದ. ಅದನ್ನ ಕ್ಲಿಕ್‌ ಮಾಡಿ ಬಳಿಕ ವಾಟ್ಸಾಪ್‌ನಲ್ಲಿ ಗ್ರೂಪ್‌ ಒಂದಕ್ಕೆ ಸೇರಿದ್ದ. ಅಲ್ಲಿಂದ ಟ್ರೇಡಿಂಗ್ ಲಿಂಕ್‍ನಲ್ಲಿ ಅಕೌಂಟ್ ತೆರೆದಿದ್ದ. ಆರಂಭದಲ್ಲಿ 60 ಸಾವಿರ ರೂ. ಹಣ ಹಾಕಿದ್ದ. ಈ ವೇಳೆ 17,800 ರೂ. […]

Continue Reading

ಚಿನ್ನಾಭರಣ ಕಳ್ಳತನ, ಗಾಂಜಾ ಸಾಗಾಟ: ಪ್ರತ್ಯೇಕ ಪ್ರಕರಣಗಳಲ್ಲಿ 69 ಲಕ್ಷ ಮೌಲ್ಯದ ವಸ್ತು ಜಪ್ತಿ, ನಾಲ್ವರು ಅರೆಸ್ಟ್

ಸುದ್ದಿ ಸಂಗ್ರಹ ಬೀದರ್ ಜಿಲ್ಲೆಯಲ್ಲಿ ಚಿನ್ನಾಭರಣ ಕಳ್ಳತನ, ಗಾಂಜಾ ಸಾಗಾಟದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿ, 69 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಹೈದ್ರಾಬಾದ್‌ನಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. 83 ಕೆ.ಜಿ 670 ಗ್ರಾಂನ ಒಟ್ಟು 41 ಲಕ್ಷ ರೂ.ಗೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಓರ್ವ ಆರೋಪಿ ಬಂಧಿಸಿದ್ದು, ಇನ್ನೊರ್ವ ಆರೋಪಿ ಪರಾರಿಯಾಗಿದ್ದಾನೆ. ಈ ಕುರಿತು ಮನ್ನಳ್ಳಿ ಪೊಲೀಸ್ […]

Continue Reading

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ: ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

ಸುದ್ದಿ ಸಂಗ್ರಹ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಣೆಬೆನ್ನೂರಿನ ಗೌರಿಶಂಕರ ನಗರದಲ್ಲಿ ಮಳೆ ಸುರಿದ ಪರಿಣಾಮ ರಸ್ತೆಯ ಮೇಲೆ ಹಾಗೂ ಮನೆಯ ಮುಂಭಾಗ ಮರಗಳು ಹಾಗೂ ವಿದ್ಯುತ್ ಕಂಬಗಳು ಬಿದ್ದಿವೆ. ಮಳೆ ಬೀಳುವ ಸಮಯದಲ್ಲಿ ಜನರು ಇಲ್ಲದಿದ್ದರಿಂದ ಭಾರಿ ಅನಾಹುತಗಳು ತಪ್ಪಿವೆ. ವಿದ್ಯುತ್ ಕಂಬಗಳು ಬಿದ್ದ ಹಿನ್ನೆಲೆ ವಿದ್ಯುತ್ ವ್ಯತ್ಯಯ ಉಂಟಾಗಿ ಜನರಿಗೆ ಸಮಸ್ಯೆ ಉಂಟಾಯಿತು. ಅಲ್ಲದೆ ರಸ್ತೆಗಳ ಮೇಲೆ ಕಂಬಗಳು […]

Continue Reading