ಕರ್ತವ್ಯದಿಂದ ನಿವೃತ್ತಿಯಾಗುವ ದಿನವೆ ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಇಂಜಿನಿಯರ್

ಧಾರವಾಡ: ಕರ್ತವ್ಯದಿಂದ ನಿವೃತ್ತಿಯಾದ ದಿನವೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ)ಯ ಉತ್ತರ ವಲಯ ಮುಖ್ಯ ಇಂಜಿನಿಯರ್ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ ಘಟನೆ ಶನಿವಾರ ನಡೆದಿದೆ. ಮುಖ್ಯ ಅಭಿಯಂತರ ಎಚ್ ಸುರೇಶ ಅವರ ಕಚೇರಿ, ಕೆಸಿಡಿ ಗಣಪತಿ ದೇವಸ್ಥಾನದ ಹಿಂಭಾಗದಲ್ಲಿರುವ ಸರಕಾರಿ ನಿವಾಸದ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ತಂಡಗಳು ದಾಳಿ ಮಾಡಿದ್ದು, ಕೋಟ್ಯಾಂತರ ಮೌಲ್ಯದ ಸ್ಥಿರಾಸ್ತಿ ಕಾಗದ ಪತ್ರ, ಚರಾಸ್ತಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಕರ್ತವ್ಯದಿಂದ ನಿವೃತ್ತಿ ಹಿನ್ನೆಲೆಯಲ್ಲಿ ನಿವಾಸದಲ್ಲಿ ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿತ್ತಲ್ಲದೆ ಇಲಾಖೆ ಸಿಬ್ಬಂದಿಗಳಿಂದ ಬೀಳ್ಕೊಡುಗೆ […]

Continue Reading

ಕೊರೊನಾ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ: ಮಕ್ಕಳಿಗೆ ರಜೆ, ಗರ್ಭಿಣಿಯರಿಗೆ ಮಾಸ್ಕ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ಎಲ್ಲ ಗರ್ಭಿಣಿಯರು, ವೃದ್ಧರು, ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆ ಉಳ್ಳವರು ಮಾಸ್ಕ್ ಧರಿಸಬೇಕು. ಶಾಲೆಗೆ ಬರುವ ಮಕ್ಕಳಿಗೆ ಜ್ವರ, ಕೆಮ್ಮು ಸೇರಿದಂತೆ ಇತರೆ ಕೋವಿಡ್ ಲಕ್ಷಣಗಳಿದ್ದಲ್ಲಿ ಅಂಥ ಮಕ್ಕಳಿಗೆ ರಜೆ ಕೊಟ್ಟು ಮನೆಗೆ ಕಳುಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸಂಬಂಧಿತ ಪರಿಸ್ಥಿತಿ ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕಾವೇರಿ ನಿವಾಸದಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವರು, ಹಿರಿಯ ಅಧಿಕಾರಿಗಳು […]

Continue Reading

ಬೆಂಗಳೂರಿನಲ್ಲಿ ಕೊರೋನಾಗೆ ಮೊದಲ ಬಲಿ

ಬೆಂಗಳೂರು: ಜಗತ್ತನ್ನೇ ತಲೆಕೆಳಗೆ ಮಾಡಿಬಿಟ್ಟಿದ್ದ ಕೊರೋನಾ ಮತ್ತೆ ಎಂಟ್ರಿ ಕೊಟ್ಟಿದೆ, ಮತ್ತೆ ಆತಂಕ ಮನೆ ಮಾಡಿದೆ. ಇದೀಗ ಕೋವಿಡ್ ಸೋಂಕಿಗೆ ತುತ್ತಾಗಿ ವೃದ್ಧ ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ವೈಟ್‌ಫೀಲ್ಡ್‌ ಮೂಲದ 84 ವರ್ಷದ ವೃದ್ಧ ಉಸಿರಾಟದ ಸಮಸ್ಯೆ ಹಾಗೂ ಅಂಗಾಂಗ ವೈಫಲ್ಯ ಖಾಯಿಲೆಗಳಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಸಹ ಕೋವಿಡ್‌ಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೇ.17 ರಂದು ಕೋವಿಡ್‌ಗೆ ವೃದ್ಧ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 108 ಜನರಿಗೆ ಕೋವಿಡ್ ಟೆಸ್ಟ್ […]

Continue Reading

ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ: ಇನ್ನುಮುಂದೆ ಕೋವಿಡ್ ಟೆಸ್ಟ್ ಕಡ್ಡಾಯ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್​ ಟೆಸ್ಟ್​ ಮಾಡುವಂತೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್​ ಗುಂಡೂರಾವ್​, ಒಂದು ತಿಂಗಳಿಗಾಗುವಷ್ಟು ಟೆಸ್ಟ್ ಕಿಟ್ ತೆಗೆದಿಡುವಂತೆ ಸೂಚನೆ ಎಲ್ಲಾ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. […]

Continue Reading

ತಾಳಿ ಕಟ್ಟುವಾಗ ಮದುವೆ ಬೇಡ ಎಂದ ವಧು, ಮದುಮಗ ಕಣ್ಣೀರು

ಹಾಸನ: ತಾಳಿ ಕಟ್ಟುವಾಗ ವಧು ನನಗೆ ಈ ಮದುವೆ ಬೇಡ ಎಂದ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ತಾಳಿ ಕಟ್ಟುವ ಮುಹೂರ್ತಕ್ಕೂ ಮುನ್ನ ಯುವತಿಗೆ ಒಂದು ಫೋನ್ ಕರೆ ಬಂದಿದೆ. ಆಗ ವಧು ತಕ್ಷಣವೆ ನನಗೆ ಈ ಮದುವೆ ಬೇಡ ಎಂದು ವಧು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೆತ್ತವರು, ಸಂಬಂಧಿಕರು ಯಾರು ಏನೇ ಹೇಳಿದರು ಕೇಳದ ವಧು ರೂಂಗೆ ಹೋಗಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾರೆ. ತಾಳಿ ಕೈಯಲ್ಲಿ ಹಿಡಿದು ಮಧುಮಗ […]

Continue Reading

ಪಶು ಆಸ್ಪತ್ರೆಗೆ ಬಂದು ವೈದ್ಯನ ಬಳಿ ತನ್ನ ಬಾಧೆ ತೋಡಿಕೊಂಡ ಮಂಗ

ಬಾಗಲಕೋಟೆ: ಮನುಷ್ಯರಿಗೆ ಆರೋಗ್ಯ ಸಮಸ್ಯೆಯಾದರೆ ಕೂಡಲೆ ಆಸ್ಪತ್ರೆಗೆ ಹೋಗುತ್ತಾರೆ. ವೈದ್ಯರಿಗೆ ಸಮಸ್ಯೆ ಬಗ್ಗೆ ಹೇಳಿ ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುತ್ತಾರೆ. ಅದೆ ರೀತಿ ಇಲ್ಲೊಂದು ಮಂಗ ನೇರವಾಗಿ ಪಶು ಆಸ್ಪತ್ರೆಗೆ ಹೋಗಿದೆ. ತನಗಾದ ಸಮಸ್ಯೆಯ ಬಗ್ಗೆ ವೈದ್ಯರಿಗೆ ತಾನೆ ಸನ್ನೆ ಮೂಲಕ ತೋರಿಸಿದೆ. ಬಳಿಕ ಚಿಕಿತ್ಸೆ ಪಡೆದುಕೊಂಡು ಹೋಗಿದೆ. ಸದ್ಯ ಈ ಘಟನೆ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಮಂಗಗಳು ಮನುಷ್ಯರಷ್ಟೆ ಬುದ್ದಿ ಜೀವಿಗಳು ಅನ್ನೊದಕ್ಕೆ ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಗಡೂರು ಗ್ರಾಮದ ಪಶು ಆಸ್ಪತ್ರೆಯಲ್ಲಿ ನಡೆದ ಈ […]

Continue Reading

ಸತ್ತಂತೆ ನಟಿಸಿ ಚಿರತೆಯನ್ನೆ ಯಾಮಾರಿಸಿದ ಸಾಕು ನಾಯಿ

ತೀರ್ಥಹಳ್ಳಿ: ಚಿರತೆ ದಾಳಿಯಿಂದ ಪವಾಡ ಸದೃಶದಂತೆ ನಾಯಿಯೊಂದು ಬದುಕಿದ ಘಟನೆ ಹೊದಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಾಪುರ ಗ್ರಾಮದ ಮನೆಯ ಮುಂದೆ ನಡೆದಿದೆ. ತಾಲೂಕಿನ ಹೊದಲ ಅರಳಾಪುರ ಗ್ರಾಮದ ಅಂತೋಣಿ ಎಂಬುವರ ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆ ತಿನ್ನಲು ಬಂದಿತ್ತು. ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿಯ ಕುತ್ತಿಗೆಗೆ ಚಿರತೆ ಬಾಯಿ ಹಾಕಿದೆ. ಆಗ ಜೀವ ಹೋಗುವ ಭಯವಾದರೂ ನಾಯಿ ಸತ್ತಂತೆ ಮಲಗಿದೆ, ಅದನ್ನು ನೋಡಿದ ಚಿರತೆ ನಾಯಿ ಸತ್ತು ಹೋಗಿದೆ ಎಂದು ಭಾವಿಸಿ […]

Continue Reading

ಪೊಲೀಸಪ್ಪನನ್ನು ಮದುವೆಯಾಗಿ ಫಜೀತಿಗೆ ಸಿಲುಕಿದ ಮಹಿಳೆ: ನಾಪತ್ತೆಯಾದ ಗಂಡನನ್ನು ಹುಡುಕಿಕೊಡುವಂತೆ ಅಧಿಕಾರಿಗಳ ಮೊರೆ ಹೋದ ಪತ್ನಿ

ಚಿಕ್ಕಬಳ್ಳಾಪುರ: ಆಕೆ ಪದವೀಧರೆ. ಆತ ಪೊಲೀಸ್ ಕಾನ್‌ಸ್ಟೆಬಲ್‌. ಅವರಿಬ್ಬರು ಕಾಲೇಜಿನಲ್ಲಿ ಪರಿಚಯವಾಗಿ ಪ್ರೀತಿ, ಪ್ರೇಮವೆಂದು ಸುತ್ತಾಡಿ ಬಳಿಕ ಮದುವೆ ಮಾಡಿಕೊಂಡಿದ್ದರು. ಅವರಿಬ್ಬರು ಮದುವೆಯಾಗಿ ಇನ್ನೂ ಒಂದು ವರ್ಷ ಕೂಡ ಆಗಿಲ್ಲ. ಆಗಲೆ ನೀನು ಬೇಡ, ನಿನ್ನ ಜೊತೆ ಸಂಸಾರವೂ ಬೇಡ ಎಂದು ಪೊಲೀಸ್ ಗಂಡ ಕಾಣೆಯಾಗಿದ್ದಾರೆ. ಇದರಿಂದ ವಿಚಲಿತಳಾಗಿರುವ ಪತ್ನಿ, ಪೊಲೀಸ್ ಗಂಡನನ್ನು ಹುಡುಕಿಕೊಡುವಂತೆ ಅವಲತ್ತುಕೊಂಡಿದ್ದಾರೆ. 27 ಆಗಸ್ಟ್ 2024 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪೊಲೀಸ್‍ ಠಾಣೆಯ ಕಾನ್ಸ್‍ಟೇಬಲ್ ತಿಮ್ಮಣ್ಣ ಬೂಸರೆಡ್ಡಿ ಹಾಗೂ ಅದೆ ಜಿಲ್ಲೆಯ […]

Continue Reading

ನನ್ನ ವೃತ್ತಿ ನನ್ನ ಭವಿಷ್ಯ ಪುಸ್ತಕವನ್ನು ಸಚಿವ ಡಾ.ಎಚ್.ಸಿ ಮಹದೇವಪ್ಪ ಬಿಡುಗಡೆ

ಬೆಂಗಳೂರು: ನನ್ನ ವೃತ್ತಿ ನನ್ನ ಭವಿಷ್ಯ ಕಾರ್ಯಕ್ರಮದ ಪುಸ್ತಕವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ ಬಿಡುಗಡೆಗೊಳಿಸಿದರು. ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಅನಾಹತ ಯುನೈಟೆಡ್ ಎಫರ್ಟ್ಸ್ ಫೌಂಡೇಶನ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಇವರ ಸಹಭಾಗಿತ್ವದಲ್ಲಿ   ರಾಜ್ಯದ ಎಲ್ಲಾ ವಸತಿ ಶಾಲೆಗೆ ಅನುಷ್ಠಾನಗೊಂಡಿರುವ ನನ್ನ ವೃತ್ತಿ ನನ್ನ ಭವಿಷ್ಯ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಕ್ಕಳಿಗೆ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಶಾಲಾ ಹಂತದಲ್ಲೇ ತಿಳಿಸಿದರೆ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ. ನಾವು ವಿದ್ಯಾಭ್ಯಾಸ ಮಾಡುವ ಸಮಯದಲ್ಲಿ […]

Continue Reading

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರ ಮುಚ್ಚಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಔಷಧ ವಿತರಣೆ ಮಾಡುತ್ತಿರುವುದರಿಂದ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವಿಲ್ಲ ಎಂದು ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶ್ರೀಪತಿ ಪಿ.ಕೆ ಅವರು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳ ವೈದ್ಯರು ರೋಗಿಗಳಿಗೆ ಯಾವುದೆ ಔಷಧಿ ಹೊರಗಿನಿಂದ ಖರೀದಿಸಲು ಶಿಫಾರಸ್ಸು ಮಾಡದಂತೆ ನೋಡಿಕೊಳ್ಳುವುದು […]

Continue Reading