ರೈತರು ಉತ್ತಮ ಸಾಗುವಳಿ ಕ್ರಮಗಳ ಮೂಲಕ ಬಿತ್ತನೆ ಮಾಡಿ

ಕಲಬುರಗಿ: ಹಿಂಗಾರು ಬಿತ್ತನೆ ಕಾಲ ಪ್ರಾರಂಭವಾಗಿದ್ದು, ಪ್ರಮುಖವಾಗಿ ಜೋಳ, ಕಡಲೆ, ಕುಸುಬೆ, ಗೋದಿ ಬಿತ್ತನೆ ಮಾಡಲಾಗುತ್ತದೆ. ರೈತರು ಬೀಜದ ಪ್ರಮಾಣ, ರಸಗೊಬ್ಬರ ಬಳಕೆ, ಬಿತ್ತನೆಯ ವಿಧಾನ ಅನುಸರಿಸುವ ಮೂಲಕ ಉತ್ತಮ ಸಾಗುವಳಿ ಕ್ರಮಗಳ ಮೂಲಕ ಬಿತ್ತನೆ ಮಾಡುವುದು ಅಗತ್ಯವಾಗಿದೆ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್.ಬಿರಾದಾರ ರೈತರಿಗೆ ಸಲಹೆ ನಿಡಿದರು. ಆಳಂದ ರಸ್ತೆಯ ಟೋಲಗೇಟ್ ಸಮೀಪದ ಇಟಗಿಯವರ ತೋಟದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರೈತರಿಗೆ ಹಿಂಗಾರು ಬಿತ್ತನೆಯ ಸಲಹೆಗಳು’ ಕಾರ್ಯಕ್ರಮದಲ್ಲಿ ಮಾತನಾಡಿದ […]

Continue Reading

ಹೊಸ ದಾಖಲೆ ಬರೆದ ಹಾಸನಾಂಬೆ: ಒಂದೆ ವಾರದಲ್ಲಿ ದೇಗುಲಕ್ಕೆ ಬಂತು ಕೋಟ್ಯಂತರ ರೂ. ಆದಾಯ

ಹಾಸನ: ಹಾಸನಾಂಬ ದರ್ಶನೋತ್ಸವ ಆರಂಭಗೊಂಡು ಕೇವಲ ಒಂದೆ ವಾರದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಇಲ್ಲಿಯವರೆಗೂ 15 ಲಕ್ಷ 30 ಸಾವಿರ ಭಕ್ತರು ಹಾಸನಾಂಬ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇನ್ನು ಕೇವಲ 8 ದಿನದಲ್ಲಿ ದೇವಾಲಯಕ್ಕೆ 10.5 ಕೋಟಿ ರೂ. ಆದಾಯ ಹರಿದು ಬಂದಿದ್ದು ದಾಖಲೆಯಾಗಿದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದುಪಡಿಸಿರುವುದರಿಂದ ಭಕ್ತರು ಸುಗಮವಾಗಿ ದರ್ಶನ ಪಡೆಯುತ್ತಿದ್ದಾರೆ. ಇದರಿಂದಾಗಿ ಭಕ್ತರಲ್ಲಿ ಸಂತಸ ಮೂಡಿದೆ. ನಾಡಿನ ನಾನಾ ಭಾಗಗಳಿಂದ ಭಕ್ತರ ದಂಡೆ ಹಾಸನಾಂಬೆಯ ದರ್ಶನಕ್ಕೆ ಹರಿದು ಬರುತ್ತಿದೆ. […]

Continue Reading

ಆಹಾರ ಪ್ರತಿಯೊಂದು ಜೀವಿಯ ಅಮೃತ: ಚಂದ್ರಶ್ಯಾ ಇಟಗಿ

ಸುದ್ದಿ ಸಂಗ್ರಹ ಕಲಬುರಗಿ ಪ್ರತಿಯೊಂದು ಜೀವಿಗೆ ಆಹಾರ ಅಮೃತವಿದ್ದಂತೆ ಎಂದು ಪ್ರಗತಿಪರ, ಸಾವಯುವ ರೈತ ಚಂದ್ರಶ್ಯಾ ಇಟಗಿ ಅಭಿಪ್ರಾಯಪಟ್ಟರು. ಆಳಂದ ರಸ್ತೆಯ ಟೋಲಗೇಟ್ ಸಮೀಪದ ತೋಟದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಆಹಾರ ದಿನಾಚರಣೆ’ ಗೌರವ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಾನವ ಸೇರಿ ಎಲ್ಲಾ ಜೀವಿಗಳಿಗೆ ಆಹಾರ ಅವಶ್ಯಕ. ಪ್ರತಿಯೊಬ್ಬ ಮನುಷ್ಯನಿಗೆ ಸದೃಢ ಮತ್ತು ಪೌಷ್ಠಿಕ ಆಹಾರ ದೊರೆಯಬೇಕು. ಆಹಾರ ಉತ್ಪಾದನೆಯ ಕಷ್ಟ ರೈತನಿಗೆ ಗೊತ್ತು. ಆಹಾರವನ್ನು ಅನಾವಶ್ಯಕವಾಗಿ ವ್ಯರ್ಥ […]

Continue Reading

ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಸಿ ಚಿತ್ತಾಪುರ ಬಂದ್

ಚಿತ್ತಾಪುರ: ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್ಚಟುವಟಿಕೆಗಳನ್ನು ನಿಷೇಧಿಸುವಂತೆ ಸಚಿವ ಪ್ರಿಯಾಂಕ್ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವಹಿನ್ನೆಲೆಯಲ್ಲಿ ಅವರಿಗೆ ಬೆದರಿಕೆ ಕರೆಗಳು ಬಂದಿರುವ ಬೆನ್ನಲ್ಲೇ ಸಚಿವ ಖರ್ಗೆ ಅವರನ್ನು ಬೆಂಬಲಿಸಿ, ಕಾಂಗ್ರೆಸ್ ಮುಖಂಡರು ಚಿತ್ತಾಪುರ ಬಂದ್ ಮಾಡಲಾಯಿತು, ಚಿತ್ತಾಪುರ ಬಂದ್’ಗೆ ಉತ್ತಮ ಸ್ಪಂದನೆ ವ್ಯಕ್ತವಾಯಿತು. , ಬ್ಲಾಕ್ ಕಾಂಗ್ರೆಸ್ ವತಿಯಿಂದ ಕರೆ ನೀಡಿದ್ದ ಬಂದ್ ಕರೆಗೆ ಉತ್ತಮ ಸ್ಪಂದನೆ ದೊರಕಿದೆ. ಚಿತ್ತಾಪುರ ಪಟ್ಟಣದಲ್ಲಿರುವ ಬಹುತೇಕ ಅಂಗಡಿಗಳು ಸ್ವಯಂಪ್ರೇರಿತವಾಗಿ ಮುಚ್ಚಿದ್ದವು. ಅಲ್ಲದೆ ಯಾವುದೆ ಬಸ್ ಗಳು ರಸ್ತೆಗೆ ಇಳಿಯಲಿಲ್ಲ. ಬಂದ್‌ ಕರೆ […]

Continue Reading

ನಕಲಿ ಅಂಗವಿಕಲರ ಕಾರ್ಡ್‌: ಶಿರಾ ಆಸ್ಪತ್ರೆ ನಂಟು ?

ಶಿರಾ: ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ ಅಂಗವಿಕಲರ ಕೋಟಾದಡಿ ವೈದ್ಯಕೀಯ ಸೀಟು ಪಡೆಯಲು ಯತ್ನಿಸಿದ್ದ ಜಯದೇವ್ ಎಂಬ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲಾಗಿದೆ. ಅಂಗವಿಕಲರ (ಯುಡಿ ಐಡಿ) ಕಾರ್ಡ್ ವಿತರಿಸಿದ ಇಲ್ಲಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಡೇಟಾ ಆಪರೇಟರ್ ನಾಗರಾಜು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಶಂಕಿಸಲಾದ ಕೆಲವು ವೈದ್ಯರ ವಿಚಾರಣೆ ನಡೆಸಿದ್ದಾರೆ. ಹಿರಿಯೂರು ತಾಲೂಕಿನ ಜಯದೇವ್, ಶಿರಾ ತಾಲೂಕಿನ‌ ಮದ್ದೇನಹಳ್ಳಿ ಗ್ರಾಮದ ವಿಳಾಸ ನೀಡಿ ಅಂಗವಿಕಲರ ಕಾರ್ಡ್‌ ಪಡೆದಿರುವುದು ತನಿಖೆಯ […]

Continue Reading

ವೈದ್ಯಕೀಯ ಚಿಕಿತ್ಸೆಯಲ್ಲಿ ಅನಸ್ತೇಷಿಯಾ ಪಾತ್ರ ಪ್ರಮುಖ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಆಧುನಿಕತೆಯ ಒತ್ತಡದ ಬದುಕಿನಲ್ಲಿ ಮನುಷ್ಯನಿಗೆ ವಿವಿಧ ರೀತಿಯ ಹೊಸ-ಹೊಸ ಕಾಯಿಲೆಗಳು ಕಂಡುಬರುತ್ತಿವೆ. ಇದಲ್ಲದೆ ಅಪಘಾತ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಶಸ್ತ್ರಚಿಕಿತ್ಸೆ ಮಾಡುವುದು ಅಗತ್ಯವಾಗಿದೆ. ಆಗ ಅರವಳಿಕೆ ಅಥವಾ ಅನಸ್ತೇಷಿಯಾ ಮಾಡಿ, ಮುಂದಿನ ಚಿಕಿತ್ಸೆ ಮಾಡುವಲ್ಲಿ ಇದರ ಪಾತ್ರ ಪ್ರಮುಖವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ವಿಶ್ವ ಅನಸ್ತೇಷಿಯಾ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಅಮೇರಿಕಾದ ದಂತವೈದ್ಯ […]

Continue Reading

ಪರಧರ್ಮ ಸಹಿಷ್ಣುತೆಯೇ ಮಾನವೀಯತೆ: ಮೊಹಸಿನ್ ಬಾಬಾ

ಕಲಬುರಗಿ: ಮಾನವರೆಲ್ಲರೂ ಹುಟ್ಟುತ್ತಾ ಒಂದೆಯಾಗಿದ್ದು, ನಂತರ ಧರ್ಮ, ಜಾತಿ ಸಂಕೋಲೆಗಳಲ್ಲಿ ಸಿಲುಕಿ ಸಣ್ಣ ವ್ಯಕ್ತಿಯಾಗುತ್ತಿದ್ದಾರೆ. ಹುಟ್ಟಿದ ಧರ್ಮ, ಜಾತಿಗಳ ಆಧಾರದ ಮೇಲೆ ಮೇಲು-ಕೀಳು ಮಾಡದೆ ನಾವೆಲ್ಲರು ಒಂದೆ ಎಂಬ ಮನೋಭಾವನೆ ಮೈಗೂಡಿಸಿಕೊಳ್ಳಬೇಕು ಎಂದು ಇಸ್ಲಾಂ ಧಾರ್ಮಿಕ ಮುಖಂಡ, ಪೂಜ್ಯ ಸೈಯದ್ ಷಾ ಮಜರ್‌ಖಾದ್ರಿ ಅಲ್ಮಾರೋ ಮೊಹಸಿನ್ ಬಾಬಾ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಹಜರತ್ ಸೈಯದ್ ಷಾ ಹಸನ್‌ಖಾದ್ರಿ ದರ್ಗಾದ 40ನೇ ಉರುಸ್ ನಿಮಿತ್ಯ ಖಾದ್ರಿ ದರ್ಗಾ ಸಮಿತಿ ವತಿಯಿಂದ ಜರುಗಿದ ಗಂಧ ಲೇಪನ, […]

Continue Reading

ವರ್ಣಿಸಲು ಸಾಧ್ಯವಾಗದ ಮೇರು ವ್ಯಕ್ತಿತ್ವ ಕಲಾಂರದು: ಎಚ್.ಬಿ ಪಾಟೀಲ

ಕಲಬುರಗಿ: ವಿಜ್ಞಾನಿಯಾಗಿ, ರಾಷ್ಟ್ರಪತಿಯಾಗಿ, ತತ್ವಜ್ಞಾನಿಯಾಗಿ, ಶಿಕ್ಷಣ ತಜ್ಞರಾಗಿ, ಕ್ಷಿಪಣಿಯ ರೂವಾರಿಯಾಗಿ, ಧೀಮಂತ ಧುರಿಣರಾಗಿ, ಯುವ ಜನತೆಯ ದಾರಿದೀಪವಾಗಿ, ರಾಷ್ಟ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಕೊಡುಗೆ ಅಪಾರ. ಅವರ ಮೇರು ವ್ಯಕ್ತಿತ್ವ ಶಬ್ದಗಳಲ್ಲಿ ವರ್ಣಿಸಲು ಅಸಾಧ್ಯವಾದದ್ದು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಜರುಗಿದ ಡಾ.ಎ.ಪಿ.ಜೆ ಅಬ್ದುಲ್ ಕಲಾಂರ 94ನೇ […]

Continue Reading

ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ರಷ್ಟು ತುಟ್ಟಿಭತ್ಯೆ ಮಂಜೂರು

ಕಲಬುರಗಿ: ರಾಜ್ಯ ಸರ್ಕಾರಿ ನೌಕರರಿಗೆ 1 ಜುಲೈ 2025 ರಿಂದ ಅನ್ವಯವಾಗುವಂತೆ ಶೇ.2 ರಷ್ಟು ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆರ್ಥಿಕ ಇಲಾಖೆ (ಸೇವೆಗಳು-2) ಸರ್ಕಾರದ ಜಂಟಿ ಕಾರ್ಯದರ್ಶಿ ಉಮಾ ಕೆ ಅವರು ಅಕ್ಟೋಬರ್ 15ರಂದು ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರು ಸದ್ಯ 12.25ರಷ್ಟು ತುಟ್ಟಿ ಭತ್ಯೆಯನ್ನು ಅವರ ಮೂಲ ವೇತನಕ್ಕೆ ಪಡೆಯುತ್ತಿದ್ದು ಈಗ ಮಂಜೂರು ಮಾಡಿರುವ ಶೇ.2 ರಷ್ಟು ತುಟ್ಟಿ ಭತ್ಯೆಯಿಂದ ಶೇ.14.25 ಕ್ಕೆ ಹೆಚ್ಚಳವಾಗಿದೆ. […]

Continue Reading

ಎಪಿಎಲ್‌ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್: ದಾಖಲೆ ಇದ್ದರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ

ಬೆಂಗಳೂರು: ಎಪಿಎಲ್‌ಗೆ ಬದಲಾದ ಅರ್ಹರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ ಭಾಗ್ಯ ಸಿಗಲಿದೆ. ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆ ಮಧ್ಯೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮೂಲಕ ಅರ್ಹತೆ ಇದ್ದರೂ ಎಪಿಎಲ್‌ಗೆ ಬದಲಾಗಿ ವಂಚಿತರಾದವರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ‌. 45 ದಿನಗಳೊಳಗೆ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್ ವಿತರಿಸಲು ಸರ್ಕಾರ ಆಹಾರ ಇಲಾಖೆಗೆ ಗಡುವು ಕೊಟ್ಟಿದೆ. ಎಪಿಎಲ್‌ಗೆ ಬದಲಾದವರು ಪೂರಕ ದಾಖಲೆ ಇದ್ದರೆ ಮತ್ತೆ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಒಂದು […]

Continue Reading