ಅನ್ನಭಾಗ್ಯ ಯೋಜನೆ ಅಡಿ ಇನ್ಮುಂದೆ ಹಣದ ಬದಲು 10 ಕೆಜಿ ಅಕ್ಕಿ: ಸಚಿವ ಮುನಿಯಪ್ಪ

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿ ಇನ್ನು ಮುಂದೆ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಸಿಗಲಿದೆ. ಇಷ್ಟು ದಿನ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ಕೊಡ್ತಿದ್ದ ಸರ್ಕಾರ ಇನ್ನು ಮುಂದೆ ಹಣದ ಬದಲಾಗಿ 10 ಕೆಜಿ ಅಕ್ಕಿಯೇ ನೀಡಲಿದೆ ಅಂತ ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಈ ತಿಂಗಳಿಂದಲೇ 10 ಕೆಜಿ ಅಕ್ಕಿ ಹಂಚಿಕೆಯಾಗಲಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಇಷ್ಟು ದಿನ ಕೇಂದ್ರ ಸರ್ಕಾರ ಅಕ್ಕಿ […]

Continue Reading

ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಬಂದ್: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿತರಣೆ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 1 ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರದ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶ (ಅನ್‌ಸ್ಯಾಚುರೇಟೆಡ್ ಫ್ಯಾಟ್) ಹೆಚ್ಚಾಗಿದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದಿದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿತರಣೆ […]

Continue Reading

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಆರ್ ಪಾಟೀಲ ಅವರಿಗೆ ಈಗ ಹೊಸ ಹುದ್ದೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಅಳಂದ ಕಾಂಗ್ರೆಸ್​ ಶಾಸಕ ಬಿಆರ್ ಪಾಟೀಲ್​ ಅವರಿಗೆ ಈಗ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಂಪುಟ ದರ್ಜೆ ಸ್ಥಾನಮಾನ ಮತ್ತು ಎಲ್ಲಾ ಸೌಲಭ್ಯ ನೀಡವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಿಎಂ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಬಿ.ಆರ್ ಪಾಟೀಲ್​ ಅವರಿಗೆ […]

Continue Reading

ಜಾತ್ರೆಗೆ ಒಂದು ದಿನ ಇರುವಾಗ ದೇವಾಲಯದ ಹುಂಡಿ ಕಳವು

ದಾವಣಗೆರೆ: ಜಾತ್ರಾ ಮಹೋತ್ಸವಕ್ಕೆ ಒಂದು ದಿನ ಇರುವಾಗಲೇ ಕಳ್ಳರು ಹುಂಡಿ ಕಳವು ಮಾಡಿದ ಘಟನೆ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಹೊರವಲಯದಲ್ಲಿರುವ ಮಾದಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ. ದೇವಸ್ಥಾನದಲ್ಲಿ ಸುಮಾರು 1 ಲಕ್ಷ ರೂ.ಗೂ ಹೆಚ್ಚು ನಗದು ಕಳವು ಮಾಡಲಾಗಿದೆ. ಪ್ರತಿ ವರ್ಷ ಜಾತ್ರೆಗೂ ಮುನ್ನ ಫೆಬ್ರುವರಿ ತಿಂಗಳಿನಲ್ಲಿ ಹುಂಡಿ ತೆರೆದು ಹಣ ಎಣಿಕೆ ಮಾಡಲಾಗುತ್ತಿತ್ತು. ಅದೆ ರೀತಿ ಈ ವರ್ಷವು ಹುಂಡಿ ತೆರೆದು ಹಣ ಎಣಿಸಲು ತೀರ್ಮಾನಿಸಲಾಗಿತ್ತು. ಆದರೆ ರವಿವಾರ ರಾತ್ರಿ ಕಳ್ಳರು ದೇವಸ್ಥಾನದ ಮುಂಭಾಗದಲ್ಲಿದ್ದ […]

Continue Reading

ಜಿ.ಪಂ, ತಾ.ಪಂ ಚುನಾವಣೆ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

ಬೆಂಗಳೂರು: ರಾಜ್ಯದಲ್ಲಿ ಮೂರುವರೆ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿ.ಪಂ, ತಾ.ಪಂ ಚುನಾವಣೆ ನಡೆಸುವ ಸಂಬಂಧ ಸೋಮವಾರ ಹೈಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಹೀಗಾಗಿ ರಾಜ್ಯ ಸರಕಾರವು ಸದ್ಯದಲ್ಲೇ ಚುನಾವಣ ಆಯೋಗಕ್ಕೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಸಲ್ಲಿಕೆ ಮಾಡಬಹುದೇ ಎಂಬ ಕುತೂಹಲ ಮೂಡಿದೆ. ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಸರಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ಸರಕಾರ ವಿಫ‌ಲವಾಗಿದೆ, ಆದಷ್ಟು […]

Continue Reading

ನಿವೃತ್ತಿ ಬಗ್ಗೆ ಸಿದ್ದರಾಮಯ್ಯ ಸ್ಫೋಟಕ ಮಾತು: ಸಿಎಂ ಕುರ್ಚಿ ಮೇಲೆ ಟವಲ್ ಹಾಕುತ್ತಿದ್ದವರಿಗೆ ಗುಮ್ಮಿದ ಟಗರು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆಯ ಚರ್ಚೆಗಳು ಹೆಚ್ಚುತ್ತಲೇ ಇದೆ. ಇತ್ತೀಚೆಗೆ ನ್ಯಾಷನಲ್ ಚಾನೆಲ್ ಒಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಡಿಸಿಎಂ ಡಿಕೆ ಶಿವಕುಮಾರ ಅವರು, ಅಧಿಕಾರ ಹಂಚಿಕೆಯ ಕುರಿತು ಮಾತನಾಡಿದ್ದರು ಹಾಗಾಗಿ ಸಿಎಂ ಸಿದ್ದರಾಮಯ್ಯ ಬದಲಾಗಲಿದ್ದಾರೆ ಎನ್ನುವ ಚರ್ಚೆಗಳು ಜೋರಾಗಿತ್ತು. ಇದೀಗ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಸದ್ಯಕ್ಕೆ ಚುನಾವಣೆ ರಾಜಕೀಯಕ್ಕೆ ನಿವೃತ್ತಿಯ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ಸಿದ್ದಾಮಯ್ಯ ಟಾಂಗ್ ನೀಡಿದ್ದಾರೆ. ಜನರ […]

Continue Reading

ಕೆಪಿಎಸ್‌ಸಿ ಪರೀಕ್ಷೆಗೆ ಕಪ್ಪು ಬಾಲ್ ಪೆನ್ ಬಳಕೆ ನಿಷೇಧ, ನೀಲಿ ಬಾಲ್ ಪಾಯಿಂಟ್ ಪೆನ್‌ ಬಳಕೆಗೆ ಸೂಚನೆ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇನ್ನುಮುಂದೆಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಮಾಡಬೇಕು ಎಂದು ಕೆಪಿಎಸ್‌ಸಿ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಈವರೆಗಿನ ಪರೀಕ್ಷೆಗಳಲ್ಲಿ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್‌ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಸೂಚನೆಯಲ್ಲಿ ಮಾರ್ಪಾಡು ಮಾಡಿ ಫೆ.16 ರಿಂದ ಕೆಪಿಎಸ್’ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ ಮಾತ್ರ ಬಳಸಬೇಕು ಎಂದು ಕೆಪಿಎಸ್’ಸಿ ಪ್ರಕಟಣೆಯಲ್ಲಿ ತಿಳಿಸಿದೆ. ಸಾಮಾನ್ಯವಾಗಿ ಬಹುತೇಕ ಎಲ್ಲೆಡೆ ನೀಲಿ ಪೆನ್ ಬಳಕೆಯಲ್ಲಿದೆ. ಆದರೆ […]

Continue Reading

ಗ್ಯಾಸ್ ಸೋರಿಕೆಯಿಂದ ಪದೆ ಪದೆ ಅಗ್ನಿ ಅವಘಡ: ಏಜೆನ್ಸಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಪದೆ ಪದೆ ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡದಲ್ಲಿ ಸಾಕಷ್ಟು ಸಾವು ನೋವುಗಳ ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತಿದೆ. ಇದೆ ಮೊದಲ ಬಾರಿಗೆ ಗ್ಯಾಸ್ ಕಂಪನಿ ಹಾಗೂ ಏಜೆನ್ಸಿ ವಿರುದ್ಧ ಬೇಗೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಗ್ಯಾಸ್ ಲೀಕ್, ಗ್ಯಾಸ್ ಸ್ಫೋಟಕ್ಕೆ ಯಾವುದೆ ಕೇಸ್ ದಾಖಲಾಗುತ್ತಿರಲಿಲ್ಲ. ಇದೀಗ ಪ್ರೈವೆಟ್ ಗ್ಯಾಸ್ ಕಂಪನಿ ಮಾಲೀಕ ಚೋಟಾ ಸಿಕಂದರ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಎಲ್‌ಎಲ್‌ಬಿ ವಿದ್ಯಾರ್ಥಿನಿ ಜಾಹ್ನವಿ ನೀಡಿದ ದೂರಿನ ಮೇಲೆ ಬೇಗೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. […]

Continue Reading

ಕೋವಿಡ್‌ ನಂತರ ಹಠಾತ್‌ ಸಾವು: ಅಧ್ಯಯನ ನಡೆಸಲು ತಜ್ಞರ ಸಮಿತಿ ರಚನೆಗೆ ಆದೇಶ

ಬೆಂಗಳೂರು: ಕೋವಿಡ್ ನಂತರದ ಕಾಲಘಟ್ಟದಲ್ಲಿ ಎಲ್ಲೆಡೆ ಹಠಾತ್ ಸಾವುಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರು ಮತ್ತು ವಿಜ್ಞಾನಿಗಳ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಹೃದಯಾಘಾತ, ಹೃದಯಸ್ಥಂಭನ ಸೇರಿದಂತೆ ವಿವಿಧ ಕಾರಣಗಳಿಂದ ವಯಸ್ಸಿನ ಬೇಧವಿಲ್ಲದೆ ಜನ ಹಠಾತ್ ಸಾವನ್ನಪ್ಪುತ್ತಿದ್ದಾರೆ. ಕೋವಿಡ್ ಮತ್ತು ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಈ ಸಾವುಗಳು ಸಂಭವಿಸುತ್ತಿರಬಹುದು ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿತ್ತು. ಈ ಬಗ್ಗೆ ಅಧ್ಯಯನ ನಡೆಸಬೇಕು ಎಂಬ ಕೂಗು ಎದ್ದಿತ್ತು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಸ್ಪಂದಿಸಿದ್ದಾರೆ. […]

Continue Reading

ನಾನು ಬಿಎಸ್ಸಿ ಪದವೀಧರ, ಕನ್ನಡ ಬರೆಯಲು ಬರದೆ ಇರುವಷ್ಟು ದಡ್ಡ ನಾನಲ್ಲ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಕನ್ನಡದಲ್ಲಿ ಶುಭವಾಗಲಿ ಎಂದು ಬರೆಯಲು ತಡಕಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಕನ್ನಡ ಬರೆಯಲು ಬರೊಲ್ಲ ಎಂಬ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲ್ ಆದ ಬಗ್ಗೆ ಮಾತಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಸುಳೇಕಲ್‌ನಲ್ಲಿ ಮಾತನಾಡಿರುವ ಅವರು, ನಾನು ಬಿಎಸ್ಸಿ ಪದವೀಧರ. ಕನ್ನಡ ಬರೆಯಲು ಬರದೆ ಇರುವಷ್ಟು ದಡ್ಡ ನಾನಲ್ಲ. […]

Continue Reading