ಕಲ್ಯಾಣ ಮಂಟಪಗಳಲ್ಲಿ ಕದ್ದ ಹಣದಲ್ಲಿ 3 ಸೈಟ್ ಖರೀದಿಸಿ,1 ಮನೆ ಕಟ್ಟಿದ ಖದೀಮ ಅಂದರ್

ಬೆಂಗಳೂರು: ಈತ ಟಿಪ್‌ಟಾಪ್‌ ಆಗಿ ಕಲ್ಯಾಣ ಮಂಟಪಕ್ಕೆ ಕಾಲಿಟ್ಟನೆಂದರೆ ಅಲ್ಲಿ ವಧು-ವರರ ಕುಟುಂಬಕ್ಕೆ ಸೇರಿದವರ ಚಿನ್ನಾಭರಣ, ನಗದು ಮಂಗಮಾಯವಾಗುವದು ಗ್ಯಾರಂಟಿ ಇತ್ತು, ಹೀಗಾಗಿಯೇ ಮದುವೆ ಮನೆಯಲ್ಲಿ ಕದ್ದ ಚಿನ್ನಾಭರಣಗಳಿಂದ 3 ನಿವೇಶನ ಖರೀದಿಸಿ, ವಾಸಿಸಲು ಸ್ವಂತ ಮನೆಕಟ್ಟಿಕೊಂಡು ಹೆಂಡತಿ-ಮಕ್ಕಳ ಜೊತೆಗೆ ಸಂಸಾರ ಮಾಡಿಕೊಂಡಿದ್ದ ವೃತ್ತಿಪರ ಖದೀಮನೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ತುಮಕೂರು ಜಿಲ್ಲೆ ಗುಬ್ಬಿ ನಿವಾಸಿ ಪರಮೇಶ್ ಈ ಖತರ್‌ನಾಕ್‌ ಕಳ್ಳ. ಕಲ್ಯಾಣ ಮಂಟಪಗಳಿಗೆ ಅತಿಥಿಯ ಸೋಗಿನಲ್ಲಿ ತೆರಳಿ ವಧು-ವರರ ಕೊಠಡಿಗಳಲ್ಲಿ ಚಿನ್ನಾಭರಣ ಕದಿಯುತ್ತಿದ್ದ ಈ ಚಾಲಾಕಿ […]

Continue Reading

ಕೆಎಸ್‌ಆರ್​ಟಿಸಿಯಲ್ಲಿ ಲಂಚಾವತಾರ: ಲಾಂಗ್ ರೂಟ್ ಡ್ಯೂಟಿ ನೀಡಲು ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು

ಬೆಂಗಳೂರು: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂ ಲಂಚ ಪಡೆದಿರುವ ಬಗ್ಗೆ ಮಾಧ್ಯಮದಲ್ಲಿ ಸುದ್ದಿ ಮಾಡಲಾಗಿತ್ತು. ಆ ನಂತರ 13 ಜನ ಅಧಿಕಾರಿಗಳು ಅಮಾನತು ಆಗಿದ್ದರು. ಈಗ ಲಂಚ ಪಡೆಯುವ ಸರದಿ ಕೆಎಸ್‌ಆರ್​ಟಿಸಿಗೂ ಕಾಲಿಟ್ಟಿದೆ. ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದಿರುವದು ಸಾಕ್ಷಿ ಲಭ್ಯವಾಗಿದೆ. ಕೆಎಸ್‌ಆರ್​ಟಿಸಿ ಡಿಪೋ- 1 ರಲ್ಲಿ ಸುಮಾರು 100 ಬಸ್​​ಗಳಿವೆ. ಈ ಬಸ್​​ಗಳು ಆಂಧ್ರಪ್ರದೇಶ, ತೆಲಂಗಾಣ, ಗೋವಾ, ಕೇರಳ, ತಮಿಳುನಾಡು ಸೇರಿದಂತೆ ಬೇರೆ […]

Continue Reading

ಸ್ವತಃ ದೇವರೇ ಹೇಳಿದರೂ ಮತ್ತೆ ಚುನಾವಣೆಗೆ ನಿಲ್ಲಲ್ಲ: ಕೇಂದ್ರ ಸಚಿವ ವಿ ಸೋಮಣ್ಣ ರಾಜಕೀಯ ನಿವೃತ್ತಿ ಮಾತು

ತುಮಕೂರು: ಸ್ವತಃ ದೇವರೇ ಹೇಳಿದರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಕೇಂದ್ರ ಸಚಿವ ವಿ ಸೋಮಣ್ಣ ರಾಜಕೀಯ ನಿವೃತ್ತಿ ಮಾತುಗಳನ್ನಾಡಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ವಿವರಿಸುತ್ತಿದ್ದ ಸೋಮಣ್ಣ, ಕೇಂದ್ರ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಹಾಗೂ ತುಮಕೂರು ಜಿಲ್ಲಾಭಿವೃದ್ಧಿ ವಿಚಾರದ ಬಗ್ಗೆ ಮಾತನಾಡುವಾಗ, ತುಮಕೂರು-ಬೆಂಗಳೂರು ನಾಲ್ಕು ಪಥದ ರೈಲ್ವೆ. ಸರ್ವೆ ಆಯ್ತು ಡಿಪಿಆರ್ ಶುರು ಮಾಡಿಸಿದ್ದಿನಿ. ಇದರ ಜೊತೆಗೆ ಎನ್‌ಹೆಚ್4ರ ತಿಮ್ಮರಾಜನಹಳ್ಳಿ ಅಭಿವೃದ್ಧಿ ಆಗುತ್ತದೆ. ಕೆಐಡಿಬಿಯವರ ಜೊತೆ ಮಾತನಾಡಿದ್ದೆನೆ ಎಂದರು. ಇದೆಲ್ಲಾ ಅಭಿವೃದ್ಧಿ ನಿಮಗಾಗಿ. ನಾನು […]

Continue Reading

ಕಾಂಗ್ರೆಸ್ ನಾಯಕಿ ಕುಸುಮ ಹನುಮಂತರಾಯಪ್ಪ ನಿವಾಸದ ಮೇಲೆ ಇ.ಡಿ ದಾಳಿ: ವೀರೇಂದ್ರ ಪಪ್ಪಿಯೊಂದಿಗೆ ನಂಟು

ಬೆಂಗಳೂರು: ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರ ಮೇಲೆ ನಡೆಯುತ್ತಿರುವ ತನಿಖೆಯ ಮುಂದುವರೆದ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹನುಮಂತರಾಯಪ್ಪ ಅವರ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಮುದ್ದಿಪಾಳ್ಯ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಇಂದು ಬೆಳಗ್ಗೆ 4.30ರ ಸುಮಾರಿಗೆ ಇ.ಡಿ ಅಧಿಕಾರಿಗಳ ಎರಡು ಇನೋವಾ ಕಾರುಗಳಲ್ಲಿ ಆಗಮಿಸಿ ಕೇಂದ್ರ ಭದ್ರತಾ ಪಡೆಯ ಸಹಯೋಗದೊಂದಿಗೆ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯ ಹಿನ್ನೆಲೆ ಇ.ಡಿ ಅಧಿಕಾರಿಗಳು ಶಾಸಕ ವೀರೇಂದ್ರ ಪಪ್ಪಿ […]

Continue Reading

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ಪಾವತಿಸಲು ಶೇ.50 ಡಿಸ್ಕೌಂಟ್: 20 ದಿನ ಮಾತ್ರ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ಘೋಷಿಸಿ ಆದೇಶ ಹೊರಡಿಸಿದೆ. ಈ ಅವಕಾಶವು ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಯಾರಿಗೆ ರಿಯಾಯಿತಿ ಅನ್ವಯ ? ಸಾರಿಗೆ ಇಲಾಖೆ ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ, 2023ರ ಫೆಬ್ರವರಿ 11 ರವರೆಗೆ ದಾಖಲಾಗಿರುವ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಿಗೆ ಈ […]

Continue Reading

ಗುಜರಾತ್‌ ಎಮ್ಮೆಯ ಹಿಂದೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡ ನಿರ್ದೇಶಕ ಜೋಗಿ ಪ್ರೇಮ್‌

ಸುದ್ದಿ ಸಂಗ್ರಹ ಬೆಂಗಳೂರು ಖ್ಯಾತ ಚಿತ್ರ ನಿರ್ದೇಶಕ ಪ್ರೇಮ್ ಅವರಿಗೆ ಹೈನುಗಾರಿಕೆಗಾಗಿ ಎಮ್ಮೆ ಕೊಡಿಸುವುದಾಗಿ 4.5 ಲಕ್ಷ ರೂ ಪಡೆದು ವಂಚಿಸಿರುವ ಆರೋಪದ ಮೇಲೆ ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತನ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ್ ಅವರ ಮ್ಯಾನೇಜರ್ ಕಂ ನಟ ದಶಾವರ ಚಂದ್ರು ಅವರು ದೂರು ನೀಡಿದ್ದಾರೆ. ಪ್ರಕರಣದ ಹಿನ್ನೆಲೆ: ಪ್ರೇಮ್ ಅವರು ಹೈನುಗಾರಿಕೆಗಾಗಿ ಎರಡು ಎಮ್ಮೆ ಖರೀದಿಸಲು ಮುಂದಾಗಿದ್ದರು. ಈ ವೇಳೆ ವನರಾಜ್ ಭಾಯ್ ಎಂಬ ವ್ಯಕ್ತಿಯು […]

Continue Reading

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ 2 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. […]

Continue Reading

ಮಲೆನಾಡು, ಕಲ್ಯಾಣ ಕರ್ನಾಟಕದಲ್ಲಿ ಭಾರಿ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಚಿಕ್ಕಮಗಳೂರು, ಕೊಡಗು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರವಿವಾರ ಧಾರಾಕಾರ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ಮಲೆನಾಡಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕುದುರೆ ಮುಖ ಭಾಗದಲ್ಲಿ ಭಾರಿ ಮಳೆ ಇದ್ದು, ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶೃಂಗೇರಿ ಪಟ್ಟಣದ ಗಾಂಧಿ ಮೈದಾನ, ದೇಗುಲದ ವಾಹನ ನಿಲುಗಡೆ ತಾಣದಲ್ಲಿದ್ದ ವಾಹನಗಳು ನೀರಿನಲ್ಲಿ ಮುಳುಗಿವೆ. ಆಸುಪಾಸಿನ ಜಮೀನು, ತೋಟಗಳಿಗೆ ನೀರು ನುಗ್ಗಿದೆ. ಕೊಪ್ಪ, ಕಳಸ, ಎನ್.ಆರ್ ಪುರ, ಮೂಡಿಗೆರೆ ವ್ಯಾಪ್ತಿಯಲ್ಲಿ ಜೋರು ಮಳೆ ಇದೆ. ಚಾರ್ಮಾಡಿ ಘಾಟಿಯಲ್ಲಿ ಜೋರು […]

Continue Reading

ಸಾಲ ಕೊಟ್ಟವರ ಮನೆಯಲ್ಲಿ ಕನ್ನ: ತಂಗಿ ಕೃತ್ಯಕ್ಕೆ ಅಣ್ಣ ಸಾಥ್,​ ಆರು ಜನರ ಬಂಧನ

ನೆಲಮಂಗಲ: ಸಾಲ ತೀರಿಸಲು ಸಾಲ ಕೊಟ್ಟವರ ಮನೆಯಲ್ಲಿ ಕಳ್ಳತನ ಮಾಡಿದ ಗ್ಯಾಂಗ್​ವೊಂದು ಸಿಕ್ಕಿಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬಾಗಲಗುಂಟೆ ಠಾಣೆಯ ಪೊಲೀಸರು 6 ಜನ ಆರೋಪಿಗಳನ್ನು ಬಂಧಿಸಿ, 9.9 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಕುಖ್ಯಾತ ಕಳ್ಳ ಮೋರಿ ರಾಜ, ವೆಂಕಟೇಶ್, ಕವಿತಾ, ಹರೀಶ್, ನಾಗರಾಜ್ ಮತ್ತು ಪ್ರತಾಪ್​ ಬಂಧಿತರು. ಘಟನೆ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹ ಧಮ್ ಬಿರಿಯಾನಿ ಹೆಸರಿನ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ಮಂಗಳಾ ಎಂಬುವವರ ಬಳಿ ಕವಿತಾ […]

Continue Reading

ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು, ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಸಮಗ್ರ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ವಿಧಾನಪರಿಷತ್‌ನಲ್ಲಿ ಗಮನ ಸೆಳೆಯುವ ಸೂಚನೆಯಡಿ ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಹಾಗೂ ಬಿಜೆಪಿಯ ಡಿ.ಎಸ್‌ ಅರುಣ್‌ ಅವರ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸುವ ವಿಷಯದ ಬಗ್ಗೆ ಉತ್ತರ ನೀಡಿದರು. ಸ್ಥಳೀಯ ಸಂಸ್ಥೆಗಳಿಗೆ […]

Continue Reading