ಕಠಿಣ ಪರಿಶ್ರಮ, ತಾಳ್ಮೆಯಿಂದ ಉನ್ನತ ಸಾಧನೆ ಸಾಧ್ಯ: ಮುಡಬಿ ಗುಂಡೇರಾವ

ಕಲಬುರಗಿ: ಜೀವನದಲ್ಲಿ ಗುರಿ ನಿಗದಪಡಿಸಿಕೊಂಡು ಅದಕ್ಕೆ ಪೂರಕವಾಗಿ ಕಠಿಣ ಪರಿಶ್ರಮ, ತಾಳ್ಮೆ, ಸಮಯ ಬದ್ಧತೆಯಿಂದ ನಿರಂತರವಾಗಿ ಪ್ರಯತ್ನಿಸಿದರೆ, ಖಂಡಿತವಾಗಿ ಜೀವನದಲ್ಲಿ ಉನ್ನತವಾದ ಸಾಧನೆ ಮಾಡಲು ಸಾಧ್ಯ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಕಳೆದ ಅಗಷ್ಟ್ ಬ್ಯಾಚ್‌ನ ತರಬೇತಿ ಹೊಂದಿ ಉತ್ತೀರ್ಣ ವಿದ್ಯಾರ್ಥಿಗಳಿ ರವಿವಾರ ಏರ್ಪಡಿಸಲಾಗಿದ್ದ ‘ಪ್ರಮಾಣ ಪತ್ರಗಳ ವಿತರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದಿಸೆಯಿಂದಲೆ ತಂದೆ-ತಾಯಿ, ಗುರು-ಹಿರಿಯರಿಗೆ ಮತ್ತು ದೇಶಕ್ಕೆ […]

Continue Reading

ಬೆಂದವರಷ್ಟೆ ಬೇಂದ್ರೆಯಾಗಲು ಸಾಧ್ಯ: ಎಚ್.ಬಿ ಪಾಟೀಲ

ಕಲಬುರಗಿ: ಬೇಂದ್ರೆಯವರು ಜೀವನದಲ್ಲಿ ಅನೇಕ ಕಷ್ಟಗಳನ್ನು ಅನುಭವಿಸಿ, ಅವುಗಳನ್ನು ಸಾಹಿತ್ಯದಲ್ಲಿ ಕೃಷಿ ಮಾಡಿದ್ದರಿಂದ ಅವರ ಸಾಹಿತ್ಯವು ಹೆಚ್ಚು ನೈಜತೆ ಹಾಗೂ ಗಟ್ಟಿತನದಿಂದ ಕೂಡಿದೆ. ಅವರಂತೆ ಸಾಹಿತ್ಯ ಮೇರು ಸಾಧನೆ ಮಾಡಬೇಕಾದರೆ, ಸಾಕಷ್ಟು ಸಮಸ್ಯೆಗಳನ್ನು ಮೆಟ್ಟಿ ನಿಲ್ಲಬೇಕು. ‘ಜೀವನದಲ್ಲಿ ಬೆಂದವರು ಮಾತ್ರ ಬೇಂದ್ರೆಯಾಗಲು ಸಾಧ್ಯ’ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಮಾರ್ಮಿಕವಾಗಿ ಅಭಿಮತಪಟ್ಟರು. ತಾಲೂಕಿನ ಫರತಾಬಾದನ ಕರಿಗೋಳೇಶ್ವರ ದೇವಸ್ಥಾನದ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ವರಕವಿ ದ.ರಾ ಬೇಂದ್ರೆಯವರ 44ನೇ ಪುಣ್ಯಸ್ಮರಣೋತ್ಸವ’ […]

Continue Reading

ಕಲೆಯ ಪೋಷಣೆ, ಕಲಾವಿದರಿಗೆ ಪ್ರೋತ್ಸಾಹ ಅಗತ್ಯ

ಕಲಬುರಗಿ: ಭಾರತ ದೇಶ ಅನೇಕ ಧರ್ಮ, ಸಮುದಾಯ, ಭಾಷೆ, ಪ್ರದೇಶಗಳು, ಅಪರೂಪದ ವಾಸ್ತುಶಿಲ್ಪಗಳು, ಕಲಾಕೃತಿಗಳು, ಐತಿಹಾಸಿಕ ಸ್ಮಾರಕಗಳನ್ನು ಹೊಂದಿದ್ದು ದೊಡ್ಡ ಮ್ಯೂಸಿಯಂ ಆಗಿದೆ. ವಿಶ್ವದ ಯಾವುದೇ ಕಲಾವಿದನಿಗೆ ನಮ್ಮ ದೇಶವೇ ಆಧಾರವಾಗಿದ್ದು, ಇಲ್ಲಿಗೆ ಆಗಮಿಸಿ ಅಧ್ಯಯನ ಮಾಡುತ್ತಿದ್ದಾರೆ. ದೇಶದಲ್ಲಿರುವ ಅಪರೂಪದ ಕಲಾಕೃತಿಗಳು, ಐತಿಹಾಸಿಕ ಸ್ಥಳಗಳು, ಸ್ಮಾರಕಗಳನ್ನು ರಕ್ಷಿಸಿ, ಮುಂದಿನ ಜನಾಂಗಕ್ಕೆ ಮುಟ್ಟಿಸುವ ಕಾರ್ಯವಾಗಬೇಕಾಗಿದೆ ಎಂದು ಅಂತಾರಾಷ್ಟೀಯ ಖ್ಯಾತ ಚಿತ್ರ ಕಲಾವಿದ ಡಾ.ಸುಬ್ಬಯ್ಯ ಎಂ.ನೀಲಾ ಅಭಿಮತಪಟ್ಟರು. ನಗರದ ಅಗ್ನಿಶಾಮಕ ಠಾಣೆಯ ಎದುರುಗಡೆಯಿರುವ ಮಹಾಲಕ್ಷ್ಮಿ ನಗರದ ನೀಲಾ ಆರ್ಟ್ ಗ್ಯಾಲರಿ’ಯಲ್ಲಿ […]

Continue Reading

ದಿ.ಪುನೀತ್ ರಾಜ್‌ಕುಮಾರ್ ಕನಸಿನ ‘ಅಪ್ಪು ಫ್ಯಾನ್‌ ಡಮ್’ ಆ್ಯಪ್ ಅನಾವರಣ

ದಿ.ಪುನೀತ್ ರಾಜ್‌ಕುಮಾರ್ ಅವರ ಕನಸುಗಳನ್ನು ಸಾಕಾರಗೊಳಿಸಲು ನೂತನ ಆ್ಯಪ್ `ಅಪ್ಪು ಫ್ಯಾನ್ ಡಮ್’ ಅನಾವರಣಗೊಂಡಿದೆ. ಆ್ಯಪ್, ಎಐ ತಂತ್ರಜ್ಞಾನದ ಮೂಲಕ ಅಭಿಮಾನಿಗಳನ್ನು ತಲುಪುವ ಸದುದ್ದೇಶದೊಂದಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ನೇತೃತ್ವದಲ್ಲಿ ಸಿದ್ಧವಾಗಿರುವ ಆ್ಯಪ್‌ನ್ನು ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಲೋಕಾರ್ಪಣೆ ಮಾಡಿದರು. ಆ್ಯಪ್ ಲೋಕಾರ್ಪಣೆ ವೇಳೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮಾತನಾಡಿ, ನಿಮಗೆ ಗೊತ್ತಿರುವಂತೆ ಅಪ್ಪು ಯಾವಾಗಲೂ ಹೊಸತನದ ಕಡೆಗೆ ಹುಡುಕಾಟ ನಡೆಸುತ್ತಿದ್ದರು. ಹೊಸತನದ ಹುಡುಕಾಟದಿಂದಲೇ ಹೊಸಬರಿಗೆ ಅವಕಾಶ ಕೊಡಲೆಂದೇ ಪಿಆರ್‌ಕೆ ಕೂಡ ಶುರುವಾಗಿದ್ದು, ಇಂಡಸ್ಟ್ರಿಗೆ […]

Continue Reading

ಕರ್ನಾಟಕದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ಹೂಡಿಕೆಗೆ ಅಸ್ತು: 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ತಿಳಿಸಿದ್ದಾರೆ. ಒಟ್ಟು 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದ್ದಾರೆ. […]

Continue Reading

ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೊ ಹನಿ ಹಾಕಿಸಿ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಐದು ವರ್ಷಗಳೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೊ ಹನಿ ಹಾಕಿಸುವ ಮೂಲಕ ಪೋಲಿಯೊ ರೋಗ ಬರದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ವಿಶ್ವ ಪೋಲಿಯೋ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರು ಕೂಡಾ ನಮ್ಮ ನೆರೆ-ಹೊರೆ ರಾಷ್ಟ್ರಗಳಲ್ಲಿ ಇನ್ನೂ ಕಂಡುಬರುತ್ತಿರುವುದರಿಂದ ಅದು ವೈರಸ್ ನಮ್ಮ ದೇಶಕ್ಕೆ ತಗುಲಬಾರದೆಂದು ಮುಂಜಾಗ್ರತೆಯಾಗಿ ಪೋಲಿಯೊ […]

Continue Reading

ವಿಶ್ವದ ಸಮಗ್ರ ಅಭಿವೃದ್ಧಿಗೆ ವಿಶ್ವಸಂಸ್ಥೆ ಕೊಡುಗೆ ಅನನ್ಯ

ಕಲಬುರಗಿ: ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆ ಕಾಪಾಡುವುದು, ಸಮಾನತೆ ಆಧಾರದ ಮೇಲೆ ವಿಶ್ವದಲ್ಲಿನ ರಾಷ್ಟ್ರಗಳ ಸ್ನೇಹ ಸಂಬಂಧ ಬೆಳೆಸುವುದು, ಅಂತಾರಾಷ್ಟ್ರೀಯ ಸಹಾಯಕ್ಕೆ ಬೆಂಬಲ ನೀಡಿ ವಿಶ್ವದಲ್ಲಿನ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಮಾನವೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಮತ್ತು ಮಾನವನ ಮೂಲಭೂತ ಹಕ್ಕುಗಳನ್ನು ಉತ್ತೇಜಿಸುವಂತಹ ಮುಂತಾದ ಕಾರ್ಯಗಳನ್ನು ಮಾಡುವ ಮೂಲಕ ವಿಶ್ವಸಂಸ್ಥೆ ವಿಶ್ವದ ಸಮಗ್ರ ಅಭಿವೃದ್ಧಿಗೆ ತನ್ನದೆಯಾದ ಕೊಡುಗೆ ನೀಡುತ್ತಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಶಿವಾ ವಿದ್ಯಾ […]

Continue Reading

ವಾಯುಭಾರ ಕುಸಿತ ಭಾರಿ ಮಳೆ: ರಾಜ್ಯದ 11 ಜಿಲ್ಲೆಗೆ 2 ದಿನ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ, ಅಕ್ಟೋಬರ್ 25 ಹಾಗೂ 26 ರಂದು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಪೂರ್ವ ಅರಬ್ಬಿ ಸಮುದ್ರದಲ್ಲಿ ಪಣಜಿಯಿಂದ 380 ಕಿ.ಮೀ ದೂರದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಹಾಗೆಯೇ, ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮತ್ತೊಂದು ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಇದು ಮತ್ತಷ್ಟು ತೀವ್ರಗೊಂಡು ಅಕ್ಟೋಬರ್ 27ರಂದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರದ ವಿಜ್ಞಾನಿ ಸಿ.ಎಸ್ ಪಾಟೀಲ್ ಮಾಹಿತಿ […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ಶಶೀಲ್ ನಮೋಶಿ ಅವರಿಗೆ ಸನ್ಮಾನ

ವಾಡಿ: ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರದ ಕಚೇರಿಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯರು ಹಾಗೂ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಶೀಲ್ ಜಿ ನಮೋಶಿ ಅವರನ್ನು ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಸನ್ಮಾನಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ, ಮುಖಂಡರಾದ ಶರಣಗೌಡ ಚಾಮನೂರ, ಹರಿ ಗಲಾಂಡೆ, ಶಿವಶಂಕರ ಕಾಶೆಟ್ಟಿ, ಶಿವರಾಮ ಜಾಧವ, ರಾಜಶೇಖರ ದೂಪದ, ಮಲ್ಲಿಕಾರ್ಜುನ ಸಾತಖೇಡ, ಅಯ್ಯಣ್ಣ ದಂಡೋತಿ, ಪ್ರೇಮ ರಾಠೋಡ, ಯಂಕಮ್ಮ ಗೌಡಗಾಂವ, […]

Continue Reading

ಸಾಹಸದ ಸಂಕೇತ ರಾಣಿ ಚೆನ್ನಮ್ಮ: ನಮೋಶಿ

ವಾಡಿ: ಬಿಜೆಪಿ ಕಛೇರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಯಿತು. ವಿಧಾನ ಪರಿಷತ್ ಸದಸ್ಯ ಹಾಗೂ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಶೀಲ್ ಜಿ ನಮೋಶಿ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಭಾರತದ ಇತಿಹಾಸದಲ್ಲಿ ನಮ್ಮ ವೀರತ್ವದ ಸಂಕೇತ ಎಂದರು. ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಕಿತ್ತೂರು ಚೆನ್ನಮ್ಮ 15ನೇ ವಯಸ್ಸಿನಲ್ಲೇ ರಾಜಾ ಮಲ್ಲಸರ್ಜ ಎಂಬ ದೇಸಾಯಿ ಮನೆತನದವರನ್ನು ವಿವಾಹವಾದರು. ನಂತರ ಕಿತ್ತೂರು ರಾಣಿ ಚನ್ನಮ್ಮ ಎಂಬ ಕರೆಯಲ್ಪಟ್ಟರು, ಅವರು […]

Continue Reading