ಕಲಾ ವಿಭಾಗದಲ್ಲಿ ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ: 597 ಅಂಕ ಪಡೆದ ಸಂಜನಾಬಾಯಿ

ವಿಜಯನಗರ: ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ, ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ. 600ಕ್ಕೆ 597 ಅಂಕ ಪಡೆಯುವ ಮೂಲಕ ಸಂಜನಾಬಾಯಿ ಕಲಾ ವಿಭಾಗದದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಸಂಜನಾ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದವರಾಗಿದ್ದು, ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಕೆ ನಿರ್ಮಲಾ ದ್ವಿತೀಯ […]

Continue Reading

ವಾಟರ್ ಬಾಟಲ್ ನೀರು ಅಸುರಕ್ಷಿತ: ಆಹಾರ ಇಲಾಖೆಯ ವರದಿಯಲ್ಲಿ ಆಘಾತಕಾರಿ ಅಂಶ

ಬೆಂಗಳೂರು: ನಾವು ಪ್ರತಿನಿತ್ಯ ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಾಂಶ ಹಾಗೂ ಕ್ಯಾನ್ಸರ್ ಕಾರಕ ಅಂಶಗಳಿರುವ ಬಗ್ಗೆ ಆಹಾರ ಇಲಾಖೆಯ ಪ್ರಯೋಗಾಲಯ ವರದಿಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಆಘಾತಕಾರಿ ವಿಚಾರಗಳು ಬಹಿರಂಗವಾಗುತ್ತಲೇ ಇವೆ. ಈಗ ವಾಟರ್ ಬಾಟಲ್ ನೀರಿನ ಸರದಿ. ಬಾಟಲ್ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಬಾಟಲ್ ನೀರಿನಲ್ಲಿ ಮಿನರಲ್ ಕೂಡ ಇರುವುದಿಲ್ಲ. ಸಾಕಷ್ಟು ಕಂಪನಿಗಳ ವಾಟರ್ ಬಾಟಲ್ ಅಸುರಕ್ಷಿತ ಎಂದು ತಿಳಿಸಿದೆ. ಜೊತೆಗೆ ಕೋವಾ ಕೂಡ […]

Continue Reading

400 ರೂ ಐಸ್‌ ಕ್ರೀಮ್‌ಗಾಗಿ 40 ಸಾವಿರ ಕಳೆದುಕೊಂಡ ಮಹಿಳೆ

ಬೆಂಗಳೂರು: ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಐಸ್‌ ಕ್ರೀಮ್‌ ಖರೀದಿಸಲು ಹೋಗಿ 40 ಸಾವಿರ ರೂ. ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಮಾ.28ರಂದು ಬಿಗ್‌ ಬಾಸ್ಕೆಟ್ ಆ್ಯಪ್‌ನಲ್ಲಿ 2 ಕೆ.ಜಿ. ಕಿತ್ತಲೆ ಹಣ್ಣು, 250 ಗ್ರಾಂ ಕೊತ್ತಂಬರಿ ಸೊಪ್ಪು ಹಾಗೂ 1 ಕೆ.ಜಿ. ಐಸ್‌ ಕ್ರೀಮ್‌ ಅನ್ನು ಮಹಿಳೆ ಆರ್ಡರ್‌ ಮಾಡಿ, ಹಣವನ್ನೂ ಪಾವತಿಸಿದ್ದರು. ಆದರೆ, ಡೆಲಿವರಿ ಬಾಯ್‌ ಐಸ್‌ ಕ್ರೀಮ್‌ ಹೊರತುಪಡಿಸಿ ಉಳಿದೆಲ್ಲಾ ವಸ್ತುಗಳನ್ನು ತಂದುಕೊಟ್ಟಿದ್ದ. ಹೀಗಾಗಿ ಗೂಗಲ್‌ನಲ್ಲಿ ಬಿಗ್‌ ಬಾಸ್ಕೆಟ್‌ ಕಸ್ಟಮರ್‌ ಕೇರ್‌ ಸಂಖ್ಯೆ ಪಡೆದು ಕರೆ […]

Continue Reading

ನರೇಗಾ ಕಾರ್ಮಿಕರಿಗೆ 30% ಕೆಲಸದ ಪ್ರಮಾಣ ಕಡಿತ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 30% ರಷ್ಟು ಹಾಗೂ ಜೂನ್‌ನಲ್ಲಿ 20% ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ […]

Continue Reading

ಚಂಡಮಾರುತ ಸೃಷ್ಟಿ: ರಾಜ್ಯದ 21 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ಸಮುದ್ರದ ಎರಡು ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ, ಸ್ಪಷ್ಟ ಚಂಡಮಾರುತ ಪರಿಚಲನೆ ದಾಖಲಾಗಿದೆ. ಈ ಕಾರಣದಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ 05 ದಿನಗಳ ಕಾಲ (ಏಪ್ರಿಲ್ 8 ರವರೆಗೆ) ಗುಡುಗು ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆ ಅಬ್ಬರಿಸಲಿದೆ. ಕರ್ನಾಟಕದಲ್ಲಿ ಇಂದಿನಿಂದ ಏಪ್ರಿಲ್ 6ರವರೆಗೆ (ಗುರುವಾರ-ರವಿವಾರ) 21 ಜಿಲ್ಲೆಗಳಿಗೆ ಭಾರಿ ಮಳೆ ಪ್ರಯುಕ್ತ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಬಿಸಿಲಿನ ತಾಪ ಹೆಚ್ಚಾಗಿತ್ತು, ಈ ಮಧ್ಯೆ ಬದಲಾದ ಹವಾಮಾನ ವೈಪರಿತ್ಯದ ಪ್ರಭಾವದಿಂದಾಗಿ […]

Continue Reading

ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಬುಧವಾರದಿಂದ ಒಂದು ವಾರ ಭಾರಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಚುರುಕುಗೊಂಡಿರುವುದರಿಂದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಂಗಳವಾರದಿಂದಲೇ ವಿವಿಧೆಡೆ ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ. ಬುಧವಾರ ಹಾಗೂ ಗುರುವಾರದಿಂದ ಮಳೆಯ ಪ್ರಮಾಣ ಹೆಚ್ಚಾಗುವ ಲಕ್ಷಣ ಕಂಡು ಬಂದಿದೆ. ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ […]

Continue Reading

ಸಿಎಂ ಸಚಿವಾಲಯದ ಕರ್ತವ್ಯದಿಂದ 30 ಸಿಬ್ಬಂದಿ ವಜಾ

ಬೆಂಗಳೂರು: ಸಿಎಂ ಸಚಿವಾಲಯದ ಕರ್ತವ್ಯದಿಂದ 30 ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಕರ್ತವ್ಯದಿಂದ ತೆಗೆದುಹಾಕಲಾಗಿದೆ. ನಿನ್ನೆ ಮಧ್ಯಾಹ್ನದಿಂದ 30 ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಸರ್ಕಾರದ ಸಹಾಯಕರು, ಕಿರಿಯ ಸಹಾಯಕರು ದಲಾಯತ್ ಹುದ್ದೆಯಲ್ಲಿದ್ದವರು ಸೇವೆಯಿಂದ ವಜಾಗೊಂಡಿದ್ದಾರೆ. ಈ ಬಗ್ಗೆ ಸಿಎಂ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದೆ. 30 ಗುತ್ತಿಗೆ ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ, ಅವರ ಸೇವೆ ಅವಶ್ಯಕತೆ ಇಲ್ಲದ ಕಾರಣ ಕರ್ತವ್ಯದಿಂದ ಏಕಾಏಕಿ ತೆಗೆದುಹಾಕಲಾಗಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 30 […]

Continue Reading

ಮಗುವಿನ ಕಣ್ಣಿನಲ್ಲಿ ಪೊರೆ: ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ ಧ್ರುವ ಸರ್ಜಾ

ಬೆಂಗಳೂರು: ನಟ ಧ್ರುವ ಸರ್ಜಾ ಸಿನಿಮಾದಲ್ಲಿ ಮಾತ್ರ ಹೀರೋ ಅಲ್ಲ, ನಿಜ ಜೀವನದಲ್ಲೂ ಹೀರೋ ಎಂಬುದನ್ನು ಪ್ರೂವ್ ಮಾಡಿದ್ದಾರೆ. ಇದೀಗ ಪುಟ್ಟ ಮಗುವಿನ ಸಂಕಷ್ಟಕ್ಕೆ ಧ್ರುವ ಸಾಥ್‌ ನೀಡಿದ್ದಾರೆ. ಕಣ್ಣಿನಲ್ಲಿ ಪೊರೆ ಬೆಳೆದ ಪುಟ್ಟ ಕಂದಮ್ಮನ ಟ್ರೀಟ್‌ಮೆಂಟ್‌ಗೆ ನಟ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಪುಟ್ಟ ಮಗು ಚಿರಂಜೀವಿಗೆ ಎರಡು ಕಣ್ಣಿನಲ್ಲೂ ಪೊರೆ ಬೆಳೆದ ಹಿನ್ನೆಲೆ ಟ್ರೀಟ್‌ಮೆಂಟ್‌ಗಾಗಿ ಧ್ರುವ ಸಹಕರಿಸಿದ್ದಾರೆ. ಮಂಜುನಾಥ ನೇತ್ರಾಲಯದ ವೈದ್ಯರ ಬಳಿ ಮಾತನಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಹಾಗಾಗಿ ಪುಟ್ಟ ಮಗುವಿಗೆ ಯಶಸ್ವಿಗಾಗಿ ಕಣ್ಣಿನ […]

Continue Reading

ಬರೋಬ್ಬರಿ 1.15 ಲಕ್ಷಕ್ಕೆ ಕೋಣ ಮಾರಾಟ

ಚಿಕ್ಕೋಡಿ: ಮೇಕೆ, ಎಮ್ಮೆ, ಹಸು ದುಬಾರಿ ಹಣಕ್ಕೆ ಮಾರಾಟವಾಗಿರುವದು ಕೇಳಿರಬಹುದು. ಆದರೆ ಬಾಗಲಕೋಟೆ ಜಿಲ್ಲೆಯಲ್ಲಿ ಕೋಣವೊಂದು1.15 ಲಕ್ಷ ರೂ.ಗೆ ಮಾರಾಟವಾಗುವ ಮೂಲಕ ಸುದ್ದಿ ಮಾಡಿದೆ. ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ರಾಯಪ್ಪ ಚೌಗಲಾ ಎಂಬುವವರು ಸಾಕಿದ್ದ ಎರಡು ವರ್ಷದ ಕೋಣ ಬರೋಬ್ಬರಿ 1.15 ಲಕ್ಷ ರೂ.ಗೆ ಮಾರಾಟವಾಗಿದೆ. ಅಂದಾಜು 8.50 ಕ್ವಿಂಟಾಲ್ ತೂಕ ಹೊಂದಿರುವ ಕೋಣ ಸಂತಾನೋತ್ಪತ್ತಿಗೆ ಹೆಸರು ಮಾಡಿದೆ. ಕೋಣಕ್ಕೆ ದಿನನಿತ್ಯ 400 ರಿಂದ 500 ರೂ ಖರ್ಚು ಮಾಡುತ್ತಿದ್ದರು. ಇವರಿಗೆ ಕೋಣದ ಮೇಲೆ ಬಹಳ […]

Continue Reading

SBI ಬ್ಯಾಂಕ್ ದರೋಡೆ ಪ್ರಕರಣ: 12.96 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ 5 ಆರೋಪಿಗಳ ಬಂಧನ

ದಾವಣಗೆರೆ: ಜಿಲ್ಲೆಯ ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 12.96 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿದ್ದ 5 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ತಮಿಳುನಾಡಿನ ಅಜಯಕುಮಾರ, ವಿಜಯಕುಮಾರ, ನ್ಯಾಮತಿಯ ಮಂಜುನಾಥ, ಹೊನ್ನಾಳಿಯ ನಿವಾಸಿ ಅಭಿಷೇಕ ಹಾಗೂ ಚಂದ್ರಶೇಖರ ಬಂಧಿತ ಆರೋಪಿಗಳು‌. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ದರೋಡೆ ನಡೆದಿತ್ತು. ಬ್ಯಾಂಕ್ ಕಿಟಕಿಯ ಸರಳನ್ನು ಮುರಿದು, 12.96 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿಕೊಂಡು ಹೋಗುವಾಗ ಬ್ಯಾಂಕ್ ತುಂಬೆಲ್ಲಾ ಕಾರದ ಪುಡಿ (ಖಾರದ ಪುಡಿ) […]

Continue Reading