ಯಶಸ್ವಿನಿ ಯೋಜನೆ: 5 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ, ಹೊಸ ಸದಸ್ಯರ ನೊಂದಣಿ ಪ್ರಾರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿಗೊಳಿಸಲು ಮತ್ತು ಈ ಯೋಜನೆಯಡಿ ಹೊಸ ಸದಸ್ಯರ ನೊಂದಣೆಗೆ ರಾಜ್ಯ ಸರಕಾರದಿಂದ ಹೊಸ ಆದೇಶ ಪ್ರಕಟಿಸಲಾಗಿದೆ. ಯಶಸ್ವಿನಿ ಯೋಜನೆಯು ಸಹಕಾರಿ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರಕಾರವು ಜಾರಿಗೊಳಿಸಿರುವ ಪ್ರತಿಷ್ಠಿತ ವಿಶಿಷ್ಟ ಯೋಜನೆಯಾಗಿದೆ, ಈ ಯೋಜನೆಯನ್ನು ಅನುಷ್ಥಾನ ಮಾಡಲು ಈ ವರ್ಷದ ಅಧಿಕೃತ ಮಾರ್ಗಸೂಚಿ ಹೊರಡಿಸಲಾಗಿದೆ. ಯಶಸ್ವಿನಿ ಯೋಜನೆಯಡಿ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ? ಅರ್ಜಿ ಎಲ್ಲಿ ಸಲ್ಲಿಸಬೇಕು ? ಅರ್ಜಿ ಸಲ್ಲಿಸಲು ಅಗತ್ಯ […]

Continue Reading

ದೇಶದಲ್ಲೇ ಪ್ರಥಮ ಬಾರಿಗೆ ವಿಕಲಚೇತನರ ಆರೈಕೆದಾರರಿಗೆ ಮಾಸಿಕ ಸಾವಿರ ರೂ. ಭತ್ಯೆ: ಸಿಎಂ ಘೋಷಣೆ

ಬೆಂಗಳೂರು: ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ ಅವರು ಸಮಾಜದ ಆಸ್ತಿ, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಿದ್ದೆವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಮಾಸಿಕ 1 ಸಾವಿರ ರೂ. ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ […]

Continue Reading

ಕನ್ನಡ ಸಾಹಿತ್ಯಕ್ಕೆ ಗೋರುಚ ಕೊಡುಗೆ ಅನುಪಮ: ಡಾ.ಸಿದ್ಧತೋಟೇಂದ್ರ ಶ್ರೀ

ನಾಲವಾರ: ಹಿರಿಯ ಜಾನಪದ ವಿದ್ವಾಂಸರಾಗಿ, ಶರಣ ಸಾಹಿತ್ಯ ಪ್ರಸಾರಕರಾಗಿ, ಶ್ರೇಷ್ಠ ಸಾಹಿತಿಗಳಾಗಿ ಗೋರುಚ ಅವರು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆ ಅನುಪಮವಾದದ್ದು ಎಂದು ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಹೇಳಿದರು. ಇದೇ ತಿಂಗಳು ಮಂಡ್ಯದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷರಾಗಿರುವ ಪ್ರಯುಕ್ತ ಶ್ರೀಮಠದ ದರ್ಶನಾಶೀರ್ವಾದ ಪಡೆಯಲು ಆಗಮಿಸಿದ್ದ ನಾಡೋಜ ಡಾ.ಗೋರುಚ ಅವರನ್ನು ಶ್ರೀಮಠದ ವತಿಯಿಂದ ಆತ್ಮೀಯವಾಗಿ ಸತ್ಕರಿಸಿ ಆಶೀರ್ವಚನ ನೀಡಿದರು. ಜಾನಪದ ಅಕಾಡೆಮಿ, […]

Continue Reading

ರಾಜ್ಯದ 254 ನಗರ ಕ್ಷೇಮ ಕೇಂದ್ರದಲ್ಲಿ ಮತ್ತು 39 ಬಸ್ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 254 ನಗರ ಕ್ಷೇಮ ಕೇಂದ್ರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ 108.36 ಕೋಟಿ ವೆಚ್ಚದಲ್ಲಿ ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ 254 ಹಾಗೂ KSRTC ಬಸ್ ನಿಲ್ದಾಣಗಳಲ್ಲಿ 39 ನಮ್ಮ ಕ್ಲಿನಿಕ್ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. 39.37 ಕೋಟಿ ವೆಚ್ಚದಲ್ಲಿ ಉಡುಪಿ ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಲ್ಲಿ […]

Continue Reading

ಮಹಿಪಾಲರೆಡ್ಡಿ ನಟನೆಯ ತಮಟೆ ಸಿನಿಮಾ ನಾಳೆ ಬಿಡುಗಡೆ

ಕಲಬುರಗಿ: ಹಿರಿಯ ಚಿತ್ರನಟ ಮದನ್ ಪಟೇಲ್ ಅವರು ನಾಯಕ ನಟರಾಗಿರುವ ಕಾದಂಬರಿ ಆಧಾರಿತ `ತಮಟೆ’ ಸಿನಿಮಾ ನ.29 ರಂದು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಪ್ರಖ್ಯಾತ ಸಿನಿಮಾ ನಾಯಕ ನಟ ಮಯೂರ್ ಪಟೇಲ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾವನ್ನು ವಂದನಾ ಎಂ ನಿರ್ಮಾಣ ಮಾಡಿದ್ದು, ಸ್ವತಃ ಮದನ್ ಪಟೇಲ್ ಅವರೇ ಸಂಗೀತ ನಿರ್ದೇಶನ ಮಾಡಿದ್ದಾರೆ. ಮೀಡಿಯಾ ಇಂಟರನ್ಯಾಷನಲ್ ಅರ್ಪಿಸುವ ಮತ್ತು ಶ್ರೀ ರೇಣುಕಾ ಯಲ್ಲಮ್ಮ ದೇವಿ ಕ್ರಿಯೇಷನ್ ರವರ `ತಮಟೆ’ ಸಿನಿಮಾವು ರಾಜ್ಯದ ಎಲ್ಲಾ ಜಿಲ್ಲೆಗಳ ಚಿತ್ರಮಂದಿರದಲ್ಲಿ ಬಿಡುಗಡೆ […]

Continue Reading

ಅಮ್ಮ ಹೆಸರಿನಲ್ಲಿ ನೀಡುವ ಪ್ರಶಸ್ತಿ ರಾಜ್ಯಕ್ಕೆ ಮಾದರಿ

ಸೇಡಂ: ಜಗತ್ತಿನಲ್ಲಿ ಎರಡು ಸುರಕ್ಷಿತ ಸ್ಥಳ ಅಪ್ಪನ ಹೆಗಲು, ಅಮ್ಮನ ಮಡಿಲು ಹೀಗಾಗಿ ತಾಯಿ, ತಂದೆಯರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಜಗತ್ತಿನ ಎಲ್ಲಾ ಪ್ರಶಸ್ತಿಗೂ ಮಿಗಿಲಾದದ್ದು ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಅಭಿಪ್ರಾಯಪಟ್ಟರು. ಪಟ್ಟಣದ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ ಪ್ರತಿಷ್ಠಾನವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಮಂಗಳವಾರ ರಾತ್ರಿ ಆಯೋಜಿಸಿದ್ದ 24ನೇ ವರ್ಷದ ಅಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಮಾತನಾಡಿದ ಅವರು, ದೇಶದ ಉದ್ದಗಲಕ್ಕೂ […]

Continue Reading

ನಾಗಾವಿಯಲ್ಲಿ ಉತ್ಖನನ, ಸಂಶೋಧನೆ ಅಗತ್ಯ: ತಹಸೀಲ್ದಾರ್

ಚಿತ್ತಾಪುರ: ಪುರಾತನ ಕಾಲದಲ್ಲಿ ಉತ್ತರ ಭಾರತದಲ್ಲಿದ್ದ ನಳಂದಾ, ತಕ್ಷಶಿಲಾ ವಿಶ್ವವಿದ್ಯಾಲಯ ಮಾದರಿಯಲ್ಲೇ ದಕ್ಷಿಣ ಭಾರತದ ನಾಗಾವಿಯಲ್ಲಿ ಘಟಕಾಸ್ಥಾನ ಹೆಸರಿನ ಪ್ರಸಿದ್ಧ ವಿಶ್ವವಿದ್ಯಾಲಯವಿತ್ತು, ನಾಗಾವಿಯಲ್ಲಿ ಉತ್ಖನನ, ಸ್ಥಳದ ಸಮಗ್ರ ಇತಿಹಾಸದ ಸಂಶೋಧನೆ ನಡೆಯಬೇಕು ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಾಗಾವಿಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಳ್ಳಲಾಗಿದ್ದ ನಾಗಾವಿ ಸಾಂಸ್ಕೃತಿಕ ರತ್ನ ಪ್ರಶಸ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಉತ್ತರ ಭಾರತದಲ್ಲಿ ನಳಂದ ತಕ್ಷಶಿಲಾ ವಿಶ್ವವಿದ್ಯಾಲಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ನಾಗಾವಿಗೆ ಅಗ್ರಹಾರ ಹೆಸರಿನ ಪ್ರಸಿದ್ಧಿ ಪಡೆದ […]

Continue Reading

ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ದರ ಏರಿಕೆ ಬಿಸಿ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ದರ ಏರಿಕೆ ಬಿಸಿ ತಟ್ಟಿದೆ. ಉಚಿತ ಚಿಕಿತ್ಸೆ ಕೊಡುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳ ದರ ಹೆಚ್ಚಳವಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ದರ ಏರಿಕೆಯಾಗಿದೆ. ಸರ್ಕಾರಿ ಸೇವೆಗಳ ದರ 10 ರಿಂದ 20% ದರ ಏರಿಕೆಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದರ ಏರಿಕೆಯಾಗಿರುವ ಬಗ್ಗೆ ನೋಟಿಸ್ ಹಾಕಿದ್ದಾರೆ. ಆಸ್ಪತ್ರೆಯ ಹೊರ ರೋಗಿ ವಿಭಾಗಗಳ ಮುಂದೆ ದರ ಏರಿಕೆ ಆಗಿದೆ ಎಂದು ನೋಟಿಸ್ ಅಂಟಿಸಲಾಗಿದೆ. ರಾಜ್ಯದ ಅತಿದೊಡ್ಡ ಆಸ್ಪತ್ರೆ ವಿಕ್ಟೋರಿಯಾದಲ್ಲಿ […]

Continue Reading

10 ಕೃತಿಗಳಿಗೆ ಅಮ್ಮ ಪ್ರಶಸ್ತಿ ಪ್ರದಾನ

ಕಲಬುರಗಿ: ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗೆ ನಾಡಿನ ಹತ್ತು ಸಾಹಿತಿಗಳ ಕೃತಿಗಳು ಆಯ್ಕೆಯಾಗಿವೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ. ವಿದ್ಯಾರಶ್ಮಿ ಪೆಲತ್ತಡ್ಕ (ಕೆರೆ-ದಡ), ಪ್ರಭಾವತಿ ದೇಸಾಯಿ (ಸೆರಗಿಗಂಟಿದ ಕಂಪು), ವೀರೇಂದ್ರ ರಾವಿಹಾಳ್ (ಡಂಕಲ್ ಪೇಟೆ), ಪೂರ್ಣಿಮಾ ಮಾಳಗಿಮನಿ (ಮ್ಯಾಜಿಕ್ ಸೌಟು), ದ್ವಾರನಕುಂಟೆ ಪಾತಣ್ಣ (ರಾಣಿ ಅಹಲ್ಯಾಬಾಯಿ ಹೋಳ್ಕರ್), ಗುರುಪ್ರಸಾದ ಕಂಟಲಗೆರೆ (ಅಟ್ರಾಸಿಟಿ), ಡಾ.ಪರವಿನ ಸುಲ್ತಾನಾ (ಶರಣರ ನಾಡಿನ ಸೂಫಿ ಮಾರ್ಗ), […]

Continue Reading

ನಗ್ನ ಫೋಟೋ ಕಳಿಸುವಂತೆ ಕಿರುಕುಳ ಆರೋಪ, ಪಿಎಸ್ಐ ವಿರುದ್ಧ ಕಮಿಷನರ್‌ಗೆ ದೂರು ನೀಡಿದ ವೈದ್ಯೆ

ಬೆಂಗಳೂರು: ಯುವ ವೈದ್ಯೆಗೆ ನಗ್ನ ಫೋಟೋ ಕಳುಹಿಸುವಂತೆ ಕಿರುಕುಳ ನೀಡಿರುವದಲ್ಲದೆ, ನಿರಾಕರಣೆ ಮಾಡಿದ್ದಕ್ಕೆ ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪಿಎಸ್ಐ ವಿರುದ್ಧ ಕೇಳಿ ಬಂದಿದೆ. ಬಸವನಗುಡಿ ಪೊಲೀಸ್ ಠಾಣೆ ಪಿಎಸ್ಐ ರಾಜಕುಮಾರ ಎಸ್ ಜೋಡಟ್ಟಿ ವಿರುದ್ದ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ದೂರು ನೀಡಿದ್ದಾರೆ, ತನಗೆ ನ್ಯಾಯ ಕೊಡಿಸುವಂತೆ ಪೊಲೀಸ್ ಕಮಿಷನರ್ ಬಿ ದಯಾನಂದ ಅವರಿಗೆ ನೊಂದ ವೈದ್ಯೆ ಮನವಿ ಮಾಡಿದ್ದಾರೆ. ಘಟನೆಯ ವಿವರ: ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಸಂತ್ರಸ್ತ ಯುವತಿ ಬಸವನಗುಡಿ […]

Continue Reading